ಬಿಗ್​ಬಾಸ್ ಫೋಟೋ ಗ್ಯಾಲರಿ ವಿಶ್ವವಾಣಿ ಪ್ರಾಪರ್ಟಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

ವಿಜಯ್‌ ಹಝಾರೆ ಟ್ರೋಫಿ ಆಡಲಿರುವ ರೋಹಿತ್‌ ಶರ್ಮಾ, ವಿರಾಟ್‌ ಕೊಹ್ಲಿ ಕಥೆ ಏನು?

ಮುಂಬರುವ ವಿಜಯ್‌ ಹಝಾರೆ ಟ್ರೋಫಿ ಟೂರ್ನಿಯಲ್ಲಿ ಆಡಲು ಲಭ್ಯನಿದ್ದೇನೆಂದು ಭಾರತ ತಂಡದ ಮಾಜಿ ನಾಯಕ ರೋಹಿತ್‌ ಶರ್ಮಾ ಮುಂಬೈ ತಂಡಕ್ಕೆ ಹೇಳಿದ್ದಾರೆ. ಆದರೆ, ವಿರಾಟ್‌ ಕೊಹ್ಲಿ ಅವರು 50 ಓವರ್‌ಗಳ ದೇಶಿ ಟೂರ್ನಿಯನ್ನು ಆಡುವ ಬಗ್ಗೆ ಇನ್ನೂ ಯಾವುದೇ ಮಾಹಿತಿ ಲಭ್ಯವಾಗಿಲ್ಲ.

ವಿಜಯ ಹಝಾರೆ ಟ್ರೋಫಿ ಟೂರ್ನಿಯಲ್ಲಿ ಆಡಲಿರುವ ರೋಹಿತ್‌ ಶರ್ಮಾ.

ನವದೆಹಲಿ: ಮುಂಬರುವ ವಿಜಯ್‌ ಹಝಾರೆ ಟ್ರೋಫಿ (Vijay Hazare Trophy 2025) ಟೂರ್ನಿಯಲ್ಲಿ ಆಡಲು ಭಾರತ ತಂಡದ ಮಾಜಿ ನಾಯಕ ರೋಹಿತ್‌ ಶರ್ಮಾ (Rohit Sharma) ಸಜ್ಜಾಗುತ್ತಿದ್ದಾರೆ. ಇಂಡಿಯನ್‌ ಎಕ್ಸ್‌ಪ್ರೆಸ್‌ ವರದಿಯ ಪ್ರಕಾರ, ಭಾರತ ಏಕದಿನ ತಂಡದ ಆಯ್ಕೆಯಲ್ಲಿ ಉಳಿಯಬೇಕೆಂದರೆ, ದೇಶಿ 50 ಓವರ್‌ಗಳ ಟೂರ್ನಿಯಲ್ಲಿ ಆಡಬೇಕೆಂದು ಭಾರತೀಯ ಕ್ರಿಕೆಟ್‌ ನಿಯಂತ್ರಣ ಮಂಡಳಿ ರೋಹಿತ್‌ ಶರ್ಮಾ ಹಾಗೂ ವಿರಾಟ್‌ ಕೊಹ್ಲಿಗೆ (Virat Kohli) ಸೂಚಿಸಿದೆ. ಅದರಂತೆ ರೋಹಿತ್‌ ಶರ್ಮಾ ಅವರು ವಿಜಯ್‌ ಹಝಾರೆ ಟ್ರೋಫಿ ಟೂರ್ನಿಯಲ್ಲಿ ಆಡಲು ಲಭ್ಯರಿರುವುದಾಗಿ ಮುಂಬೈಗೆ ತಿಳಿಸಿದ್ದಾರೆಂದು ವರದಿಯಾಗಿದೆ. ಆದರೆ ವಿರಾಟ್‌ ಕೊಹ್ಲಿ ಬಗ್ಗೆ ಇನ್ನೂ ಯಾವುದೇ ಮಾಹಿತಿ ಹೊರ ಬಂದಿಲ್ಲ.

ರೋಹಿತ್‌ ಶರ್ಮಾ ಹಾಗೂ ವಿರಾಟ್‌ ಕೊಹ್ಲಿ ಟಿ20ಐ ಹಾಗೂ ಟೆಸ್ಟ್‌ ಕ್ರಿಕೆಟ್‌ಗೆ ಈಗಾಗಲೇ ವಿದಾಯ ಹೇಳಿದ್ದಾರೆ. ಇದೀಗ ಅವರು 2027ರ ಐಸಿಸಿ ಏಕದಿನ ವಿಶ್ವಕಪ್‌ ಟೂರ್ನಿಯಲ್ಲಿ ಆಡಬೇಕೆಂಬ ಕಾರಣಕ್ಕೆ 50 ಓವರ್‌ಗಳ ಸ್ವರೂಪದಲ್ಲಿ ಸಕ್ರಿಯರಾಗಿದ್ದಾರೆ. ದಕ್ಷಿಣ ಆಫ್ರಿಕಾ ಏಕದಿನ ಸರಣಿ ಮುಗಿದ ಬಳಿಕ 50 ಓವರ್‌ಗಳ ವಿಜಯ್‌ ಹಝಾರೆ ಟ್ರೋಫಿ ಟೂರ್ನಿ ನಡೆಯಲಿದೆ. ಈ ಟೂರ್ನಿಯಲ್ಲಿ ವಿರಾಟ್‌ ಕೊಹ್ಲಿ ಹಾಗೂ ರೋಹಿತ್‌ ಶರ್ಮಾ ಇಬ್ಬರೂ ಆಡಬೇಕೆಂದು ಬಿಸಿಸಿಐ ಬಯಸುತ್ತಿದೆ. ಕನಿಷ್ಠ ಮೂರು ಪಂದ್ಯಗಳಲ್ಲಿ ಇವರು ಆಡಬೇಕೆಂದು ಬಿಸಿಸಿಐ ಆಗ್ರಹಿಸಿದೆ.

IND vs SA: ದಕ್ಷಿಣ ಆಫ್ರಿಕಾ ಟೆಸ್ಟ್‌ ಸರಣಿಯ ಭಾರತ ತಂಡದಿಂದ ಹೊರಬಂದ ನಿತೀಶ್‌ ರೆಡ್ಡಿ! ಕಾರಣವೇನು?

ಪ್ರಸ್ತುತ 2025-26ರ ಸಾಲಿನ ಸರಣಿ ಟ್ರೋಫಿ ಟೂರ್ನಿ ನಡೆಯುತ್ತಿದೆ. ಡಿಸೆಂಬರ್‌ 24 ರಂದು ವಿಜಯ್‌ ಹಝಾರೆ ಟ್ರೋಫಿ ಟೂರ್ನಿ ಆರಂಭವಾಗಲಿದೆ. ಇದಾದ ಬಳಿಕ ಭಾರತ ತಂಡ, ನ್ಯೂಜಿಲೆಂಡ್‌ ಎದುರು ಮೂರು ಪಂದ್ಯಗಳ ಏಕದಿನ ಸರಣಿಯನ್ನು ಆಡಲಿದೆ. ಜನವರಿ 11 ರಿಂದ 18ರ ವರೆಗೆ ಈ ಸರಣಿ ನಡೆಯಲಿದೆ.

"ಭಾರತ ಏಕದಿನ ತಂಡದ ಪರ ಆಡಬೇಕೆಂದರೆ,ನೀವು 50 ಓವರ್‌ಗಳ ದೇಶಿ ಕ್ರಿಕೆಟ್‌ನಲ್ಲಿ ಆಡಬೇಕೆಂದು ಬಿಸಿಸಿಐ ಹಾಗೂ ಟೀಮ್‌ ಮ್ಯಾನೇಜ್‌ಮೆಂಟ್‌ ವಿರಾಟ್‌ ಕೊಹ್ಲಿ ಮತ್ತು ರೋಹಿತ್‌ ಶರ್ಮಾಗೆ ತಿಳಿಸಿದ್ದಾರೆ. ಇದನ್ನು ಈ ಇಬ್ಬರೂ ಒಪ್ಪಿಕೊಂಡಿದ್ದಾರೆ. ಈ ಇಬ್ಬರೂ ಬ್ಯಾಟ್ಸ್‌ಮನ್‌ಗಳು ಎರಡು ಸ್ವರೂಪಕ್ಕೆ ಈಗಾಗಲೇ ವಿದಾಯ ಹೇಳಿದ್ದಾರೆ. ಹಾಗಾಗಿ ಅವರು ದೇಶಿ ಕ್ರಿಕೆಟ್‌ ಆಡುವ ಮೂಲಕ ಫಿಟ್ನೆಸ್‌ ಕಾಪಾಡಿಕೊಳ್ಳಬೇಕೆಂಬುದು ಇದರ ಉದ್ದೇಶ," ಎಂದು ಮೂಲಗಳು ತಿಳಿಸಿರುವುದನ್ನು ಇಂಡಿಯನ್‌ ಎಕ್ಸ್‌ಪ್ರೆಸ್‌ ವರದಿ ಮಾಡಿದೆ.

IND vs SA: ಕೋಲ್ಕತಾ ಟೆಸ್ಟ್‌ನಲ್ಲಿ ನಿತೀಶ್‌ ರೆಡ್ಡಿ ಸ್ಥಾನದಲ್ಲಿ ಆಡಲಿರುವ ಧ್ರುವ್‌ ಜುರೆಲ್!

50 ಓವರ್‌ಗಳ ವಿಜಯ್‌ ಹಝಾರೆ ಟ್ರೋಫಿ ಟೂರ್ನಿಯಲ್ಲಿ ಆಡಲು ಲಭ್ಯನಿದ್ದೇನೆಂದು ಮುಂಬೈ ಕ್ರಿಕೆಟ್‌ ಅಸೋಸಿಯೇಷನ್‌ಗೆ ರೋಹಿತ್‌ ಶರ್ಮಾ ತಿಳಿಸಿದ್ದಾರೆ. ಅಲ್ಲದೆ, 20 ಓವರ್‌ಗಳ ಸೈಯದ್‌ ಮುಷ್ತಾಕ್‌ ಅಲಿ ಟ್ರೋಫಿ ಟೂರ್ನಿಯಲ್ಲಿ ಅವಕಾಶ ಸಿಕ್ಕರೂ ಆಡಲು ಸಿದ್ದನಿದ್ದೇನೆಂದು ರೋಹಿತ್‌ ಶರ್ಮಾ, ತಮ್ಮ ದೇಶಿ ತಂಡದ ಆಡಳಿತ ಮಂಡಳಗೆ ತಿಳಿಸಿದ್ದಾರೆಂದು ವರದಿಯಾಗಿದೆ. ಟಿ20 ಟೂರ್ನಿ ನವೆಂಬರ್‌ 26 ರಂದು ಆರಂಭವಾಗಲಿದೆ.

ಆಸ್ಟ್ರೇಲಿಯಾ ವಿರುದ್ಧದ ಏಕದಿನ ಸರಣಿಯಲ್ಲಿ ರೋಹಿತ್ ಶರ್ಮಾ ಮತ್ತು ವಿರಾಟ್‌ ಕೊಹ್ಲಿ ಭಾರತಕ್ಕೆ ಮರಳಿದ್ದರು. ರೋಹಿತ್ ಶತಕ ಮತ್ತು ಅರ್ಧಶತಕ ಗಳಿಸುವ ಮೂಲಕ ಸರಣಿ ಶ್ರೇಷ್ಠ ಪ್ರಶಸ್ತಿಯನ್ನು ಪಡೆದಿದ್ದರು. ಈ ಸರಣಿಯ ಆರಂಭಿಕ ಎರಡು ಪಂದ್ಯಗಳಲ್ಲಿ ವಿರಾಟ್‌ ಕೊಹ್ಲಿ ಎರಡು ಬಾರಿ ಶೂನ್ಯಕ್ಕೆ ಔಟಾಗಿದ್ದರು. ಆದರೆ, ಸರಣಿಯ ಕೊನೆಯ ಪಂದ್ಯದಲ್ಲಿ ಅಜೇಯ 87 ರನ್ ಗಳಿಸಿ ರೋಹಿತ್‌ ಶರ್ಮಾ ಜೊತೆ 168 ರನ್‌ಗಳ ಜೊತೆಯಾಟವನ್ನು ಆಡಿದ್ದರು ಹಾಗೂ ಭಾರತ ತಂಡದ ಗೆಲುವಿಗೆ ನೆರವು ನೀಡಿದ್ದರು.