ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

IND vs AFG: ಅಫ್ಘಾನಿಸ್ತಾನ ಏಕದಿನ ಸರಣಿಯಲ್ಲಿ ವಿರಾಟ್‌ ಕೊಹ್ಲಿ ಸ್ಥಾನಕ್ಕೆ ಋತುರಾಜ್‌ ಗಾಯಕ್ವಾಡ್‌?

IND vs AFG: ಭಾರತ ಹಾಗೂ ಅಫ್ಘಾನಿಸ್ತಾನ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿಯ ಭಾರತ ತಂಡಕ್ಕೆ ವಿರಾಟ್‌ ಕೊಹ್ಲಿ ಅಲಭ್ಯರಾಗಿದ್ದಾರೆ. ಅವರು ತಂಡಕ್ಕೆ ಆಯ್ಕೆಯಾಗಿದ್ದರೂ ಸ್ನಾಯು ಸೆಳೆತದ ಗಾಯಕ್ಕೆ ತುತ್ತಾಗಿದ್ದಾರೆ. ಹಾಗಾಗಿ ಅವರ ಸ್ಥಾನಕ್ಕೆ ಋತುರಾಜ್‌ ಗಾಯಕ್ವಾಡ್‌ಗೆ ಅವಕಾಶ ನೀಡುವ ಸಾಧ್ಯತೆ ಇದೆ.

ಋತುರಾಜ್‌ ಗಾಯಕ್ವಾಡ್‌ ಭಾರತ ಒಡಿಐ ತಂಡದಲ್ಲಿ ಸ್ಥಾನ?

ನವದೆಹಲಿ: ಸ್ನಾಯು ಸೆಳೆತದ ಗಾಯದಿಂದಾಗಿ ಆಧುನಿಕ ಬ್ಯಾಟಿಂಗ್‌ ದಿಗ್ಗಜ ವಿರಾಟ್‌ ಕೊಹ್ಲಿ(Virat Kohli) ಅಫ್ಘಾನಿಸ್ತಾನ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿಯಿಂದ (IND vs AFG) ಹೊರ ನಡೆದಿದ್ದಾರೆ. ಹಾಗಾಗಿ ಅವರು ಸ್ಥಾನಕ್ಕೆ ಭಾರತ ಏಕದಿನ ತಂಡದಲ್ಲಿ ಯುವ ಬ್ಯಾಟ್ಸ್‌ಮನ್‌ ಋತುರಾಜ್‌ ಗಾಯಕ್ವಾಡ್‌ಗೆ (Ruturaj Gaikwad) ಅವಕಾಶ ನೀಡಬಹುದೆಂದ ಇಂಡಿಯನ್‌ ಎಕ್ಸ್‌ಪ್ರೆಸ್‌ ವರದಿ ಮಾಡಿದೆ. ಏಕೆಂದರೆ ಅವರು ದೇಶಿ 50 ಓವರ್‌ಗಳ ಸ್ವರೂಪದಲ್ಲಿ ಅತ್ಯುತ್ತಮ ದಾಖಲೆಯನ್ನು ಹೊಂದಿದ್ದಾರೆ. ಮೂರು ಪಂದ್ಯಗಳ ಏಕದಿನ ಸರಣಿ ಜೂನ್‌ 13 ರಂದು ಆರಂಭವಾಗಲಿದೆ.

ಮೇ 31 ರಂದು ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಗುಜರಾತ್‌ ಟೈಟನ್ಸ್‌ ವಿರುದ್ಧದ 2026ರ ಇಂಡಿಯನ್‌ ಪ್ರೀಮಿಯರ್‌ ಲೀಗ್‌ ಟೂರ್ನಿಯ ಫೈನಲ್‌ ಪಂದ್ಯದಲ್ಲಿ ವಿರಾಟ್‌ ಕೊಹ್ಲಿ ಸ್ನಾಯು ಸೆಳೆತದ ಗಾಯಕ್ಕೆ ತುತ್ತಾಗಿದ್ದರು. ಇದರ ಹೊರತಾಗಿಯೂ ಅವರು ಬ್ಯಾಟಿಂಗ್‌ ಮುಂದುವರಿಸಿ 42 ಎಸೆತಗಳಲ್ಲಿ ಅಜೇಯ 75 ರನ್‌ಗಳನ್ನು ಸಿಡಿಸುವ ಮೂಲಕ ಆರ್‌ಸಿಬಿ ತಂಡವನ್ನು ಗೆಲ್ಲಿಸಿದ್ದರು. ಈ ಗೆಲುವಿನ ಮೂಲಕ ರಜತ್‌ ಪಾಟಿದಾರ್‌ ನಾಯಕತ್ವದ ಆರ್‌ಸಿಬಿ ತಂಡ ಸತತ ಎರಡನೇ ಬಾರಿ ಐಪಿಎಲ್‌ ಟ್ರೋಫಿಯನ್ನು ಮುಡಿಗೇರಿಸಿಕೊಂಡಿತ್ತು.

IND vs AFG: ಅಫ್ಘಾನಿಸ್ತಾನ ವಿರುದ್ಧದ ಏಕದಿನ ಸರಣಿಗೆ ರೋಹಿತ್‌ ಶರ್ಮಾ ಅನುಮಾನ!

ಐಪಿಎಲ್‌ ಟೂರ್ನಿಯಲ್ಲಿ ರಿಯಾನ್‌ ಪರಾಗ್‌ ಅವರು ಗಾಯಕ್ಕೆ ತುತ್ತಾಗಿದ್ದ ಹಿನ್ನೆಲೆಯಲ್ಲಿ ಭಾರತ ಎ ತಂಡದಲ್ಲಿ ಅವರ ಸ್ಥಾನಕ್ಕೆ ಇತ್ತೀಚೆಗೆ ಋತುರಾಜ್‌ ಗಾಯಕ್ವಾಡ್‌ ಅವರನ್ನು ಸೂಚಿಸಲಾಗಿತ್ತು. ವರದಿಗಳ ಪ್ರಕಾರ ಗಾಯಕ್ವಾಡ್‌ ಅವರನ್ನು ಭಾರತ ಹಿರಿಯರ ತಂಡಕ್ಕೆ ಸೇರಿಸಿಕೊಳ್ಳುವ ಹಿನ್ನೆಲೆಯಲ್ಲಿ ಶ್ರೀಲಂಕಾ ಪ್ರವಾಸದ ತ್ರಿಕೋನ ಸರಣಿಗೆ ಆರ್‌ಸಿಬಿ ನಾಯಕ ರಜತ್‌ ಪಾಟಿದಾರ್‌ಗೆ ಅವಕಾಶ ನೀಡಬಹುದು ಎಂದು ಹೇಳಲಾಗುತ್ತಿದೆ. ಶ್ರೀಲಂಕಾ ಎ, ಅಫ್ಘಾನಿಸ್ತಾನ ಎ ವಿರುದ್ಧ ಭಾರತ ಎ ಇಲ್ಲಿ ತ್ರಿಕೋನ ಸರಣಿಯನ್ನು ಆಡಲಿದೆ.

ಕಳೆದ 18 ತಿಂಗಳಲ್ಲಿ ಏಕದಿನ (ODI) ಕ್ರಿಕೆಟ್‌ನಲ್ಲಿ ತೋರಿದ ಅದ್ಭುತ ಫಾರ್ಮ್‌ನ್ನು ಗಮನಿಸಿದರೆ, ವಿರಾಟ್ ಕೊಹ್ಲಿಯ ಅನುಪಸ್ಥಿತಿ ತಂಡಕ್ಕೆ ಮಹತ್ವದ ಹಿನ್ನಡೆಯಾಗಿ ಪರಿಣಮಿಸಿದೆ. ಅನುಭವಿ ಬ್ಯಾಟರ್ ಆಗಿರುವ ಕೊಹ್ಲಿ, 2025ರಲ್ಲಿ 13 ಏಕದಿನ ಪಂದ್ಯಗಳಿಂದ 651 ರನ್‌ಗಳನ್ನು ಗಳಿಸಿ ಭಾರತದ ಪರ ಅತಿ ಹೆಚ್ಚು ರನ್‌ಗಳಿಸಿದ ಆಟಗಾರರಾಗಿ ಹೊರಹೊಮ್ಮಿದ್ದರು. ಈ ಅವಧಿಯಲ್ಲಿ ಅವರು ಮೂರು ಶತಕಗಳು ಮತ್ತು ನಾಲ್ಕು ಅರ್ಧಶತಕಗಳನ್ನು ದಾಖಲಿಸಿದ್ದರು.

IND vs AFG: ಅಫ್ಘಾನಿಸ್ತಾನ ವಿರುದ್ಧದ ಏಕದಿನ ಸರಣಿಯಿಂದ ವಿರಾಟ್‌ ಕೊಹ್ಲಿ ಔಟ್‌!

ಇದರ ಜೊತೆಗೆ, ಅವರು 2026ರಲ್ಲಿಯೂ ತಮ್ಮ ಉತ್ತಮ ಪ್ರದರ್ಶನವನ್ನು ಮುಂದುವರಿಸಿ, ನ್ಯೂಜಿಲೆಂಡ್ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ 240 ರನ್‌ಗಳನ್ನು ಕಲೆಹಾಕಿದರು. ಈ ಸರಣಿಯಲ್ಲಿ ಒಂದು ಶತಕ ಹಾಗೂ ಒಂದು ಅರ್ಧಶತಕವೂ ಅವರ ಬ್ಯಾಟ್‌ನಿಂದ ಮೂಡಿಬಂದಿತ್ತು.

ಅಫ್ಘಾನಿಸ್ತಾನ ಏಕದಿನ ಸರಣಿಗೆ ಭಾರತ ತಂಡ

ಶುಭಮನ್ ಗಿಲ್ (ನಾಯಕ), ರೋಹಿತ್ ಶರ್ಮಾ, ಶ್ರೇಯಸ್ ಅಯ್ಯರ್ (ಉಪನಾಯಕ), ಕೆಎಲ್ ರಾಹುಲ್ (ವಿಕೆಟ್-ಕೀಪರ್), ಇಶಾನ್ ಕಿಶನ್ (ವಿಕೆಟ್-ಕೀಪರ್), ಹಾರ್ದಿಕ್ ಪಾಂಡ್ಯ, ನಿತೀಶ್ ಕುಮಾರ್ ರೆಡ್ಡಿ, ವಾಷಿಂಗ್ಟನ್ ಸುಂದರ್, ಕುಲ್ದೀಪ್ ಯಾದವ್, ಅರ್ಷದೀಪ್ ಸಿಂಗ್, ಪ್ರಸಿಧ್‌ ಕೃಷ್ಣ, ಪ್ರಿನ್ಸ್‌ ಯಾದವ್, ಗುರ್ನೂರ್‌ ಯಾದವ್‌, ಹರ್ಷ್‌ ದುಬೇ, ಋತುರಾಜ್‌ ಗಾಯಕ್ವಾಡ್‌ (ಸಾಧ್ಯತೆ)