ಬಿಗ್​ಬಾಸ್ ಫೋಟೋ ಗ್ಯಾಲರಿ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

ಮುಂಬರುವ ಒಡಿಐ ಸರಣಿಗಳು, 2026ರ ಐಪಿಎಲ್‌ ಟೂರ್ನಿಯಿಂದ ಶ್ರೇಯಸ್‌ ಅಯ್ಯರ್‌ ಔಟ್‌?

ಭಾರತ ಕ್ರಿಕೆಟ್ ತಂಡದ ಉಪನಾಯಕ ಶ್ರೇಯಸ್ ಅಯ್ಯರ್ ಪಕ್ಕೆಲುಬು ಗಾಯದಿಂದಾಗಿ ಕ್ರಿಕೆಟ್‌ನಿಂದ ಹೊರಗುಳಿದಿದ್ದಾರೆ. ಅವರು ಚೇತರಿಸಿಕೊಳ್ಳಲು ಕನಿಷ್ಠ ಮೂರು ತಿಂಗಳುಗಳು ಬೇಕಾಗುತ್ತದೆ, ಇದರಿಂದಾಗಿ ಅವರು ದಕ್ಷಿಣ ಆಫ್ರಿಕಾ ಮತ್ತು ನ್ಯೂಜಿಲೆಂಡ್ ವಿರುದ್ಧದ ಸರಣಿಗಳನ್ನು ಹಾಗೂ 2026ರ ಐಪಿಎಲ್ ಟೂರ್ನಿಯ ಆರಂಭಿಕ ಪಂದ್ಯಗಳನ್ನು ಕಳೆದುಕೊಳ್ಳುವ ಸಾಧ್ಯತೆ ಇದೆ.

ಮೂರು ತಿಂಗಳುಗಳ ಕಾಲ ಶ್ರೇಯಸ್‌ ಅಯ್ಯರ್‌ಗೆ ವಿಶ್ರಾಂತಿ.

ನವದೆಹಲಿ: ಭಾರತ ಕ್ರಿಕೆಟ್ ತಂಡದ ಉಪನಾಯಕ ಮತ್ತು ಸ್ಟಾರ್ ಬ್ಯಾಟ್ಸ್‌ಮನ್ ಶ್ರೇಯಸ್ ಅಯ್ಯರ್ (Shreyas Iyer) ಗಾಯದ ಕಾರಣದಿಂದಾಗಿ ಸದ್ಯ ಕ್ರಿಕೆಟ್‌ನಿಂದ ಹೊರಗುಳಿದಿದ್ದಾರೆ. ಕಳೆದ ತಿಂಗಳು ಸಿಡ್ನಿಯಲ್ಲಿ ಆಸ್ಟ್ರೇಲಿಯಾ ವಿರುದ್ಧದ ಏಕದಿನ ಸರಣಿಯ (IND vs AUS) ಪಂದ್ಯವೊಂದರಲ್ಲಿ ಫೀಲ್ಡಿಂಗ್ ವೇಳೆ ಅವರು ಗಂಭೀರ ಗಾಯಕ್ಕೆ ತುತ್ತಾಗಿದ್ದರು. ಈ ಗಾಯದಿಂದಾಗಿ ಅಯ್ಯರ್ ನವೆಂಬರ್ 30 ರಿಂದ ಪ್ರಾರಂಭವಾಗುವ ದಕ್ಷಿಣ ಆಫ್ರಿಕಾ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ (IND vs SA) ಭಾಗವಹಿಸಲು ಸಾಧ್ಯವಾಗುವುದಿಲ್ಲ. ವರದಿಯ ಪ್ರಕಾರ, ಅವರು ಸಂಪೂರ್ಣವಾಗಿ ಚೇತರಿಸಿಕೊಳ್ಳಲು ಕನಿಷ್ಠ ಮೂರು ತಿಂಗಳುಗಳು ತೆಗೆದುಕೊಳ್ಳಬಹುದು. ಇದು 2026ರ ಇಂಡಿಯನ್‌ ಪ್ರೀಮಿಯರ್‌ ಲೀಗ್‌ಗೂ ಪರಿಣಾಮ ಬೀರಲಿದೆ ಎಂದು ಹೇಳಲಾಗುತ್ತಿದೆ.

ದೈನಿಕ್ ಜಾಗರಣ್‌ನ ವರದಿಯ ಪ್ರಕಾರ, 2026ರ ಐಪಿಎಲ್ ಟೂರ್ನಿಗೂ ಮುನ್ನ ಶ್ರೇಯಸ್‌ ಅಯ್ಯರ್ ಸಂಪೂರ್ಣವಾಗಿ ಫಿಟ್ ಆಗುವ ಸಾಧ್ಯತೆಗಳು ಕಡಿಮೆ. ಅವರು ದಕ್ಷಿಣ ಆಫ್ರಿಕಾ (ನವೆಂಬರ್-ಡಿಸೆಂಬರ್ 2025) ಮತ್ತು ನ್ಯೂಜಿಲೆಂಡ್ (ಜನವರಿ 2026) ವಿರುದ್ಧದ ಏಕದಿನ ಸರಣಿಗಳನ್ನು ಕಳೆದುಕೊಳ್ಳಲಿದ್ದಾರೆ. ಇದಲ್ಲದೆ, 2026ರ ಫೆಬ್ರವರಿ-ಮಾರ್ಚ್ ಅವಧಿಯಲ್ಲಿ ನಡೆಯಲಿರುವ ಟಿ20 ವಿಶ್ವಕಪ್‌ ಟೂರ್ನಿಯಲ್ಲಿ ಅವರು ಭಾಗವಹಿಸುವುದು ಸಹ ಅಸಂಭವವಾಗಿದೆ. ಅವರು 2026ರ ಐಪಿಎಲ್ಟ ಟೂರ್ನಿಗೂ ಮುನ್ನ ಕೆಲವು ಪಂದ್ಯಗಳನ್ನು ಸಹ ತಪ್ಪಿಸಿಕೊಳ್ಳಬಹುದು. ಇದು ಭಾರತ ತಂಡ ಮತ್ತು ಐಪಿಎಲ್‌ನಲ್ಲಿ ಪಂಜಾಬ್‌ ಕಿಂಗ್ಸ್‌ ತಂಡಕ್ಕೆ ಭಾರಿ ಹಿನ್ನಡೆಯನ್ನು ತಂದಿದೆ.

ಆಸ್ಟ್ರೇಲಿಯಾದಲ್ಲಿ ಶ್ರೇಯಸ್‌ ಅಯ್ಯರ್‌ರ ಆಕ್ಸಿಜನ್‌ ಲೆವೆಲ್‌ ಶೇ 50ಕ್ಕೆ ಇಳಿದಿತ್ತು! ವರದಿ

ಆಸ್ಟ್ರೇಲಿಯಾ ವಿರುದ್ಧದ ಮೂರನೇ ಏಕದಿನ ಪಂದ್ಯದಲ್ಲಿ ಗಾಯಗೊಂಡ ನಂತರ ಶ್ರೇಯಸ್‌ ಅಯ್ಯರ್ ಅವರನ್ನು ಸಿಡ್ನಿಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅವರು ಈಗ ಮುಂಬೈಗೆ ಮರಳಿದ್ದಾರೆ ಮತ್ತು ಗಾಯದಿಂದ ಚೇತರಿಸಿಕೊಳ್ಳಲು ಪುನಶ್ಚೇತನ ಕಾರ್ಯದಲ್ಲಿ ಒಳಗಾಗುತ್ತಿದ್ದಾರೆ. ಅವರ ಇತ್ತೀಚಿನ ಅಲ್ಟ್ರಾಸೊನೋಗ್ರಫಿ (ಯುಎಸ್‌ಜಿ) ಪರೀಕ್ಷಾ ವರದಿಯನ್ನು ವೈದ್ಯರು ವಿಶ್ಲೇಷಿಸಿದ್ದಾರೆ. ಸ್ಕ್ಯಾನ್ ಸುಧಾರಣೆಯನ್ನು ತೋರಿಸುತ್ತಿದೆ, ಆದರೆ ಹೊಟ್ಟೆಯ ಮೇಲೆ ಒತ್ತಡ ಹೇರುವ ಯಾವುದೇ ಚಟುವಟಿಕೆ ಅಥವಾ ವ್ಯಾಯಾಮವನ್ನು ತಪ್ಪಿಸಲು ಅವರಿಗೆ ಸೂಚಿಸಲಾಗಿದೆ. ಮುಂದಿನ ಕೆಲವು ತಿಂಗಳುಗಳಲ್ಲಿ ಅವರು ಮತ್ತೊಂದು ಯುಎಸ್‌ಜಿ ಪರೀಕ್ಷೆಗೆ ಒಳಗಾಗಲಿದ್ದಾರೆ. ಇದಾಬ ಬಳಿಕ ಬೆಂಗಳೂರಿನ ಬಿಸಿಸಿಐ ಸೆಂಟರ್ ಆಫ್ ಎಕ್ಸಲೆನ್ಸ್‌ನಲ್ಲಿ ಅವರು ತಮ್ಮ ಪುನಶ್ಚೇತನಕ ಕಾರ್ಯವನ್ನು ಯಾವಾಗ ಮತ್ತು ಹೇಗೆ ಮುಂದುವರಿಸುತ್ತಾರೆ ಎಂಬುದನ್ನು ನಿರ್ಧರಿಸಲಾಗುತ್ತದೆ.

IND vs SA: ಭಾರತ ವಿರುದ್ದದ ಒಡಿಐ, ಟಿ20 ಸರಣಿಗಳಿಗೆ ದಕ್ಷಿಣ ಆಫ್ರಿಕಾ ತಂಡ ಪ್ರಕಟ!

ಟೀಮ್ ಇಂಡಿಯಾ ಮತ್ತು ಐಪಿಎಲ್‌ಗೆ ಪ್ರಮುಖ ಆಟಗಾರ

ಶ್ರೇಯಸ್ ಅಯ್ಯರ್ ಭಾರತ ಏಕದಿನ ತಂಡದಲ್ಲಿ ಕೀ ಆಟಗಾರ. 2023ರ ಏಕದಿನ ವಿಶ್ವಕಪ್‌ ಟೂರ್ನಿಯಲ್ಲಿ 4ನೇ ಕ್ರಮಾಂಕದಲ್ಲಿ ಬ್ಯಾಟ್‌ ಮಾಡಿ 500 ಕ್ಕೂ ಹೆಚ್ಚು ರನ್ ಗಳಿಸಿದರು. 2025ರ ಐಸಿಸಿ ಚಾಂಪಿಯನ್ಸ್ ಟ್ರೋಫಿ ಟೂರ್ನಿಯಲ್ಲಿ ಅವರು ಟೀಮ್ ಇಂಡಿಯಾ ಪರ ಪ್ರಮುಖ ರನ್ ಗಳಿಸಿದ ಆಟಗಾರರಾಗಿದ್ದರು. ಐಪಿಎಲ್‌ನಲ್ಲಿ ಶ್ರೇಯಸ್‌ ಅಯ್ಯರ್ ಪಂಜಾಬ್ ಕಿಂಗ್ಸ್ (ಪಿಬಿಕೆಎಸ್) ತಂಡವನ್ನು ಮುನ್ನಡೆಸುತ್ತಾರೆ. 2025ರ ಐಪಿಎಲ್ ಟೂರ್ನಿಯ ಮೆಗಾ ಹರಾಜಿನಲ್ಲಿ ಅವರನ್ನು ಪಂಜಾಬ್ ಕಿಂಗ್ಸ್ 26.75 ಕೋಟಿ ರು. ಗಳಿಗೆ ಖರೀದಿಸಿತ್ತು ಮತ್ತು ತಂಡದ ನಾಯಕನಾಗಿಯೂ ಹೆಸರಿಸಲಾಗಿತ್ತು. ಪಿಬಿಕೆಎಸ್ ಜೊತೆಗಿನ ಅವರ ಮೊದಲ ಋತುವಿನಲ್ಲಿ ಅವರು 600 ಕ್ಕೂ ಹೆಚ್ಚು ರನ್ ಗಳಿಸಿದರು, ತಂಡವನ್ನು ಐಪಿಎಲ್ ಫೈನಲ್‌ಗೆ ಕರೆದೊಯ್ದರು.