ಫೋಟೋ ಗ್ಯಾಲರಿ ಐಪಿಎಲ್​ ಸುನಿತಾ ವಿಲಿಯಮ್ಸ್​ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

RCB vs DC: ಟಾಸ್‌ ಗೆದ್ದು ಚೇಸಿಂಗ್‌ ಆಯ್ಕೆ ಮಾಡಿಕೊಂಡ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು!

RCB vs DC: ದಿಲ್ಲಿಯ ಅರುಣ್‌ ಜೇಟ್ಲಿ ಕ್ರೀಡಾಂಗಣದಲ್ಲಿ ಇದೀಗ ನಡೆಯುತ್ತಿರುವ 2025ರ ಇಂಡಿಯನ್‌ ಪ್ರೀಮಿಯರ್‌ ಲೀಗ್‌ ಟೂರ್ನಿಯಲ್ಲಿ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ಹಾಗೂ ಡೆಲ್ಲಿ ಕ್ಯಾಪಿಟಲ್ಸ್‌ ತಂಡಗಳು ಕಾದಾಟ ನಡೆಸುತ್ತಿವೆ. ಈ ಪಂದ್ಯದಲ್ಲಿ ಟಾಸ್‌ ಗೆದ್ದ ಆರ್‌ಸಿಬಿ ನಾಯಕ ರಜತ್‌ ಪಾಟಿದಾರ್‌ ಬೌಲಿಂಗ್‌ ಆಯ್ಕೆ ಮಾಡಿಕೊಂಡಿದ್ದಾರೆ.

RCB vs DC: ಟಾಸ್‌ ಗೆದ್ದು ಬೌಲಿಂಗ್‌ ಆಯ್ದುಕೊಂಡ ಆರ್‌ಸಿಬಿ!

ಡೆಲ್ಲಿ ಕ್ಯಾಪಿಟಲ್ಸ್‌ vs ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು

Profile Ramesh Kote Apr 27, 2025 7:47 PM

ನವದೆಹಲಿ: ಇಲ್ಲಿನ ಅರುಣ್‌ ಜೇಟ್ಲಿ ಕ್ರೀಡಾಂಗಣದಲ್ಲಿ ಇದೀಗ ನಡೆಯುತ್ತಿರುವ 2025ರ ಇಂಡಿಯನ್‌ ಪ್ರೀಮಿಯರ್‌ ಲೀಗ್‌ (IPL 2025) ಟೂರ್ನಿಯ 46ನೇ ಪಂದ್ಯದಲ್ಲಿ (RCB vs DC) ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ಹಾಗೂ ಡೆಲ್ಲಿ ಕ್ಯಾಪಿಟಲ್ಸ್‌ ತಂಡಗಳು ಕಾದಾಟ ನಡಸುತ್ತಿವೆ. ಈ ಪಂದ್ಯದಲ್ಲಿ ಟಾಸ್‌ ಗೆದ್ದ ಆರ್‌ಸಿಬಿ (Royal Challengers bengaluru) ನಾಯಕ ರಜತ್‌ ಪಾಟಿದಾರ್‌, ಬೌಲಿಂಗ್‌ ಆಯ್ಕೆ ಮಾಡಿಕೊಂಡಿದ್ದಾರೆ. ಆ ಮೂಲಕ ಎದುರಾಳಿ ಡೆಲ್ಲಿ ಕ್ಯಾಪಿಟಲ್ಸ್‌ ತಂಡವನ್ನು ಮೊದಲ ಬ್ಯಾಟಿಂಗ್‌ಗೆ ಆಹ್ವಾನ ನೀಡಿದ್ದಾರೆ.

ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡದ ಪ್ಲೇಯಿಂಗ್‌ XIನಲ್ಲಿ ಒಂದು ಬದಲಾವಣೆ ತರಲಾಗಿದೆ. ಸತತ ಪಂದ್ಯಗಳಲ್ಲಿ ಆಡಿದ್ದ ಆರಂಭಿಕ ಬ್ಯಾಟ್ಸ್‌ಮನ್‌ ಫಿಲ್‌ ಸಾಲ್ಟ್‌ ಅವರಿಗೆ ವಿಶ್ರಾಂತಿ ನೀಡಲಾಗಿದ್ದು, ಇವರ ಸ್ಥಾನದಲ್ಲಿ ಇಂಗ್ಲೆಂಡ್‌ ಸ್ಪಿನ್‌ ಆಲ್‌ರೌಂಡರ್‌ ಜಾಕೊಭ್‌ ಬೆಥೆಲ್‌ಗೆ ಸ್ಥಾನವನ್ನು ನೀಡಲಾಗಿದೆ. ಈ ಬಗ್ಗೆ ಟಾಸ್‌ ವೇಳೆ ಆರ್‌ಸಿಬಿ ನಾಯಕ ರಜತ್‌ ಪಾಟಿದಾರ್‌ ಮಾಹಿತಿ ನೀಡಿದ್ದಾರೆ. ಇನ್ನು ಡೆಲ್ಲಿ ಕ್ಯಾಪಿಟಲ್ಸ್‌ ತಂಡದಲ್ಲಿ ಒಂದು ಬದಲಾವಣೆಯನ್ನು ತರಲಾಗಿದೆ. ಆರಂಭಿಕ ಬ್ಯಾಟ್ಸ್‌ಮನ್‌ ಫಾಫ್‌ ಡುಪ್ಲೆಸಿಸ್‌ ಪ್ಲೇಯಿಂಗ್‌ Xiಗೆ ಮರಳಿದ್ದಾರೆ. ಇಂಪ್ಯಾಕ್ಟ್‌ ಆಟಗಾರನನ್ನು ಸನ್ನಿವೇಶಕ್ಕೆ ತಕ್ಕಂತೆ ಬದಲಾಯಿಸುತ್ತೇವೆಂದು ಡೆಲ್ಲಿ ನಾಯಕ ಅಕ್ಷರ್‌ ಪಟೇಲ್‌ ತಿಳಿಸಿದ್ದಾರೆ.

IPL 2025: ಹರಾಜಿನ ಎಡವಟ್ಟು ತಂಡದ ವೈಫಲ್ಯಕ್ಕೆ ಕಾರಣ ಎಂದ ಸಿಎಸ್​ಕೆ ಕೋಚ್​

ಆರ್‌ಸಿಬಿ ಹಾಗೂ ಡಿಸಿ ಎರಡೂ ತಂಡಗಳು ಕೂಡ ಪ್ರಸಕ್ತ ಟೂರ್ನಿಯಲ್ಲಿ ಉತ್ತಮ ಪ್ರದರ್ಶನ ತೋರುತ್ತಿವೆ. ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡ ಆಡಿದ 9 ಪಂದ್ಯಗಳಲ್ಲಿ 6 ರಲ್ಲಿ ಗೆಲುವು ಪಡೆದಿದ್ದು, ಇನ್ನುಳಿದ ಮೂರು ಪಂದ್ಯಗಳಲ್ಲಿ ಸೋಲು ಅನುಭವಿಸಿದೆ. ಒಟ್ಟು 12 ಅಂಕಗಳನ್ನು ಕಲೆ ಹಾಕಿರುವ ಆರ್‌ಸಿಬಿ ಟೂರ್ನಿಯ ಪಾಯಿಂಟ್ಸ್‌ ಟೇಬಲ್‌ನಲ್ಲಿ ನಾಲ್ಕನೇ ಸ್ಥಾನದಲ್ಲಿದೆ. ಇನ್ನು ಡೆಲ್ಲಿ ಕ್ಯಾಪಿಟಲ್ಸ್‌ ತಂಡ ಕೂಡ ಆಡಿದ 8 ಪಂದ್ಯಗಳಲ್ಲಿ 6ರಲ್ಲಿ ಗೆಲುವು ಪಡೆದಿದ್ದು, ಇನ್ನುಳಿದ ಎರಡರಲ್ಲಿ ಸೋಲು ಅನುಭವಿಸಿದೆ.



ಇತ್ತಂಡಗಳ ಪ್ಲೇಯಿಂಗ್‌ XI

ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು: ವಿರಾಟ್ ಕೊಹ್ಲಿ, ಜಾಕೋಬ್ ಬೆಥೆಲ್, ರಜತ್ ಪಾಟಿದಾರ್ (ನಾಯಕ), ಜಿತೇಶ್ ಶರ್ಮಾ(ವಿ.ಕೀ), ಟಿಮ್ ಡೇವಿಡ್, ಕೃಣಾಲ್ ಪಾಂಡ್ಯ, ರೊಮ್ಯಾರಿಯೊ ಶೆಫರ್ಡ್, ಭುವನೇಶ್ವರ್ ಕುಮಾರ್, ಸುಯಶ್ ಶರ್ಮಾ, ಜಾಶ್ ಹೇಝಲ್‌ವುಡ್, ಯಶ್ ದಯಾಳ್‌



ಡೆಲ್ಲಿ ಕ್ಯಾಪಿಟಲ್ಸ್‌: ಫಾಫ್ ಡು ಪ್ಲೆಸಿಸ್, ಅಭಿಷೇಕ್ ಪೊರೆಲ್, ಕರುಣ್ ನಾಯರ್, ಕೆಎಲ್ ರಾಹುಲ್ (ವಿ.ಕೀ), ಅಕ್ಷರ್ ಪಟೇಲ್ (ನಾಯಕ), ಟ್ರಿಸ್ಟನ್ ಸ್ಟಬ್ಸ್, ವಿಪ್ರಾಜ್‌ ನಿಗಮ್, ಮಿಚೆಲ್ ಸ್ಟಾರ್ಕ್, ದುಷ್ಮಂತಾ ಚಮೀರಾ, ಕುಲ್‌ದೀಪ್ ಯಾದವ್, ಮುಖೇಶ್ ಕುಮಾರ್



ತಂಡಗಳು

ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು: ವಿರಾಟ್ ಕೊಹ್ಲಿ, ಜಾಕೋಬ್ ಬೆಥೆಲ್, ರಜತ್ ಪಾಟಿದಾರ್ (ನಾಯಕ), ಜಿತೇಶ್ ಶರ್ಮಾ(ವಿ.ಕೀ), ಟಿಮ್ ಡೇವಿಡ್, ಕೃಣಾಲ್ ಪಾಂಡ್ಯ, ರೊಮ್ಯಾರಿಯೊ ಶೆಫರ್ಡ್, ಭುವನೇಶ್ವರ್ ಕುಮಾರ್, ಸುಯಶ್ ಶರ್ಮಾ, ಜಾಶ್ ಹೇಝಲ್‌ವುಡ್, ಯಶ್ ದಯಾಳ್‌, ದೇವದತ್ ಪಡಿಕ್ಕಲ್, ರಸಿಖ್ ದಾರ್ ಸಲಾಂ, ಮನೋಜ್ ಭಾಂಡಗೆ, ಲಿಯಾಮ್ ಲಿವಿಂಗ್‌ಸ್ಟೋನ್, ಸ್ವಪ್ನಿಲ್ ಸಿಂಗ್, ಲುಂಗಿ ಎನ್‌ಗಿಡಿ, ನುವಾನ್ ತುಷಾರ, ಮೋಹಿತ್ ರಾಠೀ, ಸ್ವಸ್ತಿಕ್ ಚಿಕಾರಾ, ಅಭಿನಂದನ್ ಸಿಂಗ್, ಫಿಲ್‌ ಸಾಲ್ಟ್

ಡೆಲ್ಲಿ ಕ್ಯಾಪಿಟಲ್ಸ್‌: ಫಾಫ್ ಡು ಪ್ಲೆಸಿಸ್, ಅಭಿಷೇಕ್ ಪೊರೆಲ್, ಕರುಣ್ ನಾಯರ್, ಕೆಎಲ್ ರಾಹುಲ್ (ವಿ.ಕೀ), ಅಕ್ಷರ್ ಪಟೇಲ್ (ನಾಯಕ), ಟ್ರಿಸ್ಟನ್ ಸ್ಟಬ್ಸ್, ವಿಪ್ರಾಜ್‌ ನಿಗಮ್, ಮಿಚೆಲ್ ಸ್ಟಾರ್ಕ್, ದುಷ್ಮಂತಾ ಚಮೀರಾ, ಕುಲ್‌ದೀಪ್ ಯಾದವ್, ಮುಖೇಶ್ ಕುಮಾರ್, ಆಶುತೋಷ್ ಶರ್ಮಾ, ಮೋಹಿತ್ ಶರ್ಮಾ, ಜೇಕ್ ಫ್ರೇಸರ್-ಮೆಗರ್ಕ್, ಮಾಧವ್ ತಿವಾರಿ, ತ್ರಿಪುರಾಣ ವಿಜಯ್, ಸಮೀರ್ ರಿಜ್ವಿ, ಡೊನೊವನ್ ಫೆರೇರಾ, ದರ್ಶನ್ ನಲ್ಕಂಡೆ, ಟಿ ನಟರಾಜನ್, ಅಜಯ್ ಜಾದವ್ ಮಂಡಲ್, ಮನ್ವಂತ್ ಕುಮಾರ್ ಎಲ್