RCB vs GT: ಗುಜರಾತ್ ಟೈಟನ್ಸ್ ಎದುರು ಆರ್‌ಸಿಬಿ ಗೆಲ್ಲುವ ನೆಚ್ಚಿನ ತಂಡ! ಇದಕ್ಕೆ ಕಾರಣ ಇಲ್ಲಿದೆ
RCB vs GT: ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಗುಜರಾತ್ ಟೈಟನ್ಸ್ ನಡುವಣ 2026ರ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ 34ನೇ ಪಂದ್ಯ ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಏಪ್ರಿಲ್ 24 ರಂದು ಶುಕ್ರವಾರ ನಡೆಯಲಿದೆ. ಈ ಪಂದ್ಯದಲ್ಲಿ ಗೆಲ್ಲುವ ನೆಚ್ಚಿನ ತಂಡ ಯಾವುದೆಂದು ಇಲ್ಲಿ ವಿವರಿಸಲಾಗಿದೆ.
RCB vs GT ನಡುವೆ ಗೆಲ್ಲುವ ನೆಚ್ಚಿನ ತಂಡ ಯಾವುದು? -
ಬೆಂಗಳೂರು: ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಗುಜರಾತ್ ಟೈಟನ್ಸ್ ತಂಡಗಳು (RCB vs GT) 2026ರ ಇಂಡಿಯನ್ ಪ್ರೀಮಿಯರ್ ಲೀಗ್ (IPL 2026) ಟೂರ್ನಿಯ 34ನೇ ಪಂದ್ಯದಲ್ಲಿ ಕಾದಾಟ ನಡೆಸಲು ಸಜ್ಜಾಗುತ್ತಿವೆ. ಈ ಪಂದ್ಯ ಏಪ್ರಿಲ್ 24 ರಂದು ಇಲ್ಲಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿದೆ. ಕಳೆದ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಸೋತಿದ್ದ ಆರ್‌ಸಿಬಿ, ಇದೀಗ ಜಿಟಿ ಎದುರು ಗೆಲುವಿನ ಲಯಕ್ಕೆ ಮರಳಲು ಎದುರು ನೋಡುತ್ತಿದೆ. ಅಲ್ಲದೆ ಬೆಂಗಳೂರಿನಲ್ಲಿ ಈ ಸೀಸನ್‌ನ ಕೊನೆಯ ಪಂದ್ಯ ಇದಾಗಿದೆ.
ರಜತ್ ಪಾಟಿದಾರ್ ನಾಯಕತ್ವದ ಆರ್‌ಸಿಬಿ ತಂಡ ಇಲ್ಲಿಯವರೆಗೂ ಆಡಿದ ಆರು ಪಂದ್ಯಗಳಲ್ಲಿ ನಾಲ್ಕರಲ್ಲಿ ಗೆಲುವು ಪಡೆದಿದ್ದು, ಇನ್ನುಳಿದ ಎರಡು ಪಂದ್ಯಗಳಲ್ಲಿ ಸೋಲು ಅನುಭವಿಸಿದೆ. ಒಟ್ಟು 8 ಅಂಕಗಳನ್ನು ಕಲೆ ಹಾಕಿರುವ ಆರ್‌ಸಿಬಿ, ಟೂರ್ನಿಯ ಪಾಯಿಂಟ್ಸ್ ಟೇಬಲ್‌ನಲ್ಲಿ ಮೂರನೇ ಸ್ಥಾನದಲ್ಲಿದೆ. ಆದರೆ, ಗುಜರಾತ್ ಟೈಟನ್ಸ್ ತಂಡ ಆಡಿದ ಆರು ಪಂದ್ಯಗಳಲ್ಲಿ ಮೂರಲ್ಲಿ ಗೆಲುವು ಪಡೆದಿದ್ದರೆ, ಇನ್ನುಳಿದ ಮೂರರಲ್ಲಿ ಸೋಲು ಅನುಭವಿಸಿದೆ.
ಆದರೆ, ಈ ಎರಡೂ ತಂಡಗಳು ತಮ್ಮ-ತಮ್ಮ ಕೊನೆಯ ಪಂದ್ಯಗಳಲ್ಲಿ ಸೋಲು ಅನುಭವಿಸಿದ್ದವು. ಆರ್‌ಸಿಬಿ, ಡೆಲ್ಲಿ ಎದುರು ಸೋತಿದ್ದರೆ, ಗುಜರಾತ್ ಟೈಟನ್ಸ್ ತಂಡ, ಮುಂಬೈ ಇಂಡಿಯನ್ಸ್ ಎದುರು ಹೀನಾಯ ಸೋಲು ಅನುಭವಿಸಿತ್ತು. ಇದೀಗ ಆರ್‌ಸಿಬಿ ಹಾಗೂ ಜಿಟಿ ಗೆಲುವಿನ ಲಯಕ್ಕೆ ಮರಳಲು ಈ ಪಂದ್ಯದಲ್ಲಿ ಪ್ರಯತ್ನಿಸಲಿವೆ.
RCB vs GT: ಮುಖಾಮುಖಿಯಲ್ಲಿ ವಿಶೇಷ ದಾಖಲೆ, ಸದಾ ಚೇಸಿಂಗ್ ತಂಡಕ್ಕೆ ಗೆಲುವು ಖಚಿತ!
ಆರ್‌ಸಿಬಿ vs ಜಿಟಿ ನಡುವೆ ಗೆಲ್ಲುವ ನೆಚ್ಚಿನ ತಂಡ ಯಾವುದು?
ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಗುಜರಾತ್ ಟೈಟನ್ಸ್ ತಂಡಗಳು ಇಲ್ಲಿಯವರೆಗೂ ಐಪಿಎಲ್ ಟೂರ್ನಿಯಲ್ಲಿ ಒಟ್ಟು ಆರು ಬಾರಿ ಮುಖಾಮುಖಿಯಾಗಿವೆ. ಈ ಪಂದ್ಯಗಳ ಪೈಕಿ ಆರ್‌ಸಿಬಿ ಮೂರರಲ್ಲಿ ಗೆಲುವು ಪಡೆದಿದ್ದರೆ, ಗುಜರಾತ್ ಅಷ್ಟೇ ಪಂದ್ಯಗಳನ್ನು ಗೆದ್ದಿದೆ. ಮುಖಾಮುಖಿ ದಾಖಲೆಯಲ್ಲಿ ಉಭಯ ತಂಡಗಳು ಸಮಬಲ ಕಾಯ್ದುಕೊಂಡಿವೆ. ಆದರೆ, ಪ್ರಸ್ತುತ ಟೂರ್ನಿಯಲ್ಲಿನ ಎರಡೂ ತಂಡಗಳ ಬಲಾಬಲ ಹಾಗೂ ಆಟಗಾರರ ಫಾರ್ಮ್ ಅನ್ನು ನೋಡಿದಾಗ ಆರ್‌ಸಿಬಿ ತಂಡ, ಜಿಟಿಗಿಂತ ಒಂದು ಹೆಜ್ಜೆ ಮುಂದಿದೆ. ಅಲ್ಲದೆ, ಎಂ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಆರ್‌ಸಿಬಿ ಈ ಸೀಸನ್‌ನಲ್ಲಿ ಆಡಿದ ನಾಲ್ಕು ಪಂದ್ಯಗಳಲ್ಲಿ ಮೂರರಲ್ಲಿ ಗೆಲುವು ಪಡದಿದೆ. ಈ ಎಲ್ಲಾ ಅಂಶಗಳನ್ನು ಗಮನಿಸಿದರೆ, ಈ ಪಂದ್ಯವನ್ನು ಆರ್‌ಸಿಬಿ ಗೆಲ್ಲಬಹುದು ಎಂದು ಹೇಳಬಹುದು.
ಚಿನ್ನಸ್ವಾಮಿಯಲ್ಲಿ ಇಂದು ನಡೆಯಲಿರುವ RCB Vs GT ಪಂದ್ಯಕ್ಕೆ ಮಳೆ ಅಡ್ಡಿಯಾಗುತ್ತಾ? ಪಿಚ್ ವರದಿ ಹೇಗಿದೆ?
ಉಭಯ ತಂಡಗಳ ಸಂಭಾವ್ಯ ಪ್ಲೇಯಿಂಗ್ XI
ರಾಯಲ್ ಚಾಲೆಂಜರ್ಸ್ ಬೆಂಗಳೂರು: ಫಿಲ್ ಸಾಲ್ಟ್, ವಿರಾಟ್ ಕೊಹ್ಲಿ, ದೇವದತ್ ಪಡಿಕ್ಕಲ್, ರಜತ್ ಪಾಟಿದಾರ್, ಟಿಮ್ ಡೇವಿಡ್, ಕೃಣಾಲ್ ಪಾಂಡ್ಯ, ಜಿತೇಶ ಶರ್ಮಾ (ವಿಕೆಟ್ ಕೀಪರ್), ರೊಮ್ಯಾರಿಯೊ ಶೆಫರ್ಡ್, ಭುವನೇಶ್ವರ್ ಕುಮಾರ್, ಜಾಶ್ ಹೇಝಲ್‌ವುಡ್, ರಸಿಖ್ ದಾರ್ ಸಲಾಮ್
ಗುಜರಾತ್ ಟೈಟನ್ಸ್: ಶುಭಮನ್ ಗಿಲ್ (ನಾಯಕ), ಸಾಯಿ ಸುದರ್ಶನ್, ಜೋಸ್ ಬಟ್ಲರ್ (ವಿಕೆಟ್ ಕೀಪರ್), ವಾಷಿಂಗ್ಟನ್ ಸುಂದರ್, ಗ್ಲೆನ್ ಫಿಲಿಪ್ಸ್, ರಾಹುಲ್ ತೇವಾಟಿಯಾ, ರಶೀದ್ ಖಾನ್, ಕಗಿಸೊ ರಬಾಡ, ಮೊಹಮ್ಮದ್ ಸಿರಾಜ್, ಪ್ರಸಿಧ್ ಕೃಷ್ಣ, ಅಶೋಕ್ ಶರ್ಮಾ