PBKS vs RCB Live: ಟಾಸ್ ಸೋತ ಆರ್‌ಸಿಬಿ ಬ್ಯಾಟಿಂಗ್
ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ 2026ರ ಆವೃತ್ತಿಯಲ್ಲಿ ಪ್ಲೇ ಆಫ್ಸ್‌ಗೆ ಕಾಲಿಡುವ ಲೆಕ್ಕಾಚಾರದಲ್ಲಿರುವ ಡಿಫೆಂಡಿಂಗ್ ಚಾಂಪಿಯನ್ಸ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಶ್ರೇಯಸ್ ಅಯ್ಯರ್ ಸಾರಥ್ಯದ ಅಪಾಯಕಾರಿ ಪಂಜಾಬ್ ಕಿಂಗ್ಸ್ ಎದುರು ಪೈಪೋಟಿ ನಡೆಸಲಿದೆ. ಅಂಕಪಟ್ಟಿಯ ಅಗ್ರಸ್ಥಾನದಲ್ಲಿ ಉಳಿದು ಮುಂದಿನ ಹಂತಕ್ಕೆ ತೇರ್ಗಡೆಯಾಗಲಿ ಆರ್‌ಸಿಬಿಗೆ ಈ ಪಂದ್ಯದಲ್ಲಿ ಗೆಲುವು ಅಗತ್ಯ.
ಧರ್ಮಶಾಲಾದಲ್ಲಿ ಆರ್‌ಸಿಬಿ ಮತ್ತು ಪಂಜಾಬ್ ಮುಖಾಮುಖಿ -
Vijeth Kumar DN
May 17, 2026 3:17 PM
ಧರ್ಮಶಾಲಾ: ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಪಂಜಾಬ್ ಕಿಂಗ್ಸ್ ತಂಡಗಳು ಧರ್ಮಶಾಲಾದ ಎಚ್‌ಪಿಸಿಎ ಕ್ರಿಕೆಟ್ ಸ್ಟೇಡಿಯಂನಲ್ಲಿ ಪೈಪೋಟಿ ನಡೆಸಲಿದ್ದು, ಮಹತ್ವದ ಟಾಸ್ ಗೆದ್ದ ಪಂಜಾಬ್ ಕಿಂಗ್ಸ್ ತಂಡದ ನಾಯಕ ಶ್ರೇಯಸ್ ಅಯ್ಯರ್ ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ.
ಮಹತ್ವದ ಬೆಳವಣಿಗೆ ಎಂಬಂತೆ ಈ ಪಂದ್ಯದಲ್ಲಿ ಆರ್‌ಸಿಬಿ ತಂಡವನ್ನು ವಿಕೆಟ್‌ಕೀಪರ್ ಬ್ಯಾಟ್ಸ್‌ಮನ್ ಜಿತೇಶ್ ಶರ್ಮಾ ಮುನ್ನಡೆಸುತ್ತಿದ್ದಾರೆ. ಎಂದಿನ ನಾಯಕ ರಜತ್ ಪಾಟಿದಾರ್ ಫಿಟ್ನೆಸ್ ಸಮಸ್ಯೆ ಎದುರಿಸುತ್ತಿರುವ ಕಾರಣ ಪಂಜಾಬ್ ವಿರುದ್ಧದ ಪಂದ್ಯದಿಂದ ಹೊರಗುಳಿದಿದ್ದಾರೆ.
ಟೂರ್ನಿಯಲ್ಲಿ ಆರಂಭಿಕ 6 ಪಂದ್ಯಗಳನ್ನು ಗೆದ್ದು ಅಬ್ಬರಿಸಿದ್ದ ಪಂಜಾಬ್ ಕಿಂಗ್ಸ್ ತಂಡ ಈಗ ಸಾಲು ಸಾಲು ಸೋಲಿನಿಂದಾಗಿ ಕಂಗಾಲಾಗಿದೆ. ಗೆಲುವಿನ ಹಾದಿಗೆ ಮರಳಿ ಪ್ಲೇ ಆಫ್ಸ್ ರೇಸ್‌ನಲ್ಲಿ ಉಳಿಯಲು ಶ್ರೇಯಸ್ ಅಯ್ಯರ್ ಬಳಗಕ್ಕೆ ಈ ಪಂದ್ಯದಲ್ಲಿ ಗೆಲುವು ಬಹಳಾ ಮುಖ್ಯವಾಗಿದೆ.