ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

IND vs IRE: ಗಾಯಾಳು ನಿತೀಶ್‌ ಕುಮಾರ್‌ ರೆಡ್ಡಿ ಸ್ಥಾನಕ್ಕೆ ಸುರ್ಯಾಂಶ್‌ ಶೆಡ್ಗೆಗೆ ಸ್ಥಾನ!

ನಿತೀಶ್‌ ಕುಮಾರ್‌ ರೆಡ್ಡಿ ಅವರು ಗಾಯಕ್ಕೆ ತುತ್ತಾದ ಕಾರಣ ಐರ್ಲೆಂಡ್‌ ಹಾಗೂ ಇಂಗ್ಲೆಂಡ್‌ ವಿರುದ್ದದ ಟಿ20ಐ ಸರಣಿಗಳಿಂದ ಹೊರ ನಡೆದಿದ್ದಾರೆ. ಅವರ ಸ್ಥಾನಕ್ಕೆ ಯುವ ಆಲ್‌ರೌಂಡರ್‌ ಸುರ್ಯಾಂಶ್‌ ಶೆಡ್ಗೆ ಅವರು ಆಯ್ಕೆಯಾಗಿದ್ದಾರೆ. ಈ ವಿಷಯವನ್ನು ಬಿಸಿಸಿಐ ತಮ್ಮ ಸೋಶಿಯಲ್‌ ಮೀಡಿಯಾ ಖಾತೆಗಳಲ್ಲಿ ತಿಳಿಸಿದೆ.

ನಿತೀಶ್‌ ರೆಡ್ಡಿ ಸ್ಥಾನಕ್ಕೆ ಸುರ್ಯಾಂಶ್‌ ಶೆಡ್ಗೆಗೆ ಸ್ಥಾನ.

ನವದೆಹಲಿ: ಆಲ್‌ರೌಂಡರ್‌ ನಿತೀಶ್‌ ಕುಮಾರ್‌ ರೆಡ್ಡಿ (Nitish Kumar Reddy) ಅವರು ಗಾಯಕ್ಕೆ ತುತ್ತಾದ ಕಾರಣ ಐರ್ಲೆಂಡ್‌ ಹಾಗೂ ಇಂಗ್ಲೆಂಡ್‌ ವಿರುದ್ಧದ ಟಿ20ಐ ಸರಣಿಗಳಿಂದ ಹೊರ ನಡೆದಿದ್ದಾರೆ. ಇದೀಗ ಅವರ ಸ್ಥಾನಕ್ಕೆ ಮುಂಬೈನ ಯುವ ಆಲ್‌ರೌಂಡರ್‌ ಸುರ್ಯಾಂಶ್‌ ಶೆಡ್ಗೆ (Suryansg Shedge) ಅವರಿಗೆ ಈ ಎರಡೂ ಸರಣಿಗಳ ಭಾರತ ತಂಡದಲ್ಲಿ ನಿತೀಶ್‌ ರೆಡ್ಡಿ ಅವರ ಸ್ಥಾನಕ್ಕೆ ಆಯ್ಕೆ ಮಾಡಲಾಗಿದೆ. ದೇಶಿ ಕ್ರಿಕೆಟ್‌ ಹಾಗೂ ಭಾರತ ಎ ತಂಡದಲ್ಲಿ ಉತ್ತಮ ಪ್ರದರ್ಶನವನ್ನು ತೋರಿದ ಕಾರಣ ಅವರಿಗೆ ಭಾರತ ತಂಡದಲ್ಲಿ ಚೊಚ್ಚಲ ಅವಕಾಶವನ್ನು ನೀಡಲಾಗಿದೆ. ಅಂದ ಹಾಗೆ ನಿತೀಶ್‌ ಕುಮಾರ್‌ ರೆಡ್ಡಿ ಅವರು ಅಫ್ಘಾನಿಸ್ತಾನ ವಿರುದ್ಧದ ಕೊನೆಯ ಏಕದಿನ ಪಂದ್ಯದಲ್ಲಿ ಗಾಯಕ್ಕೆ ತುತ್ತಾಗಿದ್ದರು.

ನಿತೀಶ್‌ ಕುಮಾರ್‌ ರೆಡ್ಡಿ ಅವರನ್ನು ಇಂಗ್ಲೆಂಡ್‌ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿಗೂ ಆಯ್ಕೆ ಮಾಡಲಾಗಿದೆ. ಆದರ, ಅವರು ಏಕದಿನ ಸರಣಿಯಿಂದಲೂ ಹೊರ ನಡೆದಿದ್ದಾರೆಂಬ ಬಗ್ಗೆ ಬಿಸಿಸಿಐ ಯಾವುದೇ ಮಾಹತಿಯನ್ನು ನೀಡಿಲ್ಲ. ಅಲ್ಲದೆ ಸುರ್ಯಾಂಶ್‌ ಶೆಡ್ಗೆ ಅವರನ್ನು ಏಕದಿನ ಸರಣಿಯಲ್ಲಿಯೂ ಮುಂದುವರಿಸುವ ಬಗ್ಗೆಯೂ ಇನ್ನೂ ಹೆಚ್ಚಿನ ಮಾಹಿತಿ ಹೊರಬಿದ್ದಿಲ್ಲ.

ಐರ್ಲೆಂಡ್‌, ಇಂಗ್ಲೆಂಡ್‌ ಟಿ20 ಸರಣಿಯಿಂದ ಹೊರಬಿದ್ದ ನಿತೀಶ್ ಕುಮಾರ್ ರೆಡ್ಡಿ

2026ರ ಇಂಡಿಯನ್‌ ಪ್ರೀಮಿಯರ್‌ ಲೀಗ್‌ ಟೂರ್ನಿಯಲ್ಲಿ ಸುರ್ಯಾಂಶ್‌ ಶೆಡ್ಗೆ ಅವರು ಶ್ರೇಯಸ್‌ ಅಯ್ಯರ್‌ ನಾಯಕತ್ವದ ಪಂಜಾಬ್‌ ಕಿಂಗ್ಸ್‌ ತಂಡದಲ್ಲಿ ಆಡಿದ್ದರು. ಇತ್ತೀಚೆಗೆ ಮುಗಿದಿದ್ದ ಶ್ರೀಲಂಕಾದಲ್ಲಿ ನಡೆದಿದ್ದ ತ್ರಿಕೋನ ಎ ಏಕದಿನ ಸರಣಿಯಲ್ಲಿ ಭಾರತ ಎ ತಂಡದಲ್ಲಿ ಶೆಡ್ಗೆ ಆಡಿದ್ದರು. ಈ ಸರಣಿಯಲ್ಲಿ ಐದು ಪಂದ್ಯಗಳನ್ನು ಆಡಿದ್ದ ಶೆಡ್ಗೆ ಅವರು 147 ರನ್‌ಗಳನ್ನು ಗಳಿಸಿದ್ದರು. ಬ್ಯಾಟಿಂಗ್‌ ಜೊತೆಗೆ ಬೌಲಿಂಗ್‌ನಲ್ಲಿಯೂ ತಂಡಕ್ಕೆ ಕೊಡುಗೆಯನ್ನು ನೀಡುವ ಸಾಮರ್ಥ್ಯವನ್ನು ಹೊಂದಿದ್ದಾರೆ.

ಈ ಹಿಂದೆ ಗಾಯಾಳು ಹಾರ್ದಿಕ್‌ ಸ್ಥಾನಕ್ಕೆ ನಿತೀಶ್‌ ಕುಮಾರ್‌ ರೆಡ್ಡಿ ಅವರನ್ನು ಭಾರತ ತಂಡದಲ್ಲಿ ಸ್ಥಾನವನ್ನು ನೀಡಲಾಗಿತ್ತು. ಆದರೆ, ಅವರು ಅಫ್ಘಾನಿಸ್ತಾನ ವಿರುದ್ಧದ ಏಕದಿನ ಸರಣಿಯಲ್ಲಿ ಅವರು ಗಾಯಕ್ಕೆ ತುತ್ತಾಗಿದ್ದರು.

'ಬಾಲ್ಯದ ಕನಸು ನನಸಾದ ಕ್ಷಣ'; ಟೀಮ್‌ ಇಂಡಿಯಾ ಜೆರ್ಸಿ ಧರಿಸಿ ಭಾವುಕರಾದ ವೈಭವ್‌ ಸೂರ್ಯವಂಶಿ

"ಜೂನ್ 20ರಂದು ಅಫ್ಘಾನಿಸ್ತಾನ ವಿರುದ್ಧ ನಡೆದ ಮೂರನೇ ಏಕದಿನ ಪಂದ್ಯದ ಬಳಿಕ ನಿತೀಶ್ ಅವರು ಎಡ ಕಾಲಿನ ತೊಡೆಯ ಮುಂಭಾಗದ ಸ್ನಾಯು ಭಾಗದಲ್ಲಿ ಅಸ್ವಸ್ಥತೆ ಇರುವುದಾಗಿ ತಿಳಿಸಿದ್ದರು. ನಂತರ ನಡೆಸಿದ ವೈದ್ಯಕೀಯ ಪರೀಕ್ಷೆಯ ಬಳಿಕ, ಬಿಸಿಸಿಐ ವೈದ್ಯಕೀಯ ತಂಡವು ಅವರಿಗೆ ಪುನಶ್ಚೇತನದ ಅವಧಿಯನ್ನು ಶಿಫಾರಸು ಮಾಡಿದೆ. ಇದರ ಪರಿಣಾಮವಾಗಿ ಅವರು ಎರಡೂ ಟಿ20ಐ ಸರಣಿಗಳಿಂದ ಹೊರಗುಳಿದಿದ್ದಾರೆ," ಎಂದು ಬಿಸಿಸಿಐ ತಿಳಿಸಿದೆ.



ಸುರ್ಯಾಂಶ್‌ ಶೆಡ್ಗೆ ಯಾರು?

ಸೂರ್ಯಕುಮಾರ್ ಯಾದವ್ ಅವರ ಬದಲಿಗೆ ಭಾರತದ ಟಿ20ಐ ತಂಡದ ನಾಯಕನಾಗಿ ನೇಮಕಗೊಂಡಿರುವ ಶ್ರೇಯಸ್ ಅಯ್ಯರ್ ಅವರೊಂದಿಗೆ ಶೆಡ್ಗೆ ತಂಡ ಸೇರಿಕೊಳ್ಳಲಿದ್ದಾರೆ. ಜೊತೆಗೆ, ಐಪಿಎಲ್‌ನಲ್ಲಿಯೂ ಶ್ರೇಯಸ್‌ ಅಯ್ಯರ್‌ ಅವರ ನಾಯಕತ್ವದ ಅಡಿಯಲ್ಲಿಯೇ ಶೆಡ್ಗೆ ಆಡಿದ್ದರು.

2024-25ರ ಸಯ್ಯದ್ ಮುಷ್ತಾಕ್ ಅಲಿ ಟ್ರೋಫಿ ಟೂರ್ನಿಯಲ್ಲಿ ಮುಂಬೈ ತಂಡ ಚಾಂಪಿಯನ್ ಆಗಲು ಶೆಡ್ಗೆ ಮಹತ್ವದ ಕೊಡುಗೆ ನೀಡಿದ್ದರು. ಕೆಳ ಮಧ್ಯಮ ಕ್ರಮಾಂಕದಲ್ಲಿ ಬ್ಯಾಟಿಂಗ್ ನಡೆಸಿದ್ದ ಅವರು 251.92ರ ಅದ್ಭುತ ಸ್ಟ್ರೈಕ್ ರೇಟ್‌ನೊಂದಿಗೆ 131 ರನ್ ಗಳಿಸಿ ತಂಡದ ಗೆಲುವಿನಲ್ಲಿ ತಮ್ಮದೇ ಆದ ಕೊಡುಗೆಯನ್ನು ನೀಡಿದ್ದರು.

ಭಾರತ vs ಐರ್ಲೆಂಡ್ ಟಿ20; ಮುಖಾಮುಖಿ, ರನ್‌, ವಿಕೆಟ್‌ ದಾಖಲೆ ಹೇಗಿದೆ?

2025ರಲ್ಲಿ ಐಪಿಎಲ್‌ಗೆ ಪದಾರ್ಪಣೆ ಮಾಡಿದ ಸೂರ್ಯಾಂಶ್, ಶ್ರೇಯಸ್ ಅಯ್ಯರ್ ನೇತೃತ್ವದ ಪಂಜಾಬ್ ಕಿಂಗ್ಸ್ ಪರ ಕೆಳ ಮಧ್ಯಮ ಕ್ರಮಾಂಕದಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದರು. ಏಳು ಪಂದ್ಯಗಳಲ್ಲಿ 175.55ರ ಪ್ರಭಾವಶಾಲಿ ಸ್ಟ್ರೈಕ್ ರೇಟ್‌ನೊಂದಿಗೆ 158 ರನ್ ಗಳಿಸಿ ತಮ್ಮ ಸಾಮರ್ಥ್ಯವನ್ನು ಸಾಬೀತುಪಡಿಸಿದರು.