ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

IND vs NZ: ಏಕದಿನ ಕ್ರಿಕೆಟ್‌ನಲ್ಲಿ ನ್ಯೂಜಿಲೆಂಡ್ ವಿರುದ್ಧ ಅತಿ ಹೆಚ್ಚು ಸಿಕ್ಸರ್ ಸಿಡಿಸಿದ ರೋಹಿತ್ ಶರ್ಮಾ!

ಏಕದಿನ ಕ್ರಿಕೆಟ್‌ನಲ್ಲಿ ನ್ಯೂಜಿಲೆಂಡ್ ವಿರುದ್ಧ ಅತಿ ಹೆಚ್ಚು ಸಿಕ್ಸರ್‌ಗಳನ್ನು ಸಿಡಿಸಿದ ಬ್ಯಾಟರ್ ಎಂಬ ಹೆಗ್ಗಳಿಕೆಗೆ ಭಾರತದ ಮಾಜಿ ನಾಯಕ ಹಾಗೂ ಸ್ಟಾರ್ ಬ್ಯಾಟರ್ ರೋಹಿತ್ ಶರ್ಮಾ ಪಾತ್ರರಾಗಿದ್ದಾರೆ. ಆ ಮೂಲಕ ಪಾಕಿಸ್ತಾನ ಮಾಜಿ ನಾಯಕ ಶಾಹಿದ್‌ ಅಫ್ರಿದಿ ಅವರ ದಾಖಲೆಯನ್ನು ಹಿಟ್‌ಮ್ಯಾನ್‌ ಮುರಿದಿದ್ದಾರೆ.

ಕಿವೀಸ್‌ ಎದುರು ಅತಿ ಹೆಚ್ಚು ಸಿಕ್ಸರ್‌ ದಾಖಲೆ ಬರೆದ ರೋಹಿತ್‌ ಶರ್ಮಾ.

ವೆಲ್ಲಿಂಗ್ಟನ್‌: ಇಲ್ಲಿನ ಹೆನ್ರಿ ಸ್ಟೇಡಿಯಂನಲ್ಲಿ ನವೆಂಬರ್ 7ರಂದು ನಡೆದಿದ್ದ ಭಾರತ ಮತ್ತು ನ್ಯೂಜಿಲೆಂಡ್ (IND vs NZ) ನಡುವಿನ ಎರಡನೇ ಏಕದಿನ ಪಂದ್ಯದಲ್ಲಿ ಟೀಮ್‌ ಇಂಡಿಯಾದ ಆರಂಭಿಕ ಆಟಗಾರ ರೋಹಿತ್ ಶರ್ಮಾ (Rohit Sharma) ಹೊಸ ದಾಖಲೆ ಬರೆದಿದ್ದಾರೆ. ಕೇವಲ 23 ರನ್ ಗಳಿಸಿದರೂ ತಮ್ಮ ಸ್ಫೋಟಕ ಬ್ಯಾಟಿಂಗ್ ಮೂಲಕ ವಿಶೇಷ ಸಾಧನೆ ಮಾಡಿದ್ದಾರೆ.

ಈ ಪಂದ್ಯದಲ್ಲಿ 28 ಎಸೆತಗಳನ್ನು ಎದುರಿಸಿದ ರೋಹಿತ್, 2 ಬೌಂಡರಿ ಹಾಗೂ 2 ಸಿಕ್ಸರ್‌ಗಳ ನೆರವಿನಿಂದ 23 ರನ್ ಗಳಿಸಿದರು. ಈ ಎರಡು ಸಿಕ್ಸರ್‌ಗಳೊಂದಿಗೆ ನ್ಯೂಜಿಲೆಂಡ್ ವಿರುದ್ಧ ಏಕದಿನ ಕ್ರಿಕೆಟ್‌ನಲ್ಲಿ ಅವರ ಒಟ್ಟು ಸಿಕ್ಸರ್‌ಗಳ ಸಂಖ್ಯೆ 51ಕ್ಕೆ ಏರಿಕೆಯಾಯಿತು. ಆ ಮೂಲಕ ಈ ಹಿಂದೆ 50 ಸಿಕ್ಸರ್‌ಗಳನ್ನು ಸಿಡಿಸಿದ್ದ ಪಾಕಿಸ್ತಾನದ ಮಾಜಿ ಆಟಗಾರ ಶಾಹಿದ್ ಅಫ್ರಿದಿ ಅವರ ದಾಖಲೆಯನ್ನು ಹಿಟ್‌ಮ್ಯಾನ್‌ ಮುರಿದಿದ್ದಾರೆ.

ನ್ಯೂಜಿಲೆಂಡ್ ವಿರುದ್ಧ ಇದುವರೆಗೆ 36 ಏಕದಿನ ಪಂದ್ಯಗಳನ್ನಾಡಿರುವ ರೋಹಿತ್, 34 ಇನಿಂಗ್ಸ್‌ಗಳಲ್ಲಿ 51 ಸಿಕ್ಸರ್‌ಗಳನ್ನು ಬಾರಿಸಿದ್ದಾರೆ. ಅಲ್ಲದೆ, ಒಟ್ಟಾರೆ ಏಕದಿನ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ಸಿಕ್ಸರ್ ಸಿಡಿಸಿದ ವಿಶ್ವದಾಖಲೆಯೂ ರೋಹಿತ್ ಹೆಸರಿನಲ್ಲಿದೆ. ಅವರು 293 ಪಂದ್ಯಗಳಿಂದ 383 ಸಿಕ್ಸರ್‌ಗಳನ್ನು ಸಿಡಿಸಿದ್ದಾರೆ.

IND vs NZ: 7 ರನ್‌ಗೆ ಔಟಾದರೂ ರಿಕಿ ಪಾಟಿಂಗ್‌ ದಾಖಲೆ ಮುರಿದ ವಿರಾಟ್‌ ಕೊಹ್ಲಿ!

ನ್ಯೂಜಿಲೆಂಡ್ ವಿರುದ್ಧ ಅತಿ ಹೆಚ್ಚು ಸಿಕ್ಸರ್ ಸಿಡಿಸಿದವರು

ರೋಹಿತ್ ಶರ್ಮಾ (ಭಾರತ) 51 ಸಿಕ್ಸರ್‌

ಶಾಹಿದ್ ಅಫ್ರಿದಿ ( ಪಾಕಿಸ್ತಾನ) 50 ಸಿಕ್ಸರ್‌

ಕ್ರಿಸ್ ಗೇಲ್ (ವೆಸ್ಟ್ ಇಂಡೀಸ್) 45 ಸಿಕ್ಸರ್‌

ಸನತ್ ಜಯಸೂರ್ಯ (ಶ್ರೀಲಂಕಾ) 41 ಸಿಕ್ಸರ್‌

ವೆಸ್ಟ್ ಇಂಡೀಸ್‌ನ ಸ್ಫೋಟಕ ಬ್ಯಾಟರ್ ಕ್ರಿಸ್ ಗೇಲ್ 45 ಸಿಕ್ಸರ್‌ಗಳೊಂದಿಗೆ ಮೂರನೇ ಸ್ಥಾನದಲ್ಲಿದ್ದರೆ, ಶ್ರೀಲಂಕಾದ ಮಾಜಿ ನಾಯಕ ಸನತ್ ಜಯಸೂರ್ಯ 41 ಸಿಕ್ಸರ್‌ಗಳೊಂದಿಗೆ ನಾಲ್ಕನೇ ಸ್ಥಾನದಲ್ಲಿದ್ದಾರೆ.

IND vs NZ: ವೆಲ್ಲಿಂಗ್ಟನ್‌ನಲ್ಲಿ ಸೋಲುವ ದವಡೆಗೆ ಸಿಲುಕಿದ್ದ ಭಾರತ ತಂಡವನ್ನು ಗೆಲ್ಲಿಸಿದ ಮಳೆರಾಯ!

ಜೇಮಿಸನ್‌ಗೆ ವಿಕೆಟ್ ಒಪ್ಪಿಸಿದ ರೋಹಿತ್

ವೆಲ್ಲಿಂಗ್ಟನ್‌ನಲ್ಲಿ ನಡೆದಿದ್ದ ಎರಡನೇ ಏಕದಿನ ಪಂದ್ಯದಲ್ಲಿ ಭಾರತದ ಚೇಸಿಂಗ್ ವೇಳೆ ರೋಹಿತ್ ಈ ಐತಿಹಾಸಿಕ ಸಾಧನೆ ಮಾಡಿದರು. ನ್ಯೂಜಿಲೆಂಡ್ ವೇಗಿ ಕೈಲ್ ಜೇಮಿಸನ್ ಬೌಲಿಂಗ್‌ನಲ್ಲಿ ಎರಡು ಸಿಕ್ಸರ್‌ಗಳನ್ನು ಸಿಡಿಸಿದ ರೋಹಿತ್ ಬಳಿಕ ಅವರಿಗೇ ವಿಕೆಟ್ ಒಪ್ಪಿಸಿದರು. ವೈಯಕ್ತಿಕವಾಗಿ ದೊಡ್ಡ ಮೊತ್ತ ಗಳಿಸಲು ಸಾಧ್ಯವಾಗದಿದ್ದರೂ, ಅವರ ಈ ಇನಿಂಗ್ಸ್ ಏಕದಿನ ಕ್ರಿಕೆಟ್ ಇತಿಹಾಸದಲ್ಲಿ ವಿಶೇಷ ಸ್ಥಾನ ಪಡೆದುಕೊಂಡಿದೆ.