India squad for T20 World Cup: 2026ರ ಐಸಿಸಿ ಟಿ20 ವಿಶ್ವಕಪ್ ಟೂರ್ನಿಗೆ ಭಾರತ ತಂಡ ಪ್ರಕಟ!
India Squad for ICC T20 World Cup 2026: 2026ರ ಐಸಿಸಿ ಪುರುಷರ ಟಿ20 ವಿಶ್ವಕಪ್ ಟೂರ್ನಿಗೆ 15 ಸದಸ್ಯರ ಭಾರತ ತಂಡವನ್ನು ಬಿಸಿಸಿಐ ಶನಿವಾರ ಪ್ರಕಟಿಸಿದೆ. ಆದರೆ, ಔಟ್ ಆಫ್ ಫಾರ್ಮ್ ಶುಭಮನ್ ಗಿಲ್ ಅವರನ್ನು ಕೈ ಬಿಡಲಾಗಿದೆ. ವಿಕೆಟ್ ಕೀಪರ್ ಆಗಿ ಸಂಜು ಸ್ಯಾಮ್ಸನ್ ಸ್ಥಾನ ಪಡೆದಿದ್ದಾರೆ.
2026ರ ಐಸಿಸಿ ಟಿ20 ವಿಶ್ವಕಪ್ ಟೂರ್ನಿಗೆ ಭಾರತ ತಂಡ ಪ್ರಕಟ. -
ನವದೆಹಲಿ: ಮುಂಬರುವ 2026ರ ಐಸಿಸಿ ಟಿ20 ವಿಶ್ವಕಪ್ ಟೂರ್ನಿಗೆ (ICC T20 World Cup 2026) 15 ಸದಸ್ಯರ ಭಾರತ ತಂಡವನ್ನು (India Squad for T20 WC) ಅಜಿತ್ ಅಗರ್ಕರ್ ಸಾರಥ್ಯದ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಶನಿವಾರ ಪ್ರಕಟಿಸಿದೆ. ಔಟ್ ಆಫ್ ಫಾರ್ಮ್ ಶುಭಮನ್ ಗಿಲ್ (Shubman Gill) ಹಾಗೂ ವಿಕೆಟ್ ಕೀಪರ್ ಜಿತೇಶ್ ಶರ್ಮಾ ಅವರನ್ನು ಕೈ ಬಿಡಲಾಗಿದೆ. ಆದರೆ, ಸಂಜು ಸ್ಯಾಮ್ಸನ್ ಅವರನ್ನು ಮೊದಲ ವಿಕೆಟ್ ಕೀಪರ್ ಆಗಿ ಆರಿಸಿದರೆ, ಎರಡನೇ ವಿಕೆಟ್ ಕೀಪರ್ ಆಗಿ ಇಶಾನ್ ಕಿಶನ್ ದೀರ್ಘಾವಧಿ ಬಳಿಕ ಭಾರತ ಟಿ20ಐ ತಂಡಕ್ಕೆ ಮರಳಿದ್ದಾರೆ.
ಫೆಬ್ರವರಿ 7 ರಿಂದ ಮಾರ್ಚ್ 8ರವರೆಗೆ ಭಾರತ ಹಾಗೂ ಶ್ರೀಲಂಕಾ ಜಂಟಿ ಆತಿಥ್ಯದಲ್ಲಿ 2026ರ ಐಸಿಸಿ ಟಿ20 ವಿಶ್ವಕಪ್ ಟೂರ್ನಿ ನಡೆಯಲಿದೆ. ಕಳೆದ ಏಷ್ಯಾ ಕಪ್ ಟೂರ್ನಿಯಿಂದ ಇಲ್ಲಿಯವರೆಗೂ ಸತತ ಬ್ಯಾಟಿಂಗ್ ವೈಫಲ್ಯ ಅನುಭವಿಸಿದ್ದ ಶುಭಮನ್ ಗಿಲ್ ಅವರನ್ನು ಕೈ ಬಿಡಲಾಗಿದ್ದು, ಅಕ್ಷರ್ ಪಟೇಲ್‌ಗೆ ಉಪ ನಾಯಕತ್ವವನ್ನು ನೀಡಲಾಗಿದೆ. ಮತ್ತೊಂದು ಸೈಯದ್ ಮುಷ್ತಾಕ್ ಅಲಿ ಟ್ರೋಫಿ ಟೂರ್ನಿಯಲ್ಲಿ ಅತ್ಯುತ್ತಮ ಬ್ಯಾಟಿಂಗ್ ಪ್ರದರ್ಶನವನ್ನು ತೋರಿದ್ದ ವಿಕೆಟ್ ಕೀಪರ್ ಇಶಾನ್ ಕಿಶನ್ ಅವರನ್ನು ರಾಷ್ಟ್ರೀಯ ತಂಡಕ್ಕೆ ದೀರ್ಘಾವಧಿ ಬಳಿಕ ಅವಕಾಶ ನೀಡಲಾಗಿದೆ.
IND vs SA: 16 ಎಸೆತಗಳಲ್ಲಿ ಅರ್ಧಶತಕ ಬಾರಿಸಿ ಗರ್ಲ್‌ಫ್ರೆಂಡ್‌ಗೆ ಪ್ಲೈಯಿಂಗ್ ಕಿಸ್ ಕೊಟ್ಟ ಹಾರ್ದಿಕ್ ಪಾಂಡ್ಯ!
ಜನವರಿ 21 ರಿಂದ 31ರವರೆಗೆ ನ್ಯೂಜಿಲೆಂಡ್ ವಿರುದ್ಧದ ಐದು ಪಂದ್ಯಗಳ ಟಿ20ಐ ಸರಣಿಗೂ ಕೂಡ ಟಿ20 ವಿಶ್ವಕಪ್ ತಂಡವನ್ನು ಪ್ರಕಟಿಸಲಾಗಿದೆ. ಟಿ20 ವಿಶ್ವಕಪ್‌ಗೂ ಮುನ್ನ ಕಿವೀಸ್ ಎದುರು ಭಾರತ ತಂಡಕ್ಕೆ ಅಭ್ಯಾಸದ ಟಿ20 ಸರಣಿಯಾಗಿದೆ. ಬಿಸಿಸಿಐ ಕೇಂದ್ರ ಕಚೇರಿಯಲ್ಲಿ ನಡೆದಿದ್ದ ಸಭೆಯಲ್ಲಿ ಬಿಸಿಸಿಐ ಕಾರ್ಯದರ್ಶಿ ಸೈಕಿಯಾ, ಚೀಫ್ ಸೆಲೆಕ್ಟರ್ ಅಜಿತ್ ಅಗರ್ಕರ್ ಹಾಗೂ ನಾಯಕ ಸೂರ್ಯಕುಮಾರ್ ಕೂಡ ಉಪಸ್ಥಿತರಿದ್ದರು. ಇವರೆಲ್ಲರ ಸಮ್ಮುಖದಲ್ಲಿ ಭಾರತ ತಂಡವನ್ನು ಪ್ರಕಟಿಸಲಾಗಿದೆ. ಸೂರ್ಯಕುಮಾರ್ ಯಾದವ್ ಹಾಗೂ ಚೀಫ್ ಸೆಲೆಕ್ಟರ್ ಅಜಿತ್ ಅಗರ್ಕರ್ ಸುದ್ದಿಗೋಷ್ಠಿಯಲ್ಲಿ ತಂಡದ ಬಗ್ಗೆ ಮಾತನಾಡಲಿದ್ದಾರೆ.
🚨India’s squad for ICC Men’s T20 World Cup 2026 announced 🚨
— BCCI (@BCCI) December 20, 2025
Let's cheer for the defending champions 💪#TeamIndia | #MenInBlue | #T20WorldCup pic.twitter.com/7CpjGh60vk
ರಿಂಕು ಸಿಂಗ್‌ಗೆ ಸ್ಥಾನ, ಜಿತೇಶ್ ಶರ್ಮಾ ಔಟ್
ದಕ್ಷಿಣ ಆಫ್ರಿಕಾ ಟಿ20ಐ ಸರಣಿಯಲ್ಲಿ ವಿಕೆಟ್ ಕೀಪರ್ ಆಗಿ ಜಿತೇಶ್ ಶರ್ಮಾ ಆಡಿದ್ದರು. ಆದರೆ, ಅವರನ್ನು ವಿಶ್ವಕಪ್‌ಗೆ ಕೈ ಬಿಡಲಾಗಿದೆ. ಹಾಗಾಗಿ ಮ್ಯಾಚ್ ಫಿನಿಷರ್ ಪಾತ್ರಕ್ಕೆ ರಿಂಕು ಸಿಂಗ್ ಅವರನ್ನು ಆಯ್ಕೆ ಮಾಡಲಾಗಿದೆ. ಕಳೆದ ಟಿ20ಐ ಸರಣಿಯಲ್ಲಿ ರಿಂಕು ಸಿಂಗ್ ಆಡಿರಲಿಲ್ಲ. ಅಂದ ಹಾಗೆ 2023ರಲ್ಲಿ ಕೊನೆಯ ಬಾರಿ ಭಾರತದ ಪರ ಆಡಿದ್ದ ಇಶಾನ್ ಕಿಶನ್ ಅವರನ್ನು ಟಿ20 ವಿಶ್ವಕಪ್‌ಗೆ ಪರಿಗಣಿಸಲಾಗಿದೆ. ಅವರು ಇತ್ತೀಚೆಗೆ ಮುಗಿದ್ದ ಸೈಯದ್ ಮುಷ್ತಾಕ್ ಅಲಿ ಟ್ರೋಫಿ ಟೂರ್ನಿಯಲ್ಲಿ ಆಡಿದ್ದ 10 ಇನಿಂಗ್ಸ್‌ಗಳಿಂದ 517 ರನ್‌ಗಳನ್ನು ಸಿಡಿಸಿದ್ದರು. ಆ ಮೂಲಕ ಈ ಟೂರ್ನಿಯಲ್ಲಿ ಅತಿ ಹೆಚ್ಚು ರನ್ ಗಳಿಸಿದ ಬ್ಯಾಟ್ಸ್‌ಮನ್ ಆಗಿದ್ದರು.
🚨India’s squad for ICC Men’s T20 World Cup 2026 announced 🚨
— BCCI (@BCCI) December 20, 2025
Let's cheer for the defending champions 💪#TeamIndia | #MenInBlue | #T20WorldCup pic.twitter.com/7CpjGh60vk
2026ರ ಪುರುಷರ ಐಸಿಸಿ ಟಿ20 ವಿಶ್ವಕಪ್ ಟೂರ್ನಿಗೆ ಭಾರತ ತಂಡ: ಸೂರ್ಯಕುಮಾರ್ ಯಾದವ್ (ನಾಯಕ), ಅಭಿಷೇಕ್ ಶರ್ಮಾ, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ತಿಲಕ್ ವರ್ಮಾ, ಹಾರ್ದಿಕ್ ಪಾಂಡ್ಯ, ಶಿವಂ ದುಬೆ, ಅಕ್ಷರ್ ಪಟೇಲ್ (ಉಪ ನಾಯಕ), ರಿಂಕು ಸಿಂಗ್, ಜಸ್‌ಪ್ರೀತ್ ಬುಮ್ರಾ, ಹರ್ಷಿತ್ ರಾಣಾ, ಅರ್ಷದೀಪ್ ಸಿಂಗ್, ಕುಲ್ದೀಪ್ ಯಾದವ್, ವರುಣ್ ಚಕ್ರವರ್ತಿ, ವಾಷಿಂಗ್ಟನ್ ಸುಂದರ್, ಇಶಾನ್ ಕಿಶನ್ (ವಿಕೆಟ್ ಕೀಪರ್)