NZ vs IND: ಮೂರನೇ ಟಿ20ಐಗೆ ಉಭಯ ತಂಡಗಳ ಸಂಭಾವ್ಯ ಪ್ಲೇಯಿಂಗ್ XI, ಪಿಚ್ ರಿಪೋರ್ಟ್ ವಿವರ!
ನ್ಯೂಜಿಲೆಂಡ್ ವಿರುದ್ಧದ ಐದು ಪಂದ್ಯಗಳ ಟಿ20ಐ ಸರಣಿಯಲ್ಲಿ ಭಾರತ 2-0 ಮುನ್ನಡೆ ಸಾಧಿಸಿದೆ. ಅಕ್ಟೋಬರ್ 27ರಂದು ವೆಲ್ಲಿಂಗ್ಟನ್ನಲ್ಲಿ ನಡೆಯಲಿರುವ ಮೂರನೇ ಪಂದ್ಯ ಗೆದ್ದರೆ, ಭಾರತ ಸರಣಿಯನ್ನು ವಶಪಡಿಸಿಕೊಳ್ಳಲಿದೆ. ತಿಲಕ್ ವರ್ಮಾ ಅವರ ಉತ್ತಮ ಬ್ಯಾಟಿಂಗ್ ಭಾರತಕ್ಕೆ ಆತ್ಮವಿಶ್ವಾಸ ತುಂಬಿದೆ. ಸರಣಿ ಉಳಿಸಿಕೊಳ್ಳಲು ನ್ಯೂಜಿಲೆಂಡ್ ಗೆಲುವು ಸಾಧಿಸುವುದು ಅನಿವಾರ್ಯವಾಗಿದೆ.
ಮೂರನೇ ಟಿ20ಐ ಪಂದ್ಯಕ್ಕೆ ಭಾರತ vs ನ್ಯೂಜಿಲೆಂಡ್ ಸಜ್ಜು. -
ವೆಲ್ಲಿಂಗ್ಟನ್: ನ್ಯೂಜಿಲೆಂಡ್ ವಿರುದ್ಧದ ಟಿ20ಐ ಸರಣಿಯಲ್ಲಿ ಭರ್ಜರಿ ಆರಂಭ ಪಡೆದಿರುವ ಭಾರತ ತಂಡ, ಮೂರನೇ ಪಂದ್ಯದಲ್ಲೂ (IND vs NZ) ಗೆಲುವು ಸಾಧಿಸಿ ಸರಣಿಯನ್ನು ತನ್ನದಾಗಿಸಿಕೊಳ್ಳುವ ಗುರಿ ಹೊಂದಿದೆ. ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಮೂರನೇ ಟಿ20 ಪಂದ್ಯ ಅಕ್ಟೋಬರ್ 27ರಂದು ಮಂಗಳವಾರ ವೆಲ್ಲಿಂಗ್ಟನ್ನ ಹೆನ್ರಿ ಸ್ಟೇಡಿಯಂನಲ್ಲಿ ನಡೆಯಲಿದೆ. ಐದು ಪಂದ್ಯಗಳ ಸರಣಿಯಲ್ಲಿ ಭಾರತ ಈಗಾಗಲೇ 2-0 ಮುನ್ನಡೆ ಸಾಧಿಸಿದೆ. ಹೀಗಾಗಿ, ಮೂರನೇ ಪಂದ್ಯದಲ್ಲಿ ಗೆದ್ದರೆ ಇನ್ನೂ ಎರಡು ಪಂದ್ಯಗಳು ಬಾಕಿ ಇರುವಾಗಲೇ ಸರಣಿಯನ್ನು ವಶಪಡಿಸಿಕೊಳ್ಳಲಿದೆ.
ಮೊದಲ ಎರಡು ಪಂದ್ಯಗಳಲ್ಲಿ ನ್ಯೂಜಿಲೆಂಡ್ ತಂಡ ಕೆಲವು ಹಂತಗಳಲ್ಲಿ ಉತ್ತಮ ಪ್ರದರ್ಶನ ನೀಡಿದರೂ, ತಂಡವಾಗಿ ಸಂಘಟಿತ ಆಟವಾಡಲು ವಿಫಲವಾಗಿದೆ. ಇದರ ಪರಿಣಾಮವಾಗಿ ಸರಣಿಯಲ್ಲಿ ಆರಂಭಿಕ ಹಿನ್ನಡೆ ಅನುಭವಿಸಿದೆ. ಮುಂಬರುವ ಪಂದ್ಯದಲ್ಲಿ ಗೆಲುವು ಸಾಧಿಸುವುದು ಕಿವೀಸ್ ತಂಡಕ್ಕೆ ಅತ್ಯಂತ ಮಹತ್ವದ್ದಾಗಿದೆ. ಈ ಪಂದ್ಯದಲ್ಲೂ ಸೋತರೆ ಸರಣಿ ಗೆಲ್ಲುವ ಅವಕಾಶ ಕೈತಪ್ಪಲಿದೆ. ಹೀಗಾಗಿ, ತವರಿನಲ್ಲಿ ಸರಣಿಯನ್ನು ಜೀವಂತವಾಗಿರಿಸಿಕೊಳ್ಳಲು ನ್ಯೂಜಿಲೆಂಡ್ ಗೆಲುವಿಗಾಗಿ ಹೋರಾಡಬೇಕಿದೆ.
ಭುವನೇಶ್ವರ್, ಸೂರ್ಯವಂಶಿ ಔಟ್; ಮೂರನೇ ಟಿ20ಐಗೆ ಭಾರತದ ಸಂಭಾವ್ಯ ಪ್ಲೇಯಿಂಗ್ XI ವಿವರ!
ಆತ್ಮವಿಶ್ವಾಸದಲ್ಲಿ ಟೀಮ್ ಇಂಡಿಯಾ
ಮೊದಲ ಪಂದ್ಯದಲ್ಲಿ ಭಾರತ ತಂಡ ಯಶಸ್ವಿ ರನ್ ಚೇಸ್ ಮೂಲಕ ಗೆಲುವು ಸಾಧಿಸಿತ್ತು. ಎರಡನೇ ಪಂದ್ಯದಲ್ಲಿ ಕೊನೆಯ ಓವರ್ವರೆಗೂ ನಡೆದ ರೋಚಕ ಹಣಾಹಣಿಯಲ್ಲಿ ತಿಲಕ್ ವರ್ಮಾ ಅವರ ಅಮೋಘ ಅರ್ಧಶತಕದ ನೆರವಿನಿಂದ ಭಾರತ ಜಯಗಳಿಸಿತ್ತು. ಸತತ ಎರಡು ಗೆಲುವುಗಳೊಂದಿಗೆ ಸರಣಿಯಲ್ಲಿ 2-0 ಮುನ್ನಡೆ ಪಡೆದಿರುವ ಶ್ರೇಯಸ್ ಅಯ್ಯರ್ ನೇತೃತ್ವದ ಭಾರತ ತಂಡ, ಮೂರನೇ ಪಂದ್ಯಕ್ಕೂ ಆತ್ಮವಿಶ್ವಾಸದಿಂದ ಕಣಕ್ಕಿಳಿಯಲಿದೆ. ಈ ಪಂದ್ಯದಲ್ಲಿ ಗೆದ್ದು ಸರಣಿ ಗೆಲುವನ್ನು ಖಚಿತಪಡಿಸಿಕೊಳ್ಳುವುದು ಟೀಮ್ ಇಂಡಿಯಾದ ಪ್ರಮುಖ ಗುರಿಯಾಗಿದೆ.
ಪಂದ್ಯದ ವಿವರ
ಮೂರನೇ ಟಿ20ಐ ಪಂದ್ಯ
ಭಾರತ vs ನ್ಯೂಜಿಲೆಂಡ್
ದಿನಾಂಕ: ಅಕ್ಟೋಬರ್ 27, 2026
ಸಮಯ: ಮಧ್ಯಾಹ್ನ 12: 30ಕ್ಕೆ (ಭಾರತೀಯ ಕಾಲಮಾನ)
ಸ್ಥಳ: ಹನ್ರಿ ಸ್ಟೇಡಿಯಂ, ವೆಲ್ಲಿಂಗ್ಟನ್
ನೇರ ಪ್ರಸಾರ: ಸೋನಿ ಸ್ಪೋರ್ಟ್ಸ್
ಲೈವ್ ಸ್ಟ್ರೀಮಿಂಗ್: ಸೋನಿ ಲಿವ್
181 ರನ್ ಚೇಸ್ ಮಾಡಿದ ಬಳಿಕ ಭಾರತ ತಂಡಕ್ಕೆ 3 ಪದಗಳ ಸಂದೇಶ ರವಾನಿಸಿದ ಗೌತಮ್ ಗಂಭೀರ್!
ಹೆನ್ರಿ ಸ್ಟೇಡಿಯಂ ಪಿಚ್ ರಿಪೋರ್ಟ್
ವೆಲ್ಲಿಂಗ್ಟನ್ನ ಹೆನ್ರಿ ಸ್ಟೇಡಿಯಂನಲ್ಲಿ ನಡೆದಿದ್ದ ಕೊನೆಯ ಐದು ಟಿ20 ಅಂತಾರಾಷ್ಟ್ರೀಯ ಪಂದ್ಯಗಳಲ್ಲಿ ಮೂರು ಬಾರಿ ಮೊದಲು ಬೌಲ್ ಮಾಡಿದ ತಂಡ ಗೆಲುವು ಸಾಧಿಸಿದೆ. ಈ ಮೈದಾನದಲ್ಲಿ ವೇಗದ ಬೌಲರ್ಗಳಿಗೆ ನೆರವು ದೊರೆಯುವ ಸಾಧ್ಯತೆಯಿದೆ. ಆದರೆ, ಬ್ಯಾಟರ್ಗಳು ಆರಂಭದಲ್ಲಿ ಎಚ್ಚರಿಕೆಯಿಂದ ಆಡಿದರೆ ನಂತರ ಸುಲಭವಾಗಿ ಬೌಂಡರಿ ಹಾಗೂ ಸಿಕ್ಸರ್ಗಳನ್ನು ಬಾರಿಸಬಹುದು. ಮಂಗಳವಾರದ ಪಂದ್ಯದಲ್ಲಿ ದೊಡ್ಡ ಮೊತ್ತ ದಾಖಲಾಗುವ ನಿರೀಕ್ಷೆಯಿದ್ದು, ಗುರಿ ಬೆನ್ನಟ್ಟುವ ತಂಡಕ್ಕೂ ಗೆಲುವಿನ ಅವಕಾಶವಿದೆ.
ಮುಖಾಮುಖಿ ದಾಖಲೆ ವಿವರ
ಒಟ್ಟು ಆಡಿರುವ ಪಂದ್ಯಗಳು: 33
ಭಾರತದ ಗೆಲುವು: 17
ನ್ಯೂಜಿಲೆಂಡ್ ಗೆಲುವು: 13
ಫಲಿತಾಂಶವಿಲ್ಲ: 03
IND vs NZ: ಆರಂಭಿಕ ಪಂದ್ಯಗಳಲ್ಲಿ ಭುವನೇಶ್ವರ್ ಕುಮಾರ್ ವೈಫಲ್ಯಕ್ಕೆ ಕಾರಣವೇನು? ಮೊರ್ನೆ ಮಾರ್ಕೆಲ್ ಹೇಳಿದ್ದಿದು!
ಉಭಯ ತಂಡಗಳ ಸಂಭಾವ್ಯ ಪ್ಲೇಯಿಂಗ್ XI
ನ್ಯೂಜಿಲೆಂಡ್: ಫಿನ್ ಆಲೆನ್, ಟಿಮ್ ಸೈಫರ್ಟ್ (ವಿಕೆಟ್ ಕೀಪರ್), ಡ್ಯಾರಿಲ್ ಮಿಚೆಲ್, ಗ್ಲೆನ್ ಫಿಲಿಪ್ಸ್, ಬೆವನ್ ಜೇಕಬ್ಸ್, ಮೈಕಲ್ ಬ್ರೇಸ್ವೆಲ್, ಮಿಚೆಲ್ ಸ್ಯಾಂಟ್ನರ್ (ನಾಯಕ), ನೇಥನ್ ಸ್ಮಿತ್, ಮ್ಯಾಟ್ ಹೆನ್ರಿ, ಲಾಕಿ ಫರ್ಗ್ಯೂಸನ್, ಜೇಕಬ್ ಡಫಿ
ಭಾರತ: ಅಭಿಷೇಕ್ ಶರ್ಮಾ, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ವೈಭವ್ ಸೂರ್ಯವಂಶಿ, ಶ್ರೇಯಸ್ ಅಯ್ಯರ್ (ನಾಯಕ), ತಿಲಕ್ ವರ್ಮಾ, ನಿತೀಶ್ ಕುಮಾರ್ ರೆಡ್ಡಿ, ನಮನ್ ಧೀರ್, ಅಕ್ಷರ್ ಪಟೇಲ್, ಭುನೇಶ್ವರ್ ಕುಮಾರ್, ಪ್ರಿನ್ಸ್ ಯಾದವ್, ಅರ್ಷದೀಪ್ ಸಿಂಗ್