ವಕ್ಫ್​ ತಿದ್ದುಪಡಿ ಮಸೂದೆ ಐಪಿಎಲ್​ ಸುನಿತಾ ವಿಲಿಯಮ್ಸ್​ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

RCB vs GT: ಟಾಸ್‌ ಸೋತ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ಮೊದಲ ಬ್ಯಾಟಿಂಗ್‌!

RCB vs GT: ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರಿಕೆಟ್‌ ಕ್ರೀಡಾಂಗಣದಲ್ಲಿ ಇದೀಗ ನಡೆಯುತ್ತಿರುವ 2025ರ ಇಂಡಿಯನ್‌ ಪ್ರೀಮಿಯರ್‌ ಲೀಗ್‌ ಟೂರ್ನಿಯ 14ನೇ ಪಂದ್ಯದಲ್ಲಿ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ಹಾಗೂ ಗುಜರಾತ್‌ ಟೈಟನ್ಸ್‌ ತಂಡಗಳು ಕಾದಾಟ ನಡೆಸುತ್ತಿವೆ. ಈ ಪಂದ್ಯದಲ್ಲಿ ಟಾಸ್‌ ಗೆದ್ದ ಜಿಟಿ ನಾಯಕ ಶುಭಮನ್‌ ಗಿಲ್‌ ಬೌಲಿಂಗ್‌ ಆಯ್ಕೆ ಮಾಡಿಕೊಂಡಿದ್ದಾರೆ.

RCB vs GT: ಟಾಸ್‌ ಸೋತ ಆರ್‌ಸಿಬಿ ಮೊದಲ ಬ್ಯಾಟಿಂಗ್‌!

2025ರ ಐಪಿಎಲ್‌ 14ನೇ ಪಂದ್ಯದಲ್ಲಿ ಆರ್‌ಸಿಬಿ-ಜಿಟಿ ನಡುವೆ ಕಾದಾಟ ನಡೆಯುತ್ತಿದೆ.

Profile Ramesh Kote Apr 2, 2025 7:24 PM

ಬೆಂಗಳೂರು: ಇಲ್ಲಿನ ಎಂ ಚಿನ್ನಸ್ವಾಮಿ ಕ್ರಿಕೆಟ್‌ ಕ್ರೀಡಾಂಗಣದಲ್ಲಿ ಇದೀಗ ನಡೆಯುತ್ತಿರುವ 2025ರ ಇಂಡಿಯನ್‌ ಪ್ರೀಮಿಯರ್‌ ಲೀಗ್‌ (IPL 2025) ಟೂರ್ನಿಯ 14ನೇ ಪಂದ್ಯದಲ್ಲಿ (RCB vs GT) ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ಹಾಗೂ ಗುಜರಾತ್‌ ಟೈಟನ್ಸ್‌ ತಂಡಗಳು ಕಾದಾಟ ನಡೆಸುತ್ತಿವೆ. ಈ ಪಂದ್ಯದಲ್ಲಿ ಟಾಸ್‌ ಗೆದ್ದ ಜಿಟಿ ನಾಯಕ ಶುಭಮನ್‌ ಗಿಲ್‌ ಮೊದಲು ಬೌಲಿಂಗ್‌ ಆಯ್ಕೆ ಮಾಡಿಕೊಂಡಿದ್ದಾರೆ. ಆ ಮೂಲಕ ಎದುರಾಳಿ ಆರ್‌ಸಿಬಿಯನ್ನು ಮೊದಲ ಬ್ಯಾಟಿಂಗ್‌ಗೆ ಆಹ್ವಾನಿಸಿದ್ದಾರೆ. ಆ ಮೂಲಕ ತವರು ತಂಡವನ್ನು ಕಡಿಮೆ ಮೊತ್ತಕ್ಕೆ ಆಲ್‌ಔಟ್‌ ಮಾಡುವ ಯೋಜನೆಯನ್ನು ಗುಜರಾತ್‌ ತಂಡ ಹಾಕಿಕೊಂಡಿದೆ.

ತವರು ಅಂಗಣದ ಮೊದಲ ಪಂದ್ಯಕ್ಕೆ ಆರ್‌ಸಿಬಿ ಪ್ಲೇಯಿಂಗ್‌ XIನಲ್ಲಿ ಯಾವುದೇ ಬದಲಾವಣೆ ಮಾಡಲಾಗಿಲ್ಲ. ಚೆನ್ನೈ ಸೂಪರ್‌ ಕಿಂಗ್ಸ್‌ ಆಡಿದ್ದ ಅದೇ ಆಡುವ ಬಳಗವನ್ನು ಈ ಪಂದ್ಯಕ್ಕೆ ಉಳಸಿಕೊಳ್ಳಲಾಗಿದೆ ಎಂದು ಆರ್‌ಸಿಬಿ ನಾಯಕ ರಜತ್‌ ಪಾಟಿದಾರ್‌ ಟಾಸ್‌ ವೇಳೆ ಮಾಹಿತಿ ನೀಡಿದ್ದಾರೆ. ಆದರೆ, ಶುಭಮನ್‌ ಗಿಲ್‌ ನಾಯಕತ್ವದ ಗುಜರಾತ್‌ ಟೈಟನ್ಸ್‌ ತಂಡದ ಪ್ಲೇಯಿಂಗ್‌ XIನಲ್ಲಿ ಒಂದು ಬದಲಾವಣೆಯನ್ನು ತರಲಾಗಿದೆ. ವೈಯಕ್ತಿಕ ಕಾರಣದಿಂದ ಕಗಿಸೊ ರಬಾಡ ಪ್ಲೇಯಿಂಗ್‌ XIನಲ್ಲಿ ಆಡುತ್ತಿಲ್ಲ. ಇವರ ಸ್ಥಾನದಲ್ಲಿ ಅರ್ಷದ್‌ ಖಾನ್‌ ಆಡುತ್ತಿದ್ದಾರೆಂದು ನಾಯಕ ಗಿಲ್‌ ಟಾಸ್‌ ಗೆದ್ದ ಬಳಿಕ ಮಾಹಿತಿ ನೀಡಿದ್ದರು.

RCB vs GT: ಟಿ20 ಕ್ರಿಕೆಟ್‌ನಲ್ಲಿ ನೂತನ ದಾಖಲೆಯ ಸನಿಹದಲ್ಲಿ ವಿರಾಟ್‌ ಕೊಹ್ಲಿ!

ಇತ್ತಂಡಗಳ ಪ್ಲೇಯಿಂಗ್‌ XI

ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು: ಫಿಲಿಪ್ ಸಾಲ್ಟ್, ವಿರಾಟ್ ಕೊಹ್ಲಿ, ದೇವದತ್ ಪಡಿಕ್ಕಲ್, ರಜತ್ ಪಾಟಿದಾರ್ (ನಾಯಕ), ಲಿಯಾಮ್ ಲಿವಿಂಗ್‌ಸ್ಟೋನ್, ಜಿತೇಶ್ ಶರ್ಮಾ(ವಿ.ಕೀ), ಟಿಮ್ ಡೇವಿಡ್, ಕೃಣಾಲ್ ಪಾಂಡ್ಯ, ಭುವನೇಶ್ವರ್ ಕುಮಾರ್, ಜಾಶ್ ಹೇಝಲ್‌ವುಡ್, ಯಶ್ ದಯಾಳ್



ಗುಜರಾತ್‌ ಟೈಟನ್ಸ್‌: ಸಾಯಿ ಸುದರ್ಶನ್, ಶುಭ್‌ಮನ್ ಗಿಲ್‌ (ನಾಯಕ), ಜೋಸ್ ಬಟ್ಲರ್ (ವಿ.ಕೀ), ಶಾರುಖ್ ಖಾನ್, ರಾಹುಲ್ ತೆವಾಟಿಯಾ, ಅರ್ಷದ್ ಖಾನ್, ರಶೀದ್ ಖಾನ್, ಸಾಯಿ ಕಿಶೋರ್, ಮೊಹಮ್ಮದ್ ಸಿರಾಜ್, ಪ್ರಸಿಧ್‌ ಕೃಷ್ಣ, ಇಶಾಂತ್ ಶರ್ಮಾ



ಅಗ್ರ ಸ್ಥಾನದಲ್ಲಿ ಆರ್‌ಸಿಬಿ

ಪ್ರಸಕ್ತ ಟೂರ್ನಿಯಲ್ಲಿ ತನ್ನ ಆರಂಭಿಕ ಎರಡೂ ಪಂದ್ಯಗಳನ್ನು ಗೆಲ್ಲುವ ಮೂಲಕ ಆರ್‌ಸಿಬಿ, ಟೂರ್ನಿಯ ಪಾಯಿಂಟ್ಸ್‌ ಟೇಬಲ್‌ನಲ್ಲಿ ಅಗ್ರ ಸ್ಥಾನದಲ್ಲಿದೆ. ಮೊದಲನೇ ಪಂದ್ಯದಲ್ಲಿ ಕೋಲ್ಕತಾ ನೈಟ್‌ ರೈಡರ್ಸ್‌ ವಿರುದ್ಧ ಗೆದ್ದಿದ್ದ ಬೆಂಗಳೂರು ತಂಡ, ತನ್ನ ಎರಡನೇ ಪಂದ್ಯದಲ್ಲಿ ಚೆನ್ನೈ ಸೂಪರ್‌ ಕಿಂಗ್ಸ್‌ ವಿರುದ್ದ ಜಯಿಸಿತ್ತು. ಇದೀಗ ನಾಲ್ಕು ಅಂಕಗಳು ಹಾಗೂ ಅತ್ಯುತ್ತಮ ರನ್‌ರೇಟ್‌ನೊಂದಿಗೆ ಆರ್‌ಸಿಬಿ ಅಗ್ರ ಸ್ಥಾನದಲ್ಲಿದೆ.

IPL 2025: ಪಂಜಾಬ್‌ ಕಿಂಗ್ಸ್‌ ವಿರುದ್ದದ ಸೋಲಿನ ಬೆನ್ನಲ್ಲೆ ಪಿಚ್‌ ಕ್ಯುರೇಟರ್‌ಗಳನ್ನು ದೂರಿದ ಜಹೀರ್‌ ಖಾನ್‌!

ನಾಲ್ಕನೇ ಸ್ಥಾನದಲ್ಲಿ ಗುಜರಾತ್‌ ಟೈಟನ್ಸ್‌

ಇನ್ನು ಶುಭಮನ್‌ ಗಿಲ್‌ ನಾಯಕತ್ವದ ಗುಜರಾತ್‌ ಟೈಟನ್ಸ್‌ ತಂಡ ಇಲ್ಲಿಯವರೆಗೂ ಆಡಿದ ಎರಡು ಪಂದ್ಯಗಳಲ್ಲಿ ಒಂದನ್ನು ಸೋತು, ಇನ್ನೊಂದು ಪಂದ್ಯದಲ್ಲಿ ಗೆಲುವು ಪಡೆದಿದೆ. ಎರಡು ಅಂಕಗಳೊಂದಿಗೆ ಜಿಟಿ ಟೂರ್ನಿಯ ಪಾಯಿಂಟ್ಸ್‌ ಟೇಬಲ್‌ನಲ್ಲಿ ನಾಲ್ಕನೇ ಸ್ಥಾನವನ್ನು ಅಲಂಕರಿಸಿದೆ. ತನ್ನ ಮೊದಲನೇ ಪಂದ್ಯದಲ್ಲಿ ಪಂಜಾಬ್‌ ಕಿಂಗ್ಸ್‌ ವಿರುದ್ಧ ಸೋತಿದ್ದ ಜಿಟಿ, ತನ್ನ ಎರಡನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್‌ ವಿರುದ್ಧ ಗೆಲುವು ಪಡೆದಿತ್ತು.