RCB vs PBKS: 500 ರನ್ ಪೂರ್ಣಗೊಳಿಸಿ ಐಪಿಎಲ್ ಟೂರ್ನಿಯಲ್ಲಿ ದೊಡ್ಡ ದಾಖಲೆ ಬರೆದ ವಿರಾಟ್ ಕೊಹ್ಲಿ!
Virat Kohli Scored 500 Runs for 9th time: ಪಂಜಾಬ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಮಾಜಿ ನಾಯಕ ಅರ್ಧಶತಕವನ್ನು ಪೂರ್ಣಗೊಳಿಸಿದರು. ಆ ಮೂಲಕ ಐಪಿಎಲ್ ಟೂರ್ನಿಯಲ್ಲಿ 9ನೇ ಬಾರಿ 500ಕ್ಕೂ ಅಧಿಕ ರನ್‌ಗಳನ್ನು ಕಲೆ ಹಾಕಿದ ಮೊದಲ ಬ್ಯಾಟ್ಸ್‌ಮನ್ ಎನಿಸಿಕೊಂಡಿದ್ದಾರೆ.
500 ರನ್ ಪೂರ್ಣಗೊಳಿಸಿದ ವಿರಾಟ್ ಕೊಹ್ಲಿ. -
ಧರ್ಮಶಾಲಾ: ಇಲ್ಲಿನ ಹಿಮಾಚಲ ಪ್ರದೇಶ ಕ್ರಿಕೆಟ್ ಅಸೋಸಿಯೇಷನ್ ಕ್ರೀಡಾಂಗಣದಲ್ಲಿ ನಡೆದಿದ್ದ 2026ರ ಇಂಡಿಯನ್ ಪ್ರೀಮಿಯರ್ ಲೀಗ್ (IPL 2026) ಟೂರ್ನಿಯ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಪಂಜಾಬ್ ಕಿಂಗ್ಸ್ ತಂಡಗಳು (RCB vs PBKS) ಕಾದಾಟ ನಡೆಸಿದವು. ಈ ಪಂದ್ಯದಲ್ಲಿ ಆರ್‌ಸಿಬಿ ದಿಗ್ಗಜ ವಿರಾಟ್ ಕೊಹ್ಲಿ (Virat Kohli) ಅರ್ಧಶತಕವನ್ನು ಸಿಡಿಸಿದರು. ಆ ಮೂಲಕ ಐಪಿಎಲ್ ಟೂರ್ನಿಯ ಇತಿಹಾಸದಲ್ಲಿ ಇಲ್ಲಿಯವರೆಗೂ ಯಾರಿಂದಲೂ ಸಾಧ್ಯವಾಗದ ದೊಡ್ಡ ದಾಖಲೆಯನ್ನು ಕಿಂಗ್ ಕೊಹ್ಲಿ ಬರೆದಿದ್ದಾರೆ.
ಭಾನುವಾರ ನಡೆದಿದ್ದ ಪಂದ್ಯದಲ್ಲಿ ಟಾಸ್ ಸೋತ ಆರ್‌ಸಿಬಿ ತಂಡ ಮೊದಲು ಬ್ಯಾಟ್ ಮಾಡುವಂತಾಯಿತು. ಜೆಕಬ್ ಬೆಥೆಲ್ ಹಾಗೂ ವಿರಾಟ್ ಕೊಹ್ಲಿ ಇನಿಂಗ್ಸ್ ಆರಂಭಿಸಿದರು. ಎಂದನಂತೆ ಈ ಪಂದ್ಯದಲ್ಲಿ ಸಿಕ್ಕ ಅವಕಾಶವನ್ನು ಜೇಕಬ್ ಬೆಥೆಲ್ ಕೈ ಚೆಲ್ಲಿದರು. ಆದರೆ, ಒಂದು ತುದಿಯಲ್ಲಿ ಗಟ್ಟಿಯಾಗಿ ನಿಂತು ಬ್ಯಾಟ್ ಮಾಡಿದ ವಿರಾಟ್ ಕೊಹ್ಲಿ ಆರ್‌ಸಿಬಿಗೆ ಉತ್ತಮ ಆರಂಭವನ್ನು ತಂದುಕೊಟ್ಟರು. ಅವರು ಆಡಿದ 37 ಎಸೆತಗಳಲ್ಲಿ 3 ಸಿಕ್ಸರ್ ಹಾಗೂ 4 ಬೌಂಡರಿಗಳೊಂದಿಗೆ 58 ರನ್‌ಗಳನ್ನು ಕಲೆ ಹಾಕಿದರು. ಆ ಮೂಲಕ ತಂಡದ ಮೊತ್ತವನ್ನು 150 ರನ್‌ಗಳ ಗಡಿಯನ್ನು ದಾಟಿಸಿ ವಿಕೆಟ್ ಒಪ್ಪಿಸಿದರು.
RCB vs PBKS ಪಂದ್ಯದಲ್ಲಿ ರಜತ್ ಪಾಟಿದಾರ್ ಏಕೆ ಆಡುತ್ತಿಲ್ಲ? ಇದಕ್ಕೆ ಕಾರಣ ಇಲ್ಲಿದೆ!
9ನೇ ಬಾರಿ 500ಕ್ಕೂ ಅಧಿಕ ರನ್ ಗಳಿಸಿದ ಕೊಹ್ಲಿ
ವಿರಾಟ್ ಕೊಹ್ಲಿ ಈ ಪಂದ್ಯದಲ್ಲಿ 16ರನ್ ಗಳಿಸಿದ ಬಳಿಕ 500 ರನ್‌ಗಳನ್ನು ಪೂರ್ಣಗೊಳಿಸಿದರು. ಆ ಮೂಲಕ ಐಪಿಎಲ್ ಟೂರ್ನಿಯ ಇತಿಹಾಸದಲ್ಲಿ 9ನೇ ಬಾರಿ 500 ರನ್‌ಗಳನ್ನು ಪೂರ್ಣಗೊಳಿಸಿದ ಮೊದಲ ಬ್ಯಾಟ್ಸ್‌ಮನ್ ಎಂಬ ದಾಖಲೆಯನ್ನು ವಿರಾಟ್ ಕೊಹ್ಲಿ ಬರೆದಿದ್ದಾರೆ. ಡೆಲ್ಲಿ ಡೇವಿಡ್ ವಾರ್ನರ್ ಹಾಗೂ ಕನ್ನಡಿಗ ಕೆಎಲ್ ರಾಹುಲ್ ತಲಾ 7 ಬಾರಿ 900ಕ್ಕೂ ಅಧಿಕ ರನ್‌ಗಳನ್ನು ಕಲೆ ಹಾಕಿದ್ದಾರೆ.
🚨 Huge wicket alert
— IndianPremierLeague (@IPL) May 17, 2026
Yuzvendra Chahal gets Virat Kohli for a well-made 5⃣8⃣(37) ☝️
Updates ▶️ https://t.co/3u5qL0Zn75#TATAIPL | #KhelBindaas | #PBKSvRCB pic.twitter.com/srKVINlGjK
ಓಪನರ್ ಆಗಿ 5500 ರನ್ ಕಲೆ ಹಾಕಿದ ಕೊಹ್ಲಿ
ವಿರಾಟ್ ಕೊಹ್ಲಿ ತಮ್ಮ ಹೆಸರಿಗೆ ಮತ್ತೊಂದು ಮಹತ್ವದ ದಾಖಲೆಯನ್ನು ಸೇರಿಸಿಕೊಂಡಿದ್ದಾರೆ. ಐಪಿಎಲ್ ಇತಿಹಾಸದಲ್ಲಿ ಒಂದೇ ಫ್ರಾಂಚೈಸಿ ಪರ ಓಪನರ್ ಆಗಿ 5500 ರನ್‌ಗಳನ್ನು ಪೂರೈಸಿದ ಮೊದಲ ಬ್ಯಾಟರ್ ಎಂಬ ದಾಖಲೆಯನ್ನು ಕೊಹ್ಲಿ ಬರೆದಿದ್ದಾರೆ.
ಈ ಪಂದ್ಯಕ್ಕೂ ಮುನ್ನ ಈ ಮೈಲುಗಲ್ಲು ತಲುಪಲು ಅವರಿಗೆ ಕೇವಲ 7 ರನ್‌ಗಳ ಅಗತ್ಯವಿತ್ತು. ಅಝಮತ್‌ವುಲ್ಲಾ ಒಮರ್ಜಾಯ್ ಬೌಲಿಂಗ್‌ನಲ್ಲಿ ಸಿಕ್ಸರ್ ಬಾರಿಸುವ ಮೂಲಕ ಅವರು ಈ ಮೈಲುಗಲ್ಲು ತಲುಪಿದ್ದಾರೆ. ಒಟ್ಟಾರೆ, ಶಿಖರ್ ಧವನ್ ಮತ್ತು ಡೇವಿಡ್ ವಾರ್ನರ್ ಕೂಡ ಐಪಿಎಲ್‌ನಲ್ಲಿ ಓಪನರ್ ಆಗಿ 5500 ರನ್‌ಗಳನ್ನು ಗಳಿಸಿದ್ದಾರೆ. ಆದರೆ ಅವರು ಈ ಸಾಧನೆಯನ್ನು ಹಲವು ಫ್ರಾಂಚೈಸಿಗಳ ಪರ ಆಡುವಾಗ ದಾಖಲಿಸಿದ್ದರು.
Scaled it, YET AGAIN. This is 𝑷𝒆𝒂𝒌 𝑲𝒐𝒉𝒍𝒊! ⛰️👑 pic.twitter.com/L7imO5ooHK
— Royal Challengers Bengaluru (@RCBTweets) May 17, 2026
222 ರನ್ ಕಲೆ ಹಾಕಿದ ಆರ್‌ಸಿಬಿ
ಇನ್ನು ಈ ಪಂದ್ಯದಲ್ಲಿ ವಿರಾಟ್ ಕೊಹ್ಲಿಯ ಅರ್ಧಶತಕದ ಜೊತೆಗೆ ಮಧ್ಯಮ ಕ್ರಮಾಂಕದಲ್ಲಿ ವೆಂಕಟೇಶ್ ಅಯ್ಯರ್ ಕೂಡ ಸ್ಪೋಟಕ ಬ್ಯಾಟ್ ಮಾಡಿದರು. ಅವರು ಆಡಿದ ಕೇವಲ 40 ಎಸೆತಗಳಲ್ಲಿ 4 ಸಿಕ್ಸರ್ ಹಾಗೂ 8 ಬೌಂಡರಿಗಳೊಂದಿಗೆ ಅಜೇಯ 73 ರನ್ ಸಿಡಿಸಿದರು. ಇದಕ್ಕೂ ಮುನ್ನ ದೇವದತ್ ಪಡಿಕ್ಕಲ್ 25 ಎಸೆತಗಳಲ್ಲಿ 45 ರನ್ ಚಚ್ಚಿದ್ದರು. ಕೊನೆಯಲ್ಲಿ ಟಿಮ್ ಡೇವಿಡ್ 12 ಎಸೆತಗಳಲ್ಲಿ 28 ರನ್ ಚಚ್ಚಿದರು. ಅಂತಿಮವಾಗಿ ಆರ್‌ಸಿಬಿ ತನ್ನ ಪಾಲಿನ 20 ಓವರ್‌ಗಳಿಗೆ 4 ವಿಕೆಟ್‌ಗಳ ನಷ್ಟಕ್ಕೆ 222 ರನ್‌ಗಳನ್ನು ಕಲೆ ಹಾಕಿತು.