ಫೋಟೋ ಗ್ಯಾಲರಿ ಬಜೆಟ್​ T20 ವಿಶ್ವಕಪ್​ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ವಿದೇಶ ಕ್ರೈಂ ಧಾರ್ಮಿಕ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

RCB IPL 2026 Schedule: ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡದ ವೇಳಾಪಟ್ಟಿ!

2026ರ ಇಂಡಿಯನ್‌ ಪ್ರೀಮಿಯರ್‌ ಲೀಗ್‌ ಟೂರ್ನಿಯ ಮೊದಲ ಹಂತದ ಪಂದ್ಯಗಳಿಗೆ ಬಿಸಿಸಿಐ ಮಾರ್ಚ್‌ 11 ರಂದು ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದೆ. ಮಾರ್ಚ್‌ 28 ರಿಂದ ಏಪ್ರಿಲ್‌ 12ರವರೆಗೆ ನಡೆಯುವ 20 ಪಂದ್ಯಗಳ 10 ವಿಭಿನ್ನ ಸ್ಥಳಗಳಲ್ಲಿ ನಡೆಯಲಿವೆ. ಅಂದ ಹಾಗೆ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡದ ಮೊದಲ ಹಂತದ ಪಂದ್ಯಗಳ ವೇಳಾಪಟ್ಟಿಯನ್ನು ಇಲ್ಲಿ ವಿವರಿಸಲಾಗಿದೆ.

IPL 2026: ಆರ್‌ಸಿಬಿ ತಂಡದ ಮೊದಲ ಹಂತದ ವೇಳಾಪಟ್ಟಿ ಇಲ್ಲಿದೆ!

ಆರ್‌ಸಿಬಿ ತಂಡದ 2026ರ ಐಪಿಎಲ್‌ ವೇಳಾಪಟ್ಟಿ. -

Profile
Ramesh Kote Mar 11, 2026 8:43 PM

ಬೆಂಗಳೂರು: ಬಹುನಿರೀಕ್ಷಿತ 2026ರ ಇಂಡಿಯನ್‌ ಪ್ರೀಮಿಯರ್‌ ಲೀಗ್‌ (IPL 2026) ಟಿ20 ಕ್ರಿಕೆಟ್‌ ಟೂರ್ನಿಯ ಮೊದಲ ಹಂತದ ವೇಳಾಪಟ್ಟಿಯನ್ನು ಮಾರ್ಚ್‌ 11 ರಂದು ಬಿಸಿಸಿಐ ಪ್ರಕಟಿಸಿದೆ. ಮಾರ್ಚ್‌ 28 ರಂದು ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುವ ಉದ್ಘಾಟನಾ ಪಂದ್ಯದಲ್ಲಿ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ಹಾಗೂ ಸನ್‌ರೈಸರ್ಸ್‌ ಹೈದರಾಬಾದ್‌ ತಂಡಗಳು (RCB vs SRH) ಕಾದಾಟ ನಡೆಸುವ ಮೂಲಕ ಹತ್ತೊಂಬತ್ತನೇ ಆವೃತ್ತಿಯು ಅಧಿಕೃತವಾಗಿ ಆರಂಭವಾಗಲಿದೆ. ಐದು ರಾಜ್ಯಗಳಲ್ಲಿ ವಿಧಾನಸಭಾ ಚುನಾವಣೆ ಇರುವ ಕಾರಣ ಏಪ್ರಿಲ್‌ 12ರವರೆಗೆ ಮಾತ್ರ ವೇಳಾಪಟ್ಟಿಯನ್ನು ಬಿಸಿಸಿಐ ಬಿಡುಗಡೆಗೊಳಿಸಿದೆ. ಕೇರಳ, ಪಶ್ಚಿಮ ಬಂಗಾಳ, ಅಸ್ಸಾಂ, ತಮಿಳುನಾಡು ಹಾಗೂ ಪುದುಚೇರಿ ವಿಧಾನಸಭಾ ಚುನಾವಣೆಗಳಿಗೆ ದಿನಾಂಕ ಪ್ರಕಟಿಸಿದ ಬಳಿಕ ಟೂರ್ನಿಯ ಇನ್ನುಳಿದ ಭಾಗದ ವೇಳಾಪಟ್ಟಿಯನ್ನು ಪ್ರಕಟಿಸಲಾಗುವುದು ಎಂದು ಬಿಸಿಸಿಐ ಕಾರ್ಯದರ್ಶಿ ದೇವಜಿತ್‌ ಸೈಕಿಯಾ ತನ್ನ ಅಧಿಕೃತ ಹೇಳಿಕೆಯಲ್ಲಿ ತಿಳಿಸಿದ್ದಾರೆ.

2025ರ ಐಪಿಎಲ್‌ ಟೂರ್ನಿಯಲ್ಲಿನ ವಿಜಯೋತ್ಸವವನ್ನು ಸಂಭ್ರಮಿಸುವ ವೇಳೆ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ 11 ಮಂದಿ ಆರ್‌ಸಿಬಿ ಅಭಿಮಾನಿಗಳು ಮೃತಪಟ್ಟಿದ್ದರು. ಹಾಗಾಗಿ ಈ ಅಂಗಣದಲ್ಲಿ ಪಂದ್ಯಗಳನ್ನು ನಡೆಸುವ ಬಗ್ಗೆ ಕರ್ನಾಟಕ ಸರ್ಕಾರ ಅನುಮತಿ ನೀಡುವುದು ಬಾಕಿ ಇದೆ. ರಾಜ್ಯ ಸರ್ಕಾರದ ಸಮಿತಿಯು ಮಾರ್ಚ್‌ 13 ರಂದು ಮತ್ತೊಮ್ಮೆ ಪರಿಶೀಲನೆ ನಡೆಸಿ ತನ್ನ ಅಂತಿಮ ನಿರ್ಧಾರವನ್ನು ಪ್ರಕಟಿಸಲಿದೆ. ಇದರ ಹೊರತಾಗಿಯೂ ಸನ್‌ರೈಸರ್ಸ್‌ ಹೈದರಾಬಾದ್‌ ಹಾಗೂ ಚೆನ್ನೈ ಸೂಪರ್‌ ಕಿಂಗ್ಸ್‌ ವಿರುದ್ಧದ ಆರ್‌ಸಿಬಿಯ ಮೊದಲ ಹಂತದ ಆರಂಭಿಕ ಎರಡು ಪಂದ್ಯಗಳನ್ನು ಈ ಅಂಗಣದಲ್ಲಿ ನಡೆಸಲು ವೇಳಾಪಟ್ಟಿ ಸಿದ್ದವಾಗಿದೆ.

IPL 2026 Schedule: ಐಪಿಎಲ್‌ 19ನೇ ಆವೃತ್ತಿಯ ಮೊದಲ ಅವಧಿಗೆ ವೇಳಾಪಟ್ಟಿ ಪ್ರಕಟ, ಮೊದಲ ಪಂದ್ಯ RCB vs SRH!

ಆರ್‌ಸಿಬಿ ತಂಡದ ಮೊದಲ ಹಂತದ ಪಂದ್ಯಗಳ ವೇಳಾಪಟ್ಟಿ

ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು vs ಸನ್‌ರೈಸರ್ಸ್‌ ಹೈದರಾಬಾದ್‌ -ಮಾರ್ಚ್‌ 28, ಸಂಜೆ 7:30ಕ್ಕೆ - ಎಂ ಚಿನ್ನಸ್ವಾಮಿ ಕ್ರೀಡಾಂಗಣ, ಬೆಂಗಳೂರು

ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು vs ಚೆನ್ನೈ ಸೂಪರ್‌ ಕಿಂಗ್ಸ್‌- ಏಪ್ರಿಲ್‌ 5, ಸಂಜೆ 07: 30ಕ್ಕೆ - ಎಂ ಚಿನ್ನಸ್ವಾಮಿ ಕ್ರೀಡಾಂಗಣ, ಬೆಂಗಳೂರು

ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು vs ರಾಜಸ್ಥಾನ್‌ ರಾಯಲ್ಸ್‌- ಏಪ್ರಿಲ್‌ 10, ಸಂಜೆ 7:30ಕ್ಕ-ಬರ್ಸಪರ ಸ್ಟೇಡಿಯಂ, ಗುವಾಹಟಿ

ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು vs ಮುಂಬೈ ಇಂಡಿಯನ್ಸ್‌ -ಏಪ್ರಿಲ್‌ 12, ಸಂಜೆ07: 30ಕ್ಕೆ- ವಾಂಖೆಡೆ ಕ್ರೀಡಾಂಗಣ, ಮುಂಬೈ



2026ರ ಐಪಿಎಲ್‌ಗೆ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡ

ರಜತ್ ಪಾಟಿದಾರ್ (ನಾಯಕ), ವಿರಾಟ್ ಕೊಹ್ಲಿ, ದೇವದತ್ ಪಡಿಕ್ಕಲ್, ಫಿಲ್ ಸಾಲ್ಟ್, ಜಿತೇಶ್ ಶರ್ಮಾ, ಕೃಣಾಲ್ ಪಾಂಡ್ಯ, ಸ್ವಪ್ನಿಲ್ ಸಿಂಗ್, ಟಿಮ್ ಡೇವಿಡ್, ರೊಮ್ಯಾರಿಯೋ ಶೆಫರ್ಡ್, ಜಾಕೋಬ್ ಬೆಥೆಲ್, ಜಾಶ್ ಹೇಝಲ್‌ವುಡ್, ಯಶ್ ದಯಾಳ್‌, ಭುವನೇಶ್ವರ್ ಕುಮಾರ್, ನುವಾನ್ ತುಷಾರ, ರಸಿಖ್ ಸಲಾಮ್‌, ಅಭಿನಂದನ್ ಸಿಂಗ್‌, ಸುಯೇಶ್‌ ಶರ್ಮಾ, ವೆಂಕಟೇಶ್‌ ಅಯ್ಯರ್‌, ಮಂಗೇಶ ಯಾದವ್‌, ಜಾಕೋಬ್ ಡಫಿ, ಸಾತ್ವಿಕ್ ದೇಸ್ವಾಲ್, ಜಾರ್ಡಾನ್ ಕಾಕ್ಸ್, ವಿಹಾನ್ ಮಲ್ಹೋತ್ರಾ, ಕಾನಿಷ್ಕ್ ಚೌವ್ಹಾಣ್‌, ವಿಕ್ಕಿ ಓಸ್ತ್ವಾಲ್