ಯುಗಾದಿ ಹಬ್ಬ ಐಪಿಎಲ್​ ಸುನಿತಾ ವಿಲಿಯಮ್ಸ್​ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

KKR vs RR: ಟಾಸ್‌ ಗೆದ್ದು ಫೀಲ್ಡಿಂಗ್‌ ಆಯ್ದುಕೊಂಡ ಕೋಲ್ಕತಾ ನೈಟ್‌ ರೈಡರ್ಸ್‌!

RR vs KKR Match Toss: ಗುವಾಹಟಿಯ ಬರ್ಸಪರ ಕ್ರಿಕೆಟ್‌ ಕ್ರೀಡಾಂಗಣದಲ್ಲಿ ಇದೀಗ ನಡೆಯುತ್ತಿರುವ 2025ರ ಇಂಡಿಯನ್‌ ಪ್ರೀಮಿಯರ್‌ ಲೀಗ್‌ ಟೂರ್ನಿಯ ಆರನೇ ಪಂದ್ಯದಲ್ಲಿ ಕೋಲ್ಕತಾ ನೈಟ್‌ ರೈಡರ್ಸ್‌ ಹಾಗೂ ರಾಜಸ್ಥಾನ್‌ ರಾಯಲ್ಸ್‌ ತಂಡಗಳು ಕಾದಾಟ ನಡೆಸುತ್ತಿವೆ. ಈ ಪಂದ್ಯದಲ್ಲಿ ಟಾಸ್‌ ಗೆದ್ದ ಕೆಕೆಆರ್‌ ನಾಯಕ ಅಜಿಂಕ್ಯ ರಹಾನೆ, ಚೇಸಿಂಗ್‌ ಆಯ್ಕೆ ಮಾಡಿಕೊಂಡಿದ್ದಾರೆ.

KKR vs RR: ಟಾಸ್‌ ಸೋತ ರಾಜಸ್ಥಾನ್‌ ರಾಯಲ್ಸ್‌ ಮೊದಲ ಬ್ಯಾಟಿಂಗ್‌!

ಟಾಸ್‌ ವೇಳೆ ಕ್ಯಾಮೆರಾಗೆ ಪೋಸ್‌ ಕೊಟ್ಟ ಅಜಿಂಕ್ಯ ರಹಾನೆ ಮತ್ತು ರಿಯಾನ್‌ ಪರಾಗ್‌.

Profile Ramesh Kote Mar 26, 2025 7:37 PM

ಗುವಾಹಟಿ: ಇಲ್ಲಿನ ಬರ್ಸಪರ ಕ್ರಿಕೆಟ್‌ ಕ್ರೀಡಾಂಗಣದಲ್ಲಿ (ಮಾರ್ಚ್‌ 26) ಇದೀಗ ನಡೆಯುತ್ತಿರುವ 2025ರ ಇಂಡಿಯನ್‌ ಪ್ರೀಮಿಯರ್‌ ಲೀಗ್‌ (IPL 2025) ಟೂರ್ನಿಯ ಆರನೇ ಪಂದ್ಯದಲ್ಲಿ ರಾಜಸ್ಥಾನ್‌ ರಾಯಲ್ಸ್‌ ಹಾಗೂ ಕೋಲ್ಕತಾ ನೈಟ್‌ ರೈಡರ್ಸ್‌ (RR vs KKR) ತಂಡಗಳು ಕಾದಾಟ ನಡೆಸುತ್ತಿವೆ. ಈ ಪಂದ್ಯದಲ್ಲಿ ಟಾಸ್‌ ಗೆದ್ದ ಕೆಕೆಆರ್‌ ನಾಯಕ ಅಜಿಂಕ್ಯ ರಹಾನೆ (Ajinkya Rahane) ಮೊದಲು ಬೌಲಿಂಗ್‌ ಆಯ್ಕೆ ಮಾಡಿಕೊಂಡಿದ್ದಾರೆ. ಆ ಮೂಲಕ ರಾಜಸ್ಥಾನ್‌ ರಾಯಲ್ಸ್‌ ತಂಡ ಮೊದಲು ಬ್ಯಾಟಿಂಗ್‌ಗೆ ಆಹ್ವಾನ ನೀಡಿ ಕಡಿಮೆ ಮೊತ್ತಕ್ಕೆ ಆಲ್‌ಔಟ್‌ ಮಾಡುವ ಯೋಜನೆಯನ್ನು ಹಾಕಿಕೊಂಡಿದ್ದಾರೆ. ಈ ಪಂದ್ಯದಲ್ಲಿಯೂ ರಾಜಸ್ಥಾನ್‌ ರಾಯಲ್ಸ್‌ ತಂಡವನ್ನು ರಿಯಾನ್‌ ಪರಾಗ್‌ ಮುನ್ನಡೆಸುತ್ತಿದ್ದಾರೆ.

ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ವಿರುದ್ದ ಆಡಿದ್ದ ಪ್ಲೇಯಿಂಗ್‌ XIನಲ್ಲಿ ಒಂದು ಬದಲಾವಣೆಯನ್ನು ಮಾಡಿಕೊಂಡು ಕೋಲ್ಕತಾ ನೈಟ್‌ ರೈಡರ್ಸ್‌ ತಂಡ, ರಾಜಸ್ಥಾನ್‌ ರಾಯಲ್ಸ್‌ ವಿರುದ್ಧದ ಪಂದ್ಯಕ್ಕೆ ಇಳಿದಿದೆ. ಸ್ಪಿನ್‌ ಆಲ್‌ರೌಂಡರ್‌ ಸುನೀಲ್‌ ನರೇನ್‌ ಅವರು ಸಂಪೂರ್ಣ ಫಿಟ್‌ ಇಲ್ಲದ ಕಾರಣ ಅವರ ಬದಲು ಮೊಯೀನ್‌ ಅಲಿ ಅವರಿಗೆ ಆಡುವ ಬಳಗದಲ್ಲಿ ಸ್ಥಾನವನ್ನು ನೀಡಲಾಗಿದೆ ಎಂದು ಟಾಸ್‌ ವೇಳೆ ಅಜಿಂಕ್ಯ ರಹಾನೆ ತಿಳಿಸಿದ್ದಾರೆ.

Virat Kohli: ಕೆಕೆಆರ್‌ ಪಂದ್ಯದಲ್ಲಿ ಕೊಹ್ಲಿ ಕಾಲಿಗೆ ಬಿದ್ದು ನಮಸ್ಕರಿಸಿದ ಅಭಿಮಾನಿ

ಇನ್ನು ರಾಜಸ್ಥಾನ್‌ ರಾಯಲ್ಸ್‌ ತಂಡದಲ್ಲಿಯೂ ಒಂದು ಬದಲಾವಣೆಯನ್ನು ತರಲಾಗಿದೆ ಎಂದು ನಾಯಕ ರಿಯಾನ್‌ ಪರಾಗ್‌ ತಿಳಿಸಿದ್ದಾರೆ. ಫಝಲಕ್‌ ಫಾರೂಕಿ ಅವರ ಸ್ಥಾನದಲ್ಲಿ ಸ್ಪಿನ್‌ ಆಲ್‌ರೌಂಡರ್‌ ವಾನಿಂದು ಹಸರಂಗ ಪ್ಲೇಯಿಂಗ್‌ XIಗೆ ಬಂದಿದ್ದಾರೆ. ರಾಜಸ್ಥಾನ್‌ ರಾಯಲ್ಸ್‌ ತಂಡ ತನ್ನ ಮೊದಲನೇ ಪಂದ್ಯದಲ್ಲಿ ಸನ್‌ರೈಸರ್ಸ್‌ ಹೈದರಾಬಾದ್‌ ವಿರುದ್ಧ 44 ರನ್‌ಗಳಿಂದ ಸೋಲು ಅನುಭವಿಸಿತ್ತು.



ಇನ್ನು ಅಜಿಂಕ್ಯ ರಹಾನೆ ನಾಯಕತ್ವದ ಕೆಕೆಆರ್‌ ಕೂಡ ತನ್ನ ಮೊದಲನೇ ಪಂದ್ಯದಲ್ಲಿ ಆರ್‌ಸಿಬಿ ಎದುರು 7 ವಿಕೆಟ್‌ಗಳಿಂದ ಸೋಲು ಅನುಭವಿಸಿತ್ತು. ಇದೀಗ ಎರಡೂ ತಂಡಗಳು ಪ್ರಸಕ್ತ ಟೂರ್ನಿಯಲ್ಲಿ ಮೊದಲನೇ ಗೆಲುವು ಪಡೆಯಲು ಎದುರು ನೋಡುತ್ತಿವೆ.



ಇತ್ತಂಡಗಳ ಪ್ಲೇಯಿಂಗ್‌ XI

ಕೋಲ್ಕತಾ ನೈಟ್‌ ರೈಡರ್ಸ್:‌ ಕ್ವಿಂಟನ್‌ ಡಿ ಕಾಕ್‌ (ವಿ.ಕೀ), ವೆಂಕಟೇಶ್‌ ಅಯ್ಯರ್‌, ಅಜಿಂಕ್ಯ ರಹಾನೆ (ನಾಯಕ), ರಿಂಕು‌ ಸಿಂಗ್, ಮೊಯೀನ್‌ ಅಲಿ, ಆಂಡ್ರೆ ರಸೆಲ್‌, ರಮಣದೀಪ್‌ ಸಿಂಗ್‌, ಸ್ಪೆನ್ಸರ್‌ ಜಾನ್ಸನ್‌, ವೈಭವ್‌ ಅರೋರ, ಹರ್ಷಿತ್‌ ರಾಣಾ, ವರುಣ್‌ ಚಕ್ರವರ್ತಿ



ರಾಜಸ್ಥಾನ್‌ ರಾಯಲ್ಸ್‌: ಯಶಸ್ವಿ ಜೈಸ್ವಾಲ್‌, ಸಂಜು ಸ್ಯಾಮ್ಸನ್‌, ನಿತೀಶ್‌ ರಾಣಾ, ರಿಯಾನ್‌ ಪರಾಗ್‌ (ನಾಯಕ), ಧ್ರುವ್‌ ಜುರೆಲ್‌ (ವಿ.ಕೀ), ಶಿಮ್ರಾನ್‌ ಹೆಟ್ಮಾಯರ್‌, ವಾನಿಂದು ಹಸರಂಗ, ಜೋಫ್ರಾ ಆರ್ಚರ್‌, ಮಹೇಶ್‌ ತೀಕ್ಷಣ, ತುಷಾರ್‌ ದೇಶಪಾಂಡೆ, ಸಂದೀಪ್‌ ಶರ್ಮಾ