ಫೋಟೋ ಗ್ಯಾಲರಿ ಬಿಗ್​ಬಾಸ್ ಬಜೆಟ್​ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

ICC T20 World Cup 2026: ಭಾರತ ವಿರುದ್ಧದ ಪಂದ್ಯವನ್ನು ಬಹಿಷ್ಕರಿಸಿದ ಪಾಕಿಸ್ತಾನ!

ಬಾಂಗ್ಲಾದೇಶ ತಂಡ 2026ರ ಐಸಿಸಿ ಟಿ20 ವಿಶ್ವಕಪ್‌ ಟೂರ್ನಿಯನ್ನು ಬಹಿಷ್ಕರಿಸಿದ ಬೆನ್ನಲ್ಲೆ ಪಾಕಿಸ್ತಾನ ಕ್ರಿಕೆಟ್‌ ತಂಡ ಕೂಡ ಆಘಾತಕಾರಿ ನಿರ್ಧಾರವೊಂದನ್ನು ತೆಗೆದುಕೊಂಡಿದೆ. ಟಿ20 ವಿಶ್ವಕಪ್‌ ಟೂರ್ನಿಯಲ್ಲಿ ಆಡಲು ಒಪ್ಪಿಕೊಂಡ ಪಾಕಿಸ್ತಾನ ತಂಡ, ಸಾಂಪ್ರದಾಯಿಕ ಎದುರಾಳಿ ಭಾರತದ ವಿರುದ್ಧದ ಪಂದ್ಯವನ್ನು ಬಹಿಷ್ಕರಿಸಿದೆ. ಈ ಬಗ್ಗೆ ಪಾಕ್‌ ಸರ್ಕಾರ ತಿಳಿಸಿದೆ.

ಭಾರತ ವಿರುದ್ಧದ ಪಂದ್ಯವನ್ನು ಬಹಿಷ್ಕರಿಸಿದ ಪಾಕಿಸ್ತಾನ.

ನವದೆಹಲಿ: ಬಹುನಿರೀಕ್ಷಿತ 2026ರ ಐಸಿಸಿ ಟಿ20 ವಿಶ್ವಕಪ್‌ (ICC T20 World Cup 2026) ಟೂರ್ನಿಗೂ ಮುನ್ನ ಕ್ರಿಕೆಟ್‌ ಅಭಿಮಾನಿಗಳಿಗೆ ಆಘಾತಕಾರಿ ಸುದ್ದಿಯಯೊಂದು ಹೊರ ಬಿದ್ದಿದೆ. ಬಾಂಗ್ಲಾದೇಶ ತಂಡ, ಟಿ20 ವಿಶ್ವಕಪ್‌ ಟೂರ್ನಿಯಲ್ಲಿ ಭಾಗವಹಿಸದೇ ಇರಲು ನಿರ್ಧರಿಸಿದ ಬೆನ್ನಲ್ಲೆ, ಪಾಕಿಸ್ತಾನ ಕ್ರಿಕೆಟ್‌ (Pakistan Cricket) ಕೂಡ ದೊಡ್ಡ ನಿರ್ಧಾರವೊಂದನ್ನು ತೆಗೆದುಕೊಂಡಿದೆ. ಚುಟುಕು ವಿಶ್ವಕಪ್‌ ಟೂರ್ನಿಯಲ್ಲಿ ಭಾಗವಹಿಸಲು ಒಪ್ಪಿಕೊಂಡರೂ, ಸಾಂಪ್ರದಾಯಿಕ ಎದುರಾಳಿ ಭಾರತದ ವಿರುದ್ಧದ ಪಂದ್ಯವನ್ನು ಪಾಕಿಸ್ತಾನ ತಂಡ ಬಹಿಷ್ಕರಿಸಿದೆ. ಇದರ ಪರಿಣಾಮವಾಗಿ ಇಂಡೋ-ಪಾಕ್‌ (IND vs PAK) ಪಂದ್ಯವನ್ನು ಕಣ್ತುಂಬಿಸಿಕೊಳ್ಳಲು ಎದುರು ನೋಡುತ್ತಿದ್ದ ಅಭಿಮಾನಿಗಳಿಗೆ ಭಾರಿ ನಿರಾಶೆಯಾಗಿದೆ.

ಆರಂಭದಲ್ಲಿ ಪಾಕಿಸ್ತಾನ ತಂಡ ಕೂಡ ಟಿ20 ವಿಶ್ವಕಪ್‌ ಟೂರ್ನಿಯನ್ನು ಬಹಿಷ್ಕರಿಸಲಿದೆ ಎಂದು ಹೇಳಲಾಗುತ್ತಿತ್ತು. ಆದರೆ, ಇದೀಗ ಪಾಕಿಸ್ತಾನ ತಂಡ ಶ್ರೀಲಂಕಕ್ಕೆ ಪ್ರಯಾಣ ಬೆಳೆಸಿದೆ ಹಾಗೂ ಅಭ್ಯಾಸವನ್ನು ಶುರು ಮಾಡಿದೆ. ಫೆಬ್ರವರಿ 7 ರಿಂದ ಮಾರ್ಚ್‌ 8ರವರಗೆ ಚುಟುಕು ವಿಶ್ವಕಪ್‌ ಭಾರತ ಹಾಗೂ ಶ್ರೀಲಂಕಾ ಜಂಟಿ ಆತಿಥ್ಯದಲ್ಲಿ ನಡೆಯಲಿದೆ. ರಾಜಕೀಯ ಕಾರಣಗಳಿಂದ ಪಾಕಿಸ್ತಾನ ತಂಡ, ತನ್ನ ಎಲ್ಲಾ ಪಂದ್ಯಗಳನ್ನು ಶ್ರೀಲಂಕಾದಲ್ಲಿ ಆಡಲಿದೆ. ಫೆಬ್ರವರಿ 15 ರಂದು ಕೊಲಂಬೊದಲ್ಲಿ ಸಾಂಪ್ರದಾಯಿಕ ಎದುರಾಳಿ ಭಾರತದ ವಿರುದ್ಧ ಕಾದಾಟ ನಡೆಸಬೇಕಿತ್ತು. ಆದರೆ, ಭಾರತದ ವಿರುದ್ಧದ ಪಂದ್ಯವನ್ನು ಬಹಿಷ್ಕರಿಸಲಾಗಿದೆ ಎಂದು ಪಾಕಿಸ್ತಾನ ಸರ್ಕಾರ ಘೋಷಣೆ ಮಾಡಿದೆ.

U-19 World Cup 2026: ಪಾಕಿಸ್ತಾನ ತಂಡವನ್ನು ಮಣಿಸಿ ಸೆಮಿಫೈನಲ್‌ಗೆ ಪ್ರವೇಶಿಸಿದ ಭಾರತ ಕಿರಿಯರು!

ಪಾಕಿಸ್ತಾನದ ಪ್ರಧಾನಿ ಶೆಹಬಾಜ್ ಷರೀಫ್ ಮತ್ತು ಪಿಸಿಬಿ ಮುಖ್ಯಸ್ಥ ಮೊಹ್ಸಿನ್ ನಖ್ವಿ ನಡುವಿನ ಸಭೆಯ ನಂತರ ಭಾನುವಾರ ಸಂಜೆ ಪಾಕಿಸ್ತಾನ ಸರ್ಕಾರ ಈ ನಿರ್ಧಾರವನ್ನು ದೃಢಪಡಿಸಿದೆ. ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ (ಐಸಿಸಿ) 20 ತಂಡಗಳ ಟೂರ್ನಿಯಲ್ಲಿ ಬಾಂಗ್ಲಾದೇಶವನ್ನು ಸ್ಕಾಟ್ಲೆಂಡ್‌ನೊಂದಿಗೆ ಬದಲಾಯಿಸಿದಾಗಿನಿಂದ, ಪಿಸಿಬಿ ಮುಖ್ಯಸ್ಥರು ಐಸಿಸಿ ವಿರುದ್ಧ ತಮ್ಮ ಆರೋಪವನ್ನು ಹೆಚ್ಚಿಸಿದರು, ಬಾಂಗ್ಲಾದೇಶವನ್ನು ಅನ್ಯಾಯವಾಗಿ ನಡೆಸಿಕೊಳ್ಳಲಾಗಿದೆ ಎಂದು ವಾದಿಸಿದ್ದರು.



ಈ ವಾರದ ಆರಂಭದಲ್ಲಿ ನಖ್ವಿ ಅವರು, ಷರೀಫ್ ಅವರನ್ನು ಭೇಟಿಯಾಗಿದ್ದರು ಮತ್ತು ಪಾಕಿಸ್ತಾನದ ಭಾಗವಹಿಸುವಿಕೆಯ ಬಗ್ಗೆ ಅಂತಿಮ ನಿರ್ಧಾರವನ್ನು ಜನವರಿ 30 ಹಾಗೂ ಫೆಬ್ರವರಿ 2 ತೆಗೆದುಕೊಳ್ಳಲಾಗುವುದು ಎಂದು ಘೋಷಿಸಿದ್ದರು. ಆದಾಗ್ಯೂ, ಒಂದು ದಿನ ಮುಂಚಿತವಾಗಿ ತೀರ್ಪು ಘೋಷಿಸಲಾಯಿತು, ಸಾಂಪ್ರದಾಯಿಕ ಎದುರಾಳಿಗಳ ವಿರುದ್ಧದ ಪಂದ್ಯವನ್ನು ಬಹಿಷ್ಕರಿಸಲು ಸ್ಫೋಟಕ ಕರೆ ನೀಡಲಾಯಿತು. ಎರಡೂ ತಂಡಗಳು ಸೆಮಿಫೈನಲ್ ಅಥವಾ ಫೈನಲ್‌ನಲ್ಲಿ ಮತ್ತೊಮ್ಮೆ ಮುಖಾಮುಖಿಯಾದರೆ ಏನಾಗಬಹುದು ಎಂಬುದನ್ನು ಇನ್ನೂ ಘೋಷಣೆ ಮಾಡಿಲ್ಲ.

ಪಾಕಿಸ್ತಾನ ಸರ್ಕಾರ ಹೇಳಿದ್ದೇನು?

ಪಾಕಿಸ್ತಾನ ಸರ್ಕಾರದ ಅಧಿಕೃತ 'ಎಕ್ಸ್'ಖಾತೆಯಲ್ಲಿ "ಪಾಕಿಸ್ತಾನ ಇಸ್ಲಾಮಿಕ್ ಗಣರಾಜ್ಯ ಸರ್ಕಾರವು ಪಾಕಿಸ್ತಾನ ಕ್ರಿಕೆಟ್ ತಂಡಕ್ಕೆ 2026ರ ಐಸಿಸಿ ಟಿ20 ವಿಶ್ವಕಪ್‌ ಟೂರ್ನಿಯಲ್ಲಿ ಭಾಗವಹಿಸಲು ಅನುಮೋದನೆ ನೀಡಿದೆ; ಆದಾಗ್ಯೂ, 2026ರ ಫೆಬ್ರವರಿ ತಿಂಗಳಲ್ಲಿ ಭಾರತದ ವಿರುದ್ಧ ನಡೆಯಲಿರುವ ಪಂದ್ಯದಲ್ಲಿ ಪಾಕಿಸ್ತಾನ ಕ್ರಿಕೆಟ್ ತಂಡ ಮೈದಾನಕ್ಕೆ ಇಳಿಯುವುದಿಲ್ಲ," ಎಂದು ಹೇಳಿದೆ.

5 ವಿಕೆಟ್‌ ಪಡೆದ ಹೊರತರಾಗಿಯೂ ಅನಗತ್ಯ ದಾಖಲೆಯನ್ನು ಹೆಗಲೇರಿಸಿಕೊಂಡ ಅರ್ಷದೀಪ್‌ ಸಿಂಗ್‌!

ಭಾರತದ ಜೊತೆ ಎ ಗುಂಪಿನಲ್ಲಿರುವ ಪಾಕಿಸ್ತಾನ

ಟಿ20 ವಿಶ್ವಕಪ್‌ ಟೂರ್ನಿಯಲ್ಲಿ ಪಾಕಿಸ್ತಾನ ತಂಡವು ಭಾರತ, ನಮೀಬಿಯಾ, ನೆದರ್ಲೆಂಡ್ಸ್‌ ಮತ್ತು ಯುಎಸ್‌ಎ ಜೊತೆಗೆ ಎ ಗುಂಪಿನಲ್ಲಿದೆ. ಸಲ್ಮಾನ್ ಅಲಿ ಅಘಾ ನೇತೃತ್ವದ ತಂಡವು ಟೂರ್ನಿಯ ಆರಂಭಿಕ ದಿನದಂದು (ಫೆಬ್ರವರಿ 7) ನೆದರ್ಲೆಂಡ್ಸ್‌ ವಿರುದ್ಧ ತನ್ನ ಅಭಿಯಾನವನ್ನು ಪ್ರಾರಂಭಿಸಲಿದೆ.