ಜೈಪುರ: ಇಲ್ಲಿನ ಸವಾಯ್ ಮಾನ್‌ಸಿಂಗ್ ಸ್ಟೇಡಿಯಂನಲ್ಲಿ ಇದೀಗ ನಡೆಯುತ್ತಿರುವ 2025ರ ಇಂಡಿಯನ್ ಪ್ರೀಮಿಯರ್ ಲೀಗ್ (IPL 2025) ಟೂರ್ನಿಯ 28ನೇ ಪಂದ್ಯದಲ್ಲಿ (RCB vs RR) ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ರಾಜಸ್ಥಾನ್ ರಾಯಲ್ಸ್ ತಂಡಗಳು ಕಾದಾಟ ನಡೆಸುತ್ತಿವೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಆರ್‌ಸಿಬಿ ನಾಯಕ ರಜತ್ ಪಾಟಿದಾರ್ (Rajat Patidar) ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. ಆ ಮೂಲಕ ಎದುರಾಳಿ ಆರ್‌ಆರ್ ತಂಡವನ್ನು ಮೊದಲ ಬ್ಯಾಟಿಂಗ್‌ಗೆ ಆಹ್ವಾನಿಸಿದ್ದಾರೆ. ಆ ಮೂಲಕ ಕಡಿಮೆ ಮೊತ್ತಕ್ಕೆ ಆತಿಥೇಯರನ್ನು ಕಟ್ಟಿ ಹಾಕುವ ಯೋಜನೆಯನ್ನು ಆರ್‌ಸಿಬಿ ಹಾಕಿಕೊಂಡಿದೆ.
ಈ ಪಂದ್ಯಕ್ಕೆ ಆರ್‌ಸಿಬಿ ಪ್ಲೇಯಿಂಗ್ XIನಲ್ಲಿ ಯಾವುದೇ ಬದಲಾವಣೆ ಇಲ್ಲವೆಂದು ಟಾಸ್ ವೇಳೆ ರಜತ್ ಪಾಟಿದಾರ್ ಮಾಹಿತಿ ನೀಡಿದ್ದಾರೆ. ಹಾಗಾಗಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಬೆಂಗಳೂರಿನಲ್ಲಿ ಆಡಿದ್ದೇ ಅದೇ ಆಡುವ ಬಳಗವನ್ನು ಉಳಿಸಿಕೊಳ್ಳಲಾಗಿದೆ. ಇನ್ನು ಎದುರಾಳಿ ರಾಜಸ್ಥಾನ್ ರಾಯಲ್ಸ್ ಪ್ಲೇಯಿಂಗ್ XIನಲ್ಲಿ ಒಂದು ಬದಲಾವಣೆಯನ್ನು ತರಲಾಗಿದೆ. ಫಝಲಕ್ ಫಾರೂಕಿ ಅವರ ಸ್ಥಾನಕ್ಕೆ ಶ್ರೀಲಂಕಾ ಸ್ಪಿನ್ನರ್ ವಾನಿಂದು ಹಸರಂಗ ಬಂದಿದ್ದಾರೆ ಎಂದು ಆರ್‌ಆರ್ ನಾಯಕ ಸಂಜು ಸ್ಯಾಮ್ಸನ್ ತಿಳಿಸಿದ್ದಾರೆ.
IPL 2025: 40 ಎಸೆತಗಳಲ್ಲಿ ಸ್ಪೋಟಕ ಶತಕ ವಿಶೇಷ ದಾಖಲೆ ಬರೆದ ಅಭಿಷೇಕ್ ಶರ್ಮಾ!
ಇತ್ತಂಡಗಳ ಪ್ಲೇಯಿಂಗ್ XI
ರಾಯಲ್ ಚಾಲೆಂಜರ್ಸ್ ಬೆಂಗಳೂರು: ಫಿಲ್ ಸಾಲ್ಟ್, ವಿರಾಟ್ ಕೊಹ್ಲಿ, ದೇವದತ್ ಪಡಿಕ್ಕಲ್, ರಜತ್ ಪಾಟಿದಾರ್ (ನಾಯಕ),ಲಿಯಾಮ್ ಲಿವಿಂಗ್‌ಸ್ಟೋನ್, ಜಿತೇಶ್ ಶರ್ಮಾ (ವಿ.ಕೀ), ಟಿಮ್ ಡೇವಿಡ್, ಕೃಣಾಲ್ ಪಾಂಡ್ಯ, ಭುವನೇಶ್ವರ್ ಕುಮಾರ್, ಜಾಶ್ ಹೇಝಲ್‌ವುಡ್, ಸುಯೇಶ್ ಶರ್ಮಾ, ಯಶ್ ದಯಾಳ್
ರಾಜಸ್ಥಾನ್ ರಾಯಲ್ಸ್: ಯಶಸ್ವಿ ಜೈಸ್ವಾಲ್, ಸಂಜು ಸ್ಯಾಮ್ಸನ್(ವಿ.ಕೀ, ನಾಯಕ), ನಿತೀಶ್ ರಾಣಾ, ರಿಯಾನ್ ಪರಾಗ್, ಧ್ರುವ್ ಜುರೆಲ್, ಶಿಮ್ರಾನ್ ಹೆಟ್ಮಾಯೆರ್, ವಾನಿಂದು ಹಸರಂಗ, ಜೋಫ್ರಾ ಆರ್ಚರ್, ಮಹೇಶ್ ತೀಕ್ಷಣ್, ಸಂದೀಪ್ ಶರ್ಮಾ, ತುಷಾರ್ ದೇಶ್‌ಪಾಂಡೆ
ಐದನೇ ಸ್ಥಾನದಲ್ಲಿರುವ ಆರ್‌ಸಿಬಿ
ರಜತ್ ಪಾಟಿದಾರ್ ನಾಯಕತ್ವದ ಆರ್‌ಸಿಬಿ ತಂಡ ಪ್ರಸಕ್ತ ಟೂರ್ನಿಯಲ್ಲಿ ಆಡಿದ ಐದು ಪಂದ್ಯಗಳಲ್ಲಿ ಮೂರರಲ್ಲಿ ಗೆದ್ದಿದ್ದು, ಇನ್ನುಳಿದ ಎರಡರಲ್ಲಿ ಸೋಲು ಅನುಭವಿಸಿದೆ.ಆ ಮೂಲಕ ಟೂರ್ನಿಯ ಪಾಯಿಂಟ್ಸ್ ಟೇಬಲ್‌ನಲ್ಲಿ ಐದನೇ ಸ್ಥಾನದಲ್ಲಿದೆ. ಇನ್ನು ರಾಜಸ್ಥಾನ್ ರಾಯಲ್ಸ್ ತಂಡ ಇಲ್ಲಿಯತನಕ ಆಡಿದ್ದ ಐದು ಪಂದ್ಯದಲ್ಲಿ ಮೂರರಲ್ಲಿ ಸೋತಿದ್ದು, ಇನ್ನುಳಿದ ಎರಡರಲ್ಲಿ ಗೆಲುವು ಪಡೆದಿದೆ.
IPL 2025: ಸೋಲಿಗೆ ಕಾರಣ ಕೇಳಿದರೆ ಜೋರಾಗಿ ನಕ್ಕ ನಾಯಕ ಅಯ್ಯರ್
ತಂಡಗಳು
ರಾಜಸ್ಥಾನ್ ರಾಯಲ್ಸ್: ಯಶಸ್ವಿ ಜೈಸ್ವಾಲ್, ಸಂಜು ಸ್ಯಾಮ್ಸನ್ (ನಾಯಕ, ವಿಕೆಟ್ ಕೀಪರ್), ನಿತೀಶ್ ರಾಣಾ, ರಿಯಾನ್ ಪರಾಗ್, ಧ್ರುವ್ ಜುರೆಲ್, ಶಿಮ್ರಾನ್ ಹೆಟ್ಮಾಯೆರ್, ಶುಭಮ್ ದುಬೆ, ಜೋಫ್ರಾ ಆರ್ಚರ್, ಮತೀಶ್ ತೀಕ್ಷಣ, ತುಷಾರ್ ದೇಶಪಾಂಡೆ, ಸಂದೀಪ್ ಶರ್ಮಾ, ಫಝಲಕ್ ಫಾರೂಕಿ, ಕುಮಾರ್ ಕಾರ್ತಿಕೇಯ, ಯಧುವೀರ್ ಸಿಂಗ್ ಚರಕ್, ಕುನಾಲ್ ಸಿಂಗ್ ರಾಥೋಡ್, ಆಕಾಶ್ ಮಧ್ವಾಲ್, ಕ್ವೇನಾ ಎಂಫಾಕಾ, ವಾನಿಂದು ಹಸರಂಗ, ಅಶೋಕ್ ಶರ್ಮಾ, ವೈಭವ್ ಸೂರ್ಯವಂಶಿ
ರಾಯಲ್ ಚಾಲೆಂಜರ್ಸ್ ಬೆಂಗಳೂರು: ಫಿಲಿಪ್ ಸಾಲ್ಟ್, ವಿರಾಟ್ ಕೊಹ್ಲಿ, ದೇವದತ್ ಪಡಿಕ್ಕಲ್, ರಜತ್ ಪಾಟಿದಾರ್ (ನಾಯಕ), ಲಿಯಾಮ್ ಲಿವಿಂಗ್‌ಸ್ಟೋನ್, ಜಿತೇಶ್ ಶರ್ಮಾ (ವಿ.ಕೀ), ಕೃಣಾಲ್ ಪಾಂಡ್ಯ, ಟಿಮ್ ಡೇವಿಡ್, ಭುವನೇಶ್ವರ್ ಕುಮಾರ್, ಜಾಶ ಹೇಝಲ್‌ವುಡ್, ಯಶ್ ದಯಾಳ್, ಸುಯೇಶ್ ಶರ್ಮಾ, ರಾಸಿಖ್ ದರ್ ಸಲಾಮ್, ಮನೋಜ್ ಭಾಂಡಗೆ, ಜಾಕೋಬ್ ಬೆಥೆಲ್, ಸ್ವಪ್ನಿಮ್ ಸಿಂಗ್, ಲುಂಗಿ ಎನ್‌ಗಿಡಿ, ರೊಮ್ಯಾರಿಯಾ ಶೆಫರ್ಡ್, ನುವಾನ್ ತುಷಾರ್, ಮೋಹಿತ್ ತುಷಾರ್, ಮೋಹಿತ್ ರಾಠಿ, ಸ್ವಸ್ತಿಕ್ ಚಿಕಾರ, ಅಭಿನಂದನ್ ಸಿಂಗ್