ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

ಶಾಲೆಗೆ ಚಕ್ಕರ್‌ ಹಾಕಿ ಭಾರತ vs ನ್ಯೂಜಿಲೆಂಡ್‌ ಟೆಸ್ಟ್‌ ನೋಡಲ ಬಂದು ತಗಲಾಕಿಕೊಂಡ ವಿದ್ಯಾರ್ಥಿಗಳು! ವಿಡಿಯೊ

ಭಾರತ-ನ್ಯೂಜಿಲೆಂಡ್ ಟೆಸ್ಟ್ ಪಂದ್ಯ ವೀಕ್ಷಿಸಲು ತರಗತಿಗೆ ಚಕ್ಕರ್ ಹೊಡೆದ ಶಾಲಾ ವಿದ್ಯಾರ್ಥಿಗಳ ವಿಡಿಯೊ ವೈರಲ್ ಆಗಿದೆ. ಈ ಬಗ್ಗೆ ವಿದ್ಯಾರ್ಥಿಗಳ ಪೋಷಕರು ವಿಭಿನ್ನವಾಗಿ ಪ್ರತಿಕ್ರಿಯಿಸಿದ್ದಾರೆ. ಇತ್ತ ಮೊದಲ ಟೆಸ್ಟ್ ಡ್ರಾಗೊಂಡ ಪರಿಣಾಮ ಡಬ್ಲ್ಯುಟಿಸಿ ಫೈನಲ್ ಪ್ರವೇಶದ ಭಾರತದ ಲೆಕ್ಕಾಚಾರಕ್ಕೂ ಹಿನ್ನಡೆಯಾಗಿದೆ.

ಶಾಲೆಗೆ ಚಕ್ಕರ್‌ ಹಾಕಿ ಟೆಸ್ಟ್‌ ನೋಡಲು ಬಂದು ತಗಲಾಕಿಕೊಂಡ ವಿದ್ಯಾರ್ಥಿಗಳು!

ವೆಲ್ಲಿಂಗ್ಟನ್: ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಟೆಸ್ಟ್ ಪಂದ್ಯವನ್ನು (IND vs NZ) ವೀಕ್ಷಿಸಲು ಶಾಲೆಗೆ ಚಕ್ಕರ್ ಹೊಡೆದಿದ್ದ ವಿದ್ಯಾರ್ಥಿಗಳ ವಿಡಿಯೊವೊಂದು ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗಿದೆ. ಈ ವಿದ್ಯಾರ್ಥಿಗಳು ಶಾಲೆಯ ಸಮವಸ್ತ್ರದಲ್ಲೇ ಮೈದಾನಕ್ಕೆ ಬಂದು ಪಂದ್ಯ ವೀಕ್ಷಿಸುತ್ತಿದ್ದ ದೃಶ್ಯ ಕ್ಯಾಮೆರಾದಲ್ಲಿ ಸೆರೆಯಾಗಿತ್ತು. ಇದೀಗ ಈ ಘಟನೆಗೆ ಅವರ ಕುಟುಂಬದವರು ಹೇಗೆ ಪ್ರತಿಕ್ರಿಯಿಸಿದ್ದಾರೆ ಎಂಬುದು ಬಹಿರಂಗವಾಗಿದೆ.

ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ವೆಲ್ಲಿಂಗ್ಟನ್ ಟೆಸ್ಟ್ ಪಂದ್ಯದ ವೇಳೆ ಶಾಲಾ ಸಮವಸ್ತ್ರ ಧರಿಸಿದ್ದ ವಿದ್ಯಾರ್ಥಿಗಳ ಗುಂಪೊಂದು ಪಂದ್ಯ ವೀಕ್ಷಿಸುತ್ತಿರುವುದನ್ನು ಕ್ಯಾಮೆರಾಮನ್ ಗಮನಿಸಿದ್ದರು. ಕ್ಯಾಮೆರಾ ತಮ್ಮತ್ತ ತಿರುಗುತ್ತಿದ್ದಂತೆ ವಿದ್ಯಾರ್ಥಿಗಳು ಗುರುತು ಸಿಗಬಾರದೆಂದು ಮುಖ ಮರೆಮಾಚಲು ಪ್ರಯತ್ನಿಸಿದ್ದರು. ಈ ದೃಶ್ಯ ವೀಕ್ಷಕವಿವರಣೆಗಾರರು ಹಾಗೂ ಮೈದಾನದಲ್ಲಿದ್ದ ಪ್ರೇಕ್ಷಕರಲ್ಲಿ ನಗೆ ಮೂಡಿಸಿತ್ತು.

ಈ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದಂತೆ ವಿದ್ಯಾರ್ಥಿಗಳು ಸುದ್ದಿಯಾಗಿದ್ದರು. ಇದೀಗ ಅವರ ಪೋಷಕರ ಪ್ರತಿಕ್ರಿಯೆಯೂ ಗಮನ ಸೆಳೆದಿದೆ. ವಿದ್ಯಾರ್ಥಿಯೊಬ್ಬ ತನ್ನ ತಾಯಿಗೆ ಈ ವಿಡಿಯೊ ನೋಡಿ ನಗು ಬಂದಿತ್ತು ಎಂದು ಹೇಳಿದ್ದಾನೆ. ಮತ್ತೊಬ್ಬ ವಿದ್ಯಾರ್ಥಿ ತನ್ನ ತಂದೆ ತನ್ನ ಬಗ್ಗೆ ಹೆಮ್ಮೆಪಟ್ಟಿದ್ದಾರೆ ಎಂದು ಬಹಿರಂಗಪಡಿಸಿದ್ದಾನೆ.

IND vs NZ: ʻ ಚೆಂಡಿಗೆ ಎಂಜಲು ಬಳಸಲು ಅನುಮತಿ ನೀಡಿʼ-ಐಸಿಸಿಗೆ ಮನವಿ ಮಾಡಿದ ಶುಭಮನ್‌ ಗಿಲ್‌!

ಡ್ರಾದಲ್ಲಿ ಅಂತ್ಯಗೊಂಡ ವೆಲ್ಲಿಂಗ್ಟನ್ ಟೆಸ್ಟ್

ಇನ್ನೊಂದೆಡೆ, ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ವೆಲ್ಲಿಂಗ್ಟನ್ ಟೆಸ್ಟ್ ಪಂದ್ಯ ನೀರಸ ಡ್ರಾದಲ್ಲಿ ಅಂತ್ಯಗೊಂಡಿತ್ತು. ಪಂದ್ಯದಲ್ಲಿ ಭಾರತ ಮೇಲುಗೈ ಸಾಧಿಸಿದ್ದರೂ ಕೊನೆಯ ಇನಿಂಗ್ಸ್‌ನಲ್ಲಿ ನ್ಯೂಜಿಲೆಂಡ್‌ನ ಎಲ್ಲಾ 10 ವಿಕೆಟ್‌ಗಳನ್ನು ಪಡೆಯಲು ವಿಫಲವಾಯಿತು.

ಮೊದಲ ಇನಿಂಗ್ಸ್‌ನಲ್ಲಿ ನ್ಯೂಜಿಲೆಂಡ್ ತಂಡವನ್ನು 368 ರನ್‌ಗಳಿಗೆ ನಿಯಂತ್ರಿಸಿದ ಭಾರತ, ತನ್ನ ಎರಡನೇ ಇನಿಂಗ್ಸ್‌ನಲ್ಲಿ 9 ವಿಕೆಟ್ ನಷ್ಟಕ್ಕೆ 720 ರನ್‌ಗಳ ಬೃಹತ್ ಮೊತ್ತ ಕಲೆಹಾಕಿತು. ಕೆಎಲ್ ರಾಹುಲ್ ಮತ್ತು ರಿಷಭ್ ಪಂತ್ ಶತಕ ಸಿಡಿಸಿದರೆ, ನಾಯಕ ಶುಭಮನ್ ಗಿಲ್ 98 ರನ್ ಗಳಿಸಿ ಗಮನ ಸೆಳೆದರು. ಆದರೆ ಅಂತಿಮ ಇನಿಂಗ್ಸ್‌ನಲ್ಲಿ ನ್ಯೂಜಿಲೆಂಡ್ ಬ್ಯಾಟರ್‌ಗಳು ವಿಕೆಟ್ ಕಳೆದುಕೊಳ್ಳದೆ ಪಂದ್ಯವನ್ನು ಡ್ರಾ ಮಾಡಿಕೊಂಡರು.



ಡಬ್ಲ್ಯುಟಿಸಿ ಫೈನಲ್ ಕನಸಿಗೆ ಹಿನ್ನಡೆ

ನ್ಯೂಜಿಲೆಂಡ್ ವಿರುದ್ಧದ ಮೊದಲ ಟೆಸ್ಟ್ ಡ್ರಾನಲ್ಲಿ ಅಂತ್ಯಗೊಂಡ ಪರಿಣಾಮ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ (WTC) ಅಂಕಪಟ್ಟಿಯಲ್ಲಿ ಭಾರತದ ಅಂಕಗಳ ಶೇಕಡಾವಾರು ಪ್ರಮಾಣ (PCT) 51.52ರಿಂದ 50ಕ್ಕೆ ಕುಸಿದಿದೆ. ಭಾರತ ನಾಲ್ಕನೇ ಸ್ಥಾನದಲ್ಲೇ ಮುಂದುವರಿದಿದೆ. ನ್ಯೂಜಿಲೆಂಡ್ ವಿರುದ್ಧದ ಸರಣಿಯನ್ನು 2-0 ಅಂತರದಲ್ಲಿ ಗೆದ್ದಿದ್ದರೆ ಭಾರತದ ಫೈನಲ್ ಪ್ರವೇಶದ ಅವಕಾಶ ಹೆಚ್ಚಾಗುತ್ತಿತ್ತು. ಆದರೆ ಮೊದಲ ಪಂದ್ಯ ಡ್ರಾ ಆಗಿರುವುದರಿಂದ ಎರಡನೇ ಟೆಸ್ಟ್‌ನಲ್ಲಿ ಗೆಲುವು ಸಾಧಿಸುವುದು ಭಾರತಕ್ಕೆ ಅನಿವಾರ್ಯವಾಗಿದೆ.



ನ್ಯೂಜಿಲೆಂಡ್ ವಿರುದ್ಧದ ಎರಡನೇ ಟೆಸ್ಟ್ ಬಳಿಕ ಭಾರತ ತವರಿನಲ್ಲಿ ಆಸ್ಟ್ರೇಲಿಯಾ ವಿರುದ್ಧ ಐದು ಟೆಸ್ಟ್ ಪಂದ್ಯಗಳ ಸರಣಿಯನ್ನು ಆಡಲಿದೆ. ಹೀಗಾಗಿ ಉಳಿದಿರುವ ಆರು ಟೆಸ್ಟ್ ಪಂದ್ಯಗಳಲ್ಲಿ ಕನಿಷ್ಠ ಐದರಲ್ಲಿ ಗೆಲುವು ಸಾಧಿಸಿದರೆ ಮಾತ್ರ ಭಾರತಕ್ಕೆ ಫೈನಲ್ ಪ್ರವೇಶದ ಆಸೆ ಜೀವಂತವಾಗಿರಲಿದೆ.

ಡಿಆರ್‌ಎಸ್ ನಿರ್ಧಾರ ಯಶಸ್ಸು; ಭಾಂಗ್ರಾ ನೃತ್ಯ ಮಾಡಿ ಸಂಭ್ರಮಿಸಿದ ಶುಭಮನ್ ಗಿಲ್

ಎಲ್ಲ ಆರು ಪಂದ್ಯಗಳಲ್ಲೂ ಗೆಲುವು ಸಾಧಿಸಿದರೆ ಭಾರತದ ಗೆಲುವಿನ ಶೇಕಡಾವಾರು ಪ್ರಮಾಣ (PCT) 66.67ಕ್ಕೆ ತಲುಪಲಿದ್ದು, ಫೈನಲ್ ಪ್ರವೇಶಕ್ಕೆ ಉತ್ತಮ ಅವಕಾಶ ದೊರೆಯಲಿದೆ. ನಾಲ್ಕು ಪಂದ್ಯಗಳಲ್ಲಿ ಮಾತ್ರ ಗೆದ್ದರೆ PCT ಶೇಕಡಾ 60ಕ್ಕಿಂತ ಕಡಿಮೆಯೇ ಉಳಿಯಲಿದ್ದು, ಅದು ಫೈನಲ್ ಪ್ರವೇಶಕ್ಕೆ ಸಾಕಾಗುವ ಸಾಧ್ಯತೆ ಕಡಿಮೆ ಎಂದು ವಿಶ್ಲೇಷಿಸಲಾಗಿದೆ.