ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

GT vs RR:‌ ಎರಡನೇ ಕ್ವಾಲಿಫೈಯರ್‌ನಲ್ಲಿ ಟಾಸ್ ಗೆದ್ದು ಬ್ಯಾಟಿಂಗ್‌ ಆರಿಸಿಕೊಂಡ ರಾಜಸ್ಥಾನ್‌ ರಾಯಲ್ಸ್‌!

GT vs RR Qualifier 2: ಚಂಡೀಗಢದ ಮುಲ್ಲಾನ್‌ಪುರದ ಮಹಾರಾಜ ಯದವೀಂದ್ರ ಸಿಂಗ್‌ ಇಂಟರ್‌ನ್ಯಾಷನಲ್‌ ಕ್ರೀಡಾಂಗಣದಲ್ಲಿ ನಡೆಯುತ್ತಿರುವ 2026ರ ಇಂಡಿಯನ್‌ ಪ್ರೀಮಿಯರ್‌ ಲೀಗ್‌ ಟೂರ್ನಿಯ ಎರಡನೇ ಕ್ವಾಲಿಫೈಯರ್‌ ಪಂದ್ಯದಲ್ಲಿ ರಾಜಸ್ಥಾನ್‌ ರಾಯಲ್ಸ್‌ ಹಾಗೂ ಗುಜರಾತ್‌ ಟೈಟನ್ಸ್‌ ತಂಡಗಳು ಕಾದಾಟ ನಡೆಸುತ್ತಿವೆ. ಈ ಪಂದ್ಯದಲ್ಲಿ ಟಾಸ್‌ ಗೆದ್ದ ಆರ್‌ಆರ್‌ ನಾಯಕ ರಿಯಾನ್‌ ಪರಾಗ್‌ ಬ್ಯಾಟಿಂಗ್‌ ಆರಿಸಿಕೊಂಡಿದ್ದಾರೆ.

ಗುಜರಾತ್‌ ಎದುರು ಟಾಸ್‌ ಗೆದ್ದು ಬ್ಯಾಟಿಂಗ್‌ ಆರಿಸಿಕೊಂಡ ರಾಜಸ್ಥಾನ್‌!

ಗುಜರಾತ್‌ ಟೈಟನ್ಸ್‌-ರಾಜಸ್ಥಾನ್‌ ರಾಯಲ್ಸ್‌ ನಡುವಣ ಎರಡನೇ ಕ್ವಾಲಿಫೈಯರ್. -

Profile
Ramesh Kote May 29, 2026 7:20 PM

ಚಂಡೀಗಢ: ಇಲ್ಲಿನ ಮುಲ್ಲಾನ್‌ಪುರದ ಮಹಾರಾಜ ಯದವೀಂದ್ರ ಸಿಂಗ್‌ ಇಂಟರ್‌ನ್ಯಾಷನಲ್‌ ಕ್ರೀಡಾಂಗಣದಲ್ಲಿ ನಡೆಯುತ್ತಿರುವ 2026ರ ಇಂಡಿಯನ್‌ ಪ್ರೀಮಿಯರ್‌ ಲೀಗ್‌ (IPL 2026) ಟೂರ್ನಿಯ ಎರಡನೇ ಕ್ವಾಲಿಫೈಯರ್‌ ಪಂದ್ಯದಲ್ಲಿ ರಾಜಸ್ಥಾನ್‌ ರಾಯಲ್ಸ್‌ ಹಾಗೂ ಗುಜರಾತ್‌ ಟೈಟನ್ಸ್‌ (GT vs RR) ತಂಡಗಳು ಕಾದಾಟ ನಡೆಸುತ್ತಿವೆ. ಈ ಪಂದ್ಯದಲ್ಲಿ ಟಾಸ್‌ ಗೆದ್ದ ಆರ್‌ಆರ್‌ ನಾಯಕ ರಿಯಾನ್‌ ಪರಾಗ್‌ ಮೊದಲು ಬ್ಯಾಟ್‌ ಮಾಡಲು ನಿರ್ಧರಿಸಿದ್ದಾರೆ. ಆ ಮೂಲಕ ಎಲಿಮಿನೇಟರ್‌ ಪಂದ್ಯದಲ್ಲಿ ಕಲೆ ಹಾಕಿದ್ದ ದೊಡ್ಡ ಮೊತ್ತವನ್ನು ದಾಖಲಿಸಲು ಉದ್ಘಾಟನಾ ಆವೃತ್ತಿಯ ಚಾಂಪಿಯನ್ಸ್‌ ಎದುರು ನೋಡುತ್ತಿದ್ದಾರೆ.

ರಾಜಸ್ಥಾನ್‌ ರಾಯಲ್ಸ್‌ ತಂಡದ ಪ್ಲೇಯಿಂಗ್‌ XIನಲ್ಲಿ ಯಾವುದೇ ಬದಲಾವಣೆ ಇಲ್ಲವೆಂದು ನಾಯಕ ರಿಯಾನ್‌ ಪರಾಗ್‌ ಟಾಸ್‌ ವೇಳೆ ತಿಳಿಸಿದ್ದಾರೆ. ಸನ್‌ರೈಸರ್ಸ್‌ ಹೈದರಾಬಾದ್‌ ವಿರುದ್ದ ಆಡಿದ್ದ ಅದೇ ಆಟಗಾರರನ್ನು ಈ ಪಂದ್ಯಕ್ಕೂ ಉಳಿಸಿಕೊಳ್ಳಲಾಗಿದೆ. ಆದರೆ, ಶುಭಮನ್‌ ಗಿಲ್‌ ನಾಯಕತ್ವದ ಜಿಟಿ ಪ್ಲೇಯಿಂಗ್‌ XIನಲ್ಲಿ ಒಂದು ಬದಲಾವಣೆ ತರಲಾಗಿದೆ. ಸಾಯಿ ಕಿಶೋರ್‌ ಅವರನ್ನು ಆಡಿಸಲಾಗುತ್ತಿದೆ.

IPL 2026: ವೈಭವ್‌ ಅಬ್ಬರಕ್ಕೆ ಕೊಚ್ಚಿ ಹೋದ ಎಸ್‌ಆರ್‌ಎಚ್‌, ಎರಡನೇ ಕ್ವಾಲಿಫೈಯರ್‌ಗೆ ರಾಜಸ್ಥಾನ್‌!

ಲೀಗ್‌ ಹಂತದಲ್ಲಿ 18 ಅಂಕಗಳನ್ನು ಕಲೆ ಹಾಕುವ ಮೂಲಕ ಅಂಕಪಟ್ಟಿಯಲ್ಲಿ ಎರಡನೇ ಸ್ಥಾನದ ಮೂಲಕ ಮೊದಲನೇ ಕ್ವಾಲಿಫೈಯರ್‌ಗೆ ಅರ್ಹತೆ ಪಡೆದಿದ್ದ ಗುಜರಾತ್‌ ತಂಡ, ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ವಿರುದ್ಧ ಸೋಲು ಅನುಭವಿಸಿತ್ತು. ಹಾಗಾಗಿ ಇದೀಗ ಎರಡನೇ ಕ್ವಾಲಿಫೈಯರ್‌ನಲ್ಲಿ ಕಾದಾಟ ನಡೆಸಲಿದೆ. ಈ ಪಂದ್ಯದ ಮೂಲಕ ಫೈನಲ್‌ಗೆ ಅರ್ಹತೆ ಪಡೆಯಲು ಜಿಟಿ ಎದುರು ನೋಡುತ್ತಿದೆ.



ಆದರೆ, ರಿಯಾನ್‌ ಪರಾಗ್‌ ನಾಯಕತ್ವದ ರಾಜಸ್ಥಾನ್‌ ರಾಯಲ್ಸ್‌ ತಂಡದ ಪರಿಸ್ಥಿತಿ ಆ ರೀತಿ ಇಲ್ಲ. ಕಳೆದ ಮೂರು ಪಂದ್ಯಗಳು ಆರ್‌ಆರ್‌ಗೆ ಮಾಡು ಇಲ್ಲವೇ ಮಡಿ ಪಂದ್ಯಗಳಾಗಿದ್ದವು. ಆದರೂ ಒತ್ತಡವನ್ನು ಮೆಟ್ಟಿ ನಿಂತು ರಾಜಸ್ಥಾನ್‌ ತಂಡ ಇದೀಗ ಎರಡನೇ ಕ್ವಾಲಿಫೈಯರ್‌ನಲ್ಲಿ ಕಾದಾಟ ನಡೆಸುತ್ತಿದೆ. ಈ ಪಂದ್ಯದಲ್ಲಿ ಗೆದ್ದರೆ 2008ರ ಚಾಂಪಿಯನ್ಸ್‌ ಪ್ರಶಸ್ತಿ ಪಂದ್ಯಕ್ಕೆ ಅರ್ಹತೆ ಪಡೆಯಲಿದೆ.



ಇತ್ತಂಡಗಳ ಪ್ಲೇಯಿಂಗ್ XI

ಗುಜರಾತ್ ಟೈಟನ್ಸ್: ಸಾಯಿ ಸುದರ್ಶನ್, ಶುಭಮನ್ ಗಿಲ್ (ನಾಯಕ), ಜೋಸ್ ಬಟ್ಲರ್ (ವಿಕೆಟ್‌ ಕೀಪರ್‌), ನಿಶಾಂತ್ ಸಿಂಧು, ವಾಷಿಂಗ್ಟನ್ ಸುಂದರ್, ಜೇಸನ್ ಹೋಲ್ಡರ್, ರಶೀದ್ ಖಾನ್, ರವಿಶ್ರೀನಿವಾಸನ್ ಸಾಯಿ ಕಿಶೋರ್, ಕಗಿಸೊ ರಬಾಡ, ಪ್ರಸಿಧ್‌ ಕೃಷ್ಣ, ಮೊಹಮ್ಮದ್ ಸಿರಾಜ್



ರಾಜಸ್ಥಾನ್ ರಾಯಲ್ಸ್: ಯಶಸ್ವಿ ಜೈಸ್ವಾಲ್, ವೈಭವ್ ಸೂರ್ಯವಂಶಿ, ಧ್ರುವ್ ಜುರೆಲ್ (ವಿಕೆಟ್‌ ಕೀಪರ್‌), ರಿಯಾನ್ ಪರಾಗ್ (ನಾಯಕ), ಡೊನೊವನ್ ಫೆರೇರಾ, ದಸೂನ್ ಶನಕ, ರವೀಂದ್ರ ಜಡೇಜಾ, ಜೋಫ್ರಾ ಆರ್ಚರ್, ನಾಂಡ್ರೆ ಬರ್ಗರ್, ಬ್ರಿಜೇಶ್ ಶರ್ಮಾ, ಯಶ್ ರಾಜ್ ಪುಂಜಾ

ತಂಡಗಳು

ಗುಜರಾತ್ ಟೈಟನ್ಸ್: ಸಾಯಿ ಸುದರ್ಶನ್, ಶುಭಮನ್ ಗಿಲ್ (ನಾಯಕ), ಜೋಸ್ ಬಟ್ಲರ್ (ವಿಕೆಟ್‌ ಕೀಪರ್‌), ನಿಶಾಂತ್ ಸಿಂಧು, ವಾಷಿಂಗ್ಟನ್ ಸುಂದರ್, ಜೇಸನ್ ಹೋಲ್ಡರ್, ರಶೀದ್ ಖಾನ್, ರವಿಶ್ರೀನಿವಾಸನ್ ಸಾಯಿ ಕಿಶೋರ್, ಕಗಿಸೊ ರಬಾಡ, ಪ್ರಸಿಧ್‌ ಕೃಷ್ಣ, ಮೊಹಮ್ಮದ್ ಸಿರಾಜ್, ರಾಹುಲ್ ತೆವಾಟಿಯಾ, ಗ್ಲೆನ್ ಫಿಲಿಪ್ಸ್, ಅನುಜ್ ರಾವತ್, ಕುಮಾರ್ ಕುಶಾಗ್ರ, ಅರ್ಷದ್ ಖಾನ್, ಕುಲ್ವಂತ್ ಖೆಜ್ರೋಲಿಯಾ, ಲ್ಯೂಕ್ ವುಡ್, ಕಾನರ್ ಎಸ್ಟರ್‌ಹುಜೆನ್, ಇಶಾಂತ್ ಶರ್ಮಾ, ಜಯಂತ್ ಯಾದವ್, ಶಾರುಖ್ ಖಾನ್, ಮಾನವ್ ಸುತಾರ್, ಗುರ್ನೂರ್ ಬ್ರಾರ್, ಅಶೋಕ್ ಶರ್ಮಾ

ರಾಜಸ್ಥಾನ್ ರಾಯಲ್ಸ್: ಯಶಸ್ವಿ ಜೈಸ್ವಾಲ್, ವೈಭವ್ ಸೂರ್ಯವಂಶಿ, ಧ್ರುವ್ ಜುರೆಲ್ (ವಿಕೆಟ್‌ ಕೀಪರ್‌), ರಿಯಾನ್ ಪರಾಗ್ (ನಾಯಕ), ಡೊನೊವನ್ ಫೆರೇರಾ, ದಸೂನ್ ಶನಕ, ರವೀಂದ್ರ ಜಡೇಜಾ, ಜೋಫ್ರಾ ಆರ್ಚರ್, ನಾಂಡ್ರೆ ಬರ್ಗರ್, ಬ್ರಿಜೇಶ್ ಶರ್ಮಾ, ಯಶ್ ರಾಜ್ ಪುಂಜಾ, ಶುಭಂ ದುಬೆ, ಸುಶಾಂತ್ ಮಿಶ್ರಾ, ಅಮನ್ ರಾವ್ ಪೇರಾಲ, ರವಿ ಬಿಷ್ಣೋಯ್, ತುಷಾರ್ ದೇಶಪಾಂಡೆ, ಆಡಮ್ ಮಿಲ್ನೆ, ಶಿಮ್ರಾನ್ ಹೆಟ್ಮೆಯರ್, ಲುವಾನ್-ಡ್ರೆ ಪ್ರಿಟೋರಿಯಸ್, ಕ್ವೆನಾ ಎಂಫಾಕ, ಸಂದೀಪ್ ಶರ್ಮಾ, ಕುಲದೀಪ್ ಸೇನ್, ಯುದ್ಧವೀರ್ ಸಿಂಗ್ ಚರಕ್, ಎಮನ್‌ಜೋತ್ ಸಿಂಗ್ ಚಹಲ್, ವಿಘ್ನೇಶ್ ಪುತ್ತೂರು