ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

IND vs AUS: ಭಾರತ ಏಕದಿನ ತಂಡಕ್ಕೂ ಶುಭಮನ್‌ ಗಿಲ್‌ ನಾಯಕ? ಎಕ್ಸ್‌ ಪೋಸ್ಟ್‌ ವೈರಲ್‌!

India's ODI Captaincy: ಭಾರತ ಹಾಗೂ ಇಂಗ್ಲೆಂಡ್‌ ತಂಡಗಳು ಪ್ರಸ್ತುತ ಐದು ಪಂದ್ಯಗಳ ಟೆಸ್ಟ್‌ ಸರಣಿಯಲ್ಲಿ ಕಾದಾಟ ನಡೆಸುತ್ತಿವೆ. ಶುಭಮನ್‌ ಗಿಲ್‌ ಭಾರತ ತಂಡವನ್ನು ಮುನ್ನಡೆಸುತ್ತಿದ್ದಾರೆ. ಇವರ ನಾಯಕತ್ವದಲ್ಲಿ ಭಾರತ ಉತ್ತಮ ಪ್ರದರ್ಶನವನ್ನು ತೋರುತ್ತಿದೆ. ಇದರ ನಡುವೆ ಭಾರತ ಏಕದಿನ ತಂಡದ ನಾಯಕತ್ವದ ಬಗ್ಗೆ ಕೆಲ ಬೆಳವಣಿಗೆಗಳು ನಡೆಯುತ್ತಿವೆ.

IND vs AUS: ಭಾರತ ಏಕದಿನ ತಂಡಕ್ಕೂ ಶುಭಮನ್‌ ಗಿಲ್‌ ನಾಯಕ?

ಭಾರತ ಏಕದಿನ ತಂಡಕ್ಕೆ ಶುಭಮನ್‌ ಗಿಲ್‌ ನಾಯಕನಾಗುವ ಸಾಧ್ಯತೆ ಇದೆ.

Profile Ramesh Kote Jul 11, 2025 5:08 PM

ನವದೆಹಲಿ: ಭಾರತ ಹಾಗೂ ಇಂಗ್ಲೆಂಡ್‌ ತಂಡಗಳು ಪ್ರಸ್ತುತ ಐದು ಪಂದ್ಯಗಳ ಟೆಸ್ಟ್‌ ಸರಣಿಯಲ್ಲಿ(IND vs ENG) ಕಾದಾಟ ನಡೆಸುತ್ತಿವೆ. ರೋಹಿತ್‌ ಶರ್ಮಾ ಟೆಸ್ಟ್‌ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ ಬಳಿಕ ಭಾರತ ಟೆಸ್ಟ್‌ ತಂಡಕ್ಕೆ ಶುಭಮನ್‌ ಗಿಲ್‌ (Shubman Gill) ಅವರನ್ನು ನಾಯಕರನ್ನಾಗಿ ನೇಮಿಸಲಾಗಿದೆ. ಅದರಂತೆ ಅವರು ಇಂಗ್ಲೆಂಡ್‌ ಪ್ರವಾಸದಲ್ಲಿ ಭಾರತ ತಂಡವನ್ನು ಅತ್ಯುತ್ತಮವಾಗಿ ಮುನ್ನಡೆಸುತ್ತಿದ್ದಾರೆ. ಅವರ ನಾಯಕತ್ವದಲ್ಲಿ ಮೊದಲನೇ ಟೆಸ್ಟ್‌ ಪಂದ್ಯದಲ್ಲಿ 5 ವಿಕೆಟ್‌ ಸೋಲು ಅನುಭವಿಸಿದ್ದ ಭಾರತ ತಂಡ, ನಂತರ ಎಜ್‌ಬಾಸ್ಟನ್‌ನಲ್ಲಿ ನಡೆದಿದ್ದ ಎರಡನೇ ಟೆಸ್ಟ್‌ ಪಂದ್ಯದಲ್ಲಿ 336 ರನ್‌ಗಳ ದೊಡ್ಡ ಅಂತರದಲ್ಲಿ ಗೆಲುವು ಪಡೆದಿತ್ತು. ಇದರ ನಡುವೆ ಇದೀಗ ಭಾರತ ಏಕದಿನ (India's ODI Captaincy) ತಂಡದ ನಾಯಕತ್ವದ ಬಗ್ಗೆ ಚರ್ಚೆಗಳು ನಡೆಯುತ್ತಿವೆ.

2024zರ ಐಸಿಸಿ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಭಾರತ ತಂಡ ಚಾಂಪಿಯನ್‌ ಆದ ಬಳಿಕ ರೋಹಿತ್‌ ಶರ್ಮಾ, ವಿರಾಟ್‌ ಕೊಹ್ಲಿ ಹಾಗೂ ರವೀಂದ್ರ ಜಡೇಜಾ ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್‌ಗೆ ವಿದಾಯ ಹೇಳಿದ್ದರು. ನಂತರ 2025ರ ಇಂಡಿಯನ್‌ ಪ್ರೀಮಿಯರ್‌ ಲೀಗ್‌ ಟೂರ್ನಿಯ ವೇಳೆ ರೋಹಿತ್‌ ಶರ್ಮಾ ಹಾಗೂ ವಿರಾಟ್‌ ಕೊಹ್ಲಿ ಟೆಸ್ಟ್‌ ಕ್ರಿಕೆಟ್‌ ವೃತ್ತಿ ಜೀವನಕ್ಕೆ ನಿವೃತ್ತಿ ಘೋಷಿಸಿದ್ದರು. ಈ ಹಿನ್ನೆಲೆಯಲ್ಲಿ ಭಾರತ ಟೆಸ್ಟ್‌ ತಂಡಕ್ಕೆ ನೂತನ ನಾಯಕರನ್ನಾಗಿ ಶುಭಮನ್‌ ಗಿಲ್‌ ಅವರನ್ನು ನೇಮಿಸಲಾಗಿತ್ತು. ಅದರಂತೆ ಗಿಲ್‌ ಇಂಗ್ಲೆಂಡ್‌ ಪ್ರವಾಸದಲ್ಲಿ ಉತ್ತಮವಾಗಿ ತಂಡವನ್ನು ಮುನ್ನಡೆಸುತ್ತಿದ್ದು ಎಲ್ಲರ ಗಮನವನ್ನು ಸೆಳೆದಿದ್ದಾರೆ.

IND vs ENG 3rd Test Day 2 Live: ಇಂಗ್ಲೆಂಡ್‌ಗೆ ಆರಂಭಿಕ ಆಘಾತ ನೀಡಿದ ಜಸ್‌ಪ್ರೀತ್‌ ಬುಮ್ರಾ!

ರೋಹಿತ್‌ ಶರ್ಮಾ ನಾಯಕತ್ವದಲ್ಲಿ ಭಾರತ ಟೆಸ್ಟ್‌ ಹಲವು ಸ್ಮರಣೀಯ ಗೆಲುವುಗಳನ್ನು ಪಡೆದಿದೆ. ಆದರೆ, ಇತ್ತೀಚೆಗೆ ರೋಹಿತ್‌ ಶರ್ಮಾ ಬ್ಯಾಟ್ಸ್‌ಮನ್‌ ಆಗಿ ಟೆಸ್ಟ್‌ ಕ್ರಿಕೆಟ್‌ನಲ್ಲಿ ವಿಫಲರಾಗಿದ್ದಾರೆ. ಆದರೆ, ಅವರು ಏಕದಿನ ಕ್ರಿಕೆಟ್‌ನಲ್ಲಿ ಅದ್ಭುತ ದಾಖಲೆಯನ್ನು ಹೊಂದಿದ್ದಾರೆ. ಇವರ ನಾಯಕತ್ವದಲ್ಲಿ ಭಾರತ ತಂಡ 2025ರ ಐಸಿಸಿ ಚಾಂಪಿಯನ್ಸ್‌ ಟ್ರೋಫಿಯನ್ನು ಗೆದ್ದಿತ್ತು. ಇದೀಘ 2027ರ ಐಸಿಸಿ ಏಕದಿನ ವಿಶ್ವಕಪ್‌ ಟೂರ್ನಿಯವರೆಗೂ ಭಾರತ ತಂಡದಲ್ಲಿ ಮುಂದುವರಿಯಲು ರೋಹಿತ್‌ ಶರ್ಮಾ ಹಾಗೂ ವಿರಾಟ್‌ ಕೊಹ್ಲಿ ನಿರ್ಧರಿಸಿದ್ದಾರೆ. ಆದರೆ, ಎಕ್ಸ್‌ ಖಾತೆಯಲ್ಲಿ ಪತ್ರಕರ್ತರೊಬ್ಬರು ಭಾರತ ಏಕದಿನ ತಂಡದ ನಾಯಕತ್ವಕ್ಕೆ ಸಂಬಂಧಿಸಿದಂತೆ ಪೋಸ್ಟ್‌ವೊಂದನ್ನು ಹಂಚಿಕೊಂಡಿದ್ದಾರೆ. ಈ ಪೋಸ್ಟ್‌ ಸಿಕ್ಕಾಪಟ್ಟೆ ವೈರಲ್‌ ಆಗಿದೆ.



ಎಕ್ಸ್‌ ಖಾತೆಯ ಪೋಸ್ಟ್‌ ವೈರಲ್‌

ರೋಹಿತ್‌ ಶರ್ಮಾ ತಮ್ಮ ನಾಯಕತ್ವದಲ್ಲಿ ಭಾರತ ಏಕದಿನ ತಂಡವನ್ನು ಯಶಸ್ವಿಯಾಗಿ ಮುನ್ನಡೆಸಿದ್ದಾರೆ ಹಾಗೂ ಅದ್ಭುತ ಅಂಕಿಅಂಶಗಳನ್ನು ಹೊಂದಿದ್ದಾರೆ. ಹಾಗಾಗಿ ಭಾರತ ಏಕದಿನ ತಂಡದ ನಾಯಕನಾಗಿ ರೋಹಿತ್‌ ಶರ್ಮಾ ಮುಂದುವರಿಯಲಿದ್ದಾರೆಂದು ಹಲವರು ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ. ಆದರೆ, ಖ್ಯಾತ ಕ್ರೀಡಾ ಪತ್ರಕರ್ತರೊಬ್ಬರು ಭಾರತ ಏಕದಿನ ತಂಡಕ್ಕೂ ಶುಭಮನ್‌ ಗಿಲ್‌ ನಾಯಕರಾಗಲಿದ್ದಾರೆಂದು ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಹಾಕಿದ್ದಾರೆ. ಆ ಮೂಲಕ ಭಾರತ ಏಕದಿನ ತಂಡದ ನಾಯಕನಾಗಿ ರೋಹಿತ್‌ ಶರ್ಮಾರ ಸ್ಥಾನವನ್ನು ಗಿಲ್‌ ತುಂಬಲಿದ್ದಾರೆಂದು ಹೇಳಲಾಗುತ್ತಿದೆ. ಇವರ ಈ ಪೋಸ್ಟ್‌ ಸೋಶಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿದೆ. ಇದಕ್ಕೆ ಪರ ಹಾಗೂ ವಿರೋಧ ಪ್ರತಿಕ್ರಿಯೆಗಳು ವ್ಯಕ್ತವಾಗಿವೆ.

IND vs ENG: ಭಾರತದ ವಿರುದ್ಧದ ಟೆಸ್ಟ್‌ ಕ್ರಿಕೆಟ್‌ನಲ್ಲಿ ನೂತನ ಮೈಲುಗಲ್ಲು ತಲುಪಿದ ಜೋ ರೂಟ್‌!

ವಿರಾಟ್‌ ಕೊಹ್ಲಿ ಹಾಗೂ ರೋಹಿತ್‌ ಶರ್ಮ ಅವರು ಬಾಂಗ್ಲಾದೇಶ ವಿರುದ್ಧದ ಏಕದಿನ ಸರಣಿಗೆ ಮರಳಬೇಕಾಗಿತ್ತು. ಆದರೆ, ಉಭಯ ರಾಷ್ಟ್ರಗಳ ನಡುವಣ ರಾಜಕೀಯ ಕಾರಣಗಳಿಂದ ಈ ಏಕದಿನ ಸರಣಿಯನ್ನು ಎರಡೂ ಕ್ರಿಕೆಟ್‌ ಮಂಡಳಿಗಳು ಒಪ್ಪಿಗೆ ಮೆರೆಗೆ ಮುಂದಿನ ವರ್ಷಕ್ಕೆ ನಿಗದಿಪಡಿಸಲಾಗಿದೆ. ಆದರೆ, ನವೆಂಬರ್‌ನಲ್ಲಿ ಭಾರತ ತಂಡ, ಆಸ್ಟ್ರೇಲಿಯಾ ಪ್ರವಾಸವನ್ನು ಕೈಗೊಳ್ಳಲಿದೆ. ಈ ವೇಳೆ ಉಭಯ ತಂಡಗಳು ಏಕದಿನ ಸರಣಿಯನ್ನು ಆಡಲಿವೆ. ಈ ಸರಣಿಯಲ್ಲಿ ವಿರಾಟ್‌ ಕೊಹ್ಲಿ ಹಾಗೂ ರೋಹಿತ್‌ ಶರ್ಮಾ ಆಡಲಿದ್ದಾರೆ. ಆದರೆ, ಈ ಸರಣಿಯಲ್ಲಿ ಭಾರತ ತಂಡವನ್ನು ಶುಭಮನ್‌ ಗಿಲ್‌ ಮುನ್ನಡೆಸಬಹುದು ಎಂದು ಚರ್ಚೆಗಳು ನಡೆಯುತ್ತಿವೆ.