ಸಾರ್ವಕಾಲಿಕ ಶ್ರೇಷ್ಠ ಐಪಿಎಲ್ ಪ್ಲೇಯಿಂಗ್ XI ಆರಿಸಿದ ಸಂದೀಪ್ ಶರ್ಮಾ!
ರಾಜಸ್ಥಾನ್ ರಾಯಲ್ಸ್ ತಂಡದ ವೇಗದ ಬೌಲರ್ ಸಂದೀಪ್ ಶರ್ಮಾ ಅವರು ತಮ್ಮ ನೆಚ್ಚಿನ ಸಾರ್ವಕಾಲಿಕ ಶ್ರೇಷ್ಠ ಐಪಿಎಲ್ ತಂಡದ ಪ್ಲೇಯಿಂಗ್ Xi ಆಯ್ಕೆ ಮಾಡಿದ್ದಾರೆ. ಅವರು ಚೆನ್ನೈ ಸೂಪರ್ ಕಿಂಗ್ಸ್ ತಂಡದ ಎಂಎಸ್ ಧೋನಿಗೆ ನಾಯಕತ್ವ ಹಾಗೂ ವಿಕೆಟ್ ಕೀಪರ್ ಜವಾಬ್ದಾರಿಯನ್ನು ನೀಡಿದ್ದಾರೆ.

ಐಪಿಎಲ್ ಟೂರ್ನಿಯ ಸಾರ್ವಕಾಲಿಕ ಶ್ರೇಷ್ಠ ಪ್ಲೇಯಿಂಗ್ XI ಆರಿಸಿದ ಸಂದೀಪ್ ಶರ್ಮಾ. -

ನವದೆಹಲಿ: ರಾಜಸ್ಥಾನ್ ರಾಯಲ್ಸ್ ತಂಡದ ವೇಗದ ಬೌಲರ್ ಸಂದೀಪ್ ಶರ್ಮಾ (Sandeep Sharma) ಅವರು ಇಂಡಿಯನ್ ಪ್ರೀಮಿಯರ್ ಲೀಗ್ (IPL 2025) ಟೂರ್ನಿಯ ಸಾರ್ವಕಾಲಿಕ ಶ್ರೇಷ್ಠ ಪ್ಲೇಯಿಂಗ್ XI ಅನ್ನು ಆರಿಸಿದ್ದಾರೆ. ಅವರು ಚೆನ್ನೈ ಸೂಪರ್ ಕಿಂಗ್ಸ್ ತಂಡದ ದಿಗ್ಗಜ ಎಂಎಸ್ ಧೋನಿ (MS Dhoni) ಅವರನ್ನು ನಾಯಕ ಹಾಗೂ ವಿಕೆಟ್ ಕೀಪರ್ ಆಗಿ ಆಯ್ಕೆ ಮಾಡಿದ್ದಾರೆ. ಇದರ ಜೊತೆಗೆ ಆರಂಭಿಕ ಬ್ಯಾಟ್ಸ್‌ಮ್‌ಗಳಾಗಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ದಿಗ್ಗಜ ಕ್ರಿಸ್ ಗೇಲ್ ಹಾಗೂ ಮುಂಬೈ ಇಂಡಿಯನ್ಸ್ ಮಾಜಿ ನಾಯಕ ರೋಹಿತ್ ಶರ್ಮಾ ಅವರನ್ನು ಆರಂಭಿಕ ಬ್ಯಾಟ್ಸ್‌ಮನ್‌ಗಳಾಗಿ ಆರಿಸಿದ್ದಾರೆ.
ಐಪಿಎಲ್ ಟೂರ್ನಿಯಲ್ಲಿ ಅತಿ ಹೆಚ್ಚು ರನ್ ಗಳಿಸಿದ ಆರ್‌ಸಿಬಿ ದಿಗ್ಗಜ ವಿರಾಟ್ ಕೊಹ್ಲಿಗೆ ಮೂರನೇ ಸ್ಥಾನ, ಚೆನೈ ಸೂಪರ್ ಕಿಂಗ್ಸ್ ಮಾಜಿ ಆಲ್‌ರೌಂಡರ್ ಸುರೇಶ್ ರೈನಾಗೆ ನಾಲ್ಕನೇ ಕ್ರಮಾಂಕ ಹಾಗೂ ಐದನೇ ಬ್ಯಾಟಿಂಗ್ ಕ್ರಮಾಂಕಕ್ಕೆ ಆರ್‌ಸಿಬಿ ದಂತಕತೆ ಎಬಿ ಎಬಿ ಡಿವಿಲಿಯರ್ಸ್ ಅವರನ್ನು ಸಂದೀಪ್ ಶರ್ಮಾ ಆಯ್ಕೆ ಮಾಡಿದ್ದಾರೆ.
IPL 2026: ಕೋಲ್ಕತಾ ನೈಟ್ ರೈಡರ್ಸ್‌ಗೆ ರಾಹುಲ್ ದ್ರಾವಿಡ್ ಕೋಚ್ ಆಗುವ ಸಾಧ್ಯತೆ!
ಚೆನ್ನೈ ಸೂಪರ್ ಕಿಂಗ್ಸ್ ದಿಗ್ಗಜ ಎಂಎಸ್ ಧೋನಿಗೆ ಆರನೇ ಕ್ರಮಾಂಕವನ್ನು ನೀಡಿರುವ ಸಂದೀಪ್ ಶರ್ಮಾ, ಸಿಎಸ್‌ಕೆ ಆಟಗಾರನಿಗೆ ನಾಯಕತ್ವ ಹಾಗೂ ವಿಕೆಟ್ ಕೀಪರ್ ಜವಾಬ್ದಾರಿಯನ್ನು ನೀಡಿದ್ದಾರೆ. ಮುಂಬೈ ಇಂಡಿಯನ್ಸ್ ನಾಯಕ ಹಾರ್ದಿಕ್ ಪಾಂಡ್ಯಗೆ 7ನೇ ಕ್ರಮಾಂಕವನ್ನು ಆರ್‌ಆರ್ ವೇಗಿ ಕೊಟ್ಟಿದ್ದಾರೆ.
ವಿರಾಟ್ ಕೊಹ್ಲಿ ಹಾಗೂ ರೋಹಿತ್ ಶರ್ಮಾ ಇಬ್ಬರೂ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ಇತಿಹಾಸದಲ್ಲಿ ಅತಿ ಹೆಚ್ಚು ರನ್ ಗಳಿಸಿದ ಬ್ಯಾಟ್ಸ್‌ಮನ್‌ಗಳಾಗಿದ್ದಾರೆ. ಸುರೇಶ್ ರೈನಾ, ಎಬಿ ಡಿ ವಿಲಿಯರ್ಸ್, ಕ್ರಿಸ್ ಗೇಲ್ ಹಾಗೂ ಎಂಎಸ್ ಧೋನಿ ಅವರು ಅತಿ ಹೆಚ್ಚು ರನ್ ಗಳಿಸಿದ ಬ್ಯಾಟ್ಸ್‌ಮನ್‌ಗಳ ಸಾಲಿನಲ್ಲಿ ಅಗ್ರ 10ರೊಳಗೆ ಸ್ಥಾನವನ್ನು ಪಡೆದಿದ್ದಾರೆ. ಆಲ್‌ರೌಂಡರ್ ಹಾರ್ದಿಕ್ ಪಾಂಡ್ಯ 2749 ರನ್‌ಗಳು ಹಾಗೂ 78 ರನ್‌ಗಳನ್ನು ಕಲೆ ಹಾಕಿದ್ದಾರೆ.
Rohit Sharma, Virat Kohli, and MS Dhoni were included as Sandeep Sharma picked his all-time IPL XI while speaking exclusively to CricTracker.
— CricTracker (@Cricketracker) September 3, 2025
[Sandeep Sharma, Cricket, IPL XI, Exclusive Interview, MS Dhoni, Virat Kohli, CricTracker] pic.twitter.com/jOlVNlnFFP
ಇನ್ನು ಸ್ಪಿನ್ ವಿಭಾಗಕ್ಕೆ ಇಬ್ಬರು ಸ್ಪಿನ್ನರ್‌ಗಳನ್ನು ಸಂದೀಪ್ ಶರ್ಮಾ ಆರಿಸಿದ್ದಾರೆ. ಪಂಜಾಬ್ ಕಿಂಗ್ಸ್ ತಂಡದ ಯುಜ್ವೇಂದ್ರ ಚಹಲ್ ಹಾಗೂ ಕೋಲ್ಕತಾ ನೈಟ್ ರೈಡರ್ಸ್ ತಂಡದ ಸುನೀಲ್ ನರೇನ್ ಅವರನ್ನು ಆಯ್ಕೆ ಮಾಡಿದ್ದಾರೆ. ಇನ್ನು ವೇಗದ ಬೌಲಿಂಗ್ ವಿಭಾಗಕ್ಕೆ ಜಸ್‌ಪ್ರೀತ್ ಬುಮ್ರಾ ಹಾಗೂ ಲಸಿತ್ ಮಾಲಿಂಗಾಗೆ ಅವಕಾಶವನ್ನು ನೀಡಿದ್ದಾರೆ.
ಸಂದೀಪ್ ಶರ್ಮಾ ಆರಿಸಿದ ಐಪಿಎಲ್‌ನ ಸಾರ್ವಕಾಲಿಕ ಶ್ರೇಷ್ಠ ಪ್ಲೇಯಿಂಗ್ XI
ಕ್ರಿಸ್ ಗೇಲ್, ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಸುರೇಶ ರೈನಾ, ಎಬಿ ಡಿ ವಿಲಿಯರ್ಸ್, ಎಂಎಸ್ ಧೋನಿ (ನಾಯಕ, ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ಸುನೀಲ್ ನರೇನ್, ಯುಜ್ವೇಂದ್ರ ಚಹಲ್, ಜಸ್‌ಪ್ರೀತ್ ಬುಮ್ರಾ, ಲಸಿತ್ ಮಾಲಿಂಗ