ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

NEET Protests: ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಗೆ ವಿಶೇಷ ಸಂದೇಶ ರವಾನಿಸಿದ ಶುಭಮನ್‌ ಗಿಲ್!

ಪ್ರಸ್ತುತ ಭಾರತದಲ್ಲಿ ನಡೆಯುತ್ತಿರುವ ನೀಟ್‌ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿಸಿ ನಡೆಯುತ್ತಿರುವ ವಿದ್ಯಾರ್ಥಿಗಳ ಪ್ರತಿಭಟನೆ ಬಗ್ಗೆ ಟೀಮ್‌ ಇಂಡಿಯಾ ನಾಯಕ ಶುಭಮನ್‌ ಗಿಲ್‌ ಪ್ರತಿಕ್ರಿಯಿಸಿದ್ದಾರೆ. ಯುವಜನರಿಗೆ ಹೆಚ್ಚಿನ ಅವಕಾಶಗಳು ದೊರೆಯಬೇಕು ಎಂದು ಕರೆ ನೀಡಿದ ಅವರು, ಸಹಾನುಭೂತಿ, ಪರಸ್ಪರ ಗೌರವ, ಶಿಕ್ಷಣ ಹಾಗೂ ಶಾಂತಿಯುತವಾಗಿ ಅಭಿಪ್ರಾಯ ವ್ಯಕ್ತಪಡಿಸುವ ಮಹತ್ವವನ್ನು ಒತ್ತಿ ಹೇಳಿದ್ದಾರೆ.

ವಿದ್ಯಾರ್ಥಿಗಳ ಪ್ರತಿಭಟನೆಯ ಬಗ್ಗೆ ಶುಭಮನ್‌ ಗಿಲ್‌ ಪ್ರತಿಕ್ರಿಯೆ.

ನವದೆಹಲಿ: ದೇಶಾದ್ಯಂತ ನೀಟ್ ಪರೀಕ್ಷೆಯಲ್ಲಿನ (NEET Protest) ಅಕ್ರಮಗಳ ಆರೋಪ ಸಂಬಂಧ ವಿದ್ಯಾರ್ಥಿಗಳ ಪ್ರತಿಭಟನೆಗಳ ಬಗ್ಗೆ ಭಾರತ ಟೆಸ್ಟ್ ಹಾಗೂ ಏಕದಿನ ತಂಡದ ನಾಯಕ ಶುಭಮನ್ ಗಿಲ್ (Shubman Gill) ಸಾಮಾಜಿಕ ಜಾಲತಾಣದಲ್ಲಿ ಪ್ರತಿಕ್ರಿಯಿಸಿದ್ದಾರೆ. ಯುವಜನರಿಗೆ ಹೆಚ್ಚಿನ ಅವಕಾಶಗಳು ದೊರೆಯಬೇಕು ಎಂದು ಕರೆ ನೀಡಿದ ಅವರು ಸಹಾನುಭೂತಿ, ಪರಸ್ಪರ ಗೌರವ, ಶಿಕ್ಷಣ ಹಾಗೂ ಶಾಂತಿಯುತವಾಗಿ ಅಭಿಪ್ರಾಯ ವ್ಯಕ್ತಪಡಿಸುವ ಮಹತ್ವವನ್ನು ಒತ್ತಿಹೇಳಿದ್ದಾರೆ.

ಆದರೆ, ತಮ್ಮ ಇನ್‌ಸ್ಟಾಗ್ರಾಮ್‌ ಸ್ಟೋರಿಯಲ್ಲಿ ನೀಟ್ ವಿವಾದ ಅಥವಾ ವಿದ್ಯಾರ್ಥಿಗಳ ಪ್ರತಿಭಟನೆಯ ಬಗ್ಗೆ ನೇರವಾಗಿ ಯಾವುದೇ ಉಲ್ಲೇಖ ಮಾಡಿಲ್ಲ. ಬದಲಾಗಿ ಶಿಕ್ಷಣದ ಮಹತ್ವ, ಶಾಂತಿಯುತವಾಗಿ ಅಭಿಪ್ರಾಯ ವ್ಯಕ್ತಪಡಿಸುವ ಅಗತ್ಯ ಹಾಗೂ ವಿದ್ಯಾರ್ಥಿಗಳ ಹಿತಾಸಕ್ತಿಯನ್ನು ಯಾವಾಗಲೂ ಮೊದಲ ಆದ್ಯತೆಯಾಗಿ ಪರಿಗಣಿಸಬೇಕು ಎಂಬ ವಿಷಯಗಳ ಬಗ್ಗೆ ಸಾಮಾನ್ಯವಾಗಿ ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ.

IND vs ZIM: 15ನೇ ವಯಸ್ಸಿನ ಚೊಚ್ಚಲ ಅರ್ಧಶತಕ ಬಾರಿಸಿ ವಿಶ್ವ ದಾಖಲೆ ಬರೆದ ವೈಭವ್‌ ಸೂರ್ಯವಂಶಿ!

"ಒಬ್ಬ ಯುವ ಭಾರತೀಯನಾಗಿ, ನಮ್ಮ ಪೀಳಿಗೆಗೆ ಕಲಿಯಲು, ಕನಸು ಕಾಣಲು ಹಾಗೂ ನಾವು ಬಯಸುವ ಭವಿಷ್ಯವನ್ನು ರೂಪಿಸಿಕೊಳ್ಳಲು ಪ್ರತಿಯೊಂದು ಅವಕಾಶವೂ ದೊರೆಯಬೇಕು ಎಂದು ನಾನು ನಂಬುತ್ತೇನೆ," ಎಂದು ಭಾರತ ತಂಡದ ನಾಯಕ ಶುಭಮನ್ ಗಿಲ್ ಅವರು ಇನ್‌ಸ್ಟಾಗ್ರಾಮ್‌ ಖಾತೆಯಲ್ಲಿ ಬರೆದುಕೊಂಡಿದ್ದಾರೆ.

ಇದರ ಜೊತೆಗೆ ತಮ್ಮ ಆತಂಕಗಳು ಮತ್ತು ಅಭಿಪ್ರಾಯಗಳನ್ನು ಶಾಂತಿಯುತ ರೀತಿಯಲ್ಲಿ ವ್ಯಕ್ತಪಡಿಸುವವರಿಗೂ ಗಿಲ್ ಬೆಂಬಲ ವ್ಯಕ್ತಪಡಿಸಿದ್ದಾರೆ. ಪ್ರಜಾಪ್ರಭುತ್ವದಲ್ಲಿ ಶಾಂತಿಯುತವಾಗಿ ಧ್ವನಿ ಎತ್ತುವ ಹಕ್ಕು ಮಹತ್ವದ್ದಾಗಿದೆ ಎಂಬ ಸಂದೇಶವನ್ನು ಅವರು ತಮ್ಮ ಹೇಳಿಕೆಯಲ್ಲಿ ನೀಡಿದ್ದಾರೆ.

"ತಮ್ಮ ಧ್ವನಿಯನ್ನು ಶಾಂತಿಯುತವಾಗಿ ವ್ಯಕ್ತಪಡಿಸಬೇಕು ಎಂದು ನಂಬುವ ಪ್ರತಿಯೊಬ್ಬ ಯುವಕರಿಗೂ ನನಗೆ ಅಪಾರ ಗೌರವವಿದೆ," ಎಂದು ಭಾರತ ತಂಡದ ನಾಯಕ ಶುಭಮನ್ ಗಿಲ್ ಹೇಳಿದ್ದಾರೆ.



ತಮ್ಮ ಸಂದೇಶದ ಕೊನೆಯಲ್ಲಿ ಶಿಕ್ಷಣದ ಮಹತ್ವವನ್ನು ಒತ್ತಿಹೇಳಿದ ಗಿಲ್, "ಶಿಕ್ಷಣವು ನಮ್ಮ ದೇಶದ ಭವಿಷ್ಯವನ್ನು ರೂಪಿಸುವ ಶಕ್ತಿಯನ್ನು ಹೊಂದಿದೆ. ಸಹಾನುಭೂತಿ, ಪರಸ್ಪರ ಗೌರವ ಹಾಗೂ ಪ್ರತಿಯೊಬ್ಬ ವಿದ್ಯಾರ್ಥಿಯ ಹಿತಾಸಕ್ತಿಯನ್ನು ಗಮನದಲ್ಲಿಟ್ಟುಕೊಂಡು ನಾವು ಮುಂದುವರಿಯಬೇಕು ಎಂದು ನಾನು ಆಶಿಸುತ್ತೇನೆ. ಭಾರತದ ಉಜ್ವಲ ಭವಿಷ್ಯಕ್ಕಾಗಿ ಇದು ಅಗತ್ಯ," ಎಂದು ತಿಳಿಸಿದ್ದಾರೆ.

ದೇಶಾದ್ಯಂತ ತೀವ್ರಗೊಂಡ ಪ್ರತಿಭಟನೆ; ಶಿಕ್ಷಣ ವ್ಯವಸ್ಥೆಯಲ್ಲಿ ಸುಧಾರಣೆಗೆ ಒತ್ತಾಯ

ಜುಲೈ 20ರಂದು ಆರಂಭವಾದ ಪ್ರತಿಭಟನೆಗಳು ದೇಶದ ವಿವಿಧ ಭಾಗಗಳಲ್ಲಿ ಇನ್ನಷ್ಟು ತೀವ್ರಗೊಂಡಿವೆ. ಹಲವೆಡೆ ಪ್ರತಿಭಟನೆಗಳು ಹಿಂಸಾತ್ಮಕ ಸ್ವರೂಪ ಪಡೆದುಕೊಂಡಿರುವ ಹಿನ್ನೆಲೆಯಲ್ಲಿ, ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ಪೊಲೀಸರು ಹಲವು ಸಂದರ್ಭಗಳಲ್ಲಿ ಲಾಠಿ ಚಾರ್ಜ್ ನಡೆಸಿದ್ದಾರೆ.

ಈ ಪ್ರತಿಭಟನೆಗೆ ಕಾಕ್ರೋಚ್ ಜನತಾ ಪಾರ್ಟಿ (CJP) ನೇತೃತ್ವ ವಹಿಸಿದ್ದು, ಪರಿಸರ ಹೋರಾಟಗಾರ ಸೋನಂ ವಾಂಗ್ಚುಕ್ ಬೆಂಬಲ ನೀಡಿದ್ದಾರೆ. ಅವರು ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದಾರೆ.

IND vs ZIM: ವೈಭವ್‌ ಚೊಚ್ಚಲ ಅರ್ಧಶತಕ, ಶ್ರೇಯಸ್‌ ಅಯ್ಯರ್‌ ನಾಯಕತ್ವದಲ್ಲಿ ಭಾರತಕ್ಕೆ ಮೊದಲ ಜಯ!

ಪ್ರತಿಭಟನಾಕಾರರು, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ಅವರನ್ನು ಹುದ್ದೆಯಿಂದ ತೆರವುಗೊಳಿಸುವಂತೆ ಆಗ್ರಹಿಸುತ್ತಿದ್ದಾರೆ. ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಆರೋಪಕ್ಕೆ ಅವರು ಹೊಣೆಗಾರರು ಎಂದು ಆರೋಪಿಸಿರುವ ಪ್ರತಿಭಟನಾಕಾರರು, ಅದರಿಂದ ಮರುಪರೀಕ್ಷೆ ನಡೆಸಬೇಕಾದ ಪರಿಸ್ಥಿತಿ ಉಂಟಾಯಿತು ಎಂದು ಹೇಳಿದ್ದಾರೆ.

ಈ ವಿವಾದವು ಹಲವು ವಿದ್ಯಾರ್ಥಿಗಳ ಆತ್ಮಹತ್ಯೆ ಪ್ರಕರಣಗಳೊಂದಿಗೂ ಸಂಬಂಧ ಹೊಂದಿದೆ ಎಂಬ ಆರೋಪಗಳು ಕೇಳಿಬಂದಿದ್ದು, ಇದರಿಂದ ಪರೀಕ್ಷಾ ವ್ಯವಸ್ಥೆಯಲ್ಲಿ ಹೊಣೆಗಾರಿಕೆ ನಿಗದಿ ಹಾಗೂ ಸಮಗ್ರ ಸುಧಾರಣೆಗಾಗಿ ಒತ್ತಾಯ ಮತ್ತಷ್ಟು ಬಲಗೊಂಡಿದೆ.