RCB vs GT: ಫಿಲ್ ಸಾಲ್ಟ್ or ವೆಂಕಟೇಶ್ ಅಯ್ಯರ್? ಮೊದಲನೇ ಕ್ವಾಲಿಫೈಯರ್‌ಗೂ ಮುನ್ನ ಆರ್‌ಸಿಬಿಗೆ ಟೆನ್ಷನ್!
RCB vs GT Qualifier 1: ಧರ್ಮಶಾಲಾದ ಹಿಮಾಚಲ ಪ್ರದೇಶ ಕ್ರಿಕೆಟ್ ಅಸೋಸಿಯೇಷನ್ ಕ್ರೀಡಾಂಗಣದಲ್ಲಿ ಇಂದು (ಮಂಗಳವಾರ) ನಡೆಯಲಿರುವ 2026ರ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ಮೊದಲನೇ ಕ್ವಾಲಿಫೈಯರ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಗುಜರಾತ್ ಟೈಟನ್ಸ್ ತಂಡಗಳು ಕಾದಾಟ ನಡೆಸಲಿವೆ. ಈ ಪಂದ್ಯಕ್ಕೂ ಆರ್‌ಸಿಬಿಗೆ ಒಂದು ತಲೆ ನೋವು ಶುರುವಾಗಿದೆ.
ಮೊದಲನೇ ಕ್ವಾಲಿಫೈಯರ್‌ಗೂ ಮುನ್ನ ಆರ್‌ಸಿಬಿಗೆ ಟೆನ್ಷನ್. -
ಧರ್ಮಶಾಲಾ: ಇಲ್ಲಿನ ಹಿಮಾಚಲ ಪ್ರದೇಶ ಕ್ರಿಕೆಟ್ ಅಸೋಸಿಯೇಷನ್ ಕ್ರೀಡಾಂಗಣದಲ್ಲಿ ಇಂದು (ಮೇ 26) ನಡೆಯುವ 2026ರ ಇಂಡಿಯನ್ ಪ್ರೀಮಿಯರ್ ಲೀಗ್ (IPL 2026) ಟೂರ್ನಿಯ ಮೊದಲನೇ ಕ್ವಾಲಿಫೈಯರ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಗುಜರಾತ್ ಟೈಟನ್ಸ್ (RCB vs GT) ತಂಡಗಳು ಕಾದಾಟ ನಡೆಸಲಿವೆ. ಈ ಪಂದ್ಯವನ್ನು ಗೆದ್ದು ಫೈನಲ್‌ಗೆ ನೇರವಾಗಿ ಅರ್ಹತೆ ಪಡೆಯಲು ಎರಡೂ ತಂಡಗಳು ಎದುರು ನೋಡುತ್ತಿವೆ. ಆದರೆ ಈ ಹೊತ್ತಿನಲ್ಲಿ ರಜತ್ ಪಾಟಿದಾರ್ ನಾಯಕತ್ವದ ಆರ್‌ಸಿಬಿ ತಂಡಕ್ಕೆ ಒಂದು ದೊಡ್ಡ ತಲೆ ನೋವು ಶುರುವಾಗಿದೆ. ಗಾಯದಿಂದ ಗುಣಮುಖರಾಗಿರುವ ಅಪಾಯಕಾರಿ ಆರಂಭಿಕ ಫಿಲ್ ಸಾಲ್ಟ್ ಫಿಟ್ ಆಗಿದ್ದಾರೆ. ಹಾಗಾಗಿ ಅವರನ್ನು ಮೊದಲನೇ ಕ್ವಾಲಿಫೈಯರ್‌ನಲ್ಲಿ ಆಡಿಸಬೇಕಾ ಅಥವಾ ಬೇಡವಾ ಎಂಬ ಬಗ್ಗೆ ಟೀಮ್ ಮ್ಯಾನೇಜ್‌ಮೆಂಟ್ ಚಿಂತಿಸುತ್ತಿದೆ.
ಫಿಲ್ ಸಾಲ್ಟ್ ಆರಂಭಿಕ ಪಂದ್ಯಗಳಲ್ಲಿ ತಮ್ಮ ಸ್ಪೋಟಕ ಬ್ಯಾಟಿಂಗ್ ಮೂಲಕ ಆರ್‌ಸಿಬಿ ಭರ್ಜರಿ ಆರಂಭವನ್ನು ತಂದುಕೊಟ್ಟಿದ್ದರು. ಆದರೆ, ಅವರು ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯದಲ್ಲಿ ಬೆರಳಿನ ಗಾಯಕ್ಕೆ ತುತ್ತಾಗಿದ್ದರು. ಇದರಿಂದಾಗಿ ಅವರು ಇಂಗ್ಲೆಂಡ್‌ಗೆ ತೆರಳಿ ಸ್ಕ್ಯಾನ್ ಮಾಡಿಸಿದ ಬಳಿಕ ಇದೀಗ ಸಂಪೂರ್ಣವಾಗಿ ಗುಣಮುಖರಾಗಿ ಮರಳಿದ್ದಾರೆ. ಅವರು ತಂಡದ ಜೊತೆ ಇದ್ದಾರೆ ಹಾಗೂ ಕೆಲವು ಡ್ರಿಲ್‌ಗಳನ್ನು ಮುಗಿಸಿದ್ದಾರೆಂದು ನಾಯಕ ರಜತ್ ಪಾಟಿದಾರ್ ಸೋಮವಾರ ನಡೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ್ದರು. ಆದರೆ, ಕಂಡೀಷನ್ಸ್ ನೋಡಿಕೊಂಡು ಫಿಲ್ ಸಾಲ್ಟ್‌ಗೆ ಅವಕಾಶ ನೀಡುವ ಬಗ್ಗೆ ಟೀಮ್ ಮ್ಯಾನೇಜ್‌ಮೆಂಟ್ ಅಂತಿಮ ನಿರ್ಧಾರವನ್ನು ತೆಗೆದುಕೊಳ್ಳಲಿದೆ ಎಂದಿದ್ದರು.
RCB vs GT ಮೊದಲ ಕ್ವಾಲಿಫೈಯರ್ ಪಂದ್ಯಕ್ಕೆ ಆರ್‌ಸಿಬಿ ಪ್ಲೇಯಿಂಗ್ XIನಲ್ಲಿ ಒಂದು ಬದಲಾವಣೆ ಸಾಧ್ಯತೆ!
ಮತ್ತೊಂದು ಕಡೆ ಕಳೆದ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಜೊತೆ ಇನಿಂಗ್ಸ್ ಆರಂಭಿಸಿದ್ದ ವೆಂಕಟೇಶ್ ಅಯ್ಯರ್ ಗಮನಾರ್ಹ ಪ್ರದರ್ಶನವನ್ನು ತೋರಿದ್ದರು. ಪಂಜಾಬ್ ಕಿಂಗ್ಸ್ ಎದುರಿನ ಪಂದ್ಯದಲ್ಲಿ ಅಯ್ಯರ್ ಅರ್ಧಶತಕ ಬಾರಿಸಿ ಪಂದ್ಯ ಶ್ರೇಷ್ಠ ಪ್ರಶಸ್ತಿಯನ್ನು ಸ್ವೀಕರಿಸಿದ್ದರು. ಇದೀಗ ಗುಜರಾತ್ ಟೈಟನ್ಸ್ ಎದುರಿನ ಪಂದ್ಯದಲ್ಲಿ ಇನಿಂಗ್ಸ್ ಆರಂಭಿಸಿದ ತಂಡಕ್ಕೆ ಭರ್ಜರಿ ಆರಂಭ ತಂದುಕೊಡಲು ಎದುರು ನೋಡುತ್ತಿದ್ದಾರೆ. ಆದರೆ, ಫಿಲ್ ಸಾಲ್ಟ್ ಇದೀಗ ಫಿಟ್ ಆಗಿ ತಂಡಕ್ಕೆ ಮರಳಿರುವುದರಿಂದ ಟೀಮ್ ಮ್ಯಾನೇಜ್‌ಮೆಂಟ್‌ಗೆ ಯಾರನ್ನು ಕೊಹ್ಲಿ ಜೊತೆ ಇನಿಂಗ್ಸ್ ಆರಂಭಿಸಬೇಕೆಂಬ ಗೊಂದಲ ಉಂಟಾಗಿದೆ.
ಆದರೆ, ಫಿಲ್ ಸಾಲ್ಟ್ ಆರಂಭಿಕನಾಗಿ ಆರ್‌ಸಿಬಿಗೆ ಸಾಕಷ್ಟು ಮ್ಯಾಚ್‌ಗಳನ್ನು ಗೆದ್ದುಕೊಟ್ಟಿದ್ದಾರೆ ಹಾಗೂ ಸಾಕಷ್ಟು ಅನುಭವವನ್ನು ಹೊಂದಿದ್ದಾರೆ. ಹಾಗಾಗಿ ಅವರು ಸಂಪೂರ್ಣವಾಗಿ ಫಿಟ್ ಇದ್ದರೆ, ಖಂಡಿತವಾಗಿಯೂ ಫಿಲ್ ಸಾಲ್ಟ್ ಇನಿಂಗ್ಸ್ ಆರಂಭಿಸಲಿದ್ದಾರೆ ಹಾಗೂ ವೆಂಕಟೇಶ್ ಅಯ್ಯರ್ ಅವರನ್ನು ಮಧ್ಯಮ ಕ್ರಮಾಂಕದಲ್ಲಿ ಆಡಿಸಲು ತಂಡ ಯೋಚಿಸಬಹುದು. ಆದರೆ ವೆಂಕಟೇಶ್ ಅಯ್ಯರ್ ಅವರನ್ನು ಮಧ್ಯಮ ಕ್ರಮಾಂಕದಲ್ಲಿ ಆಡಿಸಿದರೆ, ಯಾರನ್ನು ಹೊರಗಿಡಬೇಕೆಂಬ ಗೊಂದಲ ಟೀಮ್ ಮ್ಯಾನೇಜ್‌ಮೆಂಟ್‌ಗೆ ಶುರುವಾಗಿದೆ. ಈ ಬಗ್ಗೆ ಟಾಸ್‌ಗೂ ಮುನ್ನ ತಂಡ ಸೂಕ್ತ ನಿರ್ಧಾರವನ್ನು ತೆಗೆದುಕೊಳ್ಳಬಹುದು.
IPL 2026: RCB or GT ಪ್ರಶಸ್ತಿ ಗೆಲ್ಲುವ ನೆಚ್ಚಿನ ತಂಡಗಳು! ಇದಕ್ಕೆ 15 ವರ್ಷಗಳ ಲೆಕ್ಕಾಚಾರವೇ ಸಾಕ್ಷಿ!
ಪಂದ್ಯದ ವಿವರ
2026ರ ಇಂಡಿಯನ್ ಪ್ರೀಮಿಯರ್ ಲೀಗ್
ಮೊದಲನೇ ಕ್ವಾಲಿಫೈಯರ್ ಪಂದ್ಯ
ರಾಯಲ್ ಚಾಲೆಂಜರ್ಸ್ ಬೆಂಗಳೂರು vs ಗುಜರಾತ್ ಟೈಟನ್ಸ್
ದಿನಾಂಕ: ಮೇ 26, 2026
ಸಮಯ: ಸಂಜೆ 07:30ಕ್ಕೆ
ಸ್ಥಳ: ಹಿಮಾಚಲ ಪ್ರದೇಶ ಕ್ರಿಕೆಟ್ ಅಸೋಸಿಯೇಷನ್, ಧರ್ಮಶಾಲಾ
ನೇರ ಪ್ರಸಾರ: ಸ್ಟಾರ್ ಸ್ಪೋರ್ಟ್ಸ್
ಲೈವ್ ಸ್ಟ್ರೀಮಿಂಗ್: ಜಿಯೊ ಸಿನಿಮಾ ಹಾಟ್‌ಸ್ಟಾರ್
RCB vs GT: ರಾಯಲ್ ಚಾಲೆಂಜರ್ಸ್ ಬೆಂಗಳೂರಿನ ಮೊದಲನೇ ಕ್ವಾಲಿಫೈಯರ್ ದಾಖಲೆಗಳು!
ಆರ್‌ಸಿಬಿ ಸಂಭಾವ್ಯ ಪ್ಲೇಯಿಂಗ್ XI
1.ಫಿಲ್ ಸಾಲ್ಟ್/ವೆಂಕಟೇಶ್ ಅಯ್ಯರ್
2.ವಿರಾಟ್ ಕೊಹ್ಲಿ
3.ದೇವದತ್ ಪಡಿಕ್ಕಲ್
4.ರಜತ್ ಪಾಟಿದಾರ್ (ನಾಯಕ, ಬ್ಯಾಟ್ಸ್‌ಮನ್)
5.ಕೃಣಾಲ್ ಪಾಂಡ್ಯ (ಆಲ್‌ರೌಂಡರ್)
6.ಟಿಮ್ ಡೇವಿಡ್ (ಆಲ್‌ರೌಂಡರ್)
7.ಜಿತೇಶ್ ಶರ್ಮಾ (ವಿಕೆಟ್ ಕೀಪರ್-ಬ್ಯಾಟರ್)
8.ರೊಮ್ಯಾರಿಯೊ ಶೆಫರ್ಡ್ (ಆಲ್‌ರೌಂಡರ್)
9.ಭುವನೇಶ್ವರ್ ಕುಮಾರ್ (ವೇಗದ ಬೌಲರ್)
10.ಜಾಶ್ ಹೇಝಲ್‌ವುಡ್ (ವೇಗದ ಬೌಲರ್)
11.ರಸಿಖ್ ದಾರ್ ಸಲಾಮ್ (ವೇಗದ ಬೌಲರ್
ಇಂಪ್ಯಾಕ್ಟ್ ಪ್ಲೇಯರ್: ಸುಯಾಶ್ ಶರ್ಮಾ