ಕೊಲಂಬೊ: ಇಲ್ಲಿನ ಆರ್ ಪ್ರೇಮದಾಸ ಕ್ರೀಡಾಂಗಣದಲ್ಲಿ ಇದೀಗ ನಡೆಯುತ್ತಿರುವ 2026ರ ಐಸಿಸಿ ಟಿ20 ವಿಶ್ವಕಪ್ (T20 World Cup 2026) ಟೂರ್ನಿಯ ಎ ಗುಂಪಿನ ಪಂದ್ಯದಲ್ಲಿ ಭಾರತ ಹಾಗೂ ಪಾಕಿಸ್ತಾನ (IND vs PAK) ತಂಡಗಳು ಕಾದಾಟ ನಡೆಸುತ್ತಿವೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಪಾಕಿಸ್ತಾನ ತಂಡದ ನಾಯಕ ಸಲ್ಮಾನ್ ಆಘಾ ಅವರು ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. ಆ ಮೂಲಕ ಭಾರತ ತಂಡವನ್ನು ಕಡಿಮೆ ಮೊತ್ತಕ್ಕೆ ಕಟ್ಟಿ ಹಾಕಲು ಎದುರು ನೋಡುತ್ತಿದ್ದಾರೆ. ಆದರೆ, ಟಾಸ್ ಸೋತ ಸೂರ್ಯಕುಮಾರ್ ಯಾದವ್ (Suryakumar Yadav) ನಾಯಕತ್ವದ ಟೀಮ್ ಇಂಡಿಯಾ ಮೊದಲು ಬ್ಯಾಟ್‌ಮಾಡಲಿದೆ.
ಟೂರ್ನಿಯ ಆರಂಭಕ್ಕೂ ಮುನ್ನ ಭಾರತ ವಿರುದ್ಧದ ಪಂದ್ಯವನ್ನು ಪಾಕಿಸ್ತಾನ ತಂಡ ಬಾಯ್ಕಟ್ ಮಾಡಿತ್ತು. ಆದರೆ, ಐಸಿಸಿ ಅಧಿಕಾರಿಗಳ ಮಾತುಕತೆ ಬಳಿಕ ಪಾಕಿಸ್ತಾನ ಕ್ರಿಕೆಟ್ ಮಂಡಳಿ ತನ್ನ ನಿರ್ಧಾರವನ್ನು ಬದಲಿಸಿತ್ತು. ಅಂದ ಹಾಗೆ ಭಾರತ ತಂಡದ ಪ್ಲೇಯಿಂಗ್ XIನಲ್ಲಿ ಎರಡು ಬದಲಾವಣೆಯನ್ನು ತರಲಾಗಿದೆ. ಅನಾರೋಗ್ಯದ ಕಾರಣ ಕಳೆದ ಪಂದ್ಯವನ್ನು ಕಳೆದುಕೊಂಡಿದ್ದ ಅಭಿಷೇಕ್ ಶರ್ಮಾ, ಇದೀಗ ಪ್ಲೇಯಿಂಗ್ XIಗೆ ಮರಳಿದ್ದಾರೆ, ಹಾಗಾಗಿ ಸಂಜು ಸ್ಯಾಮ್ಸನ್ ಹೊರಗುಳಿದಿದ್ದಾರೆ. ಇನ್ನು ಹೆಚ್ಚುವರಿ ಸ್ಪಿನ್ನರ್ ಆಗಿ ಕುಲ್ದೀಪ್ ಯಾದವ್ ಅವರು ರಿಂಕು ಸಿಂಗ್ ಅವರ ಸ್ಥಾನದಲ್ಲಿ ಆಡುವ ಬಳಗಕ್ಕೆ ಬಂದಿದ್ದಾರೆ.
ಭಾರತ-ಪಾಕ್ ಪಂದ್ಯಕ್ಕೆ ಮಾಜಿ ನಾಯಕ ರೋಹಿತ್ ಶರ್ಮ ಹಾಜರ್
ಇನ್ನು ಪಾಕಿಸ್ತಾನ ತಂಡ, ತನ್ನ ಪ್ಲೇಯಿಂಗ್ XIನಲ್ಲಿ ಯಾವುದೇ ಬದಲಾವಣೆ ಮಾಡಿಕೊಂಡಿಲ್ಲ. ಕಳೆದ ಪಂದ್ಯವನ್ನು ಆಡಿದ್ದ ಅದೇ ಆಡುವ ಬಳಗವನ್ನ ಉಳಿಸಿಕೊಂಡಿದೆ. ಈ ಬಗ್ಗೆ ಟಾಸ್ ವೇಗಿ ಪಾಕ್ ನಾಯಕ ಸಲ್ಮಾನ್ ಆಘಾ ಈ ಮಾಹಿತಿ ನೀಡಿದ್ದಾರೆ. ಅಂದ ಹಾಗೆ, ಟಾಸ್ ವೇಳೆ ಇಬ್ಬರೂ ನಾಯಕರು ಹ್ಯಾಂಡ್ ಶೇಕ್ ಮಾಡಬಹುದೆಂದು ನಿರೀಕ್ಷೆ ಮಾಡಲಾಗಿತ್ತು. ಆದರೆ, ಎಲ್ಲಾ ನಿರೀಕ್ಷೆಗಳು ಹುಸಿಯಾಯಿತು. ಏಕೆಂದರೆ, ಇಬ್ಬರೂ ನಾಯಕರು ಹಸ್ತಲಾಘವ ನೀಡಲು ಆಸಕ್ತಿ ತೋರಲಿಲ್ಲ. ಟಾಸ್ ಮುಗಿಸಿಕೊಂಡು ತನ್ನ ಪಾಡಿಗೆ ತಾವು ಹೋದರು.
ಉಭಯ ತಂಡಗಳ ಪ್ಲೇಯಿಂಗ್ XI
ಭಾರತ: ಅಭಿಷೇಕ್ ಶರ್ಮಾ, ಇಶಾನ್ ಕಿಶನ್ (ವಿಕೆಟ್ ಕೀಪರ್), ತಿಲಕ್ ವರ್ಮಾ, ಸೂರ್ಯಕುಮಾರ್ ಯಾದವ್ (ನಾಯಕ), ಹಾರ್ದಿಕ್ ಪಾಂಡ್ಯ, ಶಿವಂ ದುಬೆ, ರಿಂಕು ಸಿಂಗ್, ಅಕ್ಷರ್ ಪಟೇಲ್, ಕುಲ್‌ದೀಪ್ ಯಾದವ್, ವರುಣ್ ಚಕ್ರವರ್ತಿ, ಜಸ್‌ಪ್ರೀತ್ ಬುಮ್ರಾ
ಪಾಕಿಸ್ತಾನ: ಸೈಯಮ್ ಆಯುಬ್, ಸಹುಬ್ದಾಝಾ ಫರ್ಹಾನ್, ಸಲ್ಮಾನ್ ಅಲಿ ಆಘಾ (ನಾಯಕ), ಬಾಬರ್ ಆಝಮ್, ಮೊಹಮ್ಮದ್ ನವಾಝ್, ಉಸ್ಮಾನ್ ಖಾನ್ (ವಿಕೆಟ್ ಕೀಪರ್), ಶದಾಬ್ ಖಾನ್, ಫಹೀಮ್ ಅಶ್ರಫ್, ಶಾಹೀನ್ ಶಾ ಅಫ್ರಿದಿ, ಅಬ್ರಾರ್ ಅಹ್ಮದ್, ಉಸ್ಮಾನ್ ತಾರಿಖ್
ಪಾಕ್ ವಿರುದ್ಧ ಭಾರತ ಗೆಲುವಿಗೆ ಅಭಿಮಾನಿಗಳಿಂದ ವಿಶೇಷ ಪ್ರಾರ್ಥನೆ
ಆರಂಭಿಕ ಎರಡೂ ಪಂದ್ಯಗಳನ್ನು ಗೆದ್ದಿರುವ ಭಾರತ-ಪಾಕ್
ಭಾರತ ತಂಡ ತನ್ನ ಆರಂಭಿಕ ಎರಡೂ ಪಂದ್ಯಗಳನ್ನು ಗೆದ್ದು, ಪಾಯಿಂಟ್ಸ್ ಟೇಬಲ್‌ನಲ್ಲಿ ಅಗ್ರ ಸ್ಥಾನವನ್ನು ಅಲಂಕರಿಸಿದೆ. ಮೊದಲನೇ ಪಂದ್ಯವನ್ನು ಯುಎಸ್‌ಎ ವಿರುದ್ಧ ಗೆದ್ದಿದ್ದ ಭಾರತ, ತನ್ನ ಎರಡನೇ ಪಂದ್ಯವನ್ನು ನಮೀಬಿಯಾ ವಿರುದ್ಧ ಗೆದ್ದಿತ್ತು. ಇನ್ನು ಎದುರಾಳಿ ಪಾಕಿಸ್ತಾನ ತಂಡ, ತನ್ನ ಮೊದಲನೇ ಪಂದ್ಯವನ್ನು ನೆದರ್ಲೆಂಡ್ಸ್ ವಿರುದ್ಧ ಗೆದದಿತ್ತು ಹಾಗೂ ಎರಡನೇ ಪಂದ್ಯದಲ್ಲಿ ಯುಎಸ್‌ಎ ತಂಡವನ್ನು ಮಣಿಸಿತ್ತು.