RCB vs PBKS IPL 2025 Final: ಟಾಸ್ ಸೋತ ಆರ್‌ಸಿಬಿ ಮೊದಲ ಬ್ಯಾಟಿಂಗ್!
RCB vs PBKS IPL 2025 Final: ಅಹಮದಾಬಾದ್‌ನ ನರೇಂದ್ರ ಮೋದಿ ಕ್ರಿಕೆಟ್ ಕ್ರೀಡಾಂಗಣದಲ್ಲಿ ಇದೀಗ ನಡೆಯುತ್ತಿರುವ 2025ರ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ಫೈನಲ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಪಂಜಾಬ್ ಕಿಂಗ್ಸ್ ತಂಡಗಳು ಕಾದಾಟ ನಡೆಸುತ್ತಿವೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಪಂಜಾಬ್ ನಾಯಕ ಶ್ರೇಯಸ್ ಅಯ್ಯರ್ ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. ಹಾಗಾಗಿ ಆರ್‌ಸಿಬಿ ಮೊದಲು ಬ್ಯಾಟ್ ಮಾಡಲಿದೆ.

ಬೆಂಗಳೂರು ಹಾಗೂ ಪಂಜಾಬ್ ನಡುವಣ 2025ರ ಐಪಿಎಲ್ ಟೂರ್ನಿ.

ಅಹಮದಾಬಾದ್: ಇಲ್ಲಿನ ನರೇಂದ್ರ ಮೋದಿ ಕ್ರಿಕೆಟ್ ಕ್ರೀಡಾಂಗಣದಲ್ಲಿ ಇದೀಗ ನಡೆಯುತ್ತಿರುವ 2025ರ ಇಂಡಿಯನ್ ಪ್ರೀಮಿಯರ್ ಲೀಗ್ (IPL 2025) ಟೂರ್ನಿಯ ಫೈನಲ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಪಂಜಾಬ್ ಕಿಂಗ್ಸ್ ತಂಡಗಳು (RCB vs PBKS) ಕಾದಾಟ ನಡೆಸುತ್ತಿವೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಪಿಬಿಕೆಎಸ್ ನಾಯಕ ಶ್ರೇಯಸ್ ಅಯ್ಯರ್ (Shreyas Iyer) ಚೇಸಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. ಆ ಮೂಲಕ ರಜತ್ ಪಾಟಿದಾರ್ ನಾಯಕತ್ವದ ಆರ್‌ಸಿಬಿ ಮೊದಲು ಬ್ಯಾಟ್ ಮಾಡಲಿದೆ.
ಆರ್‌ಸಿಬಿ ಪ್ಲೇಯಿಂಗ್ XIನಲ್ಲಿ ಯಾವುದೇ ಬದಲಾವಣೆ ಇಲ್ಲ. ಇದೇ ತಂಡದ ವಿರುದ್ಧ ಮೊದಲನೇ ಕ್ವಾಲಿಫೈಯರ್ ಪಂದ್ಯದಲ್ಲಿ ಆಡಿದ್ದ ಅದೇ ಆಡುವ ಬಳಗವನ್ನು ಉಳಿಸಿಕೊಳ್ಳಲಾಗಿದೆ. ಹಾಗಾಗಿ ಔಟ್ ಫಾರ್ಮ್ ಲಿಯಾಮ್ ಲಿವಿಂಗ್‌ಸ್ಟೋನ್ ಅವರನ್ನು ವೈಫಲ್ಯದ ಹೊರತಾಗಿಯೂ ಉಳಿಸಿಕೊಳ್ಳಲಾಗಿದೆ. ಇನ್ನು ಶ್ರೇಯಸ್ ಅಯ್ಯರ್ ನಾಯಕತ್ವದ ಪಂಜಾಬ್ ಕಿಂಗ್ಸ್ ತಂಡ ತನ್ನ ಆಡುವ ಬಳಗದಲ್ಲಿ ಯಾವುದೇ ಬದಲಾವಣೆಯನ್ನು ಮಾಡಿಲ್ಲ. ಎರಡನೇ ಕ್ವಾಲಿಫೈಯರ್ ಆಡಿದ್ದ ಅದೇ ಆಟಗಾರರನ್ನು ಕೂಡ ಈ ಮಹತ್ವದ ಪಂದ್ಯಕ್ಕೂ ಉಳಿಸಿಕೊಳ್ಳಲಾಗಿದೆ.
RCB vs PBKS: ಆರ್‌ಸಿಬಿ ಐಪಿಎಲ್ ಕಪ್ ಗೆಲ್ಲೋದು ಪಕ್ಕಾ ಎಂದ ವೀರೇಂದ್ರ ಸೆಹ್ವಾಗ್!
ಚೊಚ್ಚಲ ಕಪ್ ನಿರೀಕ್ಷೆಯಲ್ಲಿ ಆರ್‌ಸಿಬಿ
ಕಳೆದ 18 ವರ್ಷಗಳಿಂದ ಐಪಿಎಲ್ ಟ್ರೋಫಿಯನ್ನು ಗೆಲ್ಲಲು ಎದುರು ನೋಡುತ್ತಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ, ಪಂಜಾಬ್ ಕಿಂಗ್ಸ್ ತಂಡವನ್ನು ಮಣಿಸಿ ಚೊಚ್ಚಲ ಕಪ್ ಗೆಲ್ಲಲು ಎದುರು ನೋಡುತ್ತಿದೆ. ಅದೇ ರೀತಿ ಶ್ರೇಯಸ್ ಅಯ್ಯರ್ ನಾಯಕತ್ವದಲ್ಲಿಯೂ ಪಂಜಾಬ್ ಕಿಂಗ್ಸ್ ಮೊದಲ ಟ್ರೋಫಿ ಗೆಲ್ಲಲು ಯೋಜನೆಯೊಂದಿಗೆ ಕಣಕ್ಕೆ ಇಳಿದಿದೆ.
🚨 Toss 🚨@PunjabKingsIPL won the toss and elected to bowl first against @RCBTweets in the Grand #Final
— IndianPremierLeague (@IPL) June 3, 2025
Updates ▶ https://t.co/U5zvVhbXnQ#TATAIPL | #RCBvPBKS | #TheLastMile pic.twitter.com/OG9rob7n0U
ಉಭಯ ತಂಡಗಳ ಪ್ಲೇಯಿಂಗ್ XI
ರಾಯಲ್ ಚಾಲೆಂಜರ್ಸ್ ಬೆಂಗಳೂರು: ಫಿಲಿಪ್ ಸಾಲ್ಟ್, ವಿರಾಟ್ ಕೊಹ್ಲಿ, ಮಯಾಂಕ್ ಅಗರ್ವಾಲ್, ರಜತ್ ಪಾಟಿದಾರ್ (ನಾಯಕ), ಲಿಯಾಮ್ ಲಿವಿಂಗ್‌ಸ್ಟೋನ್, ಜಿತೇಶ್ ಶರ್ಮಾ(ವಿ.ಕೀ), ರೊಮ್ಯಾರಿಯೋ ಶೆಫರ್ಡ್, ಕೃಣಾಲ್ ಪಾಂಡ್ಯ, ಭುವನೇಶ್ವರ್ ಕುಮಾರ್, ಯಶ್ ದಯಾಳ್, ಜಾಶ್ ಹೇಝಲ್‌ವುಡ್
The Starting XIs of @RCBTweets and @PunjabKingsIPL for the #Final are locked in 🔒💪
— IndianPremierLeague (@IPL) June 3, 2025
Pick your match-winner 👇
Updates ▶ https://t.co/U5zvVhcvdo#TATAIPL | #RCBvPBKS | #TheLastMile pic.twitter.com/6rU2R6Gqsn
ಪಂಜಾಬ್ ಕಿಂಗ್ಸ್ : ಪ್ರಿಯಾಂಶ್ ಆರ್ಯ, ಜಾಶ್ ಇಂಗ್ಲಿಸ್ (ವಿ.ಕೀ), ಶ್ರೇಯಸ್ ಅಯ್ಯರ್ (ನಾಯಕ), ನೆಹಾಲ್ ವಧೇರಾ, ಶಶಾಂಕ್ ಸಿಂಗ್, ಮಾರ್ಕಸ್ ಸ್ಟೋಯ್ನಿಸ್, ಅಝಮತ್‌ವುಲ್ಲಾ ಒಮರ್ಜಾಯ್, ಕೈಲ್ ಜೇಮಿಸನ್, ವೈಶಾಖ್ ವಿಜಯ್‌ಕುಮಾರ್, ಅರ್ಷ್‌ದೀಪ್ ಸಿಂಗ್, ಯುಜ್ವೇಂದ್ರ ಚಹಲ್
ತಂಡಗಳು
ರಾಯಲ್ ಚಾಲೆಂಜರ್ಸ್ ಬೆಂಗಳೂರು: ಫಿಲಿಪ್ ಸಾಲ್ಟ್, ವಿರಾಟ್ ಕೊಹ್ಲಿ, ಮಯಾಂಕ್ ಅಗರ್ವಾಲ್, ರಜತ್ ಪಾಟಿದಾರ್ (ನಾಯಕ), ಲಿಯಾಮ್ ಲಿವಿಂಗ್‌ಸ್ಟೋನ್, ಜಿತೇಶ್ ಶರ್ಮಾ (ವಿ.ಕೀ), ರೊಮ್ಯಾರಿಯೋ ಶೆಫರ್ಡ್, ಕೃಣಾಲ್ ಪಾಂಡ್ಯ, ಭುವನೇಶ್ವರ್ ಕುಮಾರ್, ಯಶ್ ದಯಾಳ್, ಜಾಶ್ ಹೇಝಲ್‌ವುಡ್, ಸುಯಶ್ ಶರ್ಮಾ, ಟಿಮ್ ಡೇವಿಡ್, ಬ್ಲೆಸ್ಸಿಂಗ್ ಮುಜರಬಾನಿ, ನುವಾನ್ ತುಷಾರ, ಮೋಹಿತ್ ರಾಥಿ, ಸ್ವಸ್ತಿಕ್ ಚಿಕಾರಾ, ಅಭಿನಂದನ್ ಸಿಂಗ್, ಟಿಮ್ ಸೈಫರ್ಟ್, ಮನೋಜ್ ಬಾಂಡಗೆ, ರಸಿಖ್ ದಾರ್ ಸಲಾಮ್
ಪಂಜಾಬ್ ಕಿಂಗ್ಸ್: ಪ್ರಿಯಾಂಶ್ ಆರ್ಯ, ಪ್ರಭ್‌ಸಿಮ್ರಾನ್ ಸಿಂಗ್, ಜಾಶ್ ಇಂಗ್ಲಿಸ್ (ವಿ.ಕೀ), ಶ್ರೇಯಸ್ ಅಯ್ಯರ್ (ನಾಯಕ), ನೆಹಲ್ ವಧೇರಾ, ಶಶಾಂಕ್ ಸಿಂಗ್, ಮಾರ್ಕಸ್ ಸ್ಟೋಯ್ನಿಸ್, ಅಝಮತ್‌ವುಲ್ಲಾ ಒಮರ್ಜಾಯ್, ಕೈಲ್ ಜೇಮಿಸನ್, ವೈಶಾಖ್ ವಿಜಯ್‌ಕುಮಾರ್, ಅರ್ಷದೀಪ್ ಸಿಂಗ್, ಯುಜ್ವೇಂದ್ರ ಚಹಲ್, ಹರಪ್ರೀತ್ ಬ್ರಾರ್, ಸುರ್ಯಾಂಶ್ ಶೆಡ್ಗೆ, ಪ್ರವೀಣ್ ದುಬೆ, ಕ್ಸೇವಿಯರ್ ಬಾರ್ಟ್ಲೆಟ್, ವಿಷ್ಣು ವಿನೋದ್, ಯಶ್ ಠಾಕೂರ್, ಆರೋನ್ ಹಾರ್ಡಿ, ಕುಲ್‌ದೀಪ್ ಸೇನ್, ಮಿಚೆಲ್ ಓವನ್, ಹರ್ನೂರ್ ಸಿಂಗ್, ಮುಶೀರ್ ಖಾನ್, ಪೈಲಾ ಅವಿನಾಶ್