IND vs SL: 100 ಟೆಸ್ಟ್ ಸಿಕ್ಸರ್‌ಗಳನ್ನು ಸಿಡಿಸಿ ದೊಡ್ಡ ದಾಖಲೆ ಬರೆದ ರಿಷಭ್ ಪಂತ್!
ಭಾರತ ಹಾಗೂ ಶ್ರೀಲಂಕಾ ನಡುವಣ ಮೊದಲನೇ ಟೆಸ್ಟ್ ಪಂದ್ಯದ ನಾಲ್ಕನೇ ದಿನ ವಿಕೆಟ್ ಕೀಪರ್-ಬ್ಯಾಟರ್ ರಿಷಭ್ ಪಂತ್ ಅರ್ಧಶತಕವನ್ನು ಸಿಡಿಸಿದರು. ಈ ಇನಿಂಗ್ಸ್‌ನಲ್ಲಿ ಅವರು ಎರಡು ಸಿಕ್ಸರ್‌ಗಳನ್ನು ಸಿಡಿಸಿದರು. ಇದರೊಂದಿಗೆ ತಮ್ಮ ಟೆಸ್ಟ್ ವೃತ್ತಿ ಜೀವನದಲ್ಲಿ 100 ಸಿಕ್ಸರ್‌ಗಳನ್ನು ಪೂರ್ಣಗೊಳಿಸಿ ನೂತನ ಮೈಲುಗಲ್ಲು ತಲುಪಿದ್ದಾರೆ.
ವೇಗವಾಗಿ 100 ಟೆಸ್ಟ್ ಸಿಕ್ಸರ್ ಪೂರ್ಣಗೊಳಿಸಿದ ರಿಷಭ್ ಪಂತ್. -
ಗಾಲೆ: ಇಲ್ಲಿನ ಗಾಲೆ ಇಂಟರ್‌ನ್ಯಾಷನಲ್ ಕ್ರೀಡಾಂಗಣದಲ್ಲಿ ಇದೀಗ ನಡೆಯುತ್ತಿರುವ ಮೊದಲನೇ ಟೆಸ್ಟ್ ಪಂದ್ಯದಲ್ಲಿ (IND vs SL) ಭಾರತ ಹಾಗೂ ಶ್ರೀಲಂಕಾ ತಂಡಗಳು ಕಾದಾಟ ನಡೆಸುತ್ತಿವೆ. ಈ ಪಂದ್ಯದಲ್ಲಿ ಟೀಮ್ ಇಂಡಿಯಾ ವಿಕೆಟ್ ಕೀಪರ್ ರಿಷಭ್ ಪಂತ್ (Rishabh Pant) ಅವರು ತಮ್ಮ ಟೆಸ್ಟ್ ವೃತ್ತಿ ಜೀವನದಲ್ಲಿ 100 ಸಿಕ್ಸರ್‌ಗಳನ್ನು ಪೂರ್ಣಗೊಳಿಸಿದ್ದಾರೆ. ಆ ಮೂಲಕ ಟೆಸ್ಟ್ ಕ್ರಿಕೆಟ್‌ನಲ್ಲಿ ವೇಗವಾಗಿ 100 ಸಿಕ್ಸರ್‌ಗಳನ್ನು ಪೂರ್ಣಗೊಳಿಸಿದ ವಿಶ್ವದ ಮೊದಲ ಬ್ಯಾಟ್ಸ್‌ಮನ್ ಎಂಬ ದಾಖಲೆಯನ್ನು ಬರೆದಿದ್ದಾರೆ.
ರಿಷಭ್ ಪಂತ್ ಅವರು ತಮ್ಮ ಟೆಸ್ಟ್ ವೃತ್ತಿ ಜೀವನದ 89ನೇ ಇನಿಂಗ್ಸ್‌ನಲ್ಲಿ ಈ ಮೈಲುಗಲ್ಲು ತಲುಪಿದ್ದಾರೆ. ಪಂದ್ಯದ ನಾಲ್ಕನೇ ದಿನವಾದ ಮಂಗಳವಾರ ಲಹಿರು ಕುಮಾರ ಅವರ ಎಸೆತದಲ್ಲಿ ಸಿಕ್ಸರ್ ಬಾರಿಸಿದ ಬಳಿಕ ಪಂತ್ 100 ಟೆಸ್ಟ್ ಸಿಕ್ಸರ್‌ಗಳನ್ನು ಪೂರ್ಣಗೊಳಿಸಿದ್ದಾರೆ.
ʻನನ್ನನ್ನು ಉಳಿಸಿದ್ದಕ್ಕಾಗಿ ನಿಮಗೆ ಧನ್ಯವಾದʼ: ದೇವದತ್ ಪಡಿಕ್ಕಲ್‌ರನ್ನು ಅಪ್ಪಿಕೊಂಡ ಕೆಎಲ್ ರಾಹುಲ್!
ಟೆಸ್ಟ್ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ಸಿಕ್ಸರ್ ಸಿಡಿಸಿದವರು
ಬೆನ್ ಸ್ಟೋಕ್ಸ್ — 138 ಸಿಕ್ಸರ್‌ಗಳು
ಬ್ರೆಂಡನ್ ಮೆಕಲಮ್ — 107 ಸಿಕ್ಸರ್‌ಗಳು
ರಿಷಭ್ ಪಂತ್ — 100 ಸಿಕ್ಸರ್‌ಗಳು*
ಆಡಂ ಗಿಲ್‌ಕ್ರಿಸ್ಟ್ — 100 ಸಿಕ್ಸರ್‌ಗಳು
ಟಿಮ್ ಸೌಥಿ — 98 ಸಿಕ್ಸರ್
ಟೆಸ್ಟ್ ಕ್ರಿಕೆಟ್‌ನಲ್ಲಿ ವೇಗವಾಗಿ 100 ಸಿಕ್ಸರ್ (ಇನಿಂಗ್ಸ್) ಸಿಡಿಸಿದವರು
89 – ರಿಷಭ್ ಪಂತ್
130 – ಆಡಂ ಗಿಲ್‌ಕ್ರಿಸ್ಟ್
151 – ಬೆನ್ ಸ್ಟೋಕ್ಸ್
170 – ಬ್ರೆಂಡನ್ ಮೆಕಲಮ್
Maximum number 1⃣0⃣0⃣ in Test Cricket for Rishabh Pant! 💥
— BCCI (@BCCI) August 18, 2026
He becomes the first #TeamIndia batter to reach that special milestone in men's cricket 🫡🫡
Updates ▶️ https://t.co/M9LVyCAp8y#SLvIND pic.twitter.com/24yVuJ7FzX
ಕಡಿಮೆ ಎಸೆತಗಳಲಿ 100 ಸಿಕ್ಸರ್ ಬಾರಿಸಿದವರು
4918 - ರಿಷಭ್ ಪಂತ್
6578 - ಆಡಂ ಗಿಲ್‌ಕ್ರಿಸ್ಟ್
9042 -ಬೆನ್ ಸ್ಟೋಕ್ಸ್
9756 - ಬ್ರೆಂಡನ್ ಮೆಕಲಮ್
ಶ್ರೀಲಂಕಾ ವಿರುದ್ದದ ಮೊದಲನೇ ಟೆಸ್ಟ್ ಪಂದ್ಯಕ್ಕೆ ಆಗಮಿಸುವುದಕ್ಕೂ ಮುನ್ನ ರಿಷಭ್ ಪಂತ್ ಅವರ ಫಾರ್ಮ್ ಬಗ್ಗೆ ಸಾಕಷ್ಟು ಪ್ರಶ್ನೆಗಳು ಎದುರಾಗಿದ್ದವು. ಪ್ರಥಮ ಇನಿಂಗ್ಸ್‌ನಲ್ಲಿಯೂ ಪಂತ್ ತಮ್ಮ ಬ್ಯಾಟಿಂಗ್ ಮೂಲಕ ಗಮನ ಸೆಳೆಯುವಲ್ಲಿ ವಿಫಲವಾಗಿದ್ದರು. ಆದರೆ, ಬ್ಯಾಟಿಂಗ್‌ಗೆ ಕಠಿಣವಾಗಿದ್ದ ನಾಲ್ಕನೇ ದಿನ ದ್ವಿತೀಯ ಇನಿಂಗ್ಸ್‌ನಲ್ಲಿ ಸ್ಪೋಟಕ ಅರ್ಧಶತಕ ಸಿಡಿಸುವ ಮೂಲಕ ಅವರು ತಮ್ಮ ಸಾಮರ್ಥ್ಯವನ್ನು ಸಾಬೀತುಪಡಿಸಿದ್ದಾರೆ. ಅವರು ಆಡಿದ್ದ 69 ಎಸೆತಗಳಲ್ಲಿ 62 ರನ್‌ಗಳನ್ನು ಗಳಿಸಿದರು.
IND vs SL 1st test: ಮಾನವ್ ಸುತಾರ್ ಬಗ್ಗೆ ದೊಡ್ಡ ಹೇಳಿಕೆ ನೀಡಿದ ಆಕಾಶ್ ಚೋಪ್ರಾ!
ಭಾರತ ತಂಡ ನಾಲ್ಕನೇ ದಿನ ಒಂದು ಹಂತದಲ್ಲಿ 81 ರನ್‌ಗಳಿಗೆ 3 ವಿಕೆಟ್‌ಗಳನ್ನು ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತ್ತು. ಈ ವೇಳೆ ಕ್ರೀಸ್‌ಗೆ ಬಂದ ಪಂತ್, ತಮ್ಮ ನೈಜ ಬ್ಯಾಟಿಂಗ್ ಪ್ರದರ್ಶನವನ್ನು ತೋರಿದರು. ಅವರು ದೇವದತ್ ಪಡಿಕ್ಕಲ್ ಜೊತೆಗೆ 30 ರನ್ ಹಾಗೂ ರವೀಂದ್ರ ಜಡೇಜಾ ಜೊತೆಗೆ 50 ರನ್‌ಗಳ ಜೊತೆಯಾಟವನ್ನು ಆಡಿದರು. ಅಲ್ಲದೆ ಅವರು ಈ ಸರಣಿಯಲ್ಲಿ ಅರ್ಧಶತಕ ಗಳಿಸಿದರು. ಇವರ ಅರ್ಧಶತಕದ ಬಲದಿಂದ ಟೀಮ್ ಇಂಡಿಯಾ ದ್ವಿತೀಯ ಇನಿಂಗ್ಸ್‌ನಲ್ಲಿ 200ರ ಗಡಿ ದಾಟಲು ನೆರವು ನೀಡಿದ್ದರು. ಅಂತಿಮವಾಗಿ ಟೀಮ್ ಇಂಡಿಯಾ ಎದುರಾಳಿ ಶ್ರೀಲಂಕಾ ತಂಡಕ್ಕೆ 372 ರನ್‌ಗಳ ಗುರಿಯನ್ನು ನೀಡಿತ್ತು.
ಗೆಲುವಿನ ಸನಿಹದಲ್ಲಿ ಭಾರತ
372 ರನ್‌ಗಳ ಗುರಿಯನ್ನು ಹಿಂಬಾಲಿಸಿದ ಶ್ರೀಲಂಕಾ ತಂಡ ಆರಂಭಿಕ ಆಘಾತ ಅನುಭವಿಸಿದೆ. ಮೊಹಮ್ಮದ್ ಸಿರಾಜ್, ಮಾನವ್ ಸುತಾರ್ ಹಾಗೂ ಪ್ರಸಿಧ್ ಕೃಷ್ಣ ತಲಾ ಒಂದೊಂದು ಕಬಳಿಸಿದರು. ಆ ಮೂಲಕ ಸಿಂಹಳೀಯರು 18 ಓವರ್‌ಗಳ ಅಂತ್ಯಕ್ಕೆ 3 ವಿಕೆಟ್‌ಗಳ ನಷ್ಟಕ್ಕೆ 40 ರನ್ ಗಳಿಸಿದೆ ಹಾಗೂ ಪಂದ್ಯವನ್ನು ಗೆಲ್ಲಲು 332 ರನ್‌ಗಳ ಅಗತ್ಯವಿದೆ. ಇದರ ಮೂಲಕ ಟೀಮ್ ಇಂಡಿಯಾ ಇದೀಗ ಗೆಲುವಿನ ಸನಿಹದಲ್ಲಿದೆ.