ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

IPL 2026: ನಾಯಕನಾಗಿ 100 ಪಂದ್ಯಗಳನ್ನು ಆಡಿ ದಿಗ್ಗಜರನ್ನೊಳಗೊಂಡ ಎಲೈಟ್‌ ಲಿಸ್ಟ್‌ಗೆ ಸೇರಿದ ಶ್ರೇಯಸ್‌ ಅಯ್ಯರ್!

ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ವಿರುದ್ಧ 2026ರ ಇಂಡಿಯನ್‌ ಪ್ರೀಮಿಯರ್‌ ಲೀಗ್‌ ಟೂರ್ನಿಯ ಪಂದ್ಯದಲ್ಲಿ ಕಣಕ್ಕೆ ಇಳಿಯುವ ಮೂಲಕ ಪಂಜಾಬ್‌ ಕಿಂಗ್ಸ್‌ ನಾಯಕ ಶ್ರೇಯಸ್‌ ಅಯ್ಯರ್‌ ವಿಶೇಷ ದಾಖಲೆಯನ್ನು ಬರೆದಿದ್ದಾರೆ. ಅವರು ತಮ್ಮ ನಾಯಕತ್ವದಲ್ಲಿ 100 ಪಂದ್ಯಗಳನ್ನು ಪೂರ್ಣಗೊಳಿಸುವ ಮೂಲಕ ದಿಗ್ಗಜರನ್ನು ಒಳಗೊಂಡ ಎಲೈಟ್‌ ಲಿಸ್ಟ್‌ಗೆ ಸೇರ್ಪಡೆಯಾಗಿದ್ದಾರೆ.

ಎಂಎಸ್‌ ಧೋನಿ ಒಳಗೊಂಡ ಎಲೈಟ್‌ ಲಿಸ್ಟ್‌ಗೆ ಸೇರಿದ ಶ್ರೇಯಸ್‌ ಅಯ್ಯರ್!

ಆರ್‌ಸಿಬಿ ಎದುರು ಕಣಕ್ಕೆ ಇಳಿಯುವ ಮೂಲಕ ಎಲೈಟ್‌ ಲಿಸ್ಟ್‌ಗೆ ಸೇರಿದ ಶ್ರೇಯಸ್‌ ಅಯ್ಯರ್‌. -

Profile
Ramesh Kote May 17, 2026 6:55 PM

ಧರ್ಮಶಾಲಾ: ಇಲ್ಲಿನ ಹಿಮಾಚಲ ಪ್ರದೇಶ ಕ್ರಿಕೆಟ್‌ ಅಸೋಸಿಯೇಷನ್‌ ಕ್ರೀಡಾಂಗಣದಲ್ಲಿ ಭಾನುವಾರ ನಡೆದಿದ್ದ 2026ರ ಇಂಡಿಯನ್‌ ಪ್ರೀಮಿಯರ್‌ ಲೀಗ್‌ ಟೂರ್ನಿಯ (IPL 2026) ಪಂದ್ಯದಲ್ಲಿ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ಹಾಗೂ ಪಂಜಾಬ್‌ ಕಿಂಗ್ಸ್‌ ತಂಡಗಳು (RCB vs PBKS) ಕಾದಾಟ ನಡೆಸಿದವು. ಈ ಪಂದ್ಯದಲ್ಲಿ ಕಣಕ್ಕೆ ಇಳಿಯುವ ಮೂಲಕ ಪಂಜಾಬ್‌ ನಾಯಕ ಶ್ರೇಯಸ್‌ ಅಯ್ಯರ್‌ (Shreyas Iyer) ನಾಯಕನಾಗಿ 100 ಐಪಿಎಲ್‌ ಪಂದ್ಯಗಳನ್ನು ಪೂರ್ಣಗೊಳಿಸಿದರು ಹಾಗೂ ಎಂಎಸ್‌ ಧೋನಿ, ರೋಹಿತ್‌ ಶರ್ಮಾ, ಗೌತಮ್‌ ಗಂಭೀರ್‌ ಹಾಗೂ ವಿರಾಟ್‌ ಕೊಹ್ಲಿ ಒಳಗೊಂಡ ಎಲೈಟ್‌ ಲಿಸ್ಟ್‌ಗೆ ಸೇರ್ಪಡೆಯಾಗಿದ್ದಾರೆ. ನಾಯಕನಾಗಿ 100 ಐಪಿಎಲ್‌ ಪಂದ್ಯಗಳನ್ನು ಆಡಿದ ಐದನೇ ಆಟಗಾರ ಎಂಬ ಸಾಧನೆಗೆ ಶ್ರೇಯಸ್‌ ಭಾಜನರಾಗಿದ್ದಾರೆ.

ಎಂಎಸ್‌ ಧೋನಿ ನಾಯಕನಾಗಿ ಐಪಿಎಲ್ ಇತಿಹಾಸದಲ್ಲಿ ಅತ್ಯಧಿಕ ಪಂದ್ಯಗಳನ್ನು ಆಡಿದ್ದಾರೆ. ಇವರ ನಂತರ ರೋಹಿತ್‌ ಶರ್ಮಾ ಎರಡನೇ ಸ್ಥಾನದಲ್ಲಿದ್ದಾರೆ. ಈ ಇಬ್ಬರು ದಿಗ್ಗಜರು ತಮ್ಮ ತಮ್ಮ ತಂಡಗಳಿಗೆ ಐದು ಐಪಿಎಲ್ ಪ್ರಶಸ್ತಿಗಳನ್ನು ಗೆದ್ದುಕೊಟ್ಟಿದ್ದಾರೆ. ಇಂದಿಗೂ ಅವರು ಆಟಗಾರರಾಗಿ ಲೀಗ್‌ನಲ್ಲಿ ಸಕ್ರಿಯರಾಗಿದ್ದಾರೆ. ದೀರ್ಘಕಾಲ ಆರ್‌ಸಿಬಿ ತಂಡವನ್ನು ಮುನ್ನಡೆಸಿದ ವಿರಾಟ್‌ ಕೊಹ್ಲಿ ಮೂರನೇ ಸ್ಥಾನದಲ್ಲಿದ್ದಾರೆ. ಆದರೆ ಈ ಪಟ್ಟಿಯಲ್ಲಿರುವ ಐಪಿಎಲ್ ಟ್ರೋಫಿ ಗೆಲ್ಲದ ಏಕೈಕ ನಾಯಕನಾಗಿದ್ದಾರೆ. ಇನ್ನು ಗೌತಮ್‌ ಗಂಭೀರ್‌ ಐಪಿಎಲ್ ನಾಯಕನಾಗಿ ಎರಡು ಪ್ರಶಸ್ತಿಗಳನ್ನು ಗೆದ್ದಿದ್ದಾರೆ. ಅವರು ಡೆಲ್ಲಿ ಡೇರ್‌ ಡೆವಿಲ್ಸ್‌ (ಈಗ ಡೆಲ್ಲಿ ಕ್ಯಾಪಿಟಲ್ಸ್) ಹಾಗೂ ಕೋಲ್ಕತಾ ನೈಟ್‌ ರೈಡರ್ಸ್‌ ತಂಡಗಳನ್ನು ಮುನ್ನಡೆಸಿದ್ದರು.

ವಿರಾಟ್‌ ಕೊಹ್ಲಿ ಅಲ್ಲವೇ ಅಲ್ಲ! ಐಪಿಎಲ್‌ನ ಸಾರ್ವಕಾಲಿಕ ಶ್ರೇಷ್ಠ ಆಟಗಾರನನ್ನು ಆರಿಸಿದ ಅಂಬಾಟಿ ರಾಯುಡು!

ನಂತರ 2024ರಲ್ಲಿ ಅವರು ಕೋಲ್ಕತಾ ನೈಟ್‌ ರೈಡರ್ಸ್‌ ತಂಡಕ್ಕೆ ಸೇರ್ಪಡೆಯಾಗಿ ತಕ್ಷಣವೇ ತಮ್ಮ ನಾಯಕತ್ವದಲ್ಲಿ ಪ್ರಭಾವ ಬೀರಿದರು. ಒಂದು ದಶಕದ ಬಳಿಕ ತಂಡಕ್ಕೆ ಐಪಿಎಲ್ ಪ್ರಶಸ್ತಿಯನ್ನು ಗೆಲ್ಲಿಸಿಕೊಟ್ಟ ಅವರು, ಕೆಕೆಆರ್‌ಗೆ ಲೀಗ್ ಇತಿಹಾಸದಲ್ಲಿನ ಮೂರನೇ ಟ್ರೋಫಿಯನ್ನೂ ತಂದುಕೊಟ್ಟರು. ಕೆಕೆಆರ್ ಪರ ಭರ್ಜರಿ ಪ್ರದರ್ಶನ ನೀಡಿದರೂ, 2025ರ ಟೂರ್ನಿಗೂ ಮುನ್ನ ಫ್ರಾಂಚೈಸಿ ಅವರನ್ನು ಬಿಡುಗಡೆ ಮಾಡಿತು. ಬಳಿಕ ಮೆಗಾ ಹರಾಜಿನಲ್ಲಿ ಪಂಜಾಬ್‌ ಕಿಂಗ್ಸ್‌ ತಂಡ ಅವರನ್ನು 26.75 ಕೋಟಿ ರು. ಗಳಿಗೆ ಖರೀದಿಸಿತು.



ಫ್ರಾಂಚೈಸಿ ಬದಲಾದರೂ ಅಯ್ಯರ್ ತಮ್ಮ ಸಾಮರ್ಥ್ಯವನ್ನು ಮತ್ತೆ ಸಾಬೀತುಪಡಿಸಿದರು. 2025ರಲ್ಲಿ ಅವರು ಪಂಜಾಬ್ ಕಿಂಗ್ಸ್ ತಂಡವನ್ನು ಮತ್ತೊಮ್ಮೆ ಐಪಿಎಲ್ ಫೈನಲ್‌ಗೆ ಕೊಂಡೊಯ್ದರು. ಇದು 2014ರ ಬಳಿಕ ಪಂಜಾಬ್ ತಂಡದ ಮೊದಲ ಫೈನಲ್ ಪ್ರವೇಶವಾಗಿತ್ತು.

ಐಪಿಎಲ್‌ ಟೂರ್ನಿಯಲ್ಲಿ ಅತಿ ಹೆಚ್ಚು ಪಂದ್ಯಗಳಲ್ಲಿ ನಾಯಕರಾಗಿದ್ದವರು

1 ಎಂಎಸ್‌ ಧೋನಿ: 235 CSK, RPSG

2 ರೋಹಿತ್ ಶರ್ಮಾ: 158 MI

3 ವಿರಾಟ್ ಕೊಹ್ಲಿ: 143 RCB

4 ಗೌತಮ್ ಗಂಭೀರ್: 129 KKR, DD

5 ಶ್ರೇಯಸ್ ಅಯ್ಯರ್: 100* DC, KKR, PBKS



ನಾಯಕನಾಗಿ ಉತ್ತಮ ದಾಖಲೆ ಹೊಂದಿರುವ ಶ್ರೇಯಸ್‌ ಅಯ್ಯರ್‌

ಶ್ರೇಯಸ್‌ ಅಯ್ಯರ್‌ ಇತ್ತೀಚಿನ ವರ್ಷಗಳಲ್ಲಿ ಟಿ20 ಕ್ರಿಕೆಟ್‌ನಲ್ಲಿ ಅತ್ಯಂತ ಯಶಸ್ವಿ ಭಾರತೀಯ ನಾಯಕರಲ್ಲಿ ಒಬ್ಬರಾಗಿದ್ದಾರೆ. ದೇಶಿ ಕ್ರಿಕೆಟ್‌ನಲ್ಲಿ ಅವರು ಮುಂಬೈ ತಂಡದ ನಾಯಕತ್ವವನ್ನೂ ವಹಿಸಿಕೊಂಡಿದ್ದು, 2024ರ ಸೀಸನ್‌ನಲ್ಲಿ ತಂಡವನ್ನು ಸೈಯದ್‌ ಮುಷ್ತಾಕ್‌ ಅಲಿ ಟ್ರೋಫಿ ಪ್ರಶಸ್ತಿಗೆ ಕೊಂಡೊಯ್ದಿದ್ದರು.

ಇದರ ಜೊತೆಗೆ, ನಾಯಕತ್ವದ ಒತ್ತಡದಲ್ಲಿಯೇ ಅತ್ಯುತ್ತಮ ಪ್ರದರ್ಶನ ನೀಡುವ ಆಟಗಾರ ಎಂಬ ಹೆಗ್ಗಳಿಕೆಯನ್ನು ಕೂಡ ಅವರು ಗಳಿಸಿದ್ದಾರೆ. ನಾಯಕನಾಗಿ ಭಾರೀ ಪ್ರಮಾಣದ ರನ್‌ಗಳನ್ನು ಗಳಿಸುವ ಮೂಲಕ ತಮ್ಮ ಸಾಮರ್ಥ್ಯವನ್ನು ನಿರಂತರವಾಗಿ ಸಾಬೀತುಪಡಿಸಿದ್ದಾರೆ. 2025ರ ಐಪಿಎಲ್ ಸೀಸನ್‌ನಲ್ಲಿ ಪಂಜಾಬ್‌ ಕಿಂಗ್ಸ್‌ ಪರವಾಗಿ ಅವರು 604 ರನ್‌ಗಳನ್ನು ಬಾರಿಸಿ ತಮ್ಮ ನಾಯಕತ್ವ ಮತ್ತು ಬ್ಯಾಟಿಂಗ್ ಸಾಮರ್ಥ್ಯವನ್ನು ಮತ್ತೊಮ್ಮೆ ಸಾಬೀತುಪಡಿಸಿದ್ದಾರೆ.