PBKS vs LSG: ಲಖನೌ ಸೂಪರ್ ಜಯಂಟ್ಸ್‌ಗೆ ಸೋಲಿನ ಬರೆ ಎಳೆದ ಪಂಜಾಬ್ ಕಿಂಗ್ಸ್!
PBKS vs LSG Match Highlights: ಪ್ರಭ್‌ಸಿಮ್ರಾನ್ ಸಿಂಗ್ ಸ್ಪೋಟಕ ಅರ್ಧಶತಕದ ಬಲದಿಂದ ಪಂಜಾಬ್ ಕಿಂಗ್ಸ್ ತಂಡ 2025ರ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ 13ನೇ ಪಂದ್ಯದಲ್ಲಿ ಲಖನೌ ಸೂಪರ್ ಜಯಂಟ್ಸ್ ವಿರುದ್ಧ 8 ವಿಕೆಟ್‌ಗಳ ಭರ್ಜರಿ ಗೆಲುವು ಪಡೆದಿದೆ. ಆ ಮೂಲಕ ಶ್ರೇಯಸ್ ಅಯ್ಯರ್ ಪರ ಟೂರ್ನಿಯಲ್ಲಿ ಎರಡನೇ ಗೆಲುವನ್ನು ತನ್ನದಾಗಿಸಿಕೊಂಡಿದೆ.

ಲಖನೌ ವಿರುದ್ಧ ಪಂಜಾಬ್‌ಗೆ ಜಯ

ಲಖನೌ: ಶ್ರೇಯಸ್ ಅಯ್ಯರ್ ನಾಯಕತ್ವದಲ್ಲಿ ಪಂಜಾಬ್ ಕಿಂಗ್ಸ್ ( Punjab Kings) ತಂಡ 2025ರ ಇಂಡಿಯನ್ ಪ್ರೀಮಿಯರ್ ಲೀಗ್ (IPL 2025) ಟೂರ್ನಿಯಲ್ಲಿ ಸತತ ಎರಡನೇ ಗೆಲುವು ಪಡೆದಿದೆ. ಪ್ರಭ್‌ಸಿಮ್ರಾನ್ ಸಿಂಗ್ ಸ್ಪೋಟಕ ಬ್ಯಾಟಿಂಗ್ ಬಲದಿಂದ ಪಂಜಾಬ್ ಕಿಂಗ್ಸ್ ತಂಡ, ಟೂರ್ನಿಯ 13ನೇ ಪಂದ್ಯದಲ್ಲಿ ಲಖನೌ ಸೂಪರ್ ಜಯಂಟ್ಸ್ (Lucknow Super Giants) ವಿರುದ್ಧ 8 ವಿಕೆಟ್‌ಗಳಿಂದ ಗೆಲುವು ಪಡೆದಿದೆ. ಈ ಜಯದ ಮೂಲಕ ಪಂಜಾಬ್ ಕಿಂಗ್ಸ್ ತಂಡ ಪಾಯಿಂಟ್ಸ್ ಟೇಬಲ್‌ನಲ್ಲಿ ಎರಡನೇ ಸ್ಥಾನಕ್ಕೆ ಲಗ್ಗೆ ಇಟ್ಟಿದೆ. ಇನ್ನು ರಿಷಭ್ ಪಂತ್ ನಾಯಕತ್ವದ ಎಲ್‌ಎಸ್‌ಜಿ ತಂಡ ಟೂರ್ನಿಯಲ್ಲಿ ಎರಡನೇ ಸೋಲು ಅನುಭವಿಸಿ ಅಂಕಪಟ್ಟಿಯಲ್ಲಿ ಆರನೇ ಸ್ಥಾನಕ್ಕೆ ಇಳಿದಿದೆ.
ಮಂಗಳವಾರ ಇಲ್ಲಿನ ಏಕನಾ ಕ್ರೀಡಾಂಗಣದಲ್ಲಿ ಲಖನೌ ನೀಡಿದ್ದ 172 ರನ್‌ಗಳ ಗುರಿಯನ್ನು ಹಿಂಬಾಲಿಸಿದ ಪಂಜಾಬ್ ಕಿಂಗ್ಸ್ ತಂಡ, ಪ್ರಭ್‌ಸಿಮ್ರಾನ್ ಸಿಂಗ್ ಹಾಗೂ ನಾಯಕ ಶ್ರೇಯಸ್ ಅಯ್ಯರ್ ಅವರ ಅರ್ಧಶತಕಗಳ ಬಲದಿಂದ 16.2 ಓವರ್‌ಗಳಿಗೆ 2 ವಿಕೆಟ್ ನಷ್ಟಕ್ಕೆ 177 ರನ್‌ಗಳನ್ನು ಗಳಿಸಿ ಎಂಟು ವಿಕೆಟ್ ಭರ್ಜರಿ ಗೆಲುವು ದಾಖಲಿಸಿತು. 34 ಎಸೆತಗಳಲ್ಲಿ 69 ರನ್ ಸಿಡಿಸಿ ಪಂಜಾಬ್ ಗೆಲುವಿನಲ್ಲಿ ಮಹತ್ತರ ಪಾತ್ರವಹಿಸಿದ ಪ್ರಭ್‌ಸಿಮ್ರಾನ್ ಸಿಂಗ್ ಪಂದ್ಯ ಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು.
IPL 2025: 27 ಕೋಟಿ ರೂ ಕೊಟ್ಟಿದ್ದೇಕೆ? 2 ರನ್‌ಗೆ ವಿಕೆಟ್ ಒಪ್ಪಿಸಿದ ರಿಷಭ್ ಪಂತ್ ವಿರುದ್ದ ಫ್ಯಾನ್ಸ್ ಗರಂ!
ಪಂಜಾಬ್ ಪರ ಇನಿಂಗ್ಸ್ ಆರಂಭಿಸಿದ ಪ್ರಿಯಾಂಶ್ ಆರ್ಯ ಹಾಗೂ ಪ್ರಭ್‌ಸಿಬ್ರಾನ್ ಜೋಡಿಯಿಂದ ದೊಡ್ಡ ಜೊತೆಯಾಟ ಮೂಡಿ ಬರಲಿಲ್ಲ. ಪ್ರಿಯಾಂಶ್ ಆರ್ಯ ಬಹುಬೇಗ ವಿಕೆಟ್ ಒಪ್ಪಿಸಿದರು. ಆದರೆ, ಎರಡನೇ ವಿಕೆಟ್‌ಗೆ ಜೊತೆಯಾಟ ಶ್ರೇಯಸ್ ಅಯ್ಯರ್ ಹಾಗೂ ಪ್ರಭ್‌ಸಿಮ್ರಾನ್ ಸಿಂಗ್ ಜೋಡಿ 84 ರನ್‌ಗಳನ್ನು ಕಲೆ ಹಾಕಿತು. 202.94ರ ಸ್ಟ್ರೈಕ್ ರೇಟ್‌ನಲ್ಲಿ ಬ್ಯಾಟ್ ಬೀಸಿದ ಪ್ರಭ್‌ಸಿಮ್ರಾನ್ 3 ಸಿಕ್ಸರ್ ಹಾಗೂ 9ಬೌಂಡರಿಗಳೊಂದಿಗೆ 69 ರನ್ ಚಚ್ಚಿದರು. ಇವರಿಗೆ ಸಾಥ್ ನೀಡಿದ್ದ ನಾಯಕ ಶ್ರೇಯಸ್ ಅಯ್ಯರ್, 30 ಎಸೆತಗಳಲ್ಲಿ ಅಜೇಯ 52 ರನ್‌ಗಳನ್ನು ಸಿಡಿಸಿದರು. ಅಲ್ಲದೆ ನೆಹಾಲ್ ವಧೇರಾ ಜತೆ 67 ರನ್ ಜೊತೆಯಟವನ್ನು ಆಡಿದರು. ವಧೇರಾ ಕೂಡ ಕೊನೆಯಲ್ಲಿ ಬಂದು 25 ಎಸೆತಗಳಲ್ಲಿ ಅಜೇಯ 43 ರನ್‌ಗಳನ್ನು ಸಿಡಿಸಿದ್ದರು. ಆ ಮೂಲಕ ಇನ್ನೂ 22 ಎಸೆತಗಳು ಬಾಕಿ ಇರುವಾಗಲೇ ಈ ಇಬ್ಬರೂ ಪಂಜಾಬ್ ತಂಡವನ್ನು ಗೆಲುವಿನ ದಡ ಸೇರಿಸಿದರು.
Stamping his authority 😎
— IndianPremierLeague (@IPL) April 1, 2025
Prabhsimran Singh bags the Player of the Match award for his power-packed 6⃣9⃣(34) in the chase 🔝#TATAIPL | #LSGvPBKS | @PunjabKingsIPL | @prabhsimran01 pic.twitter.com/TSWQTgZexX
171 ರನ್‌ಗಳನ್ನು ಕಲೆ ಹಾಕಿದ್ದ ಎಲ್‌ಎಸ್‌ಜಿ
ಇದಕ್ಕೂ ಮುನ್ನ ಟಾಸ್ ಸೋತು ಮೊದಲು ಬ್ಯಾಟ್ ಮಾಡುವಂತಾಗಿದ್ದ ಲಖನೌ ಸೂಪರ್ ಜಯಂಟ್ಸ್ ತಂಡದ ಪರ ಯಾವೊಬ್ಬ ಬ್ಯಾಟ್ಸ್‌ಮನ್ ದೊಡ್ಡ ಇನಿಂಗ್ಸ್ ಆಡಲಿಲ್ಲ. ಆದರೂ ನಿಕೋಲಸ್ ಪೂರನ್ ಹಾಗೂ ಆಯುಷ್ ಬದೋನಿ ಅವರ ಅಲ್ಪ ಕೊಡುಗೆಯಿಂದ ಲಖನೌ ತಂಡ, ತನ್ನ ಪಾಲಿನ 20 ಓವರ್‌ಗಳಿಗೆ 7 ವಿಕೆಟ್‌ಗಳ ನಷ್ಟಕ್ಕೆ 171 ರನ್‌ಗಳನ್ನು ಕಲೆ ಹಾಕಿತು. ಆ ಮೂಲಕ ಎದುರಾಳಿ ಪಂಜಾಬ್ ಕಿಂಗ್ಸ್‌ಗೆ 172 ರನ್‌ಗಳ ಗುರಿಯನ್ನು ನೀಡಿತ್ತು.
ಮೊದಲು ಬ್ಯಾಟ್ ಮಾಡಿದ ಲಖನೌಗೆ ನಿರೀಕ್ಷಿತ ಆರಂಭ ಸಿಗಲಿಲ್ಲ. ಆಡಿದ ತಮ್ಮ ಮೊದಲನೇ ಎಸೆತದಲ್ಲಿ ಮಿಚೆಲ್ ಮಾರ್ಷ್ ಗೋಲ್ಡನ್ ಡಕ್‌ಔಟ್ ಆದರು. 18 ಎಸೆತಗಳಲ್ಲಿ 28 ರನ್ ಗಳಿಸಿ ಉತ್ತಮ ಆರಂಭ ಪಡೆದಿದ್ದ ಏಡೆನ್ ಮಾರ್ಕ್ರಮ್, ಲಾಕಿ ಫರ್ಗ್ಯೂಸನ್ ಎಸೆತದಲ್ಲಿ ಕ್ಲೀನ್ ಬೌಲ್ಡ್ ಆದರು. ಇವರ ಬೆನ್ನಲ್ಲೆ ರಿಷಭ್ ಪಂತ್ ಕೇವಲ ಎರಡು ರನ್ ಗಳಿಸಿ ಗ್ಲೆನ್ ಮ್ಯಾಕ್ಸ್‌ವೆಲ್‌ಗೆ ಔಟ್ ಆದರು. ಆ ಮೂಲಕ ಎಲ್‌ಎಸ್‌ಜಿ ಕೇವಲ 35 ರನ್‌ಗಳಿಗೆ ಮೂರು ವಿಕೆಟ್ ಕಳೆದುಕೊಂಡು ಆರಂಭಿಕ ಆಘಾತ ಅನುಭವಿಸಿತ್ತು.
Statement victory ✅
— IndianPremierLeague (@IPL) April 1, 2025
Skipper's second 5⃣0⃣ this season ✅
Consecutive wins ✅
Punjab Kings cap off a perfect day 🙌#TATAIPL | #LSGvPBKS | @PunjabKingsIPL pic.twitter.com/HSrX8KwiY4
ಈ ವೇಳೆ ಕೆಲಕಾಲ ಕ್ರೀಸ್‌ನಲ್ಲಿ ಜೊತೆಯಾದ ನಿಕೋಲಸ್ ಪೂರನ್ ಹಾಗೂ ಆಯುಷ್ ಬದೋನಿ ನಾಲ್ಕನೇ ವಿಕೆಟ್‌ಗೆ 54 ರನ್ ಗಳ ಜೊತಯಾಟವನ್ನು ಆಡುವ ಮೂಲಕ ಸಂಕಷ್ಟಕ್ಕೆ ಸಿಲುಕಿದ್ದ ತಂಡವನ್ನು ಮೇಲೆತ್ತಿದ್ದರು. ಕಳೆದ ಪಂದ್ಯಗಳಲ್ಲಿ ಅಬ್ಬರಿಸಿದ್ದ ನಿಕೋಲಸ್ ಪೂರನ್ ಈ ಪಂದ್ಯದಲ್ಲಿ 30 ಎಸೆತಯಗಳಲ್ಲಿ 44 ರನ್ ಗಳಿಸಿ ವಿಕೆಟ್ ಒಪ್ಪಿಸಿದರು. ಇವರ ಜತೆ ಮತ್ತೊಂದು ತುದಿಯಲ್ಲಿ ಕೆಲಕಾಲ ಬ್ಯಾಟ್ ಮಾಡಿದ್ದ ಆಯುಷ್ ಬದೋನಿ ಅವರು, 33 ಎಸೆತಗಳಲ್ಲಿ 41 ರನ್ ಗಳಿಸಿದರು. ಡೇವಿಡ್ ಮಿಲ್ಲರ್ 19 ರನ್ ಹಾಗೂ ಅಬ್ದುಲ್ ಸಮದ್ 27ರನ್‌ಗಳ ಉಪಯುಕ್ತ ಕೊಡುಗೆಯನ್ನು ನೀಡಿದರು.
ಪಂಜಾಬ್ ಕಿಂಗ್ಸ್ ಪರ ಉತ್ತಮ ಬೌಲಿಂಗ್ ಪ್ರದರ್ಶನ ತೋರಿದ ಅರ್ಷದೀಪ್ ಸಿಂಗ್ 43 ರನ್ ಕೊಟ್ಟರೂ ಮೂರು ವಿಕೆಟ್‌ಗಳನ್ನು ಕೆಡವಿದರು.
ಸ್ಕೋರ್ ವಿವರ
ಲಖನೌ ಸೂಪರ್ ಜಯಂಟ್ಸ್: 20 ಓವರ್‌ಗಳಿಗೆ 171-7 ( ನಿಕೋಲಸ್ ಪೂರನ್ 44, ಆಯುಷ್ ಬದೋನಿ 41, ಅಬ್ದುಲ್ ಸಮದ್ 27; ಅರ್ಷದೀಪ್ ಸಿಂಗ್ 43 ಕ್ಕೆ 3)
ಪಂಜಾಬ್ ಕಿಂಗ್ಸ್: 16.2 ಓವರ್‌ಗಳಿಗೆ 177-2 ( ಫ್ರಭ್‌ಸಿಮ್ರಾನ್ ಸಿಂಗ್ 69, ಶ್ರೇಯಸ್ ಅಯ್ಯರ್ 52, ನೆಹಾಲ್ ವದೇರಾ 43; ದಿಗ್ವೀಶ್ ಸಿಂಗ್ ರಾಥಿ 30ಕ್ಕೆ 2)
ಪಂದ್ಯ ಶ್ರೇಷ್ಠ ಪ್ರಶಸ್ತಿ: ಪ್ರಭ್‌ಸಿಮ್ರಾನ್ ಸಿಂಗ್)