ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

RCB vs LSG: ಟಾಸ್‌ ಗೆದ್ದು ಬೌಲಿಂಗ್‌ ಆಯ್ದುಕೊಂಡ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು!

RCB vs LSG Match Toss: ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಇದೀಗ ನಡೆಯುತ್ತಿರುವ 2026ರ ಇಂಡಿಯನ್‌ ಪ್ರೀಮಿಯರ್‌ ಲೀಗ್‌ ಟೂರ್ನಿಯ 23ನೇ ಪಂದ್ಯದಲ್ಲಿ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ಹಾಗೂ ಲಖನೌ ಸೂಪರ್‌ ಜಯಂಟ್ಸ್‌ ಕಾದಾಟ ನಡೆಸುತ್ತಿವೆ. ಈ ಪಂದ್ಯದಲ್ಲಿ ಟಾಸ್‌ ಗೆದ್ದು ಆರ್‌ಸಿಬಿ ಬೌಲಿಂಗ್‌ ಆಯ್ದುಕೊಂಡಿದೆ.

IPL 2026: ಟಾಸ್‌ ಗೆದ್ದು ಚೇಸಿಂಗ್‌ ಆರಿಸಿಕೊಂಡ ಆರ್‌ಸಿಬಿ!

ಆರ್‌ಸಿಬಿ vs ಎಲ್‌ಎಸ್‌ಜಿ ಐಪಿಎಲ್‌ ಪಂದ್ಯ. -

Profile
Ramesh Kote Apr 15, 2026 7:25 PM

ಬೆಂಗಳೂರು: ಇಲ್ಲಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಇದೀಗ ನಡೆಯುತ್ತಿರುವ 2026ರ ಇಂಡಿಯನ್‌ ಪ್ರೀಮಿಯರ್‌ ಲೀಗ್‌ (IPL 2026) ಟೂರ್ನಿಯ 23ನೇ ಪಂದ್ಯದಲ್ಲಿ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ಹಾಗೂ ಲಖನೌ ಸೂಪರ್‌ ಜಯಂಟ್ಸ್‌ ತಂಡಗಳು (RCB vs LSG) ಕಾದಾಟ ನಡೆಸುತ್ತಿವೆ. ಈ ಪಂದ್ಯದಲ್ಲಿ ಟಾಸ್‌ ಗೆದ್ದ ಆರ್‌ಸಿಬಿ ನಾಯಕ ರಜತ್‌ ಪಾಟಿದಾರ್‌ ಮೊದಲು ಬೌಲಿಂಗ್‌ ಆಯ್ಕೆ ಮಾಡಿಕೊಂಡಿದ್ದಾರೆ. ಹಾಗಾಗಿ ಎದುರಾಳಿ ಲಖನೌ ಮೊದಲು ಬ್ಯಾಟ್‌ ಮಾಡಲಿದೆ. ಆತಿಥೇಯ ಆರ್‌ಸಿಬಿ ಟೂರ್ನಿಯ ಆರಂಭಿಕ ಎರಡೂ ಪಂದ್ಯಗಳನ್ನು ಇಲ್ಲಿ ಆಡಿ ಗೆಲುವು ಪಡೆದಿತ್ತು. ಇದೀಗ ಅದೇ ಲಯವನ್ನು ಮುಂದುವರಿಸಲು ಎದುರು ನೋಡುತ್ತಿದೆ.

ರಜತ್‌ ಪಾಟಿದಾರ್‌ ನಾಯಕತ್ವದ ಆರ್‌ಸಿಬಿ ತಂಡ ಅತ್ಯುತ್ತಮ ಲಯದಲ್ಲಿ ಮುಂದುವರಿಯುತ್ತಿದೆ. ಕಳೆದ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್‌ ವಿರುದ್ಧ 18 ರನ್‌ಗಳಿಂದ ಗೆದ್ದು ಬೀಗಿತ್ತು. ಆ ಮೂಲಕ ಇಲ್ಲಿಯವರೆಗೂ ಆಡಿದ ನಾಲ್ಕು ಪಂದ್ಯಗಳಲ್ಲಿ ಮೂರರಲ್ಲಿ ಗೆಲುವು ಪಡೆದಿದ್ದು ಪಾಯಿಂಟ್ಸ್‌ ಟೇಬಲ್‌ನಲ್ಲಿ ಆರು ಅಂಕಗಳ ಮೂಲಕ ಮೂರನೇ ಸ್ಥಾನವನ್ನು ಅಲಂಕರಿಸಿದೆ.

IPL 2026, 243rd Match: ಎಲ್‌ಎಸ್‌ಜಿ ವಿರುದ್ಧ ಆರ್‌ಸಿಬಿ ಗೆಲುತ್ತಾ? ಉಭಯ ತಂಡಗಳ ಮುಖಾಮುಖಿ ದಾಖಲೆ ಹೀಗಿದೆ!

ಆದರೆ, ರಿಷಭ್‌ ಪಂತ್‌ ನಾಯಕತ್ವದ ಲಖನೌ ಸೂಪರ್‌ ಜಯಂಟ್ಸ್‌ ತಂಡ ಈ ಸೀಸನ್‌ನಲ್ಲಿ ಗೆಲುವಿನ ಲಯನವನ್ನು ಉಳಿಸಿಕೊಳ್ಳುವಲ್ಲಿ ವಿಫಲವಾಗುತ್ತಿದೆ. ತಮ್ಮ ಕೊನೆಯ ಪಂದ್ಯದಲ್ಲಿ ಗುಜರಾತ್‌ ಟೈಟನ್ಸ್‌ ಎದುರು 7 ವಿಕೆಟ್‌ಗಳಿಂದ ಸೋಲು ಅನುಭವಿಸಿತ್ತು. ಅಂದ ಹಾಗೆ ಎಲ್‌ಎಸ್‌ಜಿ ತಂಡ ಇಲ್ಲಿಯವರೆಗೂ ಆಡಿದ ನಾಲ್ಕು ಪಂದ್ಯಗಳ ಪೈಕಿ ಎರಡರಲ್ಲಿ ಗೆಲುವು ಹಾಗೂ ಇನ್ನುಳಿದ ಎರಡರಲ್ಲಿ ಸೋಲು ಅನುಭವಿಸಿದೆ. ಒಟ್ಟು 4 ಅಂಕಗಳ ಮೂಲಕ ಪಾಯಿಂಟ್ಸ್‌ ಟೇಬಲ್‌ನಲ್ಲಿ ಏಳನೇ ಸ್ಥಾನದಲ್ಲಿದೆ.



ಆರ್‌ಸಿಬಿ ಪ್ಲೇಯಿಂಗ್‌ XIನಲ್ಲಿ ಒಂದು ಬದಲಾವಣೆ

ಆರ್‌ಸಿಬಿ ತಂಡದ ಪ್ಲೇಯಿಂಗ್‌ XIನಲ್ಲಿ ಒಂದು ಬದಲಾವಣೆಯನ್ನು ತರಲಾಗಿದೆ ಎಂದು ನಾಯಕ ರಜತ್‌ ಪಾಟಿದಾರ್‌ ಟಾಸ್‌ ಗೆದ್ದ ಬಳಿಕ ಹೇಳಿದ್ದಾರೆ. ಕಳೆದ ಪಂದ್ಯವನ್ನು ಆಡಿದ್ದ ಜೇಕಬ್‌ ಡಫಿಗೆ ವಿಶ್ರಾಂತಿಯನ್ನು ನೀಡಲಾಗಿದ್ದು, ಅವರ ಸ್ಥಾನಕ್ಕೆ ಇದೀಗ ಜಾಶ್‌ ಹೇಝಲ್‌ವುಡ್‌ಗೆ ಚಾನ್ಸ್‌ ನೀಡಲಾಗಿದೆ. ಆಸೀಸ್‌ ವೇಗಿಯ ಪಾಲಿಗೆ ಈ ಸೀಸನ್‌ನಲ್ಲಿ ಇದು ಎರಡನೇ ಪಂದ್ಯವಾಗಿದೆ. ಅಂದ ಹಾಗೆ ಈ ಪಂದ್ಯದಲ್ಲಿ ವಿರಾಟ್‌ ಕೊಹ್ಲಿ ಇಂಪ್ಯಾಕ್ಟ್‌ ಪ್ಲೇಯರ್‌ ಆಗಿದ್ದಾರೆ.



ಎಲ್‌ಎಸ್‌ಜಿ ಪ್ಲೇಯಿಂಗ್‌ XIನಲ್ಲಿ ಬದಲಾವಣೆ ಇಲ್ಲ

ಇನ್ನು ಪ್ರವಾಸಿ ಲಖನೌ ತಂಡದ ಆಡುವ ಬಳಗದಲ್ಲಿ ಯಾವುದೇ ಬದಲಾವಣೆಯನ್ನು ಮಾಡಲಾಗಿಲ್ಲ. ಗುಜರಾತ್‌ ಟೈಟನ್ಸ್‌ ವಿರುದ್ಧ ಆಡಿದ್ದ ಅದೇ ಆಟಗಾರರನ್ನು ಉಳಿಸಿಕೊಳ್ಳಲಾಗಿದೆ ಎಂದು ಟಾಸ್‌ ವೇಳೆ ನಾಯಕ ರಿಷಭ್‌ ಪಂತ್‌ ಮಾಹಿತಿ ನೀಡಿದ್ದಾರೆ.

ಇತ್ತಂಡಗಳ ಪ್ಲೇಯಿಂಗ್‌ XI‌

ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು: ಫಿಲಿಪ್ ಸಾಲ್ಟ್, ದೇವದತ್ ಪಡಿಕ್ಕಲ್, ರಜತ್ ಪಾಟಿದಾರ್ (ನಾಯಕ), ಜಿತೇಶ್ ಶರ್ಮಾ(ವಿಕೆಟ್‌ ಕೀಪರ್‌), ಟಿಮ್ ಡೇವಿಡ್, ರೊಮಾರಿಯೊ ಶೆಫರ್ಡ್, ಕೃಣಾಲ್ ಪಾಂಡ್ಯ, ಭುವನೇಶ್ವರ್ ಕುಮಾರ್, ಜಾಶ್ ಹೇಝಲ್‌ವುಡ್, ಸುಯಶ್ ಶರ್ಮಾ, ರಸಿಖ್ ದಾರ್ ಸಲಾಮ್

ಇಂಪ್ಯಾಕ್ಟ್‌ ಪ್ಲೇಯರ್‌: ವಿರಾಟ್‌ ಕೊಹ್ಲಿ (ಸಾಧ್ಯತೆ)



ಲಖನೌ ಸೂಪರ್‌ ಜಯಂಟ್ಸ್: ಏಡೆನ್ ಮಾರ್ಕ್ರಮ್, ಮಿಚೆಲ್ ಮಾರ್ಷ್, ರಿಷಭ್ ಪಂತ್ (ವಿಕೆಟ್‌ ಕೀಪರ್‌, ನಾಯಕ), ನಿಕೋಲಸ್ ಪೂರನ್, ಆಯುಷ್ ಬದೋನಿ, ಅಬ್ದುಲ್ ಸಮದ್, ಮುಕುಲ್ ಚೌಧರಿ, ಮೊಹಮ್ಮದ್ ಶಮಿ, ಆವೇಶ್ ಖಾನ್, ದಿಗ್ವೇಶ್ ಸಿಂಗ್ ರಾಠಿ, ಪ್ರಿನ್ಸ್ ಯಾದವ್