ನವದೆಹಲಿ: ರೋಹಿತ್ ಶರ್ಮಾ (Rohit Sharma) ಭಾನುವಾರ (ಜುಲೈ 19) ಲಂಡನ್‌ನ ಐತಿಹಾಸಿಕ ಲಾರ್ಡ್ಸ್ ಕ್ರಿಕೆಟ್ ಕ್ರೀಡಾಂಗಣದಲ್ಲಿ ಭಾರತದ ಪರ ತಮ್ಮ ವೃತ್ತಿ ಜೀವನದ ಕೊನೆಯ ಪಂದ್ಯವನ್ನು ಆಡಲಿದ್ದಾರೆಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿ ತಿಳಸಿದೆ. 39ನೇ ವಯಸ್ಸಿನ ರೋಹಿತ್ ಶರ್ಮಾ ಅವರ 19 ವರ್ಷಗಳ ಅಂತಾರಾಷ್ಟ್ರೀಯ ಕ್ರಿಕೆಟ್ ಪಯಣ, ಪ್ರಸ್ತುತ ನಡೆಯುತ್ತಿರುವ ಏಕದಿನ ಸರಣಿಯ (IND vs ENG) ಮೂರನೇ ಪಂದ್ಯದಲ್ಲಿ ಅಂತ್ಯಗೊಳ್ಳುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.
ಭಾರತ ತಂಡದ ಮಾಜಿ ನಾಯಕನನ್ನು ಮುಂದುವರಿಸದೆ ತಂಡದ ಭವಿಷ್ಯದ ಯೋಜನೆಗಳತ್ತ ಸಾಗಲು ಆಯ್ಕೆ ಸಮಿತಿ ನಿರ್ಧರಿಸಿರುವ ಹಿನ್ನೆಲೆಯಲ್ಲಿ ಈ ಬೆಳವಣಿಗೆ ನಡೆದಿದೆ. ಸರಣಿ ಆರಂಭಕ್ಕೂ ಮುನ್ನ ಆಯ್ಕೆ ಸಮಿತಿಯ ಸದಸ್ಯರು ರೋಹಿತ್ ಹಾಗೂ ಕೋಚ್ ಗೌತಮ್ ಗಂಭೀರ್ ಅವರನ್ನು ಭೇಟಿಯಾಗಿ 2027ರ ವಿಶ್ವಕಪ್ ಟೂರ್ನಿಗಾಗಿ ತಮ್ಮ ಯೋಜನೆಗಳನ್ನು ವಿವರಿಸಿದ್ದಾರೆ ಎಂದು ತಿಳಿಸಲಾಗಿದೆ.
ಇದೀಗ ದಕ್ಷಿಣ ಆಫ್ರಿಕಾ, ಜಿಂಬಾಬ್ವೆ ಮತ್ತು ನಮೀಬಿಯಾದಲ್ಲಿ ಜಂಟಿಯಾಗಿ ನಡೆಯಲಿರುವ 50 ಓವರ್‌ಗಳ ಮಹತ್ವದ ಟೂರ್ನಿಗೆ ಇನ್ನೂ 15 ತಿಂಗಳು ಬಾಕಿ ಇರುವ ಹಿನ್ನೆಲೆಯಲ್ಲಿ, ತಂಡದಲ್ಲಿ ಯಶಸ್ವಿ ಜೈಸ್ವಾಲ್ ಅವರಿಗೆ ಹೆಚ್ಚಿನ ಅವಕಾಶಗಳನ್ನು ನೀಡುವತ್ತ ಗಮನ ಹರಿಸಲಾಗುವುದು ಎಂದು ಹೇಳಲಾಗುತ್ತಿದೆ.
IND vs ENG: ಎರಡನೇ ಪಂದ್ಯದಲ್ಲಿ ಅರ್ಧಶತಕ ಬಾರಿಸಿ ರಾಹುಲ್ ದ್ರಾವಿಡ್ ದಾಖಲೆ ಮುರಿದ ವಿರಾಟ್ ಕೊಹ್ಲಿ!
ರೋಹಿತ್ ಶರ್ಮಾ ನಿವೃತ್ತಿ ನಿರ್ಧಾರ
ರೋಹಿತ್ ಶರ್ಮಾ ನಿವೃತ್ತಿಯಾಗಬೇಕೇ ಅಥವಾ ಮುಂದುವರಿಯಬೇಕೇ ಎಂಬ ಅಂತಿಮ ನಿರ್ಧಾರವನ್ನು ಅವರಿಗೇ ಬಿಡಲಾಗಿದೆ. ಆದರೆ, ಇಂಗ್ಲೆಂಡ್ ವಿರುದ್ಧ ನಡೆಯುತ್ತಿರುವ ಮೂರು ಪಂದ್ಯಗಳ ಸರಣಿ ಮುಕ್ತಾಯಗೊಂಡ ಬಳಿಕ 39ರ ವಯಸ್ಸಿನ ಬಲಗೈ ಬ್ಯಾಟ್ಸ್‌ಮನ್ ಅನ್ನು ತಂಡದ ಆಯ್ಕೆಗೆ ಪರಿಗಣಿಸದಿರಲು ಆಯ್ಕೆ ಸಮಿತಿ ಈಗಾಗಲೇ ನಿರ್ಧರಿಸಿದೆ ಎನ್ನಲಾಗಿದೆ.
ಭಾರತದ ಪರ ರೋಹಿತ್ ಶರ್ಮಾರ ಕೊನೆಯ ಪಂದ್ಯ?
ರೋಹಿತ್ ಶರ್ಮಾ ಈಗಾಗಲೇ ಟಿ20 ಹಾಗೂ ಟೆಸ್ಟ್ ಕ್ರಿಕೆಟ್‌ಗೆ ವಿದಾಯ ಹೇಳಿದ್ದಾರೆ. ಅವರು ಏಕದಿನ ಕ್ರಿಕೆಟ್‌ಗೂ ನಿವೃತ್ತಿ ಘೋಷಿಸಲು ನಿರ್ಧರಿಸಿದರೆ, ಅದು ಅವರ ಅಂತಾರಾಷ್ಟ್ರೀಯ ಕ್ರಿಕೆಟ್ ವೃತ್ತಿಜೀವನದ ಅಂತ್ಯವಾಗಲಿದೆ. ಒಂದು ವೇಳೆ ಅವರು ಈ ಪಂದ್ಯದಲ್ಲಿ ಶತಕ ಅಥವಾ50ಕ್ಕಿಂತ ಹೆಚ್ಚಿನ ರನ್‌ಗಳನ್ನು ಗಳಿಸಿದರೆ, ಬಿಸಿಸಿಐನ ಈ ನಿರ್ಧಾರ ಬದಲಾಗಬಹುದು.
IND vs ENG: ʻಔಟಾದರೂ ಪರವಾಗಿಲ್ಲ, ಮುಕ್ತವಾಗಿ ಬ್ಯಾಟ್ ಮಾಡಿʼ-ರೋಹಿತ್ ಶರ್ಮಾಗೆ ಗಂಭೀರ್ ಸಲಹೆ!
ಮಾಜಿ ನಾಯಕ 2024ರ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಭಾರತ ತಂಡವನ್ನು ಚಾಂಪಿಯನ್ ಪಟ್ಟಕ್ಕೇರಿಸಿದ ಬಳಿಕ ಟಿ20ಐ ಕ್ರಿಕೆಟ್‌ಗೆ ವಿದಾಯ ಹೇಳಿದ್ದರು. ಬಳಿಕ ಕಳೆದ ವರ್ಷ ಇಂಗ್ಲೆಂಡ್ ಪ್ರವಾಸಕ್ಕೂ ಮುನ್ನ ಟೆಸ್ಟ್ ಕ್ರಿಕೆಟ್‌ನಿಂದಲೂ ನಿವೃತ್ತಿ ಘೋಷಿಸಿದ್ದರು.
ರೋಹಿತ್ ಶರ್ಮಾರ ಕಳಪೆ ಸರಣಿ
ಬ್ಯಾಟಿಂಗ್‌ನಲ್ಲಿ ರೋಹಿತ್ ಶರ್ಮಾ ಈವರೆಗೆ ನಿರೀಕ್ಷಿತ ಪ್ರದರ್ಶನ ನೀಡಲು ವಿಫಲರಾಗಿದ್ದಾರೆ. ಎಜ್‌ಬಾಸ್ಟನ್‌ನಲ್ಲಿ ನಡೆದ ಸರಣಿಯ ಮೊದಲ ಏಕದಿನ ಪಂದ್ಯದಲ್ಲಿ ಅವರು 21 ಎಸೆತಗಳಲ್ಲಿ ಕೇವಲ 11 ರನ್ ಗಳಿಸಿದ್ದರು. ಆ ಪಂದ್ಯದಲ್ಲಿ ಭಾರತ 6 ವಿಕೆಟ್‌ಗಳ ಭರ್ಜರಿ ಗೆಲುವು ಸಾಧಿಸಿತ್ತು. ಇನ್ನು ಕಾರ್ಡಿಫ್‌ನಲ್ಲಿ ನಡೆದ ಎರಡನೇ ಏಕದಿನ ಪಂದ್ಯದಲ್ಲೂ ರೋಹಿತ್ ಅವರ ಹೋರಾಟ ಮುಂದುವರಿಯಿತು. 48 ಎಸೆತಗಳನ್ನು ಎದುರಿಸಿದ ಅವರು ಕೇವಲ 26 ರನ್‌ಗಳಿಗೆ ಸೀಮಿತರಾದರು.
IND vs ENG: ಎರಡನೇ ಏಕದಿನ ಪಂದ್ಯದಿಂದ ಕೆಎಲ್ ರಾಹುಲ್ ಹೊರಗುಳಿಯಲು ಕಾರಣವೇನು?
2027ರ ವಿಶ್ವಕಪ್ ಕನಸು ಅಂತ್ಯವಾಗುತ್ತದೆಯೇ?
2011ರ ವಿಶ್ವಕಪ್ ಟೂರ್ನಿಯಲ್ಲಿ ಆಯ್ಕೆಯಾಗದ ಬಳಿಕ ಹಾಗೂ 2023ರ ವಿಶ್ವಕಪ್ ಟೂರ್ನಿಯಲ್ಲಿ ರೋಹಿತ್ ಶರ್ಮಾ 5 ಶತಕ ಸೇರಿದಂತೆ ಅದ್ಭುತ ಪ್ರದರ್ಶನವನ್ನು ತೋರಿದ್ದರು. ಆದರೆ, ಫೈನಲ್ ಪಂದ್ಯದಲ್ಲಿ ಆಸ್ಟ್ರೇಲಿಯಾ ಎದುರು ಭಾರತ ತಂಡ ಸೋಲು ಅನುಭವಿಸಿದ ಕಾರಣ, ರೋಹಿತ್ ಶರ್ಮಾ ಅವರ ಏಕದಿನ ವಿಶ್ವಕಪ್ ಗೆಲ್ಲುವ ಕನಸು ಭಗ್ನವಾಗಿತ್ತು. ಅನುಭವಿ ಬ್ಯಾಟರ್ ರೋಹಿತ್ ಶರ್ಮಾ, 2027ರ ವಿಶ್ವಕಪ್ ಟೂರ್ನಿಯಲ್ಲಿ ಆಡಿ ತಮ್ಮ ಟ್ರೋಫಿ 50 ಓವರ್‌ಗಳ ವಿಶ್ವಕಪ್ ಗೆಲ್ಲುವ ಕನಸನ್ನು ನನಸು ಮಾಡಿಕೊಳ್ಳಲು ಬಯಸುತ್ತಿದ್ದಾರೆ. ಆದರೆ, ಅವರು ಇತ್ತೀಚಿನ ಫಾರ್ಮ್‌ನಿಂದ ಅವರಿಗೆ ಭಾರಿ ಹಿನ್ನಡೆಯಾಗಿದೆ.