RCB vs GT: 2000 ರನ್ ಪೂರ್ಣಗೊಳಿಸಿದ ಕ್ರಿಸ್ ಗೇಲ್ ದಾಖಲೆ ಮುರಿದ ಸಾಯಿ ಸುದರ್ಶನ್!
ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧದ ಪಂದ್ಯದಲ್ಲಿ ಗುಜರಾತ್ ಟೈಟನ್ಸ್ ತಂಡದ ಆರಂಭಿಕ ಬ್ಯಾಟ್ಸ್‌ಮನ್ ಸಾಯಿ ಸುದರ್ಶನ್ ಅವರು ನೂತನ ದಾಖಲೆಯೊಂದನ್ನು ಬರೆದಿದ್ದಾರೆ. ತಮ್ಮ ಅಮೋಘ ಬ್ಯಾಟಿಂಗ್‌ನಿಂದ ಐಪಿಎಲ್ ಟೂರ್ನಿಯಲ್ಲಿ 2000 ರನ್‌ಗಳನ್ನು ಪೂರ್ಣಗೊಳಿಸಿದರು ಹಾಗೂ ಆರ್‌ಸಿಬಿ ದಿಗ್ಗಜ ಕ್ರಿಸ್ ಗೇಲ್ ದಾಖಲೆಯೊಂದನ್ನು ಮುರಿದಿದ್ದಾರೆ.
ವೇಗವಾಗಿ 2000 ಐಪಿಎಲ್ ರನ್‌ಗಳನ್ನು ಪೂರ್ಣಗೊಳಿಸಿದ ಸಾಯಿ ಸುದರ್ಶನ್. -
ಬೆಂಗಳೂರು: ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧದ 2026ರ ಇಂಡಿಯನ್ ಪ್ರೀಮಿಯರ್ ಲೀಗ್ (IPL 2026) ಟೂರ್ನಿಯ 34ನೇ ಪಂದ್ಯದಲ್ಲಿ (RCB vs GT) ಸ್ಪೋಟಕ ಬ್ಯಾಟಿಂಗ್ ಪ್ರದರ್ಶನವನ್ನು ತೋರಿದ ಗುಜರಾತ್ ಟೈಟನ್ಸ್ ತಂಡದ ಆರಂಭಿಕ ಬ್ಯಾಟ್ಸ್‌ಮನ್ ಸಾಯಿ ಸುದರ್ಶನ್ (Sai Sudarshan) ನೂತನ ಮೈಲುಗಲ್ಲು ತಲುಪಿದ್ದಾರೆ. ಅವರು ತಮ್ಮ ಐಪಿಎಲ್ ವೃತ್ತಿ ಜೀವನದಲ್ಲಿ 2000 ರನ್‌ಗಳನ್ನು ಪೂರ್ಣಗೊಳಿಸಿದ್ದಾರೆ. ಇದರೊಂದಿಗೆ ವೇಗವಾಗಿ ಐಪಿಎಲ್ ಟೂರ್ನಿಯಲ್ಲಿ 2000 ರನ್‌ಗಳನ್ನು ಪೂರ್ಣಗೊಳಿಸಿದ ಮೊದಲ ಬ್ಯಾಟ್ಸ್‌ಮನ್ ಎಂಬ ದಾಖಲೆಯನ್ನು ಬರೆದಿದ್ದಾರೆ.
ಏಪ್ರಿಲ್ 24 ರಂದು ಶುಕ್ರವಾರ ಇಲ್ಲಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದಿದ್ದ ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟ್ ಮಾಡುವಂತಾಗಿದ್ದ ಗುಜರಾತ್ ಟೈಟನ್ಸ್ ಪರ ಇನಿಂಗ್ಸ್ ಆರಂಭಿಸಿದ ಸಾಯಿ ಸುದರ್ಶನ್, ಆರಂಭದಿಂದಲೂ ಆಕ್ರಮಣಕಾರಿ ಆಟವನ್ನು ಪ್ರದರ್ಶಿಸಿದರು. ಅವರು 2000 ಐಪಿಎಲ್ ರನ್‌ಗಳನ್ನು ಪೂರ್ಣಗೊಳಿಸಲು 72 ರನ್‌ಗಳ ಅಗತ್ಯವಿತ್ತು. ಗುಜರಾತ್ ತಂಡದ ಇನಿಂಗ್ಸ್‌ನ 9ನೇ ಓವರ್ ಆರನೇ ಎಸೆತದಲ್ಲಿ ಸಿಕ್ಸರ್ ಬಾರಿಸುವ ಮೂಲಕ ಸುದರ್ಶನ್ ಈ ಮೈಲುಗಲು ತಲುಪಿದರು.
RCB vs GT: ಟಾಸ್ ಗೆದ್ದು ಬೌಲಿಂಗ್ ಆಯ್ದುಕೊಂಡ ಆರ್‌ಸಿಬಿ ಪ್ಲೇಯಿಂಗ್ XIನಲ್ಲಿ ಒಂದು ಬದಲಾವಣೆ!
ಕ್ರಿಸ್ ಗೇಲ್ ದಾಖಲೆ ಮುರಿದ ಸಾಯಿ ಸುದರ್ಶನ್
ಸಾಯಿ ಸುದರ್ಶನ್ ಅವರು ತಮ್ಮ 47ನೇ ಇನಿಂಗ್ಸ್‌ನಲ್ಲಿ 2000 ರನ್‌ಗಳನ್ನು ಪೂರ್ಣಗೊಳಿಸಿದ್ದಾರೆ. ಆ ಮೂಲಕ ಆರ್‌ಸಿಬಿ ದಿಗ್ಗಜ ಕ್ರಿಸ್ ಗೇಲ್ ದಾಖಲೆಯನ್ನು ಮುರಿದಿದ್ದಾರೆ. ವಿಂಡೀಸ್ ದಿಗ್ಗಜ 48 ಇನಿಂಗ್ಸ್‌ಗಳಲ್ಲಿ ಐಪಿಎಲ್ ಟೂರ್ನಿಯಲ್ಲಿ 2000 ರನ್‌ಗಳನ್ನು ಪೂರೈಸಿದ್ದರು. ಸಾಯಿ ಸುದರ್ಶನ್ ಇದೀಗ ಐಪಿಎಲ್ ಟೂರ್ನಿಯಲ್ಲಿ ಅತ್ಯಂತ ವೇಗವಾಗಿ 2000 ರನ್‌ಗಳನ್ನು ಪೂರ್ಣಗೊಳಿಸಿದ ಬ್ಯಾಟ್ಸ್‌ಮನ್ ಎನಿಸಿಕೊಂಡಿದ್ದಾರೆ.
📸 𝗛𝗶𝘀 𝗺𝗼𝗺𝗲𝗻𝘁! 🤩
— IndianPremierLeague (@IPL) April 24, 2026
Sai Sudharsan walks back after a magnificent 1⃣0⃣0⃣(58) 👏
Updates ▶️ https://t.co/5ZJjfv5Nr6#TATAIPL | #KhelBindaas | #RCBvGT pic.twitter.com/7FmeLETNKr
ಐಪಿಎಲ್ ಟೂರ್ನಿಯಲ್ಲಿ ವೇಗವಾಗಿ 2000 ರನ್‌ಗಳನ್ನು ಕಲೆ ಹಾಕಿದ ಬ್ಯಾಟ್ಸ್‌ಮನ್‌ಗಳು
47 ಇನಿಂಗ್ಸ್‌ಗಳು -ಸಾಯಿ ಸುದರ್ಶನ್
48 ಇನಿಂಗ್ಸ್‌ಗಳು- ಕ್ರಿಸ್ ಗೇಲ್
52 ಇನಿಂಗ್ಸ್‌ಗಳು- ಶಾನ್ ಮಾರ್ಷ್
57 ಇನಿಂಗ್ಸ್‌ಗಳು- ಋತುರಾಜ್ ಗಾಯಕ್ವಾಡ್
60 ಇನಿಂಗ್ಸ್‌ಗಳು- ಕೆಎಲ್ ರಾಹುಲ್
RCB vs GT ಪಂದ್ಯದಲ್ಲಿ ಫಿಲ್ ಸಾಲ್ಟ್ ಏಕೆ ಆಡುತ್ತಿಲ್ಲ? ಕಾರಣ ಕೊಟ್ಟ ರಜತ್ ಪಾಟಿದಾರ್!
100 ರನ್ ಗಳಿಸಿ ವಿಕೆಟ್ ಒಪ್ಪಿಸಿದ ಸಾಯಿ ಸುದರ್ಶನ್
ಅದ್ಭುತ ಬ್ಯಾಟಿಂಗ್ ಪ್ರದರ್ಶನವನ್ನು ತೋರಿದ ಸಾಯಿ ಸುದರ್ಶನ್ ಅವರು 58 ಎಸೆತಗಳಲ್ಲಿ 5 ಸಿಕ್ಸರ್ ಹಾಗೂ 11 ಬೌಂಡರಿಗಳೊಂದಿಗೆ 172.41ರ ಸ್ಟ್ರೈಕ್ ರೇಟ್‌ನಲ್ಲಿ 100 ರನ್‌ಗಳನ್ನು ಗಳಿಸಿದರು. ಆ ಮೂಲಕ ತಮ್ಮ ಐಪಿಎಲ್ ವೃತ್ತಿ ಜೀವನದಲ್ಲಿ ಮೂರನೇ ಶತಕವನ್ನು ಪೂರ್ಣಗೊಳಿಸಿದ್ದಾರೆ. ಬಳಿಕ ಅವರು ಜಾಶ ಹೇಝಲ್‌ವುಡ್ ಅವರ ಬೌಲಿಂಗ್‌ನಲ್ಲಿ ದೊಡ್ಡ ಹೊಡೆತಕ್ಕೆ ಕೈ ಹಾಕಿ ಅವರಿಗೇ ಕ್ಯಾಚ್ ಕೊಟ್ಟು ನಿರ್ಗಮಿಸಿದರು.