ನವದೆಹಲಿ: ಸೆಪ್ಟೆಂಬರ್-ಅಕ್ಟೋಬರ್‌ನಲ್ಲಿ ಭಾರತ ಎ ತಂಡವು ಆಸ್ಟ್ರೇಲಿಯಾ ಎ ತಂಡದ ವಿರುದ್ಧ ಎರಡು ಅನಧಿಕೃತ ಟೆಸ್ಟ್‌ಗಳು ಮತ್ತು ಮೂರು ಅನಧಿಕೃತ ಏಕದಿನ ಪಂದ್ಯಗಳನ್ನು ಆಡಲಿದೆ. ಅಜಿತ್ ಅಗರ್ಕರ್ ನೇತೃತ್ವದ ಆಯ್ಕೆ ಸಮಿತಿಯು ಈಗಾಗಲೇ ಟೆಸ್ಟ್ ತಂಡವನ್ನು ಘೋಷಿಸಿದ್ದು, ಅಭಿಮಾನಿಗಳು ವೈಟ್-ಬಾಲ್ ತಂಡದ ಘೋಷಣೆಗಾಗಿ ಕಾತರದಿಂದ ಕಾಯುತ್ತಿದ್ದಾರೆ.
ಟೆಸ್ಟ್' ತಂಡವನ್ನು ಶ್ರೇಯಸ್ ಅಯ್ಯರ್ ಮುನ್ನಡೆಸಲಿದ್ದಾರೆ. ಟೆಸ್ಟ್ ನಿವೃತ್ತಿಯ ಬಳಿಕ ವಿಶ್ರಾಂತಿಯಲ್ಲಿರುವ ರೋಹಿತ್ ಮತ್ತು ವಿರಾಟ್ ಕೊಹ್ಲಿ ಏಕದಿನ ಅಭ್ಯಾಸ ಪಂದ್ಯದಲ್ಲಿ ಕಣಕ್ಕಿಳಿಯಲಿದ್ದು, ತಂಡಕ್ಕೆ ರೋಹಿತ್ ಶರ್ಮಾ ನಾಯಕತ್ವ ವಹಿಸಲಿದ್ದಾರೆ ಎಂದು ವರದಿಯಾಗಿದೆ.
ರೋಹಿತ್ ಜತೆ ಋತುರಾಜ್ ಗಾಯಕ್ವಾಡ್ ತಂಡದಲ್ಲಿ ಆರಂಭಿಕ ಆಟಗಾರರಾಗಿ ಆಯ್ಕೆಯಾಗುವ ಸಾಧ್ಯತೆ ಇದೆ. ಅನಧಿಕೃತ ಟೆಸ್ಟ್ ತಂಡದಲ್ಲಿ ಗಾಯಕ್ವಾಡ್‌ಗೆ ಅವಕಾಶ ಸಿಕ್ಕಿರಲಿಲ್ಲ. ಆದರೆ ವೈಟ್-ಬಾಲ್ ತಂಡಕ್ಕೆ ಮರಳುವ ಸಾಧ್ಯತೆ ಇದೆ. ಇಶಾನ್ ಕಿಶನ್ ತಂಡದಲ್ಲಿ ಮೂರನೇ ಆರಂಭಿಕ ಆಟಗಾರನಾಗುವ ಸಾಧ್ಯತೆ ಇದೆ.
ಸರಣಿಗೆ ವಿರಾಟ್ ಕೊಹ್ಲಿ ತಂಡದಲ್ಲಿ ಸ್ಥಾನ ಪಡೆಯುವ ಸಾಧ್ಯತೆ ಹೆಚ್ಚು. ಅವರು 3ನೇ ಸ್ಥಾನದಲ್ಲಿ ಬ್ಯಾಟಿಂಗ್ ಮಾಡಲಿದ್ದಾರೆ. ರೆಡ್-ಬಾಲ್ ತಂಡವನ್ನು ಮುನ್ನಡೆಸಲಿರುವ ಶ್ರೇಯಸ್ ಅಯ್ಯರ್ ಕೂಡ ವೈಟ್-ಬಾಲ್ ತಂಡದಲ್ಲಿ ಸ್ಥಾನ ಪಡೆಯುವ ಸಾಧ್ಯತೆ ಇದೆ. ಮಧ್ಯಮ ಕ್ರಮಾಂಕದಲ್ಲಿ ರಜತ್ ಪಾಟಿದಾರ್, ದೇವದತ್ತ ಪಡಿಕ್ಕಲ್ ಮತ್ತು ಆಯುಷ್ ಬಡೋನಿ ಅವಕಾಶ ಪಡೆಯಬಹುದು.
2025 ರ ಚಾಂಪಿಯನ್ಸ್ ಟ್ರೋಫಿ ಫೈನಲ್ ನಂತರ ಅಂತಾರಾಷ್ಟ್ರೀಯ ಕ್ರಿಕೆಟ್ ಆಡದ ಮೊಹಮ್ಮದ್ ಶಮಿ ಅವರನ್ನು ಇತರ ವೇಗಿಗಳೊಂದಿಗೆ ತಂಡದಲ್ಲಿ ಸೇರಿಸಿಕೊಳ್ಳಬಹುದು. ಆರ್ ಸಾಯಿ ಕಿಶೋರ್ ಮತ್ತು ಯುಜ್ವೇಂದ್ರ ಚಾಹಲ್ ತಂಡದ ಇಬ್ಬರು ಸ್ಪಿನ್ನರ್‌ಗಳಾಗಿರಬಹುದು.
ಏಕದಿನ ತಂಡ
ರೋಹಿತ್ ಶರ್ಮಾ (ನಾಯಕ), ಋತುರಾಜ್ ಗಾಯಕ್ವಾಡ್, ವಿರಾಟ್ ಕೊಹ್ಲಿ, ರಜತ್ ಪಾಟಿದಾರ್, ಇಶಾನ್ ಕಿಶನ್, ಶ್ರೇಯಸ್ ಅಯ್ಯರ್, ದೇವದತ್ತ ಪಡಿಕ್ಕಲ್, ಆಯುಷ್ ಬಡೋನಿ, ಕೃನಾಲ್ ಪಾಂಡ್ಯ, ಮೊಹಮ್ಮದ್ ಶಮಿ, ಅನ್ಶುಲ್ ಕಾಂಬೋಜ್, ಖಲೀಲ್ ಅಹ್ಮದ್, ತುಷಾರ್ ದೇಶಪಾಂಡೆ, ಆರ್ ಸಾಯಿ ಕಿಶೋರ್, ಯುಜ್ವೇಂದ್ರ ಚಾಹಲ್.