ಫೋಟೋ ಗ್ಯಾಲರಿ ಐಪಿಎಲ್​ ಸುನಿತಾ ವಿಲಿಯಮ್ಸ್​ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

RCB vs RR: ತವರಿನಲ್ಲಿ ಸತತ 4ನೇ ಬಾರಿ ಟಾಸ್‌ ಸೋತ ಆರ್‌ಸಿಬಿ ಮೊದಲ ಬ್ಯಾಟಿಂಗ್‌!

RCB vs RR: ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಇದೀಗ ನಡೆಯುತ್ತಿರುವ 2025ರ ಇಂಡಿಯನ್‌ ಪ್ರೀಮಿಯರ್‌ ಲೀಗ್‌ ಟೂರ್ನಿಯ 42ನೇ ಪಂದ್ಯದಲ್ಲಿ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ಹಾಗೂ ರಾಜಸ್ಥಾನ್‌ ರಾಯಲ್ಸ್‌ ತಂಡಗಳು ಕಾದಾಟ ನಡೆಸುತ್ತಿವೆ. ಈ ಪಂದ್ಯದಲ್ಲಿ ಟಾಸ್‌ ಗೆದ್ದ ಆರ್‌ಆರ್‌ ನಾಯಕ ರಿಯಾನ್‌ ಪರಾಗ್‌ ಬೌಲಿಂಗ್‌ ಆಯ್ಕೆ ಮಾಡಿಕೊಂಡಿದ್ದಾರೆ.

RCB vs RR:  ರಾಜಸ್ಥಾನ್‌ ಎದುರು ಟಾಸ್‌ ಸೋತ ಆರ್‌ಸಿಬಿ ಮೊದಲ ಬ್ಯಾಟಿಂಗ್‌!

ಆರ್‌ಸಿಬಿ vs ಆರ್‌ಆರ್‌

Profile Ramesh Kote Apr 24, 2025 7:07 PM

ಬೆಂಗಳೂರು: ಇಲ್ಲಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಇದೀಗ ನಡೆಯುತ್ತಿರುವ 2025ರ ಇಂಡಿಯನ್‌ ಪ್ರೀಮಿಯರ್‌ ಲೀಗ್‌ (IPL 2025) ಟೂರ್ನಿಯ 42ನೇ ಪಂದ್ಯದಲ್ಲಿ (RCB vs RR) ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ಹಾಗೂ ರಾಜಸ್ಥಾನ್‌ ರಾಯಲ್ಸ್‌ ಕಾದಾಟ ನಡೆಸುತ್ತಿವೆ. ಈ ಪಂದ್ಯದಲ್ಲಿ ಟಾಸ್‌ ಗೆದ್ದ ರಾಜಸ್ಥಾನ್‌ ನಾಯಕ ರಿಯಾನ್‌ ಪರಾಗ್‌ ಮೊದಲು ಬೌಲಿಂಗ್‌ ಆಯ್ಕೆ ಮಾಡಿಕೊಂಡಿದ್ದಾರೆ. ಹಾಗಾಗಿ ತವರು ಅಂಗಣದಲ್ಲಿ ಸತತ ನಾಲ್ಕನೇ ಬಾರಿ ಟಾಸ್‌ ಸೋತ ಆರ್‌ಸಿಬಿ, ಮೊದಲು ಬ್ಯಾಟ್‌ ಮಾಡುವಂತಾಗಿದೆ.

ರಾಜಸ್ಥಾನ್‌ ರಾಯಲ್ಸ್‌ ತಂಡದ ಪ್ಲೇಯಿಂಗ್‌ XIನಲ್ಲಿ ಒಂದು ಬದಲಾವಣೆಯನ್ನು ತರಲಾಗಿದೆ. ಸ್ಪಿನ್ನರ್‌ ಮಹೇಶ್‌ ತೀಕ್ಷಣ ಅವರ ಸ್ಥಾನಕ್ಕೆ ಫಝಲಕ್‌ ಫಾರೂಕಿ ಅವರನ್ನು ಪ್ಲೇಯಿಂಗ್‌ XIಗೆ ಕರೆ ತರಲಾಗಿದೆ. ಆದರೆ, ರಜತ್‌ ಪಾಟಿದಾರ್‌ ನಾಯಕತ್ವದ ಆರ್‌ಸಿಬಿ ಪ್ಲೇಯಿಂಗ್‌ XIನಲ್ಲಿ ಯಾವುದೇ ಬದಲಾವಣೆ ಇಲ್ಲ. ಪಂಜಾಬ್‌ ಕಿಂಗ್ಸ್‌ ವಿರುದ್ಧ ಕಳೆದ ಪಂದ್ಯವನ್ನು ಅಡಿದ್‌ ಅದೇ ಆಡುವ ಬಳಗವನ್ನು ಈ ಪಂದ್ಯಕ್ಕೆ ಉಳಿಸಿಕೊಳ್ಳಲಾಗಿದೆ.

RCB vs RR: ತವರಿನಲ್ಲಿ ಗೆಲುವಿನ ಖಾತೆ ತೆರೆದೀತೇ ರಾಯಲ್ ಚಾಲೆಂಜರ್ಸ್?

ನಾಲ್ಕನೇ ಸ್ಥಾನದಲ್ಲಿರುವ ಆರ್‌ಸಿಬಿ

ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡ ತನ್ನ ಕೊನೆಯ ಪಂದ್ಯದಲ್ಲಿ ಪಂಜಾಬ್‌ ಕಿಂಗ್ಸ್‌ ವಿರುದ್ಧ 7 ವಿಕೆಟ್‌ಗಳಿಂದ ಗೆಲುವು ಪಡೆದಿತ್ತು. ಇದೀಗ ಅದೇ ಲಯವನ್ನು ಮುಂದುವರಿಸಲು ಆರ್‌ಸಿಬಿ ಎದುರು ನೋಡುತ್ತಿದೆ. ಇಲ್ಲಿಯ ತನಕ ಆಡಿದ 8 ಪಂದ್ಯಗಳಲ್ಲಿ ಆರ್‌ಸಿಬಿ, ಐದರಲ್ಲಿ ಗೆದ್ದು ಇನ್ನುಳಿದ ಮೂರು ಪಂದ್ಯಗಳಲ್ಲಿ ಸೋಲು ಅನುಭವಿಸಿದೆ. ತವರು ಅಂಗಣದಲ್ಲಿ ಆಡಿದ ಮೂರೂ ಪಂದ್ಯಗಳಲ್ಲಿ ಆರ್‌ಸಿಬಿ ಸೋಲು ಅನುಭವಿಸಿದೆ. ಅಂದ ಹಾಗೆ 10 ಅಂಕಗಳನ್ನು ಕಲೆ ಹಾಕಿರುವ ಆರ್‌ಸಿಬಿ ಅಂಕಪಟ್ಟಿಯಲ್ಲಿ ನಾಲ್ಕನೇ ಸ್ಥಾನವನ್ನು ಅಲಂಕರಿಸಿದೆ.



ಎಂಟನೇ ಸ್ಥಾನದಲ್ಲಿ ಆರ್‌ಆರ್‌

ಪ್ರಸಕ್ತ ಆವೃತ್ತಿಯಲ್ಲಿ ರಾಜಸ್ಥಾನ್‌ ರಾಯಲ್ಸ್‌ ತಂಡದಿಂದ ನಿರೀಕ್ಷಿತ ಪ್ರದರ್ಶನ ಮೂಡಿ ಬಂದಿಲ್ಲ. ಇಲ್ಲಿಯ ತನಕ ಆಡಿದ 8 ಪಂದ್ಯಗಳಲ್ಲಿ ಆರ್‌ಆರ್‌ ಗೆದ್ದಿರುವುದು ಕೇವಲ ಎರಡೇ ಎರಡು ಪಂದ್ಯಗಳು ಮಾತ್ರ. ಇನ್ನುಳಿದ ಆರು ಪಂದ್ಯಗಳಲ್ಲಿ ಸೋಲು ಅನುಭವಿಸಿದೆ. ಆ ಮೂಲಕ ಅಂಕಪಟ್ಟಿಯಲ್ಲಿ ಎಂಟನೇ ಸ್ಥಾನದಲ್ಲಿದೆ. ಟೂರ್ನಿಯ ಪ್ಲೇಆಫ್ಸ್‌ಗೆ ಅರ್ಹತೆ ಪಡೆಯಬೇಕೆಂದರೆ ಆರ್‌ಆರ್‌, ಇನ್ನುಳಿದ ಆರೂ ಪಂದ್ಯಗಳಲ್ಲಿ ಗೆಲ್ಲಬೇಕಾದ ಅಗತ್ಯವಿದೆ.



ಇತ್ತಂಡಗಳ ಪ್ಲೇಯಿಂಗ್‌ XI

ರಾಯಲ್ ಚಾಲೆಂಜರ್ಸ್ ಬೆಂಗಳೂರು: ಫಿಲಿಪ್ ಸಾಲ್ಟ್, ವಿರಾಟ್ ಕೊಹ್ಲಿ, ರಜತ್ ಪಾಟಿದಾರ್ (ನಾಯಕ), ದೇವದತ್ ಪಡಿಕ್ಕಲ್, ಜಿತೇಶ್ ಶರ್ಮಾ (ವಿ.ಕೀ), ಟಿಮ್ ಡೇವಿಡ್, ಕೃಣಾಲ್ ಪಾಂಡ್ಯ, ರೊಮ್ಯಾರಿಯೊ ಶೆಫರ್ಡ್, ಭುವನೇಶ್ವರ್ ಕುಮಾರ್, ಜಾಶ್ ಹೇಝಲ್‌ವುಡ್, ಯಶ್ ದಯಾಳ್



ರಾಜಸ್ಥಾನ್ ರಾಯಲ್ಸ್ : ಯಶಸ್ವಿ ಜೈಸ್ವಾಲ್, ಶುಭಂ ದುಬೆ, ನಿತೀಶ್ ರಾಣಾ, ರಿಯಾನ್ ಪರಾಗ್ (ನಾಯಕ), ಧ್ರುವ್ ಜುರೆಲ್ (ವಿ.ಕೀ) ಶಿಮ್ರಾನ್ ಹೆಟ್ಮಾಯರ್, ವಾನಿಂದು ಹಸರಂಗ, ಜೋಫ್ರಾ ಆರ್ಚರ್, ಫಜಲ್ಹಕ್ ಫಾರೂಕಿ, ತುಷಾರ್ ದೇಶಪಾಂಡೆ, ಸಂದೀಪ್ ಶರ್ಮಾ