ನವದೆಹಲಿ: ಬಹುನಿರೀಕ್ಷಿತ 2025ರ ಏಷ್ಯಾ ಕಪ್ (Asia Cup 2025) ಕ್ರಿಕೆಟ್ ಟೂರ್ನಿಯ ಆರಂಭಕ್ಕೆ ಇನ್ನು ಕೇಲವೇ ದಿನಗಳು ಬಾಕಿ ಇವೆ. ಅಜಿತ್ ಅಗರ್ಕರ್ ಸಾರಥ್ಯದ ಬಿಸಿಸಿಐ ಆಯ್ಕೆ ಸಮಿತಿಯು ಭಾರತ ಟಿ20ಐ (Inian Cricket Team) ತಂಡವನ್ನು ಆಗಸ್ಟ್ 19 ರಂದು ಪ್ರಕಟಿಸುವ ಸಾಧ್ಯತೆ ಇದೆ. ಇದರ ನಡುವೆ ಭಾರತ ಟಿ20ಐ ತಂಡದ ನಾಯಕ ಸೂರ್ಯಕುಮಾರ್ ಯಾದವ್ (Suryakumar Yadav) ಅವರು ಬೆಂಗಳೂರಿನ ಬಿಸಿಸಿಐನ ಎಕ್ಸಲೆಂಟ್ ಸೆಂಟರ್‌ನಲ್ಲಿ ಫಿಟ್‌ನೆಸ್ ಟೆಸ್ಟ್ ಪಾಸ್ ಮಾಡಿದ್ದಾರೆ. ಆ ಮೂಲಕ ಭಾರತ ತಂಡದ ಎಲ್ಲಾ ಗೊಂದಲಗಳಿಗೆ ಸ್ಪಷ್ಟತೆ ಸಿಕ್ಕಿದೆ.
ಕೊನೆಯ ಬಾರಿ 2025ರ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಕಾಣಿಸಿಕೊಂಡು ಟೂರ್ನಿ ಶ್ರೇಷ್ಠ ಪ್ರಶಸ್ತಿಗೆ ಭಾಜನರಾಗಿದ್ದ ಸ್ಪೋಟಕ ಬ್ಯಾಟ್ಸ್‌ಮನ್, ಜೂನ್‌ನಲ್ಲಿ ಜರ್ಮನಿಯ ಮ್ಯೂನಿಚ್‌ನಲ್ಲಿ ಹೊಟ್ಟೆಯ ಬಲಭಾಗದ ಕೆಳಭಾಗದಲ್ಲಿ ಕ್ರೀಡಾ ಹರ್ನಿಯಾ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ಇದೀಗ ಅವರು ಸಂಪೂರ್ಣ ಫಿಟ್ ಆಗಿದ್ದು, ಭಾರತ ತಂಡಕ್ಕೆ ಬಲ ತಂದುಕೊಟ್ಟಿದ್ದಾರೆ.
Asia Cup 2025: ಭಾರತ ತಂಡದ ರೇಸ್‌ನಿಂದ ಇಬ್ಬರು ಸ್ಟಾರ್ ಆಟಗಾರರು ಔಟ್!
"ಶಸ್ತ್ರ ಚಿಕಿತ್ಸೆಯ ಬಳಿಕ ಭಾರತ ತಂಡಕ್ಕೆ ಮರಳಬೇಕೆಂದರೆ ಆ ಆಟಗಾರ ಫಿಟ್‌ನೆಸ್ ಟಸ್ಟ್ ಪಾಸ್ ಮಾಡುವುದು ಕಡ್ಡಾಯವಾಗಿದೆ. ಅದರಂತೆ ಸೂರ್ಯಕುಮಾರ್ ಯಾದವ್ ಅವರು ಫಿಟ್‌ನೆಸ್ ಟೆಸ್ಟ್ ಪಾಸ್ ಮಾಡಿದ್ದಾರೆ," ಎಂದು ಬಿಸಿಸಿಐ ಮೂಲಗಳು ತಿಳಿಸಿರುವುದನ್ನು ಪಿಟಿಐ ಸುದ್ದಿ ಸಂಸ್ಥೆ ತಿಳಿಸಿದೆ.
ಶಸ್ತ್ರ ಚಿಕಿತ್ಸೆಯ ಬಳಿಕ ಸೂರ್ಯಕುಮಾರ್ ಯಾದವ್ ಅವರು ತಮ್ಮ ಇನ್‌ಸ್ಟಾಗ್ರಾಮ್ ಪೋಸ್ಟ್ ಮಾಡಿದ್ದರು. "ಲೈಫ್ ಅಪ್‌ಡೇಟ್: ಹೊಟ್ಟೆಯ ಬಲಭಾಗದ ಕೆಳಭಾಗದಲ್ಲಿ ಕ್ರೀಡಾ ಹರ್ನಿಯಾ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದೆ. ಸುಗಮ ಶಸ್ತ್ರಚಿಕಿತ್ಸೆಯ ನಂತರ, ನಾನು ಈಗಾಗಲೇ ಚೇತರಿಕೆಯ ಹಾದಿಯಲ್ಲಿದ್ದೇನೆ ಎಂದು ಹಂಚಿಕೊಳ್ಳಲು ಕೃತಜ್ಞನಾಗಿದ್ದೇನೆ. ಭಾರತ ತಂಡಕ್ಕೆ ಮರಳಲು ಎದುರು ನೋಡುತ್ತಿದ್ದೇನೆ," ಎಂದು ಭಾರತ ಟಿ20ಐ ತಂಡದ ನಾಯಕ ಪೋಸ್ಟ್ ಹಾಕಿದ್ದರು.
What are your views on Mohammad Kaif’s India squad for the Asia Cup 2025? 🤔🇮🇳👇#AsiaCup2025 #IndianCricketTeam #SuryakumarYadav #CricketTwitter pic.twitter.com/Scbqy5zIXf
— InsideSport (@InsideSportIND) August 16, 2025
ಫಿಟ್ನೆಸ್‌ಗೆ ಮರಳಿರುವ ಮಿಸ್ಟರ್ 360 ಡಿಗ್ರಿ ಬ್ಯಾಟ್ಸ್‌ಮನ್ ಮಂಗಳವಾರ (ಆಗಸ್ಟ್ 19) ಮುಂಬೈನಲ್ಲಿ ನಡೆಯಲಿರುವ ಆಯ್ಕೆ ಸಮಿತಿ ಸಭೆಯಲ್ಲಿ ಭಾಗವಹಿಸಲಿದ್ದಾರೆ. ಏಷ್ಯಾಕಪ್ ಟೂರ್ನಿಯು ಸೆಪ್ಟೆಂಬರ್ 9 ರಿಂದ 28 ರವರೆಗೆ ಯುಎಇಯಲ್ಲಿ ನಡೆಯಲಿದ್ದು, ಭಾರತ ತಂಡ ಸೆಪ್ಟೆಂಬರ್ 10 ರಂದು ಆತಿಥೇಯರ ವಿರುದ್ಧ ತನ್ನ ಅಭಿಯಾನವನ್ನು ಆರಂಭಿಸಲಿದ್ದು, ಸೆಪ್ಟೆಂಬರ್ 14 ರಂದು ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ ವಿರುದ್ಧ ಕಾದಾಟ ನಡೆಸಲಿದೆ. ಈ ಪಂದ್ಯ ದುಬೈನಲ್ಲಿ ನಡೆಯಲಿದೆ.
Asia Cup 2025: ಪಾಕ್ ವಿರುದ್ಧ ಆಡಲು ಭಾರತ ನಿರಾಕರಿಸಲಿ; ಪಾಕ್ ಕ್ರಿಕೆಟಿಗನ ಬೇಡಿಕೆ
34ನೇ ವಯಸ್ಸಿನ ಆಟಗಾರ ಕಳೆದ ಐಪಿಎಲ್ ಋತುವಿನಲ್ಲಿ ಅದ್ಭುತ ಪ್ರದರ್ಶನ ನೀಡಿ 717 ರನ್ ಗಳಿಸಿದ್ದರು ಮತ್ತು ಸಚಿನ್ ತೆಂಡೂಲ್ಕರ್ ನಂತರ ಮುಂಬೈ ಇಂಡಿಯನ್ಸ್ ಪರ 600 ಕ್ಕೂ ಹೆಚ್ಚು ರನ್ ಗಳಿಸಿದ ಎರಡನೇ ಬ್ಯಾಟ್ಸ್‌ಮನ್ ಆಗಿದ್ದರು. ಗುಜರಾತ್ ಟೈಟನ್ಸ್‌ನ ಆರೆಂಜ್ ಕ್ಯಾಪ್ ವಿಜೇತ ಸಾಯಿ ಸುದರ್ಶನ್ (759 ರನ್) ಅವರ ಬಳಿಕ ಅತಿ ಹೆಚ್ಚು ರನ್ ಗಳಿಸಿದ ಎರಡನೇ ಬ್ಯಾಟ್ಸ್‌ಮನ್ ಎನಿಸಿಕೊಂಡಿದ್ದರು ಮತ್ತು ಮುಂಬೈ ತಂಡವನ್ನು ಪ್ಲೇಆಫ್ಸ್‌ಗೆ ಕರೆದೊಯ್ಯುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು, ಅಲ್ಲಿ ಅವರು ಎಲಿಮಿನೇಟರ್‌ನಲ್ಲಿ ಗುಜರಾತ್ ಅನ್ನು ಸೋಲಿಸಿದ್ದರು. ಆದರೆ, ಎರಡನೇ ಕ್ವಾಲಿಫೈಯರ್ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ ಮುಂಬೈ ಸೋಲು ಅನುಭವಿಸಿತ್ತು.