ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

ಇಬ್ಬರು ಹೊಸಬರಿಗೆ ಚೊಚ್ಚಲ ಸ್ಥಾನ? ಶ್ರೀಲಂಕಾ ಟೆಸ್ಟ್‌ ಸರಣಿಗೆ ಭಾರತ ಸಂಭಾವ್ಯ ಆಟಗಾರರ ತಂಡ!

India's Likely Test Squad for Sri lanka series: 2025-27ರ ಸಾಲಿನ ವಿಶ್ವ ಟೆಸ್ಟ್‌ ಚಾಂಪಿಯನ್‌ಷಿಪ್‌ ಋತುವಿನಲ್ಲಿ ಎರಡು ಪಂದ್ಯಗಳ ಟೆಸ್ಟ್‌ ಸರಣಿಯನ್ನು ಆಡಲು ಶುಭಮನ್‌ ಗಿಲ್‌ ನಾಯಕತ್ವದ ಭಾರತ ತಂಡ, ಶ್ರೀಲಂಕಕ್ಕೆ ಪ್ರವಾಸ ಕೈಗೊಳ್ಳಲಿದೆ. ಹಾಗಾಗಿ ಅತಿ ಶೀರ್ಘದಲ್ಲಿ ಭಾರತ ಟೆಸ್ಟ್‌ ತಂಡವನ್ನು ಪ್ರಕಟಿಸುವ ಸಾಧ್ಯತೆ ಇದೆ. ಈ ಸರಣಿಯಲ್ಲಿ ಭಾರತ ತಂಡದ ಪರ ಇಬ್ಬರು ಯುವ ಆಟಗಾರರಿಗೆ ಅವಕಾಶ ನೀಡುವ ಸಾಧ್ಯತೆ ಇದೆ.

ಶ್ರೀಲಂಕಾ ಟೆಸ್ಟ್‌ ಸರಣಿಗೆ ಭಾರತ ಸಂಭಾವ್ಯ ಆಟಗಾರರ ತಂಡ.

ನವದೆಹಲಿ: ಜಿಂಬಾಬ್ವೆ ವಿರುದ್ಧದ ಟಿ20ಐ ಸರಣಿಯ ಬಳಿಕ ಭಾರತ ತಂಡ ಟೆಸ್ಟ್‌ ಕ್ರಿಕೆಟ್‌ಗೆ ಮರಳಲಿದೆ. ಆಗಸ್ಟ್‌ 15 ರಂದು ಶ್ರೀಲಂಕಾ ವಿರುದ್ಧ ಆರಂಭವಾಗಲಿರುವ ಎರಡು ಪಂದ್ಯಗಳ ಟೆಸ್ಟ್‌ ಸರಣಿಯ (IND vs SL) ಮೂಲಕ ಶುಭಮನ್‌ ಗಿಲ್‌ ನಾಯಕತ್ವದ ಟೀಮ್‌ ಇಂಡಿಯಾ ರೆಡ್‌ ಬಾಲ್‌ ಕ್ರಿಕೆಟ್‌ಗೆ ಮರಳಲಿದೆ. 2025-27ರ ಸಾಲಿನ ವಿಶ್ವ ಟೆಸ್ಟ್‌ ಚಾಂಪಿಯನ್‌ಷಿಪ್‌ ಋತುವಿನಲ್ಲಿ (WTC 2025-27) ಭಾರತಕ್ಕೆ ಮೊದಲ ಟೆಸ್ಟ್‌ ಸರಣಿ ಇದಾಗಿದೆ. ಕಳೆದ ವರ್ಷ ನವೆಂಬರ್‌ನಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಎರಡು ಪಂದ್ಯಗಳ ಟೆಸ್ಟ್‌ ಸರಣಿಯನ್ನು 2-0 ಅಂತರದಲ್ಲಿ ಕ್ಲೀನ್‌ ಸ್ವೀಪ್‌ ಆಘಾತ ಅನುಭವಿಸಿದ ಬಳಿಕ ಭಾರತಕ್ಕೆ ಇದು ಮೊದಲ ಟೆಸ್ಟ್‌ ಸರಣಿಯಾಗಿದೆ.

ನಾಲ್ಕನೇ ಆವೃತ್ತಿಯ ವಿಶ್ವ ಟೆಸ್ಟ್‌ ಚಾಂಪಿಯನ್‌ಷಿಪ್‌ ಫೈನಲ್‌ಗೆ ಅರ್ಹತೆ ಪಡೆಯುವ ಹಾದಿಯಲ್ಲಿರುವ ಭಾರತ ತಂಡಕ್ಕೆ ಮುಂದಿನ ಸರಣಿಗಳಲ್ಲಿ ಮಾಡು ಇಲ್ಲವೆ ಮಡಿ ಪರಿಸ್ಥಿತಿ ಎದುರಾಗಿದೆ. ಇದರಲ್ಲಿ ಒಂದರಲ್ಲಿ ಸೋತರೂ ಸತತ ಎರಡನೇ ಬಾರಿಯೂ ಫೈನಲ್‌ ರೇಸ್‌ನಿಂದ ಹೊರ ಬೀಳಲಿದೆ. ಸದ್ಯ ಪಾಯಿಂಟ್ಸ್‌ ಟೇಬಲ್‌ನಲ್ಲಿ ಐದನೇ ಸ್ಥಾನದಲ್ಲಿರುವ ಭಾರತ ತಂಡದ ಗೆಲುವಿನ ಸರಾಸರಿ 48.15 ರಷ್ಟಿದೆ. ಇನ್ನೂ ಭಾರತ ತಂಡಕ್ಕೆ 9 ಪಂದ್ಯಗಳನ್ನು ಆಡುವುದು ಬಾಕಿ ಇದೆ. ಶ್ರೀಲಂಕಾ ಎದುರು 2 ಪಂದ್ಯಗಳು, ನ್ಯೂಜಿಲೆಂಡ್‌ ವಿರುದ್ಧ ಎರಡು ಪಂದ್ಯಗಳು ಹಾಗೂ ಆಸ್ಟ್ರೇಲಿಯಾ ವಿರುದ್ಧ ತವರಿನಲ್ಲಿ 5 ಪಂದ್ಯಗಳನ್ನು ಆಡುವುದು ಭಾರತಕ್ಕೆ ಬಾಕಿ ಇದೆ.

IND vs ZIM: ರಜತ್‌ ಪಾಟಿದಾರ್‌ಗೆ ಭಾರತ ತಂಡದಲ್ಲಿ ಸ್ಥಾನ ಏಕೆ ನೀಡಿಲ್ಲ? ಹನುಮ ವಿಹಾರಿ ಪ್ರಶ್ನೆ!

ಬುಮ್ರಾ-ಜಡೇಜಾ ಕಮ್‌ಬ್ಯಾಕ್‌ ಸಾಧ್ಯತೆ

ಶುಭಮನ್‌ ಗಿಲ್‌ ಸಾರಥ್ಯದ ಭಾರತ ತಂಡ ಫೈನಲ್‌ಗೆ ಪ್ರವೇಶ ಮಾಡಬೇಕೆಂದರೆ ಇನ್ನುಳಿದ 9 ಪಂದ್ಯಗಳಲ್ಲಿ 7ರಲ್ಲಿ ಗೆಲುವು ಪಡೆಯಬೇಕಾದ ಅಗತ್ಯವಿದೆ. ಇಲ್ಲವಾದಲ್ಲಿ ಫೈನಲ್‌ ರೇಸ್‌ನಿಂದ ಸತತ ಎರಡನೇ ಬಾರಿ ಹೊರ ಬೀಳಲಿದೆ. ಜೂನ್‌ನಲ್ಲಿ ಅಫ್ಘಾನಿಸ್ತಾನ ವಿರುದ್ಧ ನಡೆದ ಏಕೈಕ ಟೆಸ್ಟ್ ಪಂದ್ಯದಲ್ಲಿ ಆಡಿದ್ದ ಭಾರತ ತಂಡವೇ ಮುಂಬರುವ ಟೆಸ್ಟ್ ಸರಣಿಯಲ್ಲೂ ಆಡುವ ಸಾಧ್ಯತೆ ಇದೆ. ಆದರೆ, ಈ ಪಂದ್ಯ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಭಾಗವಾಗಿರಲಿಲ್ಲ.

ಆದರೆ, ಆ ಪಂದ್ಯಕ್ಕೆ ವಿಶ್ರಾಂತಿ ನೀಡಲಾಗಿದ್ದ ಅನುಭವಿ ಆಟಗಾರರಾದ ಜಸ್‌ಪ್ರೀತ್‌ ಬುಮ್ರಾ ಮತ್ತು ರವೀಂದ್ರ ಜಡೇಜಾ ಇದೀಗ ಮತ್ತೆ ತಂಡಕ್ಕೆ ಮರಳುವ ನಿರೀಕ್ಷೆಯಿದೆ. ಇದರಿಂದಾಗಿ, ಇನ್ನೂ ಭಾರತ ಪರ ಟೆಸ್ಟ್‌ಗೆ ಪದಾರ್ಪಣೆ ಮಾಡದ ಗುರ್ನೂರ್‌ ಬ್ರಾರ್ ಮತ್ತು ಹರ್ಷ್ ದುಬೆ ಅವರಿಗೆ ತಂಡದಲ್ಲಿ ಸ್ಥಾನ ಕಳೆದುಕೊಳ್ಳುವ ಸಾಧ್ಯತೆ ಇದೆ. ಬುಮ್ರಾ ಮತ್ತು ಜಡೇಜಾ ಅವರ ಅನುಭವವನ್ನು ಗಮನದಲ್ಲಿಟ್ಟುಕೊಂಡು ಆಯ್ಕೆ ಸಮಿತಿ ಈ ಬದಲಾವಣೆ ಮಾಡುವ ನಿರೀಕ್ಷೆಯಿದೆ.

ರಾಜಸ್ಥಾನ್‌ ರಾಯಲ್ಸ್‌ ತೊರೆದು ಚೆನ್ನೈ ಸೂಪರ್‌ ಕಿಂಗ್ಸ್‌ಗೆ ಸೇರಲು ಬಲವಾದ ಕಾರಣ ತಿಳಿಸಿದ ಸಂಜು ಸ್ಯಾಮ್ಸನ್‌!

ಭಾರತ ಟೆಸ್ಟ್‌ ತಂಡಕ್ಕೆ ಗಾಯದ ಆತಂಕ

ಮುಂಬರುವ ಟೆಸ್ಟ್ ಸರಣಿಗೆ ಮುನ್ನ ಭಾರತ ತಂಡಕ್ಕೆ ಗಾಯದ ಸಮಸ್ಯೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ. ಆಲ್‌ರೌಂಡರ್‌ಗಳಾದ ನಿತೀಶ್ ಕುಮಾರ್ ರೆಡ್ಡಿ ಮತ್ತು ವಾಷಿಂಗ್ಟನ್ ಸುಂದರ್ ಇಬ್ಬರೂ ಗಾಯದ ಸಮಸ್ಯೆಯಿಂದ ಬಳಲುತ್ತಿದ್ದು, ಅವರ ಫಿಟ್‌ನೆಸ್ ಬಗ್ಗೆ ಆತಂಕ ವ್ಯಕ್ತವಾಗಿದೆ. ಗೌತಮ್ ಗಂಭೀರ್ ಮುಖ್ಯ ಕೋಚ್ ಆಗಿರುವ ಅವಧಿಯಲ್ಲಿ ಈ ಇಬ್ಬರೂ ಟೆಸ್ಟ್ ತಂಡದ ಪ್ರಮುಖ ಸದಸ್ಯರಾಗಿದ್ದು, ಬ್ಯಾಟಿಂಗ್ ಮತ್ತು ಬೌಲಿಂಗ್ ಎರಡರಲ್ಲೂ ಮಹತ್ವದ ಕೊಡುಗೆ ನೀಡಿದ್ದಾರೆ. ಹೀಗಾಗಿ, ಅವರ ಗಾಯವು ಭಾರತ ತಂಡದ ಸಮತೋಲನದ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ.

ಶ್ರೀಲಂಕಾ ವಿರುದ್ಧದ ಟೆಸ್ಟ್‌ ಸರಣಿಗೆ ಭಾರತದ ಸಂಭಾವ್ಯ ಆಟಗಾರರ ತಂಡ: ಶುಭಮನ್‌ ಗಿಲ್‌ (ನಾಯಕ), ಯಶಸ್ವಿ ಜೈಸ್ವಾಲ್‌, ಕೆಎಲ್‌ ರಾಹುಲ್‌ (ಉಪ ನಾಯಕ), ಸಾಯಿ ಸುದರ್ಶನ್‌, ರಿಷಭ್‌ ಪಂತ್‌ (ವಿಕೆಟ್‌ ಕೀಪರ್‌), ದೇವದತ್‌ ಪಡಿಕ್ಕಲ್‌, ನಿತೀಶ್‌ ಕುಮಾರ್‌ ರೆಡ್ಡಿ/ಋತುರಾಜ್‌ ಗಾಯಕ್ವಾಡ್‌/ಸರ್ಫರಾಝ್‌ ಖಾನ್‌, ರವೀಂದ್ರ ಜಡೇಜಾ, ವಾಷಿಂಗ್ಟನ್‌ ಸುಂದರ್‌/ಹರ್ಷ್‌ ದುಬೇ/ಸರಂಶ್‌ ಜೈನ್‌, ಕುಲ್ದೀಪ್‌ ಯಾದವ್‌, ಜಸ್‌ಪ್ರೀತ್‌ ಬುಮ್ರಾ, ಮೊಹಮ್ಮದ್‌ ಸಿರಾಜ್‌, ಪ್ರಸಿಧ್‌ ಕೃಷ್ಣ, ಮಾನವ್‌ ಸುಥಾರ್‌, ಧ್ರುವ್‌ ಜುರೆಲ್‌ (ವಿಕೆಟ್‌ ಕೀಪರ್)‌