ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

RCB vs SRH: ಟಾಸ್‌ ಗೆದ್ದು ಬೌಲಿಂಗ್‌ ಆಯ್ದುಕೊಂಡ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು!

RCB vs SRH: ಲಖನೌದ ಏಕನಾ ಕ್ರಿಕೆಟ್‌ ಕ್ರೀಡಾಂಗಣದಲ್ಲಿ ಇದೀಗ ನಡೆಯುತ್ತಿರುವ 2025ರ ಇಂಡಿಯನ್‌ ಪ್ರೀಮಿಯರ್‌ ಲೀಗ್‌ ಟೂರ್ನಿಯಲ್ಲಿ 65ನೇ ಪಂದ್ಯದಲ್ಲಿ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ಹಾಗೂ ಸನ್‌ರೈಸರ್ಸ್‌ ಹೈದರಾಬಾದ್‌ ತಂಡಗಳು ಕಾದಾಟ ನಡೆಸುತ್ತಿವೆ. ಈ ಪಂದ್ಯದಲ್ಲಿ ಟಾಸ್‌ ಗೆದ್ದ ಆರ್‌ಸಿಬಿ ನಾಯಕ ಜಿತೇಶ್‌ ಶರ್ಮಾ ಬೌಲಿಂಗ್‌ ಆಯ್ದುಕೊಂಡಿದ್ದಾರೆ.

ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು-ಸನ್‌ರೈಸರ್ಸ್‌ ಹೈದರಾಬಾದ್‌

ಲಖನೌ: ಇಲ್ಲಿನ ಏಕನಾ ಕ್ರಿಕೆಟ್‌ ಕ್ರೀಡಾಂಗಣದಲ್ಲಿ ಇದೀಗ ನಡೆಯುತ್ತಿರುವ 2025ರ ಇಂಡಿಯನ್‌ ಪ್ರೀಮಿಯರ್‌ ಲೀಗ್‌ (IPL 2025) ಟೂರ್ನಿಯ 65ನೇ ಪಂದ್ಯದಲ್ಲಿ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ಹಾಗೂ ಸನ್‌ರೈಸರ್ಸ್‌ ಹೈದಾರಾಬಾದ್‌ ತಂಡಗಳು (RCB vs SRH) ಕಾದಾಟ ನಡೆಸುತ್ತಿವೆ. ಈ ಪಂದ್ಯದಲ್ಲಿ ಟಾಸ್‌ ಗೆದ್ದ ಆರ್‌ಸಿಬಿ ಹಂಗಾಮಿ ನಾಯಕ ಜಿತೇಶ್‌ ಶರ್ಮಾ (Jitesh Sharma) ಮೊದಲ ಬೌಲಿಂಗ್‌ ಆಯ್ಕೆ ಮಾಡಿಕೊಂಡಿದ್ದಾರೆ. ಆ ಮೂಲಕ ಎದುರಾಳಿ ಎಸ್‌ಆರ್‌ಎಚ್‌ ತಂಡವನ್ನು ಕಡಿಮೆ ಮೊತ್ತಕ್ಕೆ ಕಟ್ಟಿ ಹಾಕುವ ಯೋಜನೆಯನ್ನು ಆರ್‌ಸಿಬಿ ರೂಪಿಸಿಕೊಂಡಿದೆ. ಅಂದ ಹಾಗೆ ಬೆರಳು ಗಾಯದಿಂದ ಇನ್ನೂ ಚೇತರಿಸಿಕೊಳ್ಳುವಲ್ಲಿ ವಿಫಲರಾಗಿರುವ ರಜತ್‌ ಪಾಟಿದಾರ್‌ ಈ ಪಂದ್ಯಕ್ಕೆ ಅಲಭ್ಯರಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಇವರ ಸ್ಥಾನದಲ್ಲಿ ವಿಕೆಟ್‌ ಕೀಪರ್‌ ಜಿತೇಶ್‌ಶರ್ಮಾ ತಂಡವನ್ನು ಮುನ್ನಡೆಸುತ್ತಿದ್ದಾರೆ.

ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡದ ಪ್ಲೇಯಿಂಗ್‌ XIನಲ್ಲಿ ಎರಡು ಬದಲಾವಣೆಯನ್ನು ತರಲಾಗಿದೆ. ಗಾಯದಿಂದ ಹೊರ ನಡೆದಿರುವ ದೇವದತ್‌ ಪಡಿಕ್ಕಲ್‌ ಅವರ ಸ್ಥಾನಕ್ಕೆ ಮತ್ತೊರ್ವ ಕನ್ನಡಿಗ ಮಯಾಂಕ್‌ ಅಗರ್ವಾಲ್‌ ಬಂದಿದ್ದಾರೆ. ಇನ್ನು ಕಳೆದ ಪಂದ್ಯದಲ್ಲಿ ಆಡಿದ್ದ ಜಾಕೋಬ್‌ ಬೆಥೆಲ್‌ ಅವರು, ಫಿಲ್‌ ಸಾಲ್ಟ್‌ಗೆ ತಮ್ಮ ಸ್ಥಾನವನ್ನು ಬಿಟ್ಟುಕೊಟ್ಟಿದ್ದಾರೆ. ಇನ್ನು ಬೆರಳು ಗಾಯದ ಕಾರಣ ರಜತ್‌ ಪಾಟಿದಾರ್‌ ತಮ್ಮ ನಾಯಕತ್ವದ ಜವಾಬ್ದಾರಿಯನ್ನು ಜಿತೇಶ್‌ ಶರ್ಮಾಗೆ ನೀಡಿದ್ದಾರೆ.

IPL 2025: ಚೊಚ್ಚಲ ಶತಕ ಬಾರಿಸಿ ದಾಖಲೆ ಬರೆದ ಮಿಚೆಲ್‌ ಮಾರ್ಷ್‌

ಇನ್ನು ಸನ್‌ರೈಸರ್ಸ್‌ ಹೈದರಾಬಾದ್‌ ತಂಡದಲ್ಲಿ ಮೂರು ಬದಲಾವಣೆಯನ್ನು ತರಲಾಗಿದೆ. ಟ್ರಾವಿಸ್‌ ಹೆಡ್‌ ಪ್ಲೇಯಿಂಗ್‌ XIಗೆ ಮರಳಿದ್ದು, ಅಭಿನವ್‌ ಮನೋಹರ್‌ ಮತ್ತು ಜಯದೇವ್‌ ಉನಾದ್ಕಟ್‌ ಕೂಡ ತಂಡಕ್ಕೆ ಕಮ್‌ಬ್ಯಾಕ್‌ ಮಾಡಿದ್ದಾರೆ ಎಂದು ನಾಯಕ ಪ್ಯಾಟ್‌ ಕಮಿನ್ಸ್‌ ಟಾಸ್‌ ವೇಳೆ ತಿಳಿಸಿದ್ದಾರೆ. ಇದೇ ಅಂಗಣದಲ್ಲಿ ಕಳೆದ ಪಂದ್ಯದಲ್ಲಿ ಲಖನೌ ಸೂಪರ್‌ ಜಯಂಟ್ಸ್‌ ವಿರುದ್ದ ಗೆದ್ದಿದ್ದ ಹೈದರಾಬಾದ್‌ ತಂಡ ಇದೀಗ ಲಯವನ್ನು ಮುಂದುವರಿಸಲು ಎದುರು ನೋಡುತ್ತಿದೆ. ಅಂದ ಹಾಗೆ ಸನ್‌ರೈಸರ್ಸ್‌ ಹೈದರಾಬಾದ್‌ ತಂಡ ಈಗಾಗಲೇ ಪ್ಲೇಆಫ್ಸ್‌ ರೇಸ್‌ನಿಂದ ಹೊರ ಬಿದ್ದಿದೆ. ಆರ್‌ಸಿಬಿ ವಿರುದ್ಧದ ಪಂದ್ಯಕ್ಕೂ ಮುನ್ನ ಎಸ್‌ಆರ್‌ಎಚ್‌ ಆಡಿದ 12 ಪಂದ್ಯಗಳಿಂದ 4ರಲ್ಲಿ ಗೆಲುವು ಪಡೆದಿದ್ದು, ಇನ್ನುಳಿದ 7 ಪಂದ್ಯಗಳಲ್ಲಿ ಸೋಲು ಅನುಭವಿಸಿದೆ.



ಇನ್ನು ಆರ್‌ಸಿಬಿ ತಂಡ ಈಗಾಗಲೇ ಪ್ಲೇಆಫ್ಸ್‌ಗೆ ಅರ್ಹತೆಯನ್ನು ಪಡೆದುಕೊಂಡಿದೆ. ಆದರೆ, ಇದೀಗ ಟೂರ್ನಿಯ ಪಾಯಿಂಟ್ಸ್‌ ಟೇಬಲ್‌ನಲ್ಲಿ ಅಗ್ರ ಎರಡು ಸ್ಥಾನಗಳನ್ನು ಅಲಂಕರಿಸಲು ಪ್ರಯತ್ನ ನಡೆಸುತ್ತಿದೆ. ಎಸ್‌ಆರ್‌ಎಚ್‌ ಪಂದ್ಯಕ್ಕೂ ಮುನ್ನ ಆರ್‌ಸಿಬಿ ಆಡಿದ 12 ಪಂದ್ಯಗಳಲ್ಲಿ 9ರಲ್ಲಿ ಗೆಲುವು ಪಡೆದಿದ್ದು, ಇನ್ನುಳಿದ ಮೂರರಲ್ಲಿ ಸೋಲು ಅನುಭವಿಸಿದೆ. ಆ ಮೂಲಕ ಪಾಯಿಂಟ್ಸ್‌ ಟೇಬಲ್‌ನಲ್ಲಿ ಎರಡನೇ ಸ್ಥಾನದಲ್ಲಿದೆ.



ಉಭಯ ತಂಡಗಳ ಪ್ಲೇಯಿಂಗ್‌ XI

ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು: ಫಿಲಿಪ್‌ ಸಾಲ್ಟ್‌, ವಿರಾಟ್‌ ಕೊಹ್ಲಿ, ಮಯಾಂಕ್‌ ಅಗರ್ವಾಲ್‌, ಜಿತೇಶ್‌ ಶರ್ಮಾ (ನಾಯಕ, ವಿ.ಕೀ), ಟಿಮ್‌ ಡೇವಿಡ್‌, ರೊಮ್ಯಾರಿಯೊ ಶೆಫರ್ಡ್‌, ಕೃಣಾಲ್‌ ಪಾಂಡ್ಯ, ಭುವನೇಶ್ವರ್‌ ಕುಮಾರ್‌, ಯಶ್‌ ದಯಾಳ್‌, ಲುಂಗಿ ಎನ್ಗಿಡಿ, ಸುಯೇಶ್‌ ಶರ್ಮಾ



ಸನ್‌ರೈಸರ್ಸ್‌ ಹೈದರಾಬಾದ್‌: ಅಭಿಷೇಕ್‌ ಶರ್ಮಾ, ಟ್ರಾವಿಸ್‌ ಹೆಡ್‌, ಇಶಾನ್‌ ಕಿಶನ್‌ (ವಿ.ಕೀ), ನಿತೀಶ್‌ ರೆಡ್ಡಿ, ಹೆನ್ರಿಚ್‌ ಕ್ಲಾಸೆನ್‌, ಅನಿಕೇತ್‌ ವರ್ಮಾ, ಅಭಿನವ್‌ ಮನೋಹರ್‌, ಪ್ಯಾಟ್‌ ಕಮಿನ್ಸ್‌ (ನಾಯಕ), ಹರ್ಷಲ್‌ ಪಟೇಲ್‌, ಜಯದೇವ್‌ ಉನದ್ಕಾಟ್‌, ಇಸಾನ್‌ ಮಾಲಿಂಗ