ಬಿಗ್​ಬಾಸ್ ಫೋಟೋ ಗ್ಯಾಲರಿ ವಿಶ್ವವಾಣಿ ಪ್ರಾಪರ್ಟಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

ಐಸಿಸಿ ಒಡಿಐ ಬ್ಯಾಟಿಂಗ್‌ ಶ್ರೇಯಾಂಕದಲ್ಲಿ ಅಗ್ರ 5ರೊಳಗೆ ಪ್ರವೇಶಿಸಿದ ಕಿಂಗ್‌ ವಿರಾಟ್‌ ಕೊಹ್ಲಿ!

ಬಾಬರ್ ಆಝಮ್ ಅವರ ವೈಫಲ್ಯದಿಂದ ವಿರಾಟ್ ಕೊಹ್ಲಿ ಐಸಿಸಿ ಒಡಿಐ ಶ್ರೇಯಾಂಕದಲ್ಲಿ ಲಾಭ ಪಡೆದಿದ್ದಾರೆ. ಕಳೆದ ವಾರ ದಕ್ಷಿಣ ಆಫ್ರಿಕಾ ಮತ್ತು ಶ್ರೀಲಂಕಾ ವಿರುದ್ಧದ ಏಕದಿನ ಸರಣಿಯಲ್ಲಿ ಬಾಬರ್‌ ವಿಫಲರಾಗಿದ್ದರು. ಈ ಹಿನ್ನೆಲೆಯಲ್ಲಿ ಕೊಹ್ಲಿ ಒಂದೇ ಒಂದು ಪಂದ್ಯವನ್ನು ಆಡದೆ ಐದನೇ ಸ್ಥಾನಕ್ಕೆ ಪ್ರವೇಶ ಮಾಡಿದ್ದಾರೆ.

ಐಸಿಸಿ ಒಡಿಐ ಶ್ರೇಯಾಂಕದಲ್ಲಿ ಅಗ್ರ 5 ರೊಳಗೆ ಪ್ರವೇಶಿಸಿದ ವಿರಾಟ್‌ ಕೊಹ್ಲಿ!

ಐಸಿಸಿ ಒಡಿಐ ಶ್ರೇಯಾಂಕದಲ್ಲಿ ವಿರಾಟ್‌ ಕೊಹ್ಲಿ ಐದನೇ ಸ್ಥಾನಕ್ಕೇರಿದ್ದಾರೆ. -

Profile
Ramesh Kote Nov 12, 2025 7:58 PM

ನವದೆಹಲಿ: ಐಸಿಸಿ ಬಿಡುಗಡೆ ಮಾಡಿರುವ ಇತ್ತೀಚಿನ ಏಕದಿನ ಶ್ರೇಯಾಂಕದಲ್ಲಿ (ICC ODI Rankings) ವಿರಾಟ್ ಕೊಹ್ಲಿ (Virat Kohli) ಒಂದೇ ಒಂದು ಪಂದ್ಯವನ್ನೂ ಆಡದೆ ಐದನೇ ಸ್ಥಾನಕ್ಕೆ ಲಗ್ಗೆ ಇಟ್ಟಿದ್ದಾರೆ. ಪಾಕಿಸ್ತಾನದ ಸ್ಟಾರ್ ಬ್ಯಾಟ್ಸ್‌ಮನ್ ಬಾಬರ್ ಆಝಮ್ (Babar Azam) ಬ್ಯಾಟಿಂಗ್ ವೈಫಲ್ಯ ಕೊಹ್ಲಿಗೆ ಮತ್ತೆ ಅಗ್ರ ಐದನೇ ಸ್ಥಾನಕ್ಕೆ ಮರಳಲು ಅವಕಾಶ ಮಾಡಿಕೊಟ್ಟಿದೆ. ಕಳೆದ ವಾರ ದಕ್ಷಿಣ ಆಫ್ರಿಕಾ ಮತ್ತು ಶ್ರೀಲಂಕಾ ವಿರುದ್ಧ ಆಡಿದ ಮೂರು ಏಕದಿನ ಇನಿಂಗ್ಸ್‌ಗಳಲ್ಲಿ ಬಾಬರ್‌ ಆಝಮ್ ಒಮ್ಮೆಯೂ 30ರ ಗಡಿ ದಾಟಲು ಸಾಧ್ಯವಾಗಿರಲಿಲ್ಲ. ಹಾಗಾಗಿ ವಿರಾಟ್ ಕೊಹ್ಲಿ ಇದರ ಲಾಭ ಪಡೆದಿದ್ದಾರೆ. ಬಾಬರ್ ಆಝಮ್‌ ಐದನೇ ಸ್ಥಾನದಿಂದ ಏಳನೇ ಸ್ಥಾನಕ್ಕೆ ಕುಸಿದಿದ್ದಾರೆ, ಆದರೆ ಕೊಹ್ಲಿ 725 ರೇಟಿಂಗ್ ಪಾಯಿಂಟ್‌ಗಳೊಂದಿಗೆ ಆರನೇ ಸ್ಥಾನದಿಂದ ಐದನೇ ಸ್ಥಾನಕ್ಕೆ ಒಂದು ಸ್ಥಾನ ಜಿಗಿದಿದ್ದಾರೆ.

ಭಾರತೀಯ ಬ್ಯಾಟ್ಸ್‌ಮನ್‌ಗಳು ಅಗ್ರ ಐದು ಸ್ಥಾನಗಳಲ್ಲಿ ಪ್ರಾಬಲ್ಯ ಹೊಂದಿದ್ದಾರೆ. ರೋಹಿತ್ ಶರ್ಮಾ ಅಗ್ರಸ್ಥಾನದಲ್ಲಿ ಮುಂದುವರಿದಿದ್ದಾರೆ. ರೋಹಿತ್‌ ಶರ್ಮಾ ಅವರು ಆಸ್ಟ್ರೇಲಿಯಾ ಏಕದಿನ ಸರಣಿಯಲ್ಲಿ ಒಂದು ಅರ್ಧಶತಕ ಹಾಗೂ ಒಂದು ಶತಕವನ್ನುಬಾರಿಸಿದ್ದರು. ಇನ್ನು ನೂತನ ನಾಯಕ ಶುಭಮನ್ ಗಿಲ್ ನಾಲ್ಕನೇ ಸ್ಥಾನದಲ್ಲಿದ್ದಾರೆ ಮತ್ತು ಕೊಹ್ಲಿ ಐದನೇ ಸ್ಥಾನದಲ್ಲಿದ್ದಾರೆ. ನ್ಯೂಜಿಲೆಂಡ್‌ನ ಡ್ಯಾರಿಲ್ ಮಿಚೆಲ್ ಎರಡನೇ ಸ್ಥಾನದಲ್ಲಿದ್ದಾರೆ.

IND vs SA: ಕೋಲ್ಕತಾ ಟೆಸ್ಟ್‌ನಲ್ಲಿ ನಿತೀಶ್‌ ರೆಡ್ಡಿ ಸ್ಥಾನದಲ್ಲಿ ಆಡಲಿರುವ ಧ್ರುವ್‌ ಜುರೆಲ್!

ಬಾಬರ್‌ ಆಝಮ್‌ ಕಳಪೆ ಫಾರ್ಮ್‌

ಪಾಕಿಸ್ತಾನದ ಮಾಜಿ ನಾಯಕ ಬಾಬರ್ ಆಝಮ್ ಶ್ರೀಲಂಕಾ ವಿರುದ್ಧ 29 ರನ್‌, ದಕ್ಷಿಣ ಆಫ್ರಿಕಾ ವಿರುದ್ಧ 27 ಮತ್ತು ಇತರೆ ಪಂದ್ಯಗಳಲ್ಲಿಯೂ ವಿಫಲರಾಗಿದ್ದರು. ಅವರು ಒಮ್ಮೆಯೂ 30 ರನ್ ಗಳಿಸಲು ಸಾಧ್ಯವಾಗಿರಲಿಲ್ಲ. ಇದರ ಪರಿಣಾಮ 19 ರೇಟಿಂಗ್ ಪಾಯಿಂಟ್‌ಗಳನ್ನು ಕಳೆದುಕೊಂಡಿದ್ದಾರೆ. ಅವರು ಈಗ 709 ಪಾಯಿಂಟ್‌ಗಳನ್ನು ಹೊಂದಿದ್ದಾರೆ ಮತ್ತು ಶ್ರೇಯಾಂಕದ ಅಗ್ರ 10 ರಲ್ಲಿ ಉಳಿಯಬೇಕೆಂದರೆ ಅವರು, ಮುಂದಿನ ಪಂದ್ಯಗಳಲ್ಲಿ ಉತ್ತಮ ಪ್ರದರ್ಶನ ನೀಡಬೇಕಾಗುತ್ತದೆ.

ದಕ್ಷಿಣ ಆಫ್ರಿಕಾ ಸರಣಿಯಲ್ಲಿ ಕಣಕ್ಕೆ ಇಳಿಯಲಿರುವ ಕೊಹ್ಲಿ

ವಿರಾಟ್ ಕೊಹ್ಲಿ ಬಗ್ಗೆ ಹೇಳುವುದಾದರೆ, ನವೆಂಬರ್ 30 ರಂದು ದಕ್ಷಿಣ ಆಫ್ರಿಕಾ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ ಭಾರತ ತಂಡಕ್ಕೆ ಮರಳಲಿದ್ದಾರೆ. ವಿರಾಟ್ ಈ ಹಿಂದೆ ಸುಮಾರು ಏಳು ತಿಂಗಳ ನಂತರ ಆಸ್ಟ್ರೇಲಿಯಾದಲ್ಲಿ ಏಕದಿನ ಸರಣಿಯನ್ನು ಆಡಿದ್ದರು. ದಕ್ಷಿಣ ಆಫ್ರಿಕಾ ವಿರುದ್ಧ ಕೊಹ್ಲಿ ಉತ್ತಮ ಪ್ರದರ್ಶನ ನೀಡುವ ನಿರೀಕ್ಷೆಯಿದೆ. ಅವರು ತವರಿನಲ್ಲಿ ದೊಡ್ಡ ಸ್ಕೋರ್ ಗಳಿಸಲು ಎದುರು ನೋಡುತ್ತಿದ್ದಾರೆ.

IND vs SA: ಭಾರತ-ದಕ್ಷಿಣ ಆಫ್ರಿಕಾ ಮೊದಲ ಟೆಸ್ಟ್‌ಗೆ ಸ್ಪಿನ್‌ ಪಿಚ್

ರೋಹಿತ್‌ ಶರ್ಮಾಗೆ ಅಗ್ರ ಸ್ಥಾನ

ರೋಹಿತ್ 781 ರೇಟಿಂಗ್ ಪಾಯಿಂಟ್‌ಗಳೊಂದಿಗೆ ಏಕದಿನ ಶ್ರೇಯಾಂಕದಲ್ಲಿ ಅಗ್ರಸ್ಥಾನದಲ್ಲಿದ್ದಾರೆ. ರೋಹಿತ್ ಶರ್ಮಾ ಎರಡು ವಾರಗಳಿಗಿಂತ ಹೆಚ್ಚು ಕಾಲ ಆಡದಿದ್ದರೂ 781 ರೇಟಿಂಗ್ ಪಾಯಿಂಟ್‌ಗಳೊಂದಿಗೆ ಏಕದಿನ ಶ್ರೇಯಾಂಕದಲ್ಲಿ ಅಗ್ರಸ್ಥಾನದಲ್ಲಿದ್ದಾರೆ. ಕಳೆದ ತಿಂಗಳು ಆಸ್ಟ್ರೇಲಿಯಾದಲ್ಲಿ ನಡೆದ ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ ರೋಹಿತ್ ಅದ್ಭುತ ಪ್ರದರ್ಶನ ನೀಡಿದ್ದರು ಮತ್ತು ಸರಣಿಯ ಆಟಗಾರ ಎಂದು ಹೆಸರಿಸಲ್ಪಟ್ಟರು. ಇದರ ನಂತರ, ನವೆಂಬರ್ 30 ರಿಂದ ಪ್ರಾರಂಭವಾಗುವ ದಕ್ಷಿಣ ಆಫ್ರಿಕಾ ವಿರುದ್ಧದ ಮೂರು ಪಂದ್ಯಗಳ ತವರಿನಲ್ಲಿ ನಡೆಯಲಿರುವ ಏಕದಿನ ಸರಣಿಯಲ್ಲಿ ರೋಹಿತ್, ವಿರಾಟ್ ಕೊಹ್ಲಿ ಜೊತೆ ಸೇರಿಕೊಳ್ಳಲಿದ್ದಾರೆ.