SA vs AUS: ದಕ್ಷಿಣ ಆಫ್ರಿಕಾ ಆಲ್‌ರೌಂಡರ್ ಕಾರ್ಬಿನ್ ಬಾಷ್‌ಗೆ ದಂಡ ವಿಧಿಸಿದ ಐಸಿಸಿ!
ಆಸ್ಟ್ರೇಲಿಯಾ ವಿರುದ್ಧದ ಎರಡನೇ ಟಿ20ಐ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾದ ಆಲ್‌ರೌಂಡರ್ ಕಾರ್ಬಿನ್ ಬಾಷ್ ಐಸಿಸಿ ನೀತಿ ಸಂಹಿತೆಯನ್ನು ಉಲ್ಲಂಘಿಸಿದ್ದಕ್ಕಾಗಿ ದಂಡವನ್ನು ವಿಧಿಸಲಾಗಿದೆ. ಅವರಿಗೆ ಒಂದು ಡಿಮೆರಿಟ್ ಪಾಯಿಂಟ್ ನೀಡಲಾಗಿದೆ. ಅಂದ ಹಾಗೆ ಈ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ತಂಡ ಗೆಲುವು ಪಡೆದಿತ್ತು.

ದಕ್ಷಿಣ ಆಫ್ರಿಕಾ ಆಲ್‌ರೌಂಡರ್ ಕಾರ್ಬಿನ್ ಬಾಷ್‌ಗೆ ದಂಡ.

ನವದೆಹಲಿ:ಆಸ್ಟ್ರೇಲಿಯಾ ವಿರುದ್ಧದ ಎರಡನೇ ಟಿ20ಐ ಪಂದ್ಯದ (AUS vs SA) ವೇಳೆ ಐಸಿಸಿ ನೀತಿ ಸಂಹಿತೆಯನ್ನು ಉಲ್ಲಂಘಿಸಿದ್ದಕ್ಕಾಗಿ ದಕ್ಷಿಣ ಆಫ್ರಿಕಾದ ಆಲ್‌ರೌಂಡರ್ ಕಾರ್ಬಿನ್ ಬಾಷ್ (Corbin Bosch) ತಪ್ಪಿತಸ್ಥರೆಂದು ಕಂಡುಬಂದಿದೆ. ಈ ಕಾರಣದಿಂದಾಗಿ ಅವರಿಗೆ ಒಂದು ಡಿಮೆರಿಟ್ ಅಂಕವನ್ನು ನೀಡಲಾಗಿದೆ. ಕಾರ್ಬಿನ್ ಬಾಷ್ ಆಟಗಾರರು ಮತ್ತು ಸಹಾಯಕ ಸಿಬ್ಬಂದಿ ಸಂಬಂಧಿತ ಐಸಿಸಿ (ICC) ನೀತಿ ಸಂಹಿತೆಯ ಆರ್ಟಿಕಲ್ 2.5 ಅನ್ನು ಉಲ್ಲಂಘಿಸಿದ್ದಾರೆ ಎಂದು ಕಂಡುಬಂದಿದೆ. ಇದು ಅಂತಾರಾಷ್ಟ್ರೀಯ ಪಂದ್ಯದ ಸಮಯದಲ್ಲಿ ಬ್ಯಾಟ್ಸ್‌ಮನ್ ಔಟ್ ಆಗಿರುವಾಗ ಅವರ ಭಾಷೆ, ನಡವಳಿಕೆ ಅಥವಾ ಸನ್ನೆಯಿಂದ ಅವಮಾನಿಸುವುದು ಅಥವಾ ಪ್ರಚೋದಿಸುವುದಕ್ಕೆ ಸಂಬಂಧಿಸಿದೆ.
ಮಂಗಳವಾರ ನಡೆದಿದ್ದ ಪಂದ್ಯದ ಸಮಯದಲ್ಲಿ ಆಸ್ಟ್ರೇಲಿಯಾದ ಇನಿಂಗ್ಸ್‌ನ 17ನೇ ಓವರ್‌ನಲ್ಲಿ ಬೆನ್ ದ್ವಾರಶಿಯಸ್ ಅವರನ್ನು ಔಟ್ ಮಾಡಿದ ನಂತರ ಕಾರ್ಬಿನ್ ಬಾಷ್ ಬ್ಯಾಟ್ಸ್‌ಮನ್‌ಗೆ ಡಗೌಟ್‌ಗೆ ಹಿಂತಿರುಗಲು ಸನ್ನೆ ಮಾಡಿದರು. ಬಾಷ್ ಅಂತಾರಾಷ್ಟ್ರೀಯ ಮಟ್ಟದಲ್ಲಿ ತಮ್ಮ 11ನೇ ಪಂದ್ಯವನ್ನು ಆಡುತ್ತಿದ್ದರು. ಇದು ಅವರ ಮೊದಲ ಅಪರಾಧ. ಕಾರ್ಬಿನ್ ಬಾಷ್ 2025ರ ಐಪಿಎಲ್‌ನಲ್ಲಿ ಮುಂಬೈ ಇಂಡಿಯನ್ಸ್ ಪರ ಆಡುತ್ತಿದ್ದರು. ಅವರು ಈ ವರ್ಷ ಐಪಿಎಲ್‌ಗೆ ಪಾದಾರ್ಪಣೆ ಮಾಡಿದ್ದರು. ಬಾಷ್ ಅಪರಾಧ ಮತ್ತು ಶಿಕ್ಷೆಯನ್ನು ಒಪ್ಪಿಕೊಂಡಿದ್ದಾರೆ. ಡಾರ್ವಿನ್‌ನಲ್ಲಿ ನಡೆದಿದ್ದ ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟ್ ಮಾಡಿದ್ದ ದಕ್ಷಿಣ ಆಫ್ರಿಕಾ ತಂಡ ಏಳು ವಿಕೆಟ್‌ಗಳ ನಷ್ಟಕ್ಕೆ 218 ರನ್ ಗಳಿಸಿತ್ತು.
AUS vs SA: 16 ವರ್ಷದ ವಾರ್ನರ್ ದಾಖಲೆ ಮುರಿದ ಟಿಮ್ ಡೇವಿಡ್
ದಕ್ಷಿಣ ಆಫ್ರಿಕಾ 57 ರನ್‌ಗಳಿಗೆ ಮೂರು ವಿಕೆಟ್‌ಗಳನ್ನು ಕಳೆದುಕೊಂಡಿತ್ತು. ಈ ವೇಳೆ ಡೆವಾಲ್ಡ್ ಬ್ರೆವಿಸ್, ಟ್ರಿಸ್ಟಾನ್ ಸ್ಟಬ್ಸ್ ಜೊತೆ ನಾಲ್ಕನೇ ವಿಕೆಟ್‌ಗೆ 126 ರನ್‌ಗಳ ಪಾಲುದಾರಿಕೆ ಮಾಡುವ ಮೂಲಕ ತಂಡವನ್ನು ಮುನ್ನಡೆಸಿದರು. ಬ್ರೆವಿಸ್ 56 ಎಸೆತಗಳಲ್ಲಿ ಎಂಟು ಸಿಕ್ಸರ್‌ಗಳು ಮತ್ತು 12 ಬೌಂಡರಿಗಳನ್ನು ಒಳಗೊಂಡಂತೆ ಅಜೇಯ 125 ರನ್‌ಗಳನ್ನು ಗಳಿಸಿದರು. ಅವರಲ್ಲದೆ, ಸ್ಟಬ್ಸ್ 22 ಎಸೆತಗಳಲ್ಲಿ 31 ರನ್‌ಗಳನ್ನು ತಂಡದ ಖಾತೆಗೆ ಸೇರಿಸಿದರು. ಎದುರಾಳಿ ತಂಡದಿಂದ ಬೆನ್ ದ್ವಾರ್ಶುಯಿಸ್ ಮತ್ತು ಗ್ಲೆನ್ ಮ್ಯಾಕ್ಸ್‌ವೆಲ್ ತಲಾ ಎರಡು ವಿಕೆಟ್‌ಗಳನ್ನು ಪಡೆದರು.
ಬಾಬರ್ ಆಝಮ್ ವೈಫಲ್ಯಕ್ಕೆ ವಿರಾಟ್ ಕೊಹ್ಲಿಯೇ ಕಾರಣ ಎಂದ ಅಹ್ಮದ್ ಶೆಹ್ಝಾದ್!
ಆಸ್ಟ್ರೇಲಿಯಾ 165 ರನ್‌ಗಳಿಗೆ ಆಲೌಟ್
ಗುರಿ ಹಿಂಬಾಲಿಸಿದ ಆಸ್ಟ್ರೇಲಿಯಾ ತಂಡ 17.4 ಓವರ್‌ಗಳಲ್ಲಿ 165 ರನ್‌ಗಳಿಗೆ ಆಲೌಟ್ ಆಯಿತು. ಆಸ್ಟ್ರೇಲಿಯಾ ಪರ ಟಿಮ್ ಡೇವಿಡ್ 24 ಎಸೆತಗಳಲ್ಲಿ 50 ರನ್ ಗಳಿಸಿದರೆ, ಅಲೆಕ್ಸ್ ಕೇರಿ 26 ರನ್ ಗಳಿಸಿದರು. ಕಾರ್ಬಿನ್ ಬಾಷ್ ಮೂರು ಓವರ್ ಬೌಲ್ ಮಾಡಿ 20 ರನ್‌ಗಳಿಗೆ ಮೂರು ವಿಕೆಟ್ ಪಡೆದರು. ಅವರ ಜೊತೆಗೆ, ಕ್ವೆನಾ ಎಂಫಾಕಾ ಕೂಡ ಅಷ್ಟೇ ವಿಕೆಟ್ ಪಡೆದರು. ಸರಣಿಯ ಮೊದಲ ಪಂದ್ಯವನ್ನು ಆಸ್ಟ್ರೇಲಿಯಾ 17 ರನ್‌ಗಳಿಂದ ಗೆದ್ದುಕೊಂಡಿತ್ತು. ನಂತರ ದಕ್ಷಿಣ ಆಫ್ರಿಕಾ ಮುಂದಿನ ಪಂದ್ಯವನ್ನು 53 ರನ್‌ಗಳಿಂದ ಗೆದ್ದು ಸರಣಿಯನ್ನು 1-1 ಸಮಬಲಗೊಳಿಸಿತು. ಇದೀಗ ಆಗಸ್ಟ್ 16 ರಂದು ನಡೆಯಲಿರುವ ಮೂರನೇ ಟಿ20 ಪಂದ್ಯ ಸರಣಿಗೆ ನಿರ್ಣಾಯಕವಾಗಲಿದೆ.