ಫೋಟೋ ಗ್ಯಾಲರಿ ಆಪರೇಷನ್​ ಸಿಂಧೂರ ಐಪಿಎಲ್​ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

IPL 2025: ನಾಯಕನಾಗಿ ರಿಷಭ್‌ ಪಂತ್‌ ವೈಫಲ್ಯಕ್ಕೆ ಕಾರಣ ತಿಳಿಸಿದ ಮೊಹಮ್ಮದ್‌ ಕೈಫ್‌!

Mohammed Kaif on Rishabh pant: ಪ್ರಸ್ತುತ ನಡೆಯುತ್ತಿರುವ 2025ರ ಇಂಡಿಯನ್‌ ಪ್ರೀಮಿಯರ್‌ ಲೀಗ್‌ ಟೂರ್ನಿಯಲ್ಲಿ ರಿಷಭ್‌ ಪಂತ್‌, ನಾಯಕನಾಗಿ ಹಾಗೂ ಬ್ಯಾಟ್ಸ್‌ಮನ್‌ ಆಗಿ ವೈಫಲ್ಯ ಅನುಭವಿಸಿದ್ದಾರೆ. ಇದರ ಪರಿಣಾಮವಾಗಿ ಲಖನೌ ಸೂಪರ್‌ ಜಯಂಟ್ಸ್‌ ತಂಡ, ಪ್ಲೇಆಫ್ಸ್‌ ರೇಸ್‌ನಿಂದ ಅಧಿಕೃತವಾಗಿ ಹೊರ ಬಿದ್ದಿದೆ. ಈ ಬಗ್ಗೆ ಮಾಜಿ ಕ್ರಿಕ್ರಿಟಿಗ ಮೊಹಮ್ಮದ್‌ ಕೈಫ್‌ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ರಿಷಭ್‌ ಪಂತ್‌ ವೈಫಲ್ಯಕ್ಕೆ ಕಾರಣ ತಿಳಿಸಿದ ಮೊಹಮ್ಮದ್‌ ಕೈಫ್‌!

ರಿಷಭ್‌ ಪಂತ್‌ಗೆ ಸಲಹೆ ನೀಡಿದ ಮೊಹಮ್ಮದ್‌ ಕೈಫ್.

Profile Ramesh Kote May 20, 2025 6:54 PM

ನವದೆಹಲಿ: ಪ್ರಸ್ತುತ ನಡೆಯುತ್ತಿರುವ 2025ರ ಇಂಡಿಯನ್‌ ಪ್ರೀಮಿಯರ್‌ ಲೀಗ್‌ (IPL 2025) ಟೂರ್ನಿಯಲ್ಲಿ ರಿಷಭ್‌ ಪಂತ್‌ (Rishabh Pant) ನಾಯಕತ್ವದ ಲಖನೌ ಸೂಪರ್‌ ಜಯಂಟ್ಸ್‌ ತಂಡ ಮೊದಲ ಅವಧಿಯಲ್ಲಿ ಅತ್ಯುತ್ತಮ ಪ್ರದರ್ಶನವನ್ನು ತೋರಿತ್ತು. ಆದರೆ, ಎರಡನೇ ಅವಧಿಯಲ್ಲಿ ವಿಫಲವಾಗಿದೆ. ಇದರ ಪರಿಣಾಮ ಲಖನೌ ಸೂಪರ್‌ ಜಯಂಟ್ಸ್‌ ತಂಡ ಟೂರ್ನಿಯ ಪ್ಲೇಆಫ್ಸ್‌ಗೆ ಅರ್ಹತೆ ಪಡೆಯುವಲ್ಲಿ ವಿಫಲವಾಗಿದೆ. ಇದರ ನಡುವೆ ರಿಷಭ್‌ ಪಂತ್‌ ಅವರ ನಾಯಕತ್ವದ ಬಗ್ಗೆ ಪ್ರಶ್ನೆಗಳು ಎದ್ದಿವೆ. ಅಂದ ಹಾಗೆ ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಭಾರತದ ಮಾಜಿ ಕ್ರಿಕೆಟಿಗ ಮೊಹಮ್ಮದ್‌ ಕೈಫ್‌ (Mohammed Kaif), ರಿಷಭ್‌ ಪಂತ್‌ಗೆ ನಾಯಕನಾಗಿ ತಮ್ಮ ಪಾತ್ರದ ಬಗ್ಗೆ ಸ್ಪಷ್ಟತೆ ಇಲ್ಲ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಕಳೆದ ಆವೃತ್ತಿಗಳಲ್ಲಿ ಡೆಲ್ಲಿ ಕ್ಯಾಪಿಟಲ್ಸ್‌ ತಂಡದ ಪರ ಆಡಿದ್ದ ರಿಷಭ್‌ ಪಂತ್‌ ಅವರನ್ನು 2025ರ ಐಪಿಎಲ್‌ ಮೆಗಾ ಹರಾಜಿನಲ್ಲಿ ಲಖನೌ ಸೂಪರ್‌ ಜಯಂಟ್ಸ್‌ ತಂಡ ದಾಖಲೆಯ ಮೊತ್ತಕ್ಕೆ ಖರೀದಿಸಿತ್ತು. ಆದರೆ, ಲಖನೌ ಫ್ರಾಂಚೈಸಿಯ ನಿರೀಕ್ಷೆಯನ್ನು ಹುಸಿಗೊಳಿಸಿದ್ದಾರೆ. ಅವರು ಆಡಿದ 12 ಪಂದ್ಯಗಳಿಂದ ಕೇವಲ 135 ರನ್‌ಗಳನ್ನು ಕಲೆ ಹಾಕಿದ್ದಾರೆ. ಇದರಲ್ಲಿ ಅವರು ಒಂದು ಬಾರಿ ಅರ್ಧಶತಕವನ್ನು ಬಾರಿಸಿದ್ದಾರೆ.

IPL 2025: 18 ಎಸೆತಗಳಲ್ಲಿ ಅರ್ಧಶತಕ ಬಾರಿಸಿ ಅಪರೂಪದ ದಾಖಲೆ ಬರೆದ ಅಭಿಷೇಕ್‌ ಶರ್ಮಾ!

ಸೋಮವಾರ ಸನ್‌ರೈಸರ್ಸ್‌ ಹೈದರಾಬಾದ್‌ ವಿರುದ್ಧದ ಪಂದ್ಯದಲ್ಲಿ ಅವರು ಆಡಿದ 6 ಎಸೆತಗಳಲ್ಲಿ 7 ರನ್‌ ಗಳಿಸಿ ವಿಕೆಟ್‌ ಒಪ್ಪಿಸಿದ್ದರು. ಆದರೆ, ಈ ಪಂದ್ಯದಲ್ಲಿ ಲಖನೌ ಸೂಪರ್‌ ಜಯಂಟ್ಸ್‌ ತಂಡ ಸೋಲು ಅನುಭವಿಸಿದೆ. ಆ ಮೂಲಕ 2025ರ ಐಪಿಎಲ್‌ ಟೂರ್ನಿಯ ಪ್ಲೇಆಫ್ಸ್‌ನಿಂದ ಹೊರ ಬಿದ್ದಿದೆ. ಸ್ಟಾರ್‌ ಸ್ಪೋರ್ಟ್ಸ್‌ ಜತೆ ಮಾತನಾಡಿದ ಮೊಹಮ್ಮದ್‌ ಕೈಫ್‌, ಮುಂದಿನ ವರ್ಷಕ್ಕೆ ತಂಡ ಬಲಿಷ್ಠವಾಗಿ ಕಮ್‌ಬ್ಯಾಕ್‌ ಮಾಡಬೇಕೆಂದರೆ, ನಾಯಕ ರಿಷಭ್‌ ಪಂತ್‌ ಅವರು ತಮ್ಮ ಬ್ಯಾಟಿಂಗ್‌ ಕ್ರಮಾಂಕವನ್ನು ಖಚಿತಪಡಿಸಿಕೊಳ್ಳಬೇಕು ಹಾಗೂ ಅವರು ತಮ್ಮ ಬ್ಯಾಟಿಂಗ್‌ ಕ್ರಮಾಂಕವನ್ನು ಬದಲಿಸಬಾರದು ಎಂದು ಸಲಹೆ ನೀಡಿದ್ದಾರೆ.

"ನೀವು ಮುಂದಿನ ಆವೃತ್ತಿಗೆ ತಯಾರಿ ನಡೆಸಬೇಕೆಂದರೆ, ನೀವು ನಾಯಕನಾಗಿ ಯಾವ ಕ್ರಮಾಂಕದಲ್ಲಿ ಬ್ಯಾಟ್‌ ಮಾಡಬೇಕೆಂದು ನಿರ್ಧರಿಸಬೇಕಾಗಿದೆ. ಬ್ಯಾಟಿಂಗ್‌ ಕ್ರಮಾಂಕ ಒಂದನೇ ಪಂದ್ಯದಿಂದ ಕೊನೆಯ ಪಂದ್ಯದವರೆಗೂ ಒಂದೇ ರೀತಿ ಇರಬೇಕಾಗುತ್ತದೆ. ಇದರಲ್ಲಿ ಯಾವುದೇ ಬದಲಾವಣೆಯಾಗಬಾರದು. ನೀವು ಮೂರನೇ ಕ್ರಮಾಂಕದಲ್ಲಿ ಆಡುತ್ತೀರೋ ಅಥವಾ ನಾಲ್ಕನೇ ಕ್ರಮಾಂಕದಲ್ಲಿ ಆಡುತ್ತೀರೋ ಅದಕ್ಕೆ ತಕ್ಕಂತೆ ನೀವು ತಂಡವನ್ನು ಪುನರಚಿಸಬೇಕಾಗುತ್ತದೆ," ಎಂದು ಮೊಹಮ್ಮದ್‌ ಕೈಫ್‌ ತಿಳಿಸಿದ್ದಾರೆ.

IPL 2025: ಐಪಿಎಲ್‌ನಿಂದ ಎಲ್‌ಎಸ್‌ಜಿ ತಂಡ ನಿರ್ಗಮನ; ಮೌನ ಮುರಿದ ಗೋಯೆಂಕಾ

ನಾಯಕತ್ವದ ಮೇಲೆ ಮಾತ್ರ ಗಮನಹರಿಸುತ್ತಿರುವ ಪಂತ್‌

ಟೂರ್ನಿಯ ಬಹುತೇಕ ಅವಧಿಯಲ್ಲಿ ರಿಷಭ್‌ ಪಂತ್‌ ತಮ್ಮ ಸಂಪೂರ್ಣ ಕೆಲಸವನ್ನು ನಾಯಕನಾಗಿ ಮಾಡಲು ಪ್ರಯತ್ನ ನಡೆಸುತ್ತಿದ್ದರು. ಆದರೆ, ರಿಷಭ್‌ ಪಂತ್‌ ಅವರು ಕೇವಲ ಒಂದೇ ಒಂದು ಬ್ಯಾಟಿಂಗ್‌ ಕ್ರಮಾಂಕದ ಮೇಲೆ ಮಾತ್ರ ಗಮನ ಹರಿಸಬೇಕಾಗಿದೆ ಎಂದು ಟೀಮ್‌ ಇಂಡಿಯಾ ಮಾಜಿ ಬ್ಯಾಟ್ಸ್‌ಮನ್‌ ಹೇಳಿದ್ದಾರೆ.

"ರಿಷಭ್‌ ಪಂತ್‌ ಅವರು ಕೆಲ ಪಂದ್ಯಗಳಲ್ಲಿ ಬ್ಯಾಟಿಂಗ್‌ಗೆ ಬಂದಿರಲಿಲ್ಲ ಹಾಗೂ ಅವರು ಇನ್ನುಳಿದ ಪಂದ್ಯಗಳಲ್ಲಿ ನಾಯಕನಾಗಿ ಮಾತ್ರ ಕೆಲಸವನ್ನು ಮಾಡುತ್ತಿದ್ದರು. ಆ ಮೂಲಕ ನಾಯಕನಾಗಿ ತಮ್ಮ ಪಾತ್ರವೇನೆಂದು ಅವರಿಗೆ ತಿಳಿಯುತ್ತಿರಲಿಲ್ಲ. ಹಲವು ಆಟಗಾರರು ಬ್ಯಾಟಿಂಗ್‌ ಫಾರ್ಮ್‌ ಕಳೆದುಕೊಂಡಿದ್ದರೆ, ಒಂದು ವರ್ಷ ತಂಡ ಕಳಪೆ ಪ್ರದರ್ಶನ ತೋರಬಹುದು. ಆದರೆ, ಒಂದು ಕ್ರಮಾಂಕದಲ್ಲಿ ಬ್ಯಾಟ್‌ ಮಾಡುವುದನ್ನು ಕಲಿಯಬೇಕಾಗುತ್ತದೆ," ಎಂದು ಮೊಹಮ್ಮದ್‌ ಕೈಫ್‌ ತಿಳಿಸಿದ್ದಾರೆ.