ಸಂಜು ಸ್ಯಾಮ್ಸನ್‌ಗೆ ಸ್ಥಾನ; T20 World Cup ಟೂರ್ನಿಯಲ್ಲಿ ಅತಿ ಹೆಚ್ಚು ರನ್ ಗಳಿಸಿದ ಟಾಪ್ 5 ಬ್ಯಾಟರ್ಸ್!
2026ರ ಐಸಿಸಿ ಟಿ20 ವಿಶ್ವಕಪ್ ಟೂರ್ನಿ ಭಾರತ ತಂಡ ಚಾಂಪಿಯನ್ ಆಗುವ ಮೂಲಕ ಅಂತ್ಯವಾಯಿತು. ಈ ಟೂರ್ನಿಯಲ್ಲಿ ಕೆಲ ಬ್ಯಾಟ್ಸ್‌ಮನ್‌ಗಳು ಅತ್ಯಂತ ಸ್ಥಿರ ಪ್ರದರ್ಶನವನ್ನು ತೋರುವ ಮೂಲಕ ಎಲ್ಲರ ಗಮನವನ್ನು ಸೆಳೆದಿದ್ದಾರೆ. ಇವರ ಪೈಕಿ ಈ ಆವೃತ್ತಿಯಲ್ಲಿ ಅತಿ ಹೆಚ್ಚು ರನ್ ಗಳಿಸಿದ ಅಗ್ರ ಐವರು ಬ್ಯಾಟ್ಸ್‌ಮನ್‌ಗಳನ್ನು ಇಲ್ಲಿ ವಿವರಿಸಲಾಗಿದೆ.
ಐಸಿಸಿ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಅತಿ ಹೆಚ್ಚು ರನ್ ಗಳಿಸಿದ 5 ಬ್ಯಾಟರ್ಸ್. -
ನವದೆಹಲಿ: ಸೂರ್ಯಕುಮಾರ್ ಯಾದವ್ (Suryakumar yadav) ನಾಯಕತ್ವದ ಭಾರತ ತಂಡ ಚಾಂಪಿಯನ್ ಆಗುವ ಮೂಲಕ 2026ರ ಐಸಿಸಿ ಟಿ20 ವಿಶ್ವಕಪ್ (T20 World Cup 2026) ಮುಕ್ತಾಯವಾಗಿದೆ. ಅಹಮದಾಬಾದ್‌ನ ನರೇಂದ್ರ ಮೋದಿ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆದಿದ್ದ ಫೈನಲ್ ಹಣಾಹಣಿ ಸಂಜು ಸ್ಯಾಮ್ಸನ್ ಸ್ಪೋಟಕ ಬ್ಯಾಟಿಂಗ್ ಹಾಗೂ ಜಸ್‌ಪ್ರೀತ್ ಬುಮ್ರಾ ಅವರ ಮಾರಕ ಬೌಲಿಂಗ್ ದಾಳಿಯ ಸಹಾಯದಿಂದ ಭಾರತ ತಂಡ(India), ಬಲಿಷ್ಠ ನ್ಯೂಜಿಲೆಂಡ್ ತಂಡವನ್ನು ಮಣಿಸಿ ಮೂರನೇ ಬಾರಿ ಚುಟುಕು ವಿಶ್ವಕಪ್ ಮುಡಿಗೇರಿಸಿಕೊಂಡಿತ್ತು.
ಅಂದಹಾಗೆ ಈ ಟೂರ್ನಿಯಲ್ಲಿ ತಂಡಗಳ ಕೆಲವು ಆಟಗಾರರ ತಮ್ಮ ಸ್ಪೋಟಕ ಬ್ಯಾಟಿಂಗ್ ಮೂಲಕ ಅಭಿಮಾನಿಗಳನ್ನು ರಂಜಿಸಿದ್ದರು. ಈ ಆವೃತ್ತಿಯಲ್ಲಿ ಪಾಕಿಸ್ತಾನ ತಂಡದ ಆರಂಭಿಕ ಬ್ಯಾಟ್ಸ್‌ಮನ್ ಸಾಹಿಬ್‌ಜಾದ ಫರ್ಹಾನ್ ಅತಿ ಹೆಚ್ಚು ರನ್ ಗಳಿಸಿದ ಬ್ಯಾಟರ್ ಎನಿಸಿಕೊಂಡಿದ್ದಾರೆ. ಇವರ ಜೊತೆಗೆ ಈ ಟೂರ್ನಿಯಲ್ಲಿ ಅತಿ ಹೆಚ್ಚು ರನ್ ಗಳಿಸಿದ ಅಗ್ರ ಐವರು ಬ್ಯಾಟರ್‌ಗಳನ್ನು ಇಲ್ಲಿ ವಿವರಿಸಲಾಗಿದೆ.
ಟಿ20 ವಿಶ್ವಕಪ್ ಗೆದ್ದಾಯ್ತು, ಭಾರತ ತಂಡದ ಮುಂದಿನ ಗುರಿ ಏನೆಂದು ರಿವೀಲ್ ಮಾಡಿದ ಗೌತಮ್ ಗಂಭೀರ್!
ಟಿ20 ವಿಶ್ವಕಪ್ ಟೂರ್ನಿಯಲ್ಲಿ ಅತಿ ಹೆಚ್ಚು ರನ್ ಗಳಿಸಿದ ಟಾಪ್ 5 ಬ್ಯಾಟರ್ಸ್
ಸಾಹಿಬ್‌ಜಾದಾ ಫರ್ಹಾನ್-383 ರನ್
ಪಾಕಿಸ್ತಾನ ತಂಡ ಸೂಪರ್-8ರ ಹಂತದಲ್ಲಿಯೇ ಟಿ20 ವಿಶ್ವಕಪ್ ಅಭಿಯಾನವನ್ನು ಮುಗಿಸಿತು. ಆದರೆ, ಪಾಕ್ ಪರ ಎಲ್ಲರ ಗಮನ ಸೆಳೆದಿದ್ದು ಆರಂಭಿಕ ಸಾಹಿಬ್‌ಜಾದಾ ಫರ್ಹಾನ್. ಅವರು ಆಡಿದ ಆರು ಇನಿಂಗ್ಸ್‌ಗಳಿಂದ 76.60ರ ಸರಾಸರಿ ಹಾಗೂ 160.25ರ ಸ್ಟ್ರೈಕ್ ರೇಟ್‌ನಲ್ಲಿ 383 ರನ್‌ಗಳನ್ನು ಬಾರಿಸಿದ್ದಾರೆ. ಆ ಮೂಲಕ ಈ ಟೂರ್ನಿಯಲ್ಲಿ ಅತಿ ಹೆಚ್ಚು ರನ್ ಗಳಿಸಿದ ಬ್ಯಾಟ್ಸ್‌ಮನ್ ಎನಿಸಿಕೊಂಡಿದ್ದಾರೆ.
ಟಿಮ್ ಸೈಫರ್ಟ್- 326 ರನ್
ನ್ಯೂಜಿಲೆಂಡ್ ತಂಡದ ಆರಂಭಿಕ ಬ್ಯಾಟ್ಸ್‌ಮನ್ ಟಿಮ್ ಸೈಫರ್ಟ್ ಕೂಡ ಟಿ20 ವಿಶ್ವಕಪ್ ಟೂರ್ನಿಯಲ್ಲಿ ತಮ್ಮ ಸ್ಪೋಟಕ ಬ್ಯಾಟಿಂಗ್ ಮೂಲಕ ಗಮನವನ್ನು ಸೆಳೆದಿದ್ದರು. ಅವರು ಆಡಿದ್ದ 8 ಇನಿಂಗ್ಸ್‌ಗಳಿಂದ 46.57ರ ಸರಾಸರಿ ಹಾಗೂ 166.32ರ ಸ್ಟ್ರೈಕ್ ರೇಟ್‌ನಲ್ಲಿ 326 ರನ್‌ಗಳನ್ನು ಕಲೆ ಹಾಕಿದ್ದರು. ಇವರು ಎರಡು ಬಾರಿ ಈ ಟೂರ್ನಿಯಲ್ಲಿ ಅರ್ಧಶತಕವನ್ನು ಬಾರಿಸಿದ್ದಾರೆ.
T20 World Cup ಗೆದ್ದ ಬಳಿಕ ಗೌತಮ್ ಗಂಭೀರ್ ಹೇಳಿದ್ದ ಮಾತನ್ನು ರಿವೀಲ್ ಮಾಡಿದ ಸೂರ್ಯಕುಮಾರ್ ಯಾದವ್!
ಸಂಜು ಸ್ಯಾಮ್ಸನ್- 321 ರನ್
ಭಾರತ ತಂಡ ಮೂರನೇ ಬಾರಿ ಟಿ20 ವಿಶ್ವಕಪ್ ಗೆಲುವಿನಲ್ಲಿ ಸಂಜು ಸ್ಯಾಮ್ಸನ್ ಪ್ರಮುಖ ಪಾತ್ರವಹಿಸಿ ಟೂರ್ನಿ ಶ್ರೇಷ್ಠ ಪ್ರಶಸ್ತಿಗೆ ಭಾಜನರಾಗಿದ್ದರು. ಅವರು ಆರಂಭದಲ್ಲಿ ಮೊದಲ ಆಯ್ಕೆಯ ವಿಕೆಟ್ ಕೀಪರ್ ಆಗಿರಲಿಲ್ಲ. ಆದರೆ, ಅಭಿಷೇಕ್ ಶರ್ಮಾ ಅನಾರೋಗ್ಯಕ್ಕೆ ತುತ್ತಾದ ಬಳಿಕ ಸಿಕ್ಕ ಅವಕಾಶವನ್ನು ಸಂಜು ಬಳಿಸಿಕೊಂಡರು. ವೆಸ್ಟ್ ಇಂಡೀಸ್ ವಿರುದ್ಧ ಸೂಪರ್-8ರ ಪಂದ್ಯ, ಇಂಗ್ಲೆಂಡ್ ಎದುರು ಸೆಮಫೈನಲ್ ಪಂದ್ಯ ಹಾಗೂ ನ್ಯೂಜಿಲೆಂಡ್ ಎದುರು ಫೈನಲ್‌ನಲ್ಲಿ ಕ್ರಮವಾಗಿ 97*, 89 ಹಾಗೂ 89 ರನ್‌ಗಳ ಮೂಲಕ ಹ್ಯಾಟ್ರಿಕ್ ಅರ್ಧಶತಕವನ್ನ ಬಾರಿಸಿದ್ದರು. ಈ ಟೂರ್ನಿಯಲ್ಲಿ ಕೇವಲ 5 ಇನಿಂಗ್ಸ್‌ಗಳಿಂದ 321ರನ್ ಸಿಡಿಸಿದ್ದಾರೆ.
ಇಶಾನ್ ಕಿಶನ್-317 ರನ್
ಬರೂಬ್ಬರಿ ಎರಡು ವರ್ಷಗಳ ಕಾಲ ಭಾರತ ತಂಡದಿಂದ ಹೊರಗೆ ಉಳಿದಿದ್ದ ಇಶಾನ್ ಕಿಶನ್, 2026ರ ಐಸಿಸಿ ಟಿ20 ವಿಶ್ವಕಪ್ ಟೂರ್ನಿಯ ಮೂಲಕ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಭರ್ಜರಿ ಕಮ್‌ಬ್ಯಾಕ್ ಮಾಡಿದರು. ಅವರು ಭಾರತದ ಪರ ಮೂರನೇ ಕ್ರಮಾಂಕದಲ್ಲಿ ಬ್ಯಾಟ್ ಮಾಡಿದ್ದರು. ಸಂಜು ಸ್ಯಾಮ್ಸನ್ ಓಪನರ್ ಆಗಿ ಬಂದ ಬಳಿಕ ಇಶಾನ್ ಕಿಶನ್ ಮೂರನೇ ಕ್ರಮಾಂಕದಲ್ಲಿ ಯಶಸ್ವಿಯಾದರು. ಅವರು ಆಡಿದ 9 ಇನಿಂಗ್ಸ್‌ಗಳಿಂದ 193.29ರ ಸ್ಟ್ರೈಕ್ ರೇಟ್‌ನಲ್ಲಿ 317 ರನ್‌ಗಳನ್ನು ಸಿಡಿಸಿ ಭಾರತ ಪ್ರಶಸ್ತಿ ಗೆಲುವಿನಲ್ಲಿ ಪ್ರಮುಖ ಪಾತ್ರವನ್ನು ವಹಿಸಿದರು.
ʻನನ್ನ ಅಪ್ಪ ನಿಜವಾದ ಹೀರೋʼ-T20 World Cup ಪದಕವನ್ನು ತಮ್ಮ ತಂದೆಗೆ ಸಮರ್ಪಿಸಿದ ಶಿವಂ ದುಬೇ!
ಫಿನ್ ಆಲೆನ್-298 ರನ್
ನ್ಯೂಜಿಲೆಂಡ್ ತಂಡದ ಡ್ಯಾಶಿಂಗ್ ಓಪನರ್ ಫಿನ್ ಆಲೆನ್, 2026ರ ಐಸಿಸಿ ಟಿ20 ವಿಶ್ವಕಪ್ ಟೂರ್ನಿಯಲ್ಲಿ ತಮ್ಮ ಸ್ಪೋಟಕ ಬ್ಯಾಟಿಂಗ್ ಮೂಲಕ ಎಲ್ಲರ ಗಮನವನ್ನು ಸೆಳೆದಿದ್ದರು. ಇವರು ಈ ಟೂರ್ನಿಯಲ್ಲಿ ಆಡಿದ 8 ಇನಿಂಗ್ಸ್‌ಗಳಿಂದ 49.66ರ ಸರಾಸರಿಯಲ್ಲಿ 298 ರನ್‌ಗಳನ್ನು ಗಳಿಸಿದ್ದಾರೆ. ಇದರಲ್ಲಿ ಅವರು ದಕ್ಷಿಣ ಆಫ್ರಿಕಾ ವಿರುದ್ಧ ಸೆಮಿಫೈನಲ್‌ನಲ್ಲಿ 33 ಎಸೆತಗಳಲ್ಲಿ ದಾಖಲೆಯ ಶತಕವನ್ನು ಬಾರಿಸಿದ್ದರು. ಫಿನ್ ಆಲೆನ್ ಬ್ಯಾಟಿಂಗ್ ಹೊರತಾಗಿಯೂ ಕಿವೀಸ್ ಫೈನಲ್‌ನಲ್ಲಿ ಭಾರತದ ಎದುರು ಸೋತಿತ್ತು.