ಫೋಟೋ ಗ್ಯಾಲರಿ ಬಿಗ್​ಬಾಸ್ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

INDW vs SLW: ಅಂತಾರಾಷ್ಟ್ರೀಯ ಮಹಿಳಾ ಕ್ರಿಕೆಟ್‌ನಲ್ಲಿ 10000 ರನ್‌ ಗಳಿಸಿದ ಸ್ಮೃತಿ ಮಂಧಾನಾ!

ಭಾರತೀಯ ಮಹಿಳಾ ಕ್ರಿಕೆಟ್ ತಂಡದ ಆರಂಭಿಕ ಆಟಗಾರ್ತಿ ಸ್ಮೃತಿ ಮಂಧಾನಾ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ 10,000 ರನ್‌ಗಳನ್ನು ತಲುಪಿದ್ದು, ಈ ಸಾಧನೆ ಮಾಡಿದ ಎರಡನೇ ಭಾರತೀಯ ಮಹಿಳಾ ಕ್ರಿಕೆಟಿಗ ಮತ್ತು ಒಟ್ಟಾರೆಯಾಗಿ ನಾಲ್ಕನೇ ಆಟಗಾರ್ತಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ 10000 ರನ್‌ ಗಳಿಸಿದ ಸ್ಮೃತಿ ಮಂಧಾನಾ!

ಅಂತಾರಾಷ್ಟ್ರೀಯ ಮಹಿಳಾ ಕ್ರಿಕೆಟ್‌ನಲ್ಲಿ 10000 ರನ್‌ ಗಳಿಸಿದ ಸ್ಮೃತಿ ಮಂಧಾನಾ. -

Profile
Ramesh Kote Dec 28, 2025 8:27 PM

ತಿರುವನಂತಪುರಂ: ಶ್ರೀಲಂಕಾ ವಿರುದ್ಧದ ಟಿ20 ಸರಣಿಯ (INDW vs SLW) ನಾಲ್ಕನೇ ಪಂದ್ಯದಲ್ಲಿ ಭಾರತ ಮಹಿಳಾ ಕ್ರಿಕೆಟ್ (India women Team) ತಂಡದ ಆರಂಭಿಕ ಆಟಗಾರ್ತಿ ಸ್ಮೃತಿ ಮಂಧಾನಾ (Smriti Mandhana) ಸ್ಪೋಟಕ ಬ್ಯಾಟಿಂಗ್‌ ಪ್ರದರ್ಶನವನ್ನು ತೋರಿದರು. ಆರಂಭಿಕ ಮೂರು ಪಂದ್ಯಗಳಲ್ಲಿ ವಿಫಲರಾಗಿದ್ದರೂ ನಾಲ್ಕನೇ ಪಂದ್ಯದಲ್ಲಿ ಸ್ಪೋಟಕ ಅರ್ಧಶತಕ ಬಾರಿಸುವ ಮೂಲಕ ಭರ್ಜರಿ ಫಾರ್ಮ್‌ ಮರಳಿದರು. ಈ ಪಂದ್ಯದಲ್ಲಿ ಅವರು ಅಂತಾರಾಷ್ಟ್ರೀಯ ಮಹಿಳಾ ಕ್ರಿಕೆಟ್‌ನಲ್ಲಿ 10000 ರನ್‌ಗಳನ್ನು ಪೂರ್ಣಗೊಳಿಸಿದರು. ಉಪ ನಾಯಕಿ 27ನೇ ರನ್‌ ಗಳಿಸುತ್ತಿದ್ದಂತೆ ಈ ನೂತನ ಮೈಲುಗಲ್ಲು ತಲುಪಿದರು. ಇದರೊಂದಿಗೆ ಭಾರತದ ಪರ ವಿಶೇಷ ದಾಖಲೆಯನ್ನು ಎಡಗೈ ಆಟಗಾರ್ತಿ ಬರೆದಿದ್ದಾರೆ.

ಮಹಿಳಾ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ 10,000 ರನ್‌ಗಳನ್ನು ತಲುಪಿದ ಎರಡನೇ ಭಾರತೀಯ ಆಟಗಾರ್ತಿ ಸ್ಮೃತಿ ಮಂಧಾನಾ. ಒಟ್ಟಾರೆ ವಿಶ್ವದ ನಾಲ್ಕನೇ ಆಟಗಾರ್ತಿ ಎನಿಸಿಕೊಂಡಿದ್ದಾರೆ. ಇವರಿಗೂ ಮುನ್ನ ಕೇವಲ ಮೂವರು ಬ್ಯಾಟ್ಸ್‌ವುಮೆನ್‌ಗಳು ಈ ಸಾಧನೆಗೆ ಭಾಜನರಾಗಿದ್ದಾರೆ. ಭಾರತದ ಮಾಜಿ ನಾಯಕಿ ಮಿಥಾಲಿ ರಾಜ್ 10,868 ರನ್‌ಗಳೊಂದಿಗೆ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದಾರೆ. ನ್ಯೂಜಿಲೆಂಡ್‌ನ ಸುಜಿ ಬೇಟ್ಸ್ ಮತ್ತು ಇಂಗ್ಲೆಂಡ್‌ನ ಷಾರ್ಲೆಟ್ ಎಡ್ವರ್ಡ್ಸ್ ಕೂಡ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ 10,000 ಕ್ಕೂ ಹೆಚ್ಚು ರನ್‌ಗಳನ್ನು ಹೊಂದಿದ್ದಾರೆ. ಆದಾಗ್ಯೂ, ಸ್ಮೃತಿ ಕಡಿಮೆ ಸಮಯದಲ್ಲಿ 10,000 ರನ್‌ಗಳನ್ನು ತಲುಪಿದ್ದಾರೆ. ಅವರು 281 ಇನಿಂಗ್ಸ್‌ಗಳಲ್ಲಿ ಈ ಮೊತ್ತವನ್ನು ದಾಟಿದ್ದಾರೆ.

IND vs NZ: ನ್ಯೂಜಿಲೆಂಡ್‌ ಏಕದಿನ ಸರಣಿಯ ಭಾರತ ತಂಡದಲ್ಲಿ ಸ್ಥಾನ ಕಳೆದುಕೊಳ್ಳಬಲ್ಲ ಮೂವರು ಆಟಗಾರರು!

ಮಹಿಳಾ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ರನ್‌ಗಳು

10868 - ಮಿಥಾಲಿ ರಾಜ್ (ಭಾರತ)

10652 - ಸುಜೀ ಬೇಟ್ಸ್ (ನ್ಯೂಜಿಲೆಂಡ್)

10273 - ಷಾರ್ಲೆಟ್ ಎಡ್ವರ್ಡ್ಸ್ (ಇಂಗ್ಲೆಂಡ್)

10000* - ಸ್ಮೃತಿ ಮಂಧಾನಾ (ಭಾರತ)

9301 - ಸ್ಟೆಫಾನಿ ಟೇಲರ್ (ವೆಸ್ಟ್ ಇಂಡೀಸ್)

8352 - ಮೆಗ್ ಲ್ಯಾನಿಂಗ್ (ಆಸ್ಟ್ರೇಲಿಯಾ)



ಸ್ಮೃತಿ ಮಂಧಾನಾ ಅಂಕಿಅಂಶಗಳು

29ನೇ ವಯಸ್ಸಿನ ಸ್ಮೃತಿ ಮಂಧಾನಾ ಅವರು 2013ರಲ್ಲಿ ಭಾರತ ಪರ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಪದಾರ್ಪಣೆ ಮಾಡಿದ್ದರು. ಶ್ರೀಲಂಕಾ ವಿರುದ್ಧದ ನಾಲ್ಕನೇ ಪಂದ್ಯಕ್ಕೂ ಮುನ್ನ ಅವರು ಏಳು ಟೆಸ್ಟ್ ಪಂದ್ಯಗಳ ಜೊತೆಗೆ 117 ಏಕದಿನ ಮತ್ತು 156 ಟಿ20ಐ ಪಂದ್ಯಗಳನ್ನು ಆಡಿದ್ದರು. ಅವರು ಟೆಸ್ಟ್‌ ಕ್ರಿಕೆಟ್‌ನಲ್ಲಿ 57ಕ್ಕೂ ಅಧಿಕ ಸರಾಸರಿಯಲ್ಲಿ 629 ರನ್‌ಗಳನ್ನು ಗಳಿಸಿದ್ದಾರೆ. ಇನ್ನೂ ಏಕದಿನ ಕ್ರಿಕೆಟ್‌ನಲ್ಲಿ 48 ಕ್ಕಿಂತ ಹೆಚ್ಚಿನ ಸರಾಸರಿಯಲ್ಲಿ 5,322 ರನ್‌ಗಳನ್ನು ಕಲೆ ಹಾಕಿದ್ದಾರೆ. ಟಿ20ಐ ಕ್ರಿಕೆಟ್‌ನಲ್ಲಿ ಅವರು ಶ್ರೀಲಂಕಾ ವಿರುದ್ಧದ ಸರಣಿಯಲ್ಲಿ 4,000 ರನ್‌ಗಳನ್ನು ತಲುಪಿದ್ದಾರೆ. ಇಲ್ಲಿಯವರೆಗೆ ಅವರು ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ 17 ಶತಕಗಳನ್ನು ಸಿಡಿಸಿದ್ದಾರೆ.

ದಿಗ್ಗಜ ವೇಗಿ ಬ್ರೆಟ್‌ ಲೀಗೆ ʼಆಸ್ಟ್ರೇಲಿಯನ್‌ ಕ್ರಿಕೆಟ್‌ ಹಾಲ್‌ ಆಫ್‌ ಫೇಮ್‌ʼ ಗೌರವ!

221 ರನ್‌ಗಳನ್ನು ಕಲೆ ಹಾಕಿದ ಭಾರತ

ಈ ಪಂದ್ಯದಲ್ಲಿ ಮೊದಲು ಬ್ಯಾಟ್‌ ಮಾಡಿದ ಭಾರತ ತಂಡ, ಸ್ಮೃತಿ ಮಂಧಾನಾ (80) ಹಾಗೂ ಶಫಾಲಿ ವರ್ಮಾ (79) ಅವರ ಸ್ಪೋಟಕ ಅರ್ಧಶತಕಗಳ ಬಲದಿಂದ ತನ್ನ ಪಾಲಿನ 20 ಓವರ್‌ಗಳಿಗೆ ಎರಡು ವಿಕೆಟ್‌ ನಷ್ಟಕ್ಕೆ 221 ರನ್‌ಗಳನ್ನು ಕಲೆ ಹಾಕಿದೆ. ಆ ಮೂಲಕ ಎದುರಾಳಿ ಶ್ರೀಲಂಕಾ ತಂಡಕ್ಕೆ 222 ರನ್‌ಗಳ ದಾಖಲೆಯ ಗುರಿಯನ್ನು ನೀಡಿದೆ.