ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

RCB vs MI: ಟಾಸ್‌ ಗೆದ್ದು ಬೌಲಿಂಗ್‌ ಆಯ್ದುಕೊಂಡ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು!

RCB vs MI Match Toss: ರಾಯ್ಪುರದ ಸಹೀದ್‌ ವೀರ್‌ ನಾರಾಯಣ್‌ ಇಂಟರ್‌ನ್ಯಾಷನಲ್‌ ಕ್ರಿಕೆಟ್‌ ಕ್ರೀಡಾಂಗಣದಲ್ಲಿ ಇದೀಗ ನಡೆಯುತ್ತಿರುವ 2026ರ ಇಂಡಿಯನ್‌ ಪ್ರೀಮಿಯರ್‌ ಲೀಗ್‌ ಟೂರ್ನಿಯ 54ನೇ ಪಂದ್ಯದಲ್ಲಿ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ಹಾಗೂ ಮುಂಬೈ ಇಂಡಿಯನ್ಸ್‌ ತಂಡಗಳು ಕಾದಾಟ ನಡೆಸುತ್ತಿವೆ. ಈ ಪಂದ್ಯದಲ್ಲಿ ಟಾಸ್‌ ಗೆದ್ದ ಆರ್‌ಸಿಬಿ ಬೌಲಿಂಗ್‌ ಆಯ್ಕೆ ಮಾಡಿಕೊಂಡಿದೆ.

ಮುಂಬೈ ಇಂಡಿಯನ್ಸ್‌ vs ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು.

ರಾಯ್ಪುರ: ಇಲ್ಲಿನ ಸಹೀದ್‌ ವೀರ್‌ ನಾರಾಯಣ್‌ ಇಂಟರ್‌ನ್ಯಾಷನಲ್‌ ಕ್ರಿಕೆಟ್‌ ಕ್ರೀಡಾಂಗಣದಲ್ಲಿ ಇದೀಗ ನಡೆಯುತ್ತಿರುವ 2026ರ ಇಂಡಿಯನ್‌ ಪ್ರೀಮಿಯರ್‌ ಲೀಗ್‌ (IPL 2026) ಟೂರ್ನಿಯ 54ನೇ ಪಂದ್ಯದಲ್ಲಿ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ಹಾಗೂ ಮುಂಬೈ ಇಂಡಿಯನ್ಸ್‌ ತಂಡಗಳು (RCB vs MI) ಕಾದಾಟ ನಡೆಸುತ್ತಿವೆ. ಈ ಪಂದ್ಯದಲ್ಲಿ ಟಾಸ್‌ ಗೆದ್ದ ಆರ್‌ಸಿಬಿ ನಾಯಕ ರಜತ್‌ ಪಾಟಿದಾರ್‌ ಬೌಲಿಂಗ್‌ ಆಯ್ಕೆ ಮಾಡಿಕೊಂಡಿದ್ದಾರೆ. ಆ ಮೂಲಕ ಎದುರಾಳಿ ಮುಂಬೈ ತಂಡವನ್ನು ಮೊದಲ ಬ್ಯಾಟಿಂಗ್‌ಗೆ ಆಹ್ವಾನಿಸಿದ್ದಾರೆ.

ಟಾಸ್‌ ಗೆದ್ದು ಬೌಲಿಂಗ್‌ ಆಯ್ಕೆ ಮಾಡಿಕೊಂಡ ಬಳಿಕ ಆರ್‌ಸಿಬಿ ನಾಯಕ ರಜತ್‌ ಪಾಟಿದಾರ್‌, ತಂಡದ ಪ್ಲೇಯಿಂಗ್‌ XI ಬಗ್ಗೆ ಮಾಹಿತಿ ನೀಡಿದರು. ತಂಡದ ಪ್ಲೇಯಿಂಗ್‌ XIನಲ್ಲಿ ಯಾವುದೇ ಬದಲಾವಣೆ ಇಲ್ಲ, ಕಳೆದ ಪಂದ್ಯವನ್ನು ಆಡಿದ ಅದೇ ಆಡುವ ಬಳಗ ಆಡಲಿದೆ ಎಂದು ಹೇಳಿದ್ದಾರೆ. ಅಂದ ಹಾಗೆ ಕೊನೆಯ ಎರಡು ಪಂದ್ಯಗಳಲ್ಲಿ ಸೋತಿದ್ದ ಕಾರಣ, ಈ ಪಂದ್ಯಕ್ಕೆ ಆರ್‌ಸಿಬಿ ಪ್ಲೇಯಿಂಗ್‌ XIನಲ್ಲಿ ಬದಲಾವಣೆ ಮಾಡಬಹುದೆಂದು ನಿರೀಕ್ಷೆ ಮಾಡಲಾಗಿತ್ತು. ಆದರೆ, ಆರ್‌ಸಿಬಿ ಟೀಮ್‌ ಮ್ಯಾನೇಜ್‌ಮೆಂಟ್‌ ಬದಲಾವಣೆ ಮಾಡಲಿಲ್ಲ.

CSK vs LSG: ಲಖನೌ ಪರ ಅತ್ಯಂತ ವೇಗದ ಐಪಿಎಲ್‌ ಅರ್ಧಶತಕ ಬಾರಿಸಿದ ಜಾಶ್‌ ಇಂಗ್ಲಿಸ್‌!

ಇನ್ನು ಎದುರಾಳಿ ಮುಂಬೈ ಇಂಡಿಯನ್ಸ್‌ ಪ್ಲೇಯಿಂಗ್‌ XIನಲ್ಲಿ ಯಾವುದೇ ಬದಲಾವಣೆ ಇಲ್ಲ. ಕಳೆದ ಪಂದ್ಯವನ್ನು ಆಡಿದ್ದ ಅದೇ ಆಡುವ ಬಳಗವನ್ನು ಮುಂದುವರಿಸಲಾಗಿದೆ ಎಂದು ನಾಯಕ ಸೂರ್ಯಕುಮಾರ್‌ ಯಾದವ್‌ ಹೇಳಿದ್ದಾರೆ. ಈ ಪಂದ್ಯದಲ್ಲಿಯೂ ರೋಹಿತ್‌ ಶರ್ಮಾ ಇನಿಂಗ್ಸ್‌ ಆರಂಭಿಸಲಿದ್ದಾರೆ.

ಟೂರ್ನಿಯ ಪಾಯಿಂಟ್ಸ್‌ ಟೇಬಲ್‌ನಲ್ಲಿ ಅಗ್ರ ಕ್ರಮಾಂಕದ ಮೇಲೆ ಕಣ್ಣಿಟ್ಟಿರುವ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡ, ಈ ಪಂದ್ಯದಲ್ಲಿ ಗೆಲುವು ಪಡೆಯಲು ಎದುರು ನೋಡುತ್ತಿದೆ. ಕೊನೆಯ ಎರಡು ಪಂದ್ಯಗಳನ್ನು ಸೋತಿರುವ ಆರ್‌ಸಿಬಿ ಸದ್ಯ ಒತ್ತಡದಲ್ಲಿದ್ದು, ಗೆಲುವಿನ ಲಯಕ್ಕೆ ಮರಳಲು ಬಯಸುತ್ತಿದೆ. ಇಲ್ಲಿಯವರೆಗೂ ಆಡಿದ 10 ಪಂದ್ಯಗಳಲ್ಲಿ 6ರಲ್ಲಿ ಗೆಲುವು ಪಡೆದಿದ್ದು, ಇನ್ನುಳಿದ ನಾಲ್ಕರಲ್ಲಿ ಸೋಲು ಅನುಭವಿಸಿದೆ. ಒಟ್ಟು 12 ಅಂಕಗಳನ್ನು ಕಲೆ ಹಾಕಿರುವ ಆರ್‌ಸಿಬಿ ಪಾಯಿಂಟ್ಸ್‌ ಟೇಬಲ್‌ನಲ್ಲಿ ನಾಲ್ಕನೇ ಸ್ಥಾನದಲ್ಲಿದೆ.



ಇನ್ನು ಎದುರಾಳಿ ಮುಂಬೈ ಇಂಡಿಯನ್ಸ್‌ ತಂಡ ಸತತ ಸೋಲುಗಳಿಂದ ಪ್ಲೇಆಫ್ಸ್‌ ಹಾದಿಯನ್ನು ಕಠಿಣವಾಗಿಸಿಕೊಂಡಿದೆ. ಇಲ್ಲಿಯವರೆಗೂ ಆಡಿದ 10 ಪಂದ್ಯಗಳಲ್ಲಿ 7ರಲ್ಲಿ ಸೋಲು ಅನುಭವಿಸಿದ್ದು, ಇನ್ನುಳಿದ ಮೂರು ಪಂದ್ಯಗಳಲ್ಲಿ ಸೋತಿದೆ. ಆ ಮೂಲಕ ಪಾಯಿಂಟ್ಸ್‌ ಟೇಬಲ್‌ನಲ್ಲಿ 9ನೇ ಸ್ಥಾನದಲ್ಲಿದೆ. ಇನ್ನುಳಿದ ನಾಲ್ಕು ಪಂದ್ಯಗಳಲ್ಲಿ ಒಂದರಲ್ಲಿ ಸೋತರೂ ಐದು ಬಾರಿ ಚಾಂಪಿಯನ್ಸ್‌ ಟೂರ್ನಿಯ ಪ್ಲೇಆಫ್ಸ್‌ ರೇಸ್‌ನಿಂದ ಅಧಿಕೃತವಾಗಿ ಹೊರಬೀಳಲಿದೆ. ಹಾಗಾಗಿ ಮುಂಬೈ, ಆರ್‌ಸಿಬಿ ವಿರುದ್ಧ ಬಹಳ ಎಚ್ಚರಿಕೆಯಿಂದ ಆಡಬೇಕಾಗಿದೆ.



ಇತ್ತಂಡಗಳ ಪ್ಲೇಯಿಂಗ್‌ XI

ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು: ಜೇಕಬ್ ಬೆಥೆಲ್, ವಿರಾಟ್ ಕೊಹ್ಲಿ, ದೇವದತ್ ಪಡಿಕ್ಕಲ್, ರಜತ್ ಪಾಟಿದಾರ್ (ನಾಯಕ), ಜಿತೇಶ್ ಶರ್ಮಾ (ವಿಕೆಟ್‌ ಕೀಪರ್‌), ಟಿಮ್ ಡೇವಿಡ್, ಕೃಣಾಲ್ ಪಾಂಡ್ಯ, ರೊಮ್ಯಾರಿಯೊ ಶೆಫರ್ಡ್, ಭುವನೇಶ್ವರ್ ಕುಮಾರ್, ಸುಯಶ್ ಶರ್ಮಾ, ಜಾಶ್ ಹೇಝಲ್‌ವುಡ್, ರಸಿಖ್ ಸಲಾಮ್ ದಾರ್



ಮುಂಬೈ ಇಂಡಿಯನ್ಸ್‌: ರಿಯಾನ್ ರಿಕೆಲ್ಟನ್ (ವಿಕೆಟ್‌ ಕೀಪರ್‌), ರೋಹಿತ್ ಶರ್ಮಾ, ಸೂರ್ಯಕುಮಾರ್ ಯಾದವ್, ತಿಲಕ್ ವರ್ಮಾ, ನಮನ್ ಧೀರ್, ವಿಲ್ ಜಾಕ್ಸ್, ರಾಜ್‌ ಬಾವಾ, ಕಾರ್ಬಿನ್ ಬಾಷ್, ದೀಪಕ್ ಚಾಹರ್, ಜಸ್‌ಪ್ರೀತ್‌ ಬುಮ್ರಾ, ಘಝನ್‌ಫರ್‌