IPL 2025: ʻರೋಹಿತ್ ಶರ್ಮಾ ರೀತಿ ಬ್ಯಾಟ್ ಮಾಡಬೇಡಿʼ-ವಿರಾಟ್ ಕೊಹ್ಲಿಗೆ ಸಲಹೆ ನೀಡಿದ ಆರೋನ್ ಫಿಂಚ್!
Aaron Finch on Virat Kohli's Form: 2025ರ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ನಿಮಿತ್ತ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಹಿರಿಯ ಬ್ಯಾಟ್ಸ್‌ಮನ್ ವಿರಾಟ್ ಕೊಹ್ಲಿಗೆ ಆಸ್ಟ್ರೇಲಿಯಾ ಮಾಜಿ ನಾಯಕ ಆರೋನ್ ಫಿಂಚ್ ಮಹತ್ವದ ಸಲಹೆ ನೀಡಿದ್ದಾರೆ. ವಿರಾಟ್ ಕೊಹ್ಲಿ ಹೆಚ್ಚಿನ ಸ್ಟ್ರೈಕ್ ರೇಟ್‌ನಲ್ಲಿ ಆಡದೆ, ಕ್ರೀಸ್‌ನಲ್ಲಿ ಹೆಚ್ಚಿನ ಸಮಯವನ್ನು ಕಳೆಯುವ ಕಡೆಗೆ ಗಮನ ನೀಡಬೇಕೆಂದು ಸಲಹೆ ನೀಡಿದ್ದಾರೆ.

ವಿರಾಟ್ ಕೊಹ್ಲಿಗೆ ಆರೋನ್ ಫಿಂಚ್ ಸಲಹೆ.

ನವದೆಹಲಿ: ಮುಂಬರುವ 2025ರ ಇಂಡಿಯನ್ ಪ್ರೀಮಿಯರ್ ಲೀಗ್ (IPL 2025) ಟೂರ್ನಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ಸ್ಟಾರ್ ಬ್ಯಾಟ್ಸ್‌ಮನ್ ವಿರಾಟ್ ಕೊಹ್ಲಿ (Virat Kohli), ಮುಂಬೈ ಇಂಡಿಯನ್ಸ್ ಹಿರಿಯ ಬ್ಯಾಟ್ಸ್‌ಮನ್ ರೋಹಿತ್ ಶರ್ಮಾ ಅವರ ರೀತಿ ಸ್ಪೋಟಕ ಬ್ಯಾಟ್ ಮಾಡುವ ಅಗತ್ಯವಿಲ್ಲ ಎಂದು ಆಸ್ಟ್ರೇಲಿಯಾ ಮಾಜಿ ನಾಯಕ ಆರೋನ್ ಫಿಂಚ್ (Aaron Finch) ಸಲಹೆ ನೀಡಿದ್ದಾರೆ. ಮಾರ್ಚ್ 22 ರಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಕೋಲ್ಕತಾ ನೈಟ್ ರೈಡರ್ಸ್ ತಂಡಗಳು ಕಾದಾಟ ನಡೆಸುವ ಮೂಲಕ ಹದಿನೆಂಟನೇ ಆವೃತ್ತಿಯ ಐಪಿಎಲ್ ಟೂರ್ನಿಯು ಅಧಿಕೃತವಾಗಿ ಆರಂಭವಾಗಲಿದೆ.
ಕಳೆದ 2024ರ ಐಪಿಎಲ್ ಟೂರ್ನಿಯಲ್ಲಿ ವಿರಾಟ್ ಕೊಹ್ಲಿ ಸ್ಟ್ರೈಕ್ ರೇಟ್ ವಿಚಾರವಾಗಿ ಸಾಕಷ್ಟು ಟೀಕೆಗಳನ್ನು ಎದುರಿಸಿದ್ದರು. ಮುಂಬರುವ ಐಪಿಎಲ್ ಟೂರ್ನಿಯ ನಿಮಿತ್ತ ಮುಂಬೈ ಇಂಡಿಯನ್ಸ್ ತಂಡದ ರೋಹಿತ್ ಶರ್ಮಾ ಅವರ ರೀತಿ ವಿರಾಟ್ ಕೊಹ್ಲಿ ಬ್ಯಾಟ್ ಮಾಡಬೇಕಾ? ಎಂದು ಆರೋನ್ ಫಿಂಚ್ ಅವರನ್ನು ಪ್ರಶ್ನೆ ಕೇಳಲಾಯಿತು. ಇದಕ್ಕೆ ಪ್ರತಿಕ್ರಿಯಿಸಿದ ಅವರು, ರೋಹಿತ್ ಶರ್ಮಾ ಅವರ ತಂಡಕ್ಕೆ ಸ್ಪೋಟಕ ಬ್ಯಾಟ್ ಮಾಡಬಲ್ಲ ಸಾಕಷ್ಟು ಬ್ಯಾಟ್ಸ್‌ಮನ್‌ಗಳು ಇದ್ದಾರೆ. ಆದರೆ, ಇಂಟರ್‌ನ್ಯಾಷನಲ್ ಕ್ರಿಕೆಟ್‌ನಲ್ಲಿ ವಿರಾಟ್ ಕೊಹ್ಲಿ ಆಡುವುದು ಮೂರನೇ ಕ್ರಮಾಂಕದಲ್ಲಿ ಹಾಗೂ ಅವರು ಆರ್‌ಸಿಬಿ ಪರ ಇನಿಂಗ್ಸ್ ಆರಂಭಿಸಲಿದ್ದು, ಜವಾಬ್ದಾರಿಯುತವಾಗಿ ಆಡಬೇಕಾಗುತ್ತದೆ ಎಂದು ಹೇಳಿದ್ದಾರೆ.
IPL 2025: ʻಈ ಬಾರಿಯೂ ಕಪ್ ಗೆಲ್ಲಲ್ಲ, ಆರ್‌ಸಿಬಿಗೆ ಕೊನೆಯ ಸ್ಥಾನʼ-ಆಡಂ ಗಿಲ್‌ಕ್ರಿಸ್ಟ್ ಭವಿಷ್ಯ!
"ಆರಂಭಿಕ ಬ್ಯಾಟ್ಸ್‌ಮನ್ ಆಗಿ ರೋಹಿತ್ ಶರ್ಮಾ ಹೇಗೆ ಬ್ಯಾಟ್ ಮಾಡಿದ್ದಾರೆಂದು ನೀವು ನೋಡಬಹದು ಹಾಗೂ ಅವರ ಸುತ್ತು ಸ್ಪೋಟಕ ಬ್ಯಾಟ್ ಮಾಡಬಲ್ಲ ಆಟಗಾರರು ಇದ್ದಾರೆ. ಅವರು ಜೊತೆ ಆಡುವ ಆಟಗಾರರಿಗೆ ರೋಹಿತ್ ಶರ್ಮಾ ಉತ್ತಮ ಅಡಿಪಾಯವನ್ನು ಹಾಕಬಲ್ಲರು. ಅವರು ಕ್ರೀಸ್‌ಗೆ ಹೋದ ತಕ್ಷಣ ಇನಿಂಗ್ಸ್‌ನ ಆರಂಭದಲ್ಲಿಯೇ ಸ್ಪೋಟಕವಾಗಿ ಬ್ಯಾಟ್ ಬೀಸುವ ಮೂಲಕ ಬೌಂಡರಿ ಹಾಗೂ ಸಿಕ್ಸರ್‌ಗಳನ್ನು ಸಿಡಿಸಬಲ್ಲರು. ಅಂದರೆ, ತಂಡದಲ್ಲಿನ ನಿಮ್ಮ ಪಾತ್ರವನ್ನು ನೀವು ಇಲ್ಲಿ ಅರ್ಥ ಮಾಡಕೊಳ್ಳಬೇಕಾಗುತ್ತದೆ ಎಂದು ಆರೋನ್ ಫಿಂಚ್ ತಿಳಿಸಿದ್ದಾರೆ.
ಆರ್‌ಸಿಬಿಯಲ್ಲಿ ಕೊಹ್ಲಿ ಮೇಲೆ ಸಾಕಷ್ಟು ಜವಾಬ್ದಾರಿ ಇದೆ
"ಇಂಟರ್‌ನ್ಯಾಷನಲ್ ಕ್ರಿಕೆಟ್‌ನಲ್ಲಿ ಇನಿಂಗ್ಸ್ ಆರಂಭಿಸಬಲ್ಲ ರೋಹಿತ್ ಶರ್ಮಾ ಅವರ ಮನಸಿನಲ್ಲಿ ಮೂರನೇ ಕ್ರಮಾಂಕದಲ್ಲಿ ವಿರಾಟ್ ಕೊಹ್ಲಿ ಇದ್ದಾರೆ ಹಾಗೂ ಅವರು ತಂಡಕ್ಕೆ ಆಸರೆಯಾಗಬಲ್ಲರು ಎಂಬದು ಇರುತ್ತದೆ. ಈ ಮೈಂಡ್‌ಸೆಟ್‌ನಲ್ಲಿ ಲೀಲಾಜಾಲವಾಗಿ ಬ್ಯಾಟ್ ಬೀಸಬಲ್ಲರು ಹಾಗೂ ಅದೇ ರೀತಿ ಸಕ್ಸಸ್ ಕಂಡಿದ್ದಾರೆ. ಅದರಂತೆ ವಿರಾಟ್ ಕೊಹ್ಲಿ ಮೂರನೇ ಕ್ರಮಾಂಕದಲ್ಲಿ 140 ರಿಂದ 150ರ ಸ್ಟ್ರೈಕ್ ರೇಟ್‌ನಲ್ಲಿ ಬ್ಯಾಟ್ ಮಾಡಬಹುದು. ಆದರೆ, ಆರ್‌ಸಿಬಿ ತಂಡದ ಪರ ಅವರು ಈ ರೀತಿ ಆಡಲು ಸಾಧ್ಯವಾಗುವುದಿಲ್ಲ. ಮತ್ತೊಂದು ತುದಿಯಲ್ಲಿ ವಿಕೆಟ್‌ಗಳು ಉರುಳುತ್ತಿದ್ದರೆ ಆಗ ವಿರಾಟ್ ಕೊಹ್ಲಿ ಹೆಚ್ಚಿನ ಸ್ಟ್ರೈಕ್ ರೇಟ್‌ನಲ್ಲಿ ಬ್ಯಾಟ್ ಮಾಡಲು ಸಾಧ್ಯವಾಗುವುದಿಲ್ಲ," ಎಂದು ಆರ್‌ಸಿಬಿ ಮಾಜಿ ಆರಂಭಿಕ ಹೇಳಿದ್ದಾರೆ.
IPL 2025: ಕೆಕೆಆರ್ ವಿರುದ್ಧ ದಾಖಲೆ ಬರೆಯಲು ಸಜ್ಜಾದ ಕೊಹ್ಲಿ
ಕಳೆದ ಆವೃತ್ತಿಯ ಐಪಿಎಲ್ ಟೂರ್ನಿಯಲ್ಲಿ ವಿರಾಟ್ ಕೊಹ್ಲಿ ಆರಂಭಿಕ ಆರು ಇನಿಂಗ್ಸ್‌ಗಳಿಂದ 141.77ರ ಸ್ಟ್ರೈಕ್ ರೇಟ್‌ನಲ್ಲಿ 319 ರನ್‌ಗಳನ್ನು ಕಲೆ ಹಾಕಿದ್ದರು. ಆದರೆ, ಎರಡನೇ ಅವಧಿಯ ಪಂದ್ಯಗಳಲ್ಲಿ ಕೊಹ್ಲಿ ತಮ್ಮ ಸ್ಟ್ರೈಕ್ ರೇಟ್ ಅನ್ನು ಹೆಚ್ಚಿಸಿಕೊಂಡಿದ್ದರು. ಅವರು ಆಡಿದ್ದ 9 ಇನಿಂಗ್ಸ್‌ಗಳಿಂದ 166.14ರ ಸ್ಟ್ರೈಕ್ ರೇಟ್‌ನಲ್ಲಿ 422 ರನ್‌ಗಳನ್ನು ಬಾರಿಸಿದ್ದರು. ಆ ಮೂಲಕ ಕಳೆದ ಆವೃತ್ತಿಯಲ್ಲಿ ಆಡಿದ್ದ 15 ಇನಿಂಗ್ಸ್‌ಗಳಿಂದ ವಿರಾಟ್ ಕೊಹ್ಲಿ 741 ರನ್‌ಗಳನ್ನು ಸಿಡಿಸಿದ್ದರು. ಆ ಮೂಲಕ ಅತಿ ಹೆಚ್ಚು ರನ್ ಗಳಿಸಿದ ಬ್ಯಾಟ್ಸ್‌ಮನ್ ಎನಿಸಿಕೊಂಡಿದ್ದರು ಹಾಗೂ ಆರೆಂಜ್ ಕ್ಯಾಪ್ ಗೆದ್ದಿದ್ದರು.