RCB vs PBKS: ಪಂಜಾಬ್ ಕಿಂಗ್ಸ್‌ಗೆ ತಿರುಗೇಟು ನೀಡಬೇಕೆಂದರೆ ಆರ್‌ಸಿಬಿಗೆ ಈ 2 ಬದಲಾವಣೆ ಅಗತ್ಯ!
RCB vs PBKS Match Preview: ಪಂಜಾಬ್ ಕಿಂಗ್ಸ್ ವಿರುದ್ದ ಶುಕ್ರವಾರ ತವರು ಅಭಿಮಾನಿಗಳ ಎದುರು ಸೋಲು ಅನುಭವಿಸಿದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಭಾನುವಾರ ಇದೇ ತಂಡದ ವಿರುದ್ಧ ಚಂಡೀಗಢದಲ್ಲಿ ಕಾದಾಟ ನಡೆಸಲು ಸಜ್ಜಾಗುತ್ತಿದೆ. ಈ ಪಂದ್ಯಕ್ಕೆ ಆರ್‌ಸಿಬಿ ತನ್ನ ಪ್ಲೇಯಿಂಗ್ XI ನಲ್ಲಿ ಎರಡು ಬದಲಾವಣೆ ಮಾಡಿಕೊಂಡು ಕಣಕ್ಕೆ ಇಳಿಯುವ ಸಾಧ್ಯತೆ ಇದೆ.

ರಾಯಲ್ ಚಾಲೆಂಜರ್ಸ್ ಬೆಂಗಳೂರು vs ಪಂಜಾಬ್ ಕಿಂಗ್ಸ್

ಚಂಡೀಗಢ: ತವರು ಅಂಗಣದಲ್ಲಿ ಪಂಜಾಬ್ ಕಿಂಗ್ಸ್ (Punjab Kings) ವಿರುದ್ಧ ಸೋಲುವ ಮೂಲಕ ಅಭಿಮಾನಿಗಳಿಗೆ ಭಾರಿ ನಿರಾಶೆ ಮೂಡಿಸಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು (Royal Challengers Bengaluru) ತಂಡ, ಭಾನುವಾರ ಇದೇ ತಂಡದ ವಿರುದ್ದ (RCB vs PBKS) ಇಲ್ಲಿನ ಮುಲ್ಲಾನ್‌ಪುರದ ಮಹಾರಾಜ ಯದವೀಂದ್ರ ಸಿಂಗ್ ಇಂಟರ್‌ನ್ಯಾಷನಲ್ ಕ್ರೀಡಾಂಗಣದಲ್ಲಿ ಕಾದಾಟ ನಡೆಸಲು ಸಜ್ಜಾಗುತ್ತಿದೆ. ಪಂಜಾಬ್ ಕಿಂಗ್ಸ್ ಎದುರು ಅವರದೇ ನೆಲದಲ್ಲಿ ಗೆದ್ದು ಸೇಡು ತೀರಿಸಿಕೊಳ್ಳಲು ರಜತ್ ಪಾಟಿದಾರ್ ನಾಯಕತ್ವದ ಆರ್‌ಸಿಬಿ ಎದುರು ನೋಡುತ್ತಿದೆ. ಆದರೆ, ಶ್ರೇಯಸ್ ಅಯ್ಯರ್ ನಾಯಕತ್ವದ ಪಂಜಾಬ್ ತಂಡ ಸತತ ಎರಡನೇ ಬಾರಿಯೂ ಆರ್‌ಸಿಬಿಯನ್ನು ಮಣಿಸುವ ವಿಶ್ವಾಸದಲ್ಲಿದೆ.
ಪ್ರಸ್ತುತ ನಡೆಯುತ್ತಿರುವ 2025ರ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಆರ್‌ಸಿಬಿ ಅತ್ಯುತ್ತಮ ಪ್ರದರ್ಶನವನ್ನು ತೋರುತ್ತಿದೆ. ಇಲ್ಲಿಯ ತನಕ ಆಡಿದ 7 ಪಂದ್ಯಗಳಲ್ಲಿ ನಾಲ್ಕರಲ್ಲಿ ಗೆದ್ದು, ಇನ್ನುಳಿದ ಮೂರರಲ್ಲಿ ಸೋಲು ಅನುಭವಿಸಿದೆ. ಒಟ್ಟಾರೆ 8 ಅಂಕಗಳನ್ನು ಕಲೆ ಹಾಕಿರುವ ಬೆಂಗಳೂರು ತಂಡ ಟೂರ್ನಿಯ ಅಂಕಪಟ್ಟಿಯಲ್ಲಿ ನಾಲ್ಕನೇ ಸ್ಥಾನವನ್ನು ಅಲಂಕರಿಸುವ ಮೂಲಕ ಟೂರ್ನಿಯ ಮೊದಲ ಅವಧಿಯನ್ನು ಮುಗಿಸಿದೆ.
RCB vs PBKS: ತವರಿನಲ್ಲಿ ಹ್ಯಾಟ್ರಿಕ್ ಸೋಲು ಕಂಡ ಆರ್‌ಸಿಬಿ
ಇನ್ನು ಶ್ರೇಯಸ್ ಅಯ್ಯರ್ ನಾಯಕತ್ವದ ಪಂಜಾಬ್ ಕಿಂಗ್ಸ್ ತಂಡ ಕೂಡ ಈ ಟೂರ್ನಿಯಲ್ಲಿ ಗಮನಾರ್ಹ ಪ್ರದರ್ಶನವನ್ನು ತೋರುತ್ತಿದೆ. ಇಲ್ಲಿಯ ತನಕ ಆಡಿದ 7 ಪಂದ್ಯಗಳಲ್ಲಿ 5ರಲ್ಲಿ ಗೆದ್ದು, ಇನ್ನುಳಿದ ಎರಡರಲ್ಲಿ ಸೋಲು ಅನುಭವಿಸಿದೆ. ಒಟ್ಟು 10 ಅಂಕಗಳನ್ನು ಕಲೆ ಹಾಕಿರುವ ಪಂಜಾಬ್ ಕಿಂಗ್ಸ್ ಟೂರ್ನಿಯ ಪಾಯಿಂಟ್ಸ್ ಟೇಬಲ್‌ನಲ್ಲಿ ಎರಡನೇ ಸ್ಥಾನವನ್ನು ಅಲಂಕರಿಸಿದೆ.
ಏಪ್ರಿಲ್ 18 ರಂದು ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದಿದ್ದ ಪಂದ್ಯದಲ್ಲಿ ಆರ್‌ಸಿಬಿ ಹಾಗೂ ಪಂಜಾಬ್ ಕಿಂಗ್ಸ್ ಎರಡೂ ತಂಡಗಳು ಕಾದಾಟ ನಡೆಸಿದ್ದವು. ಈ ಪಂದ್ಯಕ್ಕೆ ಮಳೆ ಅಡ್ಡಿ ಉಂಟು ಮಾಡಿತ್ತು. ಈ ಹಿನ್ನೆಲೆಯಲ್ಲಿ ಪಂದ್ಯವನ್ನು 14 ಓವರ್‌ಗಳಿಗೆ ಸೀಮಿತಗೊಳಿಸಲಾಗಿತ್ತು. ಮೊದಲು ಬ್ಯಾಟ್ ಮಾಡಿದ್ದ ಆರ್‌ಸಿಬಿ, ಅಗ್ರ ಹಾಗೂ ಮಧ್ಯಮ ಕ್ರಮಾಂಕದ ಬ್ಯಾಟ್ಸ್‌ಮನ್‌ಗಳ ವೈಫಲ್ಯ ಅನುಭವಿಸಿದ ಹೊರತಾಗಿಯೂ, ಟಿಮ್ ಡೇವಿಡ್ ಅವರ ಸ್ಪೋಟಕ ಅರ್ಧಶತಕದ ಬಲದಿಂದ 95 ರನ್‌ಗಳನ್ನು ಕಲೆ ಹಾಕಿತ್ತು.
IPL 2025: ಪಂದ್ಯದ ವೇಳೆ ದಿಢೀರ್ ಅಭಿಷೇಕ್ ಶರ್ಮಾ ಜೇಬು ಪರೀಕ್ಷಿಸಿದ ಸೂರ್ಯಕುಮಾರ್
ಬಳಿಕ ಗುರಿ ಹಿಂಬಾಲಿಸಿದ್ದ ಪಂಜಾಬ್ ಕಿಂಗ್ಸ್ ತಂಡ ಕೂಡ ತೊಂದರೆ ಅನುಭವಿಸಿತ್ತು. ಆದರೆ, ನೆಹಾಲ್ ವಧೇರಾ (33 ರನ್) ಅವರ ಬ್ಯಾಟಿಂಗ್ ಬಲದಿಂದ ಇನ್ನೂ 11 ಎಸೆತಗಳು ಬಾಕಿ ಇರುವಾಗಲೇ ಪಂಜಾಬ್ ಕಿಂಗ್ಸ್ ಗೆದ್ದು ಬೀಗಿತ್ತು. ಆ ಮೂಲಕ ಆರ್‌ಸಿಬಿ ತಂಡ ತವರಿನಲ್ಲಿ ಸತತ ಮೂರೂ ಪಂದ್ಯಗಳಲ್ಲಿ ಸೋಲು ಅನುಭವಿಸಿದಂತಾಗಿದೆ.
ಪಿಚ್ ರಿಪೋರ್ಟ್
ಮುಲ್ಲಾನ್‌ಪುರದ ಮಹಾರಾಜ ಯದವೀಂದ್ರ ಸಿಂಗ್ ಇಂಟರ್‌ನ್ಯಾಷನಲ್ ಕ್ರೀಡಾಂಗಣದ ಪಿಚ್ ಬ್ಯಾಟ್ಸ್‌ಮನ್‌ಗಳ ಸ್ನೇಹಿಯಾಗಿದೆ. ಆದರೆ, ಹೊಸ ಚೆಂಡಿನಲ್ಲಿ ಫಾಸ್ಟ್ ಬೌಲರ್‌ಗಳು ಆರಂಭಿಕ ಓವರ್‌ಗಳಲ್ಲಿ ಪ್ರಾಬಲ್ಯ ಮೆರೆಯಬಹುದು. ಪಂದ್ಯದ ಬಹುತೇಕ ಅವಧಿಯಲ್ಲಿ ಬ್ಯಾಟ್ಸ್‌ಮನ್‌ಗಳು ಮಿಂಚಲಿದ್ದಾರೆ. ಪಂದ್ಯದ ಮಧ್ಯಮ ಓವರ್‌ಗಳಲ್ಲಿ ಸ್ಪಿನ್ನರ್‌ಗಳು ಕೂಡ ಪರಿಣಾಮಕಾರಿಯಾಗಬಹುದು. ಈ ಪಂದ್ಯದಲ್ಲಿ ಟಾಸ್ ಗೆದ್ದ ತಂಡದ ನಾಯಕ ಚೇಸಿಂಗ್ ಆಯ್ಕೆ ಮಾಡಿಕೊಳ್ಳಬಹುದು.
IPL 2025: ಕನ್ನಡಿಗ ಮನೀಶ್ ಪಾಂಡೆಗೆ ಅನ್ಯಾಯ ಮಾಡಿತೇ ಬಿಸಿಸಿಐ?
ಮುಖಾಮುಖಿ ದಾಖಲೆ
ಒಟ್ಟು ಆಡಿರುವ ಪಂದ್ಯಗಳು: 34
ರಾಯಲ್ ಚಾಲೆಂಜರ್ಸ್ ಬೆಂಗಳೂರು ಗೆಲುವು: 16
ಪಂಜಾಬ್ ಕಿಂಗ್ಸ್ ಗೆಲುವು: 18
ಇತ್ತಂಡಗಳ ಸಂಭಾವ್ಯ ಪ್ಲೇಯಿಂಗ್ XI
ರಾಯಲ್ ಚಾಲೆಂಜರ್ಸ್ ಬೆಂಗಳೂರು: ಫಿಲ್ ಸಾಲ್ಟ್, ವಿರಾಟ್ ಕೊಹ್ಲಿ, ರಜತ್ ಪಾಟಿದಾರ್ (ನಾಯಕ), ಲಿಯಾಮ್ ಲಿವಿಂಗ್‌ಸ್ಟೋನ್/ರೊಮ್ಯಾರಿಯಾ ಶೆಫರ್ಡ್, ಜಿತೇಶ್ ಶರ್ಮಾ (ವಿ.ಕೀ), ಟಿಮ್ ಡೇವಿಡ್, ಕೃಣಾಲ್ ಪಾಂಡ್ಯ/ಸ್ವಪ್ನಿಲ್ ಸಿಂಗ್, ಭುವನೇಶ್ವರ್ ಕುಂಆರ್, ಜಾಶ್ ಹೇಝಲ್‌ವುಡ್, ಸುಯಶ್ ಶರ್ಮಾ, ಯಶ್ ದಯಾಳ್
ಪಂಜಾಬ್ ಕಿಂಗ್ಸ್: ಪ್ರಿಯಾಂಶ್ ಆರ್ಯ, ನೆಹಾಲ್ ವಧೇರಾ, ಶ್ರೇಯಸ್ ಅಯ್ಯರ್ (ನಾಯಕ), ಶಶಾಂಕ್ ಸಿಂಗ್, ಜಾಶ್ ಇಂಗ್ಲಿಸ್ (ವಿಕೆ), ಮಾರ್ಕಸ್ ಸ್ಟೊಯಿನಿಸ್, ಮಾರ್ಕೊ ಯೆನ್ಸೆನ್, ಹರಪ್ರೀತ್ ಬ್ರಾರ್, ಕ್ಸೇವಿಯರ್ ಬಾರ್ಟ್ಲೆಟ್, ಅರ್ಷದೀಪ್ ಸಿಂಗ್, ಯುಜ್ವೇಂದ್ರ ಚಹಲ್
ನಮ್ಮ Chinnaswamy witnessed a roller-coaster of a contest last night! 🔥
— Royal Challengers Bengaluru (@RCBTweets) April 19, 2025
These frames capture our grit, grind, and the fierce fightback! 📸#PlayBold #ನಮ್ಮRCB #IPL2025 #RCBvPBKS pic.twitter.com/rFZHwg8A5s
ಪಂದ್ಯದ ವಿವರ
ರಾಯಲ್ ಚಾಲೆಂಜರ್ಸ್ ಬೆಂಗಳೂರು vs ಪಂಜಾಬ್
2025ರ ಇಂಡಿಯನ್ ಪ್ರೀಮಿಯರ್ ಲೀಗ್, 37ನೇ ಪಂದ್ಯ
ದಿನಾಂಕ: ಏಪ್ರಿಲ್ 20, 2025
ಸಮಯ: ಮಧ್ಯಾಹ್ನ 03: 30ಕ್ಕೆ
ಸ್ಥಳ: ಮಹಾರಾಜ ಯದವೀಂದ್ರ ಸಿಂಗ್ ಇಂಟರ್‌ನ್ಯಾಷನಲ್ ಕ್ರೀಡಾಂಗಣ, ಚಂಡೀಗಢ
ನೇರ ಪ್ರಸಾರ: ಸ್ಟಾರ್ ಸ್ಪೋರ್ಟ್ಸ್
ಲೈವ್ ಸ್ಟ್ರೀಮಿಂಗ್: ಡಿಸ್ನಿ ಹಾಟ್‌ಸ್ಟಾರ್