ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ʻ2027ರ ಏಕದಿನ ವಿಶ್ವಕಪ್‌ಗೂ ಮುನ್ನ ನಿವೃತ್ತಿಯಿಲ್ಲʼ: ವದಂತಿಗಳಿಗೆ ತೆರೆ ಎಳೆದ ರೋಹಿತ್ ಶರ್ಮಾ!

ರೋಹಿತ್ ಶರ್ಮಾ 2027ರ ಏಕದಿನ ವಿಶ್ವಕಪ್‌ಗೂ ಮುನ್ನ ನಿವೃತ್ತಿಯಾಗುವ ವದಂತಿಗಳಿಗೆ ಪ್ರತಿಕ್ರಿಯಿಸಿದ್ದಾರೆ. ನವೆಂಬರ್ 4 ರಂದು ಆರಂಭವಾಗುವ ನ್ಯೂಜಿಲೆಂಡ್ ವಿರುದ್ಧದ ಏಕದಿನ ಸರಣಿಯಲ್ಲಿ ಅವರು ಆಡಲಿದ್ದಾರೆ. 2027ರ ವಿಶ್ವಕಪ್ ಬಳಿಕ ತಮ್ಮ ಭವಿಷ್ಯದ ಬಗ್ಗೆ ನಿರ್ಧಾರ ಕೈಗೊಳ್ಳುವ ನಿರೀಕ್ಷೆಯಿದೆ.

ಒಡಿಐ ನಿವೃತ್ತಿ ವದಂತಿಗಳಿಗೆ ತೆರೆ ಎಳೆದ ರೋಹಿತ್‌ ಶರ್ಮಾ!

ಒಡಿಐ ನಿವೃತ್ತಿ ಬಗ್ಗೆ ಸ್ಪಷ್ಟನೆ ನೀಡಿದ ರೋಹಿತ್‌ ಶರ್ಮಾ. -

Profile
Ramesh Kote Oct 26, 2026 10:38 PM

ನವದೆಹಲಿ: ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ರೋಹಿತ್ ಶರ್ಮಾ (Rohit Sharma) ತಮ್ಮ ನಿವೃತ್ತಿಯ ಕುರಿತ ವದಂತಿಗಳಿಗೆ ಪ್ರತಿಕ್ರಿಯಿಸಿದ್ದಾರೆ. 2027ರ ಏಕದಿನ ವಿಶ್ವಕಪ್‌ (ODI World Cup 2027) ಟೂರ್ನಿಗೂ ಮುನ್ನ ಕ್ರಿಕೆಟ್‌ಗೆ ವಿದಾಯ ಹೇಳುವ ಸಾಧ್ಯತೆಯಿಲ್ಲ ಎಂಬ ಸುಳಿವು ನೀಡಿದ್ದಾರೆ. ನವೆಂಬರ್ 4 ರಂದು ಆರಂಭವಾಗಲಿರುವ ನ್ಯೂಜಿಲೆಂಡ್ ವಿರುದ್ಧದ ಏಕದಿನ ಸರಣಿಯ ಮೂಲಕ ಅವರು ಮತ್ತೆ ಮೈದಾನಕ್ಕಿಳಿಯಲಿದ್ದಾರೆ.

‘ಫ್ಯಾಮಿಲಿ ಫುಲ್ ಹೌಸ್ ವಿತ್ ರೋಹಿತ್ ಶರ್ಮಾ’ ಕಾರ್ಯಕ್ರಮದಲ್ಲಿ ಮಾತನಾಡಿದ ರೋಹಿತ್, ತಮ್ಮ ನಿವೃತ್ತಿಯ ಬಗ್ಗೆ ಹರಿದಾಡುತ್ತಿರುವ ವದಂತಿಗಳನ್ನು ಪ್ರಸ್ತಾಪಿಸಿದರು. “ನನ್ನ ಬಗ್ಗೆ ನಾನು ಕೇಳಿರುವ ಮತ್ತು ಈಗಲೂ ಕೇಳುತ್ತಿರುವ ವದಂತಿಯೆಂದರೆ, ನಾನು ನಿವೃತ್ತಿಯಾಗಲಿದ್ದೇನೆ ಎಂಬುದು. ನಮ್ಮ ಮೂವರ ಬಗ್ಗೆ ಹರಿದಾಡುತ್ತಿರುವ ಈ ಎಲ್ಲ ವದಂತಿಗಳಿಗೆ ಈಗ ತೆರೆ ಬಿದ್ದಿದೆ ಎಂದು ಆಶಿಸುತ್ತೇನೆ,” ಎಂದು ಅವರು ತಿಳಿಸಿದ್ದಾರೆ.

2027ರ ಏಕದಿನ ವಿಶ್ವಕಪ್‌ ಭಾರತ ತಂಡಕ್ಕೆ ಐವರು ವೇಗಿಗಳನ್ನು ಆರಿಸಿದ ಅಜಿಂಕ್ಯ ರಹಾನೆ!

ಸದ್ಯ ರೋಹಿತ್ ಏಕದಿನ ಕ್ರಿಕೆಟ್‌ನಲ್ಲಿ ಮಾತ್ರ ಸಕ್ರಿಯರಾಗಿದ್ದಾರೆ. 2024ರ ಟಿ20 ವಿಶ್ವಕಪ್‌ ಟೂರ್ನಿಯಲ್ಲಿ ಭಾರತ ತಂಡಕ್ಕೆ ಪ್ರಶಸ್ತಿ ಗೆದ್ದುಕೊಟ್ಟ ಕೆಲವೇ ನಿಮಿಷಗಳಲ್ಲಿ ಅವರು ಟಿ20ಐ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದರು. ಬಳಿಕ 2025ರ ಮೇ ತಿಂಗಳಲ್ಲಿ ಟೆಸ್ಟ್ ಕ್ರಿಕೆಟ್‌ಗೂ ದಿಢೀರ್ ವಿದಾಯ ಹೇಳಿದ್ದರು. 2024-25ರ ಬಾರ್ಡರ್‌-ಗವಾಸ್ಕರ್ ಟ್ರೋಫಿ ಬಳಿಕ ರಣಜಿ ಟ್ರೋಫಿಗೆ ಮರಳಿದ್ದ ರೋಹಿತ್, ಇಂಗ್ಲೆಂಡ್ ಪ್ರವಾಸದಲ್ಲಿ ಆಡಬಹುದು ಎಂದು ನಿರೀಕ್ಷಿಸಲಾಗಿತ್ತು. ಆದರೆ, ಟೆಸ್ಟ್ ಕ್ರಿಕೆಟ್‌ನಿಂದ ನಿವೃತ್ತಿ ಘೋಷಿಸಿ ಅಚ್ಚರಿ ಮೂಡಿಸಿದ್ದರು.

2025ರಿಂದ ಏಕದಿನ ಕ್ರಿಕೆಟ್‌ನಲ್ಲಿ ಮಾತ್ರ ಆಡುತ್ತಿರುವ ರೋಹಿತ್, 2027ರ ಏಕದಿನ ವಿಶ್ವಕಪ್ ಬಳಿಕ ತಮ್ಮ ಕ್ರಿಕೆಟ್ ಭವಿಷ್ಯದ ಬಗ್ಗೆ ನಿರ್ಧಾರ ಕೈಗೊಳ್ಳುವ ನಿರೀಕ್ಷೆಯಿದೆ. ಗಮನಾರ್ಹ ಸಂಗತಿಯೆಂದರೆ, ಅವರು ಇನ್ನೂ ಏಕದಿನ ವಿಶ್ವಕಪ್ ಪ್ರಶಸ್ತಿ ಗೆದ್ದಿಲ್ಲ.

ʻಬ್ಯಾಟ್‌ ಟಚ್‌ ಆಗಿಲ್ಲʼ: 199 ರನ್‌ಗೆ ಔಟ್‌ ಆಗಿ ಅಂಪೈರ್‌ ವಿರುದ್ಧ ದೇವದತ್‌ ಪಡಿಕ್ಕಲ್‌ ಕಿಡಿ! ವಿಡಿಯೊ

2011ರ ವಿಶ್ವಕಪ್‌ಗೆ ಭಾರತ ತಂಡದಲ್ಲಿ ಸ್ಥಾನ ಪಡೆಯಲು ರೋಹಿತ್‌ಗೆ ಸಾಧ್ಯವಾಗಿರಲಿಲ್ಲ. ಆದರೆ, 2015 ಮತ್ತು 2019ರ ವಿಶ್ವಕಪ್‌ಗಳಲ್ಲಿ ಆಡಿದ್ದರು. 2023ರ ವಿಶ್ವಕಪ್‌ನಲ್ಲಿ ಭಾರತ ತಂಡವನ್ನು ನಾಯಕನಾಗಿ ಫೈನಲ್‌ವರೆಗೆ ಮುನ್ನಡೆಸಿದ್ದರೂ, ಅಂತಿಮ ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ಧ ಸೋಲು ಅನುಭವಿಸಿತ್ತು.

ಭಾರತ–ನ್ಯೂಜಿಲೆಂಡ್ ಏಕದಿನ ಸರಣಿಯ ವೇಳಾಪಟ್ಟಿ

ಐದು ಪಂದ್ಯಗಳ ಸರಣಿಯ ಮೊದಲ ಪಂದ್ಯ ನವೆಂಬರ್ 4ರಂದು ಆಕ್ಲೆಂಡ್‌ನ ಈಡನ್ ಪಾರ್ಕ್‌ನಲ್ಲಿ ನಡೆಯಲಿದೆ. ಎರಡನೇ ಪಂದ್ಯ ನವೆಂಬರ್ 7ರಂದು ವೆಲ್ಲಿಂಗ್ಟನ್‌ನ ಹೆನ್ರಿ ಸ್ಟೇಡಿಯಂನಲ್ಲಿ ಆಯೋಜಿಸಲಾಗಿದೆ. ಉಳಿದ ಮೂರು ಪಂದ್ಯಗಳು ನವೆಂಬರ್ 10, 13 ಮತ್ತು 15ರಂದು ನಡೆಯಲಿವೆ.

ವೈರಲ್‌ ಆಯ್ತು ವಿರಾಟ್‌ ಕೊಹ್ಲಿಯ ಹೃದಯಸ್ಪರ್ಶಿ ನಡೆ; ನೆಟ್‌ ಬೌಲರ್‌ ಕನಸು ನನಸು ಮಾಡಿ ಕಿಂಗ್‌!

ರೋಹಿತ್ ಐದೂ ಏಕದಿನ ಪಂದ್ಯಗಳಿಗೆ ಭಾರತ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಟೆಸ್ಟ್ ಸರಣಿಗೆ ಆಯ್ಕೆಯಾಗಿರುವ ಆಟಗಾರರಿಗೆ ಮೊದಲ ಮೂರು ಏಕದಿನ ಪಂದ್ಯಗಳಲ್ಲಿ ಮಾತ್ರ ಅವಕಾಶ ನೀಡಲಾಗಿದೆ. ಮೂರನೇ ಪಂದ್ಯದ ಬಳಿಕ ಅವರು ಟೆಸ್ಟ್ ಸರಣಿಯ ಸಿದ್ಧತೆಗಾಗಿ ತಂಡದಿಂದ ನಿರ್ಗಮಿಸಲಿದ್ದಾರೆ.