RCB vs RR: ವೈಭವ್ ಸೂರ್ಯವಂಶಿ ಅಬ್ಬರದ ಬ್ಯಾಟಿಂಗ್‌ಗೆ ಶರಣಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು!
RCB vs RR Match Highlights: ವೈಭವ್ ಸೂರ್ಯವಂಶಿ ಸ್ಪೋಟಕ ಬ್ಯಾಟಿಂಗ್ ಎದುರು ಕಂಗಾಲಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ, 2026ರ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ತನ್ನ ಮೂರನೇ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ಎದುರು 6 ವಿಕೆಟ್‌ಗಳ ಸೋಲು ಅನುಭವಿಸಿತು. ಆ ಮೂಲಕ 19ನೇ ಆವೃತ್ತಿಯಲ್ಲಿ ಆರ್‌ಸಿಬಿ ಮೊದಲನೇ ಸೋಲು ಅನುಭವಿಸಿತು.
ರಾಜಸ್ಥಾನ್ ರಾಯಲ್ಸ್ ಎದುರು ಎಡವಿದ ಆರ್‌ಸಿಬಿ. -
ಗುವಾಹಟಿ: ಇಂಡಿಯನ್ ಪ್ರೀಮಿಯರ್ ಲೀಗ್ 2026ರ ಸಾಲಿನಲ್ಲಿ(IPL 2026) ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ಹ್ಯಾಟ್ರಿಕ್ ಗೆಲುವಿನ ಕನಸನ್ನು ವೈಭವ್ ಸೂರ್ಯವಂಶಿ (Vaibhav Sooryavanshi) ಭಗ್ನಗೊಳಿಸಿದರು. ಅವರು ತಮ್ಮ ಸ್ಪೋಟಕ ಬ್ಯಾಟಿಂಗ್ ನೆರವಿನಿಂದ ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಟೂರ್ನಿಯ 16ನೇ ಪಂದ್ಯದಲ್ಲಿ ಆರ್‌ಸಿಬಿ ಎದುರು 6 ವಿಕೆಟ್‌ಗಳ ಗೆಲುವು ತಂದುಕೊಟ್ಟರು. ಸತತ ನಾಲ್ಕನೇ ಗೆಲುವಿನ ಮೂಲಕ ಆರ್‌ಆರ್, ಟೂರ್ನಿಯ ಪಾಯಿಂಟ್ಸ್ ಟೇಬಲ್‌ನಲ್ಲಿ ಅಗ್ರ ಸ್ಥಾನವನ್ನು ಇನ್ನಷ್ಟು ಗಟ್ಟಿ ಮಾಡಿಕೊಂಡಿತು. ಕೇವಲ 26 ಎಸೆತಗಳಲ್ಲಿ 78 ರನ್ ಚಚ್ಚಿದ 15ರ ವಯಸ್ಸಿನ ವೈಭವ್ ಪಂದ್ಯ ಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು.
ಶುಕ್ರವಾರ ಇಲ್ಲಿನ ಬರ್ಸಪರ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆದಿದ್ದ ಆರ್‌ಸಿಬಿ ಹಾಗೂ ಆರ್‌ಆರ್ ನಡುವಣ ಪಂದ್ಯಕ್ಕೂ ಮುನ್ನ ವೈಭವ್ ಸೂರ್ಯವಂಶಿ ಮೇಲೆ ಎಲ್ಲರೂ ಕಣ್ಣಿಟ್ಟಿದ್ದರು. ಅದರಂತೆ ವೈಭವ್ ಬೆಂಗಳೂರು ಎದುರು ತಮ್ಮ ಬ್ಯಾಟಿಂಗ್ ಸಾಮರ್ಥ್ಯವನ್ನು ಸಾಬೀತುಪಡಿಸಿದರು. 202 ರನ್ ಗುರಿಯನ್ನು ಹಿಂಬಾಲಿಸಿದ ರಾಜಸ್ಥಾನ್ ರಾಯಲ್ಸ್ ತಂಡ ಬಹುಬೇಗ ಯಶಸ್ವಿ ಜೈಸ್ವಾಲ್ ಅವರ ವಿಕೆಟ್ ಅನ್ನು ಕಳೆದುಕೊಂಡಿತು. ಆದರೆ, ವೈಭವ್ ಸೂರ್ಯವಂಶಿ ಮಾತ್ರ ಆರ್‌ಸಿಬಿ ಬೌಲರ್‌ಗಳ ಎದುರು ಲೀಲಾ ಜಾಲವಾಗಿ ಬ್ಯಾಟ್ ಬೀಸಿ ಕೇವಲ 15 ಎಸೆತಗಳಲ್ಲಿ ಅರ್ಧಶತಕವನ್ನು ಪೂರ್ಣಗೊಳಿಸಿದರು ಹಾಗೂ ಧ್ರುವ್ ಜುರೆಲ್ ಜೊತೆ ಎರಡನೇ ವಿಕೆಟ್‌ಗೆ ಕೇವಲ 37 ಎಸೆತಗಳಲ್ಲಿ 108 ರನ್‌ಗಳನ್ನು ಚಚ್ಚಿದರು. ಇದರ ಜೊತೆಗೆ ಪವರ್‌ಪ್ಲೇನಲ್ಲಿ ರಾಜಸ್ಥಾನ್ ತಂಡ 97 ರನ್‌ಗಳನ್ನು ಕಲೆ ಹಾಕುವಲ್ಲಿ ಬಹುಮುಖ್ಯ ಪಾತ್ರವನ್ನು ವಹಿಸಿದರು.
IPL 2026: ವಿರಾಟ್ ಕೊಹ್ಲಿ ಎದುರು ಯಾರಿಂದಲೂ ಸಾಧ್ಯವಾಗದ ದಾಖಲೆ ಬರೆದ ರವಿ ಬಿಷ್ಣೋಯ್!
300ರ ಸ್ಟ್ರೈಕ್ ರೇಟ್‌ನಲ್ಲಿ 78 ರನ್ ಸಿಡಿಸಿದ ವೈಭವ್
ರಾಜಸ್ಥಾನ್ ರಾಯಲ್ಸ್ ತಂಡದ ಚೇಸಿಂಗ್‌ನಲ್ಲಿ ವೈಭವ್ ಸೂರ್ಯವಂಶಿ ತಮ್ಮ ಆಕ್ರಮಣಕಾರಿ ಬ್ಯಾಟಿಂಗ್ ಮೂಲಕ ಗಮನ ಸೆಳೆದರು. ಅವರು ಆಡಿದ ಕೇವಲ 26 ಎಸೆತಗಳಲ್ಲಿ 7 ಸಿಕ್ಸರ್ ಹಾಗೂ 8 ಬೌಂಡರಿಗಳೊಂದಿಗೆ 300ರ ಸ್ಟ್ರೈಕ್ ರೇಟ್‌ನಲ್ಲಿ 78 ರನ್ ಚಚ್ಚಿದರು. ಆ ಮೂಲಕ ತಂಡವನ್ನು ಗೆಲುವಿನ ಸನಿಹ ತಂದು ಕೃಣಾಲ್ ಪಾಂಡ್ಯಗೆ ವಿಕೆಟ್ ಒಪ್ಪಿಸಿದರು. ವೈಭವ್ ಔಟ್ ಆದ ಬಳಿಕ ಕ್ರೀಸ್‌ಗೆ ಶಿಮ್ರಾನ್ ಹೆಟ್ಮಾಯೆರ್ ಅವರನ್ನೂ ಕೂಡ ಕೃಣಾಲ್ ಮುಂದಿನ ಎಸೆತದಲ್ಲಿ ಔಟ್ ಮಾಡಿದರು. ರಿಯಾನ್ ಪರಾಗ್ ಕೇವಲ 3 ರನ್ ಗಳಿಸಿದ ಬಳಿಕ ಜಾಶ್ ಹೇಝಲ್‌ವುಡ್‌ಗೆ ಶರಣಾದರು. ಆದರೆ, ಒಂದು ತುದಿಯಲ್ಲಿ ನಿಂತು ಜವಾಬ್ದಾರಿಯುತವಾಗಿ ಬ್ಯಾಟ್ ಮಾಡಿದ ಧ್ರುವ್ ಜುರೆಲ್, 43 ಎಸೆತಗಳಲ್ಲಿ ಮೂರು ಸಿಕ್ಸರ್ ಹಾಗೂ 8 ಬೌಂಡರಿಗಳೊಂದಿಗೆ ಅಜೇಯ 81 ರನ್ ಗಳಿಸಿದರು. ಆ ಮೂಲಕ ರಾಜಸ್ಥಾನ್ ರಾಯಲ್ಸ್ 18 ಓವರ್‌ಗಳಿಗೆ 4 ವಿಕೆಟ್ ನಷ್ಟಕ್ಕೆ 202 ರನ್ ಗಳಿಸಿ ತನ್ನ ಅಜೇಯ ಓಟವನ್ನು ಮುಂದುವರಿಸಿತು.
𝙐𝙣𝙗𝙚𝙖𝙩𝙚𝙣 & 𝙐𝙣𝙨𝙩𝙤𝙥𝙥𝙖𝙗𝙡𝙚 🫡
— IndianPremierLeague (@IPL) April 10, 2026
A sensational win for #RR to sign off from Guwahati in style 🩷
Scorecard ▶️ https://t.co/X76bJjmq1j#TATAIPL | #KhelBindaas | #RRvRCB | @rajasthanroyals pic.twitter.com/eNq8gglcrL
ಆರ್‌ಸಿಬಿಗೆ ಆರಂಭಿಕ ಆಘಾತ ನೀಡಿದ್ದ ಜೋಫ್ರಾ ಆರ್ಚರ್
ಇದಕ್ಕೂ ಮುನ್ನ ಟಾಸ್ ಸೋತು ಮೊದಲು ಬ್ಯಾಟ್ ಮಾಡುವಂತಾಗಿದ್ದ ಆರ್‌ಸಿಬಿಗೆ ಮೊಟ್ಟ ಮೊದಲ ಎಸೆತದಲ್ಲಿಯೇ ಜೋಫ್ರಾ ಆರ್ಚರ್, ಆರಂಭಿಕ ಫಿಲ್ ಸಾಲ್ಟ್ ಅವರನ್ನು ಔಟ್ ಮಾಡಿ ಶಾಕ್ ನೀಡಿದ್ದರು. ನಂತರ ದೇವದತ್ ಪಡಿಕ್ಕಲ್ ಹಾಗೂ ವಿರಾಟ್ ಕೊಹ್ಲಿ 3 ಓವರ್‌ಗಳಿಗೆ 45 ರನ್ ಜೊತೆಯಾಟವನ್ನು ಆಡಿದರು. ಆದರೆ, ಪಡಿಕ್ಕಲ್ 14 ರನ್ ಗಳಿಸಿ ಔಟ್ ಆದರು. ವಿರಾಟ್ ಕೊಹ್ಲಿ 16 ಎಸೆತಗಳಲ್ಲಿ 32 ರನ್ ಗಳಿಸಿ ಉತ್ತಮ ಆರಂಭ ಪಡೆದ ಹೊರತಾಗಿಯೂ ರವಿ ಬಿಷ್ಣೋಯ್ ದೂಸ್ರಾ ಎಸೆತದಲ್ಲಿ ಕ್ಲೀನ್ ಬೌಲ್ಡ್ ಆದರು.
Another DAZZLING knock from the teenager 🫡
— IndianPremierLeague (@IPL) April 10, 2026
Vaibhav Sooryavanshi is adjudged the Player of the Match for his 78 off only 26 balls 🌟
RELIVE HIS KNOCK ▶️ https://t.co/gsSXi2CeAe#TATAIPL | #KhelBindaas | #RRvRCB | @rajasthanroyals pic.twitter.com/J67GEbDY9x
ರಜತ್ ಪಾಟಿದಾರ್ ಆಕರ್ಷಕ ಅರ್ಧಶತಕ
ಕೃಣಾಲ್ ಪಾಂಡ್ಯ, ಜಿತೇಶ್ ಶರ್ಮಾ, ಟಿಮ್ ಡೇವಿಡ್ ಮಧ್ಯಮ ಕ್ರಮಾಂಕದಲ್ಲಿ ವಿಫಲರಾದರು. ರೊಮ್ಯಾರಿಯೊ ಶೆಫರ್ಡ್ 22 ರನ್ ಗಳಿಸಿದ ಬಳಿಕ ವಿಕೆಟ್ ಒಪ್ಪಿಸಿದರು. ಆದರೆ, ಒಂದು ತುದಿಯಲ್ಲಿ ಗಟ್ಟಿಯಾಗಿ ನಿಂತು ದೀರ್ಘಾವಧಿ ಬ್ಯಾಟ್ ಬೀಸಿದ ನಾಯಕ ರಜತ್ ಪಾಟಿದಾರ್, 40 ಎಸೆತಗಳಲ್ಲಿ 4 ಸಿಕ್ಸರ್ ಹಾಗೂ 4 ಬೌಂಡರಿಯೊಂದಿಗೆ 63 ರನ್ ಗಳಿಸಿದರು. ಆ ಮೂಲಕ ಆರ್‌ಸಿಬಿ ಮೊತ್ತವನ್ನು 160ರ ಗಡಿ ದಾಟಿಸಿ ಔಟ್ ಆದರು. ಆದರೆ, ಇಂಪ್ಯಾಕ್ಟ್ ಆಗಿ ಬಂದಿದ್ದ ವೆಂಕಟೇಶ್ ಅಯ್ಯರ್ 15 ಎಸೆತಗಳಲ್ಲಿ ಅಜೇಯ 29 ರನ್ ಸಿಡಿಸಿ ಆರ್‌ಸಿಬಿ ಮೊತ್ತವನ್ನು 200ರ ಗಡಿ ದಾಟಿಸಿದರು. ಆರ್‌ಸಿಬಿ ಅಂತಿಮವಾಗಿ 20 ಓವರ್‌ಗಳಿಗೆ 8 ವಿಕೆಟ್ ನಷ್ಟಕ್ಕೆ 201 ರನ್‌ಗಳನ್ನು ಕಲೆ ಹಾಕಿತ್ತು.
ಆರ್‌ಆರ್ ಪರ ರವಿ ಬಿಷ್ಣೋಯ್, ಜೋಫ್ರಾ ಆರ್ಚರ್ ಹಾಗೂ ಬ್ರಿಜೇಶ್ ಶರ್ಮಾ ತಲಾ ಎರಡೆರಡು ವಿಕೆಟ್ ಕಬಳಿಸಿದರು.