IPL 2025: ರಾಜಸ್ಥಾನ್ ರಾಯಲ್ಸ್ ಪರ 4000 ರನ್ ಪೂರ್ಣಗೊಳಿಸಿದ ಸಂಜು ಸ್ಯಾಮ್ಸನ್!
ಹದಿನೆಂಟನೇ ಆವೃತ್ತಿಯ ಐಪಿಎಲ್ ಟೂರ್ನಿಯ 62ನೇ ಪಂದ್ಯ ದಿಲ್ಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ಮೇ 20ರಂದು ನಡೆದಿತ್ತು. ಈ ಪಂದ್ಯದಲ್ಲಿ ರಾಜಸ್ಥಾನ ರಾಯಲ್ಸ್ ತಂಡ, ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಗೆಲುವಿನ ಮೂಲಕ 2025ರ ಐಪಿಎಲ್ ಟೂರ್ನಿಯ ಅಭಿಯಾನವನ್ನು ಮುಗಿಸಿತು. ಇದರ ನಡುವೆ ಸಂಜು ಸ್ಯಾಮ್ಸನ್, ರಾಜಸ್ತಾನ್ ರಾಯಲ್ಸ್ ಪರ 4000 ರನ್‌ಗಳನ್ನು ಪೂರೈಸಿ ವಿಶೇಷ ಸಾಧನೆಗೆ ಭಾಜನರಾಗಿದ್ದಾರೆ.

ರಾಜಸ್ಥಾನ್ ರಾಯಲ್ಸ್ ಪರ 4000 ರನ್‌ಗಳನ್ನು ಕಲೆ ಹಾಕಿದ ಸಂಜು ಸ್ಯಾಮ್ಸನ್.

ನವದೆಹಲಿ: ದಿಲ್ಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ಮೇ 20 ರಂದು ನಡೆದಿದ್ದ 2025ರ ಇಂಡಿಯನ್ ಪ್ರೀಮಿಯರ್ ಲೀಗ್ (IPL 2025) ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ (RR)ತಂಡ, ಚೆನ್ನೈ ಸೂಪರ್ ಕಿಂಗ್ಸ್ (CSK) ವಿರುದ್ಧ ಆರು ವಿಕೆಟ್‌ಗಳಿಂದ ಜಯ ಸಾಧಿಸಿತು. ಆ ಮೂಲಕ ಹದಿನೆಂಟನೇ ಆವೃತ್ತಿಯ ಟೂರ್ನಿಯ ಅಭಿಯಾನವನ್ನು ಗೆಲುವಿನ ಮೂಲಕ ಅಂತ್ಯಗೊಳಿಸಿತು. ಈ ಪಂದ್ಯದಲ್ಲಿ ನಾಯಕ ಸಂಜು ಸ್ಯಾಮ್ಸನ್ (Sanju Samson) ಐತಿಹಾಸಿಕ ದಾಖಲೆ ಬರೆಯುವ ಮೂಲಕ ರಾಜಸ್ಥಾನ ರಾಯಲ್ಸ್ ತಂಡದ ಪರ ನೂತನ ಮೈಲುಗಲ್ಲು ಸ್ಥಾಪಿಸಿದ್ದಾರೆ.
ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟ್ ಮಾಡುವಂತಾದ ಚೆನ್ನೈ ಸೂಪರ್ ಕಿಂಗ್ಸ್ ತನ್ನ ಪಾಲಿನ 20 ಓವರ್‌ಗಳಿಗೆ 187 ರನ್‌ಗಳನ್ನು ಕಲೆ ಹಾಕಿತ್ತು. ಬಳಿಕ ಗುರಿ ಬೆನ್ನಟ್ಟಿದ ರಾಜಸ್ಥಾನ್ ತಂಡಕ್ಕೆ ಜೈಸ್ವಾಲ್ (36 ರನ್ 19 ಎಸೆತಗಳಲ್ಲಿ) ಮತ್ತು ವೈಭವ್ ಸೂರ್ಯಂಶಿ (57 ರನ್ 33 ಎಸೆತಗಳಲ್ಲಿ) ಉತ್ತಮ ಆರಂಭ ತಂದುಕೊಟ್ಟಿದ್ದರು. ಬಳಿಕ ಬ್ಯಾಟ್ ಮಾಡಲು ಬಂದ ನಾಯಕ ಸಂಜು ಸ್ಯಾಮ್ಸನ್ 31 ಎಸೆತಗಳಲ್ಲಿ 41 ರನ್ ಗಳಿಸಿದರು. ಇವರ ಇನಿಂಗ್ಸ್‌ನಲ್ಲಿ ಮೂರು ಬೌಂಡರಿ ಮತ್ತು ಎರಡು ಸಿಕ್ಸರ್ ಒಳಗೊಂಡಿವೆ. ಇನ್ನು ಫಿನಿಶರ್ ಆಗಿ ನಿರೀಕ್ಷೆಯಂತೆ ಧ್ರುವ್ ಜುರೆಲ್ (ಅಜೇಯ 31 ರನ್ 12 ಎಸೆತಗಳಲ್ಲಿ) ಬಿರುಸಿನ ಆಟ ಆಡುವುದರ ಮೂಲಕ 17 ಎಸೆತ ಬಾಕಿ ಇರುವಾಗಲೇ ತಂಡವನ್ನು ಗೆಲುವಿನ ದಡ ಸೇರಿಸಿದರು.
IPL 2025: MI vs DC ಪಂದ್ಯ ಮಳೆಯಿಂದ ರದ್ದಾದರೆ ಯಾವ ತಂಡಕ್ಕೆ ಲಾಭ? ಇಲ್ಲಿದೆ ಲೆಕ್ಕಾಚಾರ!
ನೂತನ ದಾಖಲೆ ಬರೆದ ಸಂಜು ಸ್ಯಾಮ್ಸನ್
ಈ ಪಂದ್ಯದಲ್ಲಿ 41 ರನ್‌ಗಳನ್ನು ಕಲೆ ಹಾಕುವ ಮೂಲಕ ಸಂಜು ಸ್ಯಾಮ್ಸನ್, ರಾಜಸ್ಥಾನ್ ರಾಯಲ್ಸ್ ಪರ 4000 ಐಪಿಎಲ್ ರನ್‌ಗಳನ್ನು ಪೂರ್ಣಗೊಳಿಸಿದರು. ಆ ಮೂಲಕ ರಾಜಸ್ಥಾನ್ ರಾಯಲ್ಸ್ ತಂಡದ ಪರ ಐಪಿಎಲ್‌ನಲ್ಲಿ ಈ ದಾಖಲೆ ಬರೆದ ಮೊದಲ ಆಟಗಾರ ಎಂಬ ಸಾಧನೆಗೆ ಭಾಜನರಾದರು. ಸಂಜು ಸ್ಯಾಮ್ಸನ್ ಮತ್ತು ಜೋಸ್ ಬಟ್ಲರ್ ರಾಜಸ್ಥಾನ್ ರಾಯಲ್ಸ್ ಪರ 3000ಕ್ಕೂ ಅಧಿಕ ಐಪಿಎಲ್ ರನ್‌ಗಳನ್ನು ಕಲೆ ಹಾಕಿದ ಬ್ಯಾಟ್ಸ್‌ಮನ್‌ಗಳಾಗಿದ್ದಾರೆ.
ಐಪಿಎಲ್ ಟೂರ್ನಿಯಲ್ಲಿ ರಾಜಸ್ಥಾನ್ ತಂಡದ ಪರ 150 ಇನಿಂಗ್ಸ್‌ಗಳನ್ನು ಆಡಿರುವ ಸಂಜು ಸ್ಯಾಮ್ಸನ್, 31.96 ಸರಾಸರಿಯಲ್ಲಿ 4219 ರನ್‌ಗಳನ್ನು ಕಲೆ ಹಾಕಿದ್ದಾರೆ. ಇವರು ಒಟ್ಟಾರೆ ತಮ್ಮ ಐಪಿಎಲ್ ವೃತ್ತಿ ಜೀವನದಲ್ಲಿ 172 ಇನಿಂಗ್ಸ್‌ಗಳಲ್ಲಿ 4704 ರನ್ ಗಳಿಸಿದ್ದು, ಮೂರು ಶತಕಗಳನ್ನು ದಾಖಲಿಸಿದ್ದಾರೆ. ಅವರು ಡೆಲ್ಲಿ ಡೇರ್‌ಡೆವಿಲ್ಸ್ (ಈಗಿನ ಡೆಲ್ಲಿ ಕ್ಯಾಪಿಟಲ್ಸ್) ಪರ 28 ಪಂದ್ಯಗಳಲ್ಲಿ 677 ರನ್ ಗಳಿಸಿದ್ದಾರೆ. 2013ರಲ್ಲಿ ರಾಜಸ್ಥಾನ ರಾಯಲ್ಸ್ ತಂಡದ ಪರ ಐಪಿಎಲ್‌ಗೆ ಪದಾರ್ಪಣೆ ಮಾಡಿದ್ದ ಸಂಜು ಸ್ಯಾಮ್ಸನ್, 2016 ಮತ್ತು 2017ರಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಪರ ಆಡಿದ್ದರು. ಏಕೆಂದರೆ ಈ ಎರಡು ಆವೃತ್ತಿಗಳಲ್ಲಿ ರಾಜಸ್ಥಾನ್ ರಾಯಲ್ಸ್ ಅಮಾನತುಗೊಂಡಿತ್ತು. 2018ರಲ್ಲಿ ಅವರು ಪುನಃ ರಾಜಸ್ಥಾನ್ ತಂಡದಲ್ಲಿ ಸೇರಿಕೊಂಡು, 2021ರಿಂದ ನಾಯಕತ್ವ ವಹಿಸಿಕೊಂಡು ತಂಡವನ್ನು ಮುನ್ನಡೆಸುತ್ತಿದ್ದಾರೆ.
IPL 2025: ಸಿಎಸ್‌ಕೆ ಎದುರು ಅರ್ಧಶತಕ ಸಿಡಿಸಿ ವಿಶೇಷ ದಾಖಲೆ ಬರೆದ ವೈಭವ್ ಸೂರ್ಯವಂಶಿ!
ಗೆಲುವಿನ ಮೂಲಕ ಟೂರ್ನಿಯ ಅಭಿಯಾನ ಮುಗಿಸಿದ ರಾಜಸ್ಥಾನ
ಇನ್ನು ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟ್ ಮಾಡುವಂತಾಗಿದ್ದ ಚೆನ್ನೈ ಸೂಪರ್ ಕಿಂಗ್ಸ್, ತನ್ನ ಪಾಲಿನ 20 ಓವರ್‌ಗಳಲ್ಲಿ 8 ವಿಕೆಟ್ ನಷ್ಟಕ್ಕೆ 187 ರನ್‌ಗಳನ್ನು ಕಲೆಹಾಕಿತ್ತು. ಇದರಲ್ಲಿ ಆರಂಭಿಕ ಆಟಗಾರರಾಗಿ ಕಣಕ್ಕಿಳಿದಿದ್ದ ಆಯುಶ್ ಮ್ಹಾತ್ರೆ 20 ಎಸೆತಗಳಲ್ಲಿ 43 ರನ್ ಗಳಿಸಿದ್ದರು. ಇನ್ನು ಡೆವಾಲ್ಡ್ ಬ್ರೆವಿಸ್ 25 ಎಸೆತಗಳಲ್ಲಿ 42 ರನ್ ಮತ್ತು ಶಿವಂ ದುಬೆ 32 ಎಸೆತಗಳಲ್ಲಿ 39 ರನ್ ಗಳಿಸುವ ಮೂಲಕ ತಂಡ 187 ರನ್ ಕಲೆ ಹಾಕಲು ನೆರವಾಗಿದ್ದರು.
ಸವಾಲಿನ ಗುರಿ ಬೆನ್ನಟ್ಟಿದ ರಾಜಸ್ಥಾನ್ ರಾಯಲ್ಸ್ ತಂಡದ ಪರವಾಗಿ ಎಂದಿನಂತೆ ಆರಂಭಿಕ ಆಟಗಾರರಾಗಿ ಕ್ರೀಸ್‌ಗೆ ಬಂದ ಯುವ ಆಟಗಾರ ವೈಭವ್ ಸೂರ್ಯವಂಶಿ 33 ಎಸೆತಗಳಲ್ಲಿ 57 ರನ್‌ಗಳನ್ನು ಕಲೆ ಹಾಕಿದರು. ಇದಕ್ಕೂ ಮುನ್ನ ಅಬ್ಬರಿಸಿದ್ದ ಯಶಸ್ವಿ ಜೈಸ್ವಾಲ್ ಕೂಡ 19 ಎಸೆತಗಳಲ್ಲಿ 36 ರನ್ ಗಳಿಸಿ ವಿಕೆಟ್ ಒಪ್ಪಿಸಿದ್ದರು. ಇನ್ನು ತಂಡದ ನಾಯಕ ಸಂಜು ಸ್ಯಾಮ್ಸನ್ 31 ಎಸೆತಗಳಲ್ಲಿ 41ರನ್ ಗಳಿಸಿದರು. ಫಿನಿಶರ್ ಆಗಿ ಧೃವ ಜುರೆಲ್ 12ಎಸೆತಗಳಲ್ಲಿ 31 ರನ್ ಗಳಿಸುವ ಮೂಲಕ ತಂಡವನ್ನು ಇನ್ನು 17 ಎಸೆತಗಳು ಬಾಕಿ ಇರುವಾಗಲೇ ಗೆಲುವಿನ ದಡ ಸೇರಿಸಿದರು.