INDW vs SLW: ಮಹಿಳಾ ಏಕದಿನ ಕ್ರಿಕೆಟ್‌ನಲ್ಲಿ 11ನೇ ಶತಕ ಸಿಡಿಸಿದ ಸ್ಮೃತಿ ಮಂಧಾನಾ!
ಕೊಲಂಬೊದಲ್ಲಿ ನಡೆದ ಭಾರತ ಮತ್ತು ಶ್ರೀಲಂಕಾ ನಡುವಿನ ತ್ರಿಕೋನ ಸರಣಿಯ ಫೈನಲ್‌ನಲ್ಲಿ ಸ್ಮೃತಿ ಮಂಧಾನ ಅದ್ಭುತ ಶತಕವನ್ನು ಸಿಡಿಸಿದ್ದಾರೆ. 92 ಎಸೆತಗಳಲ್ಲಿ ಶತಕ ಪೂರೈಸಿದ ಅವರು, ಏಕದಿನ ಕ್ರಿಕೆಟ್‌ನಲ್ಲಿ 11ನೇ ಶತಕ ಪೂರ್ಣಗೊಳಿಸಿದ್ದಾರೆ. ಆ ಮೂಲಕ ನಾಯಕಿ ಹರ್ಮನ್‌ಪ್ರೀತ್ ಕೌರ್ ದಾಖಲೆಯನ್ನು ಮುರಿದಿದ್ದಾರೆ.

ಮಹಿಳಾ ಏಕದಿನ ಕ್ರಿಕೆಟ್‌ನಲ್ಲಿ 11ನೇ ಶತಕ ಸಿಡಿಸಿದ ಸ್ಮೃತಿ ಮಂಧಾನಾ.

ಕೊಲಂಬೊ: ಶ್ರೀಲಂಕಾ, ಭಾರತ ಮತ್ತು ದಕ್ಷಿಣ ಆಫ್ರಿಕಾ ಮಹಿಳಾ ತಂಡಗಳ ನಡುವೆ ಶ್ರೀಲಂಕಾದಲ್ಲಿ ತ್ರಿಕೋನ ಸರಣಿ (Women tri-series 2025) ನಡೆಯುತ್ತಿದೆ. ಈ ಸರಣಿಯ ಫೈನಲ್ ಪಂದ್ಯದಲ್ಲಿ ಭಾರತ ಮತ್ತು ಶ್ರೀಲಂಕಾ (INDW vs SLW) ಕಾದಾಟ ನಡೆಸುತ್ತಿವೆ. ಕೊಲಂಬೊದ ಆರ್ ಪ್ರೇಮದಾಸ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಫೈನಲ್ ಪಂದ್ಯದಲ್ಲಿ ಭಾರತ ತಂಡದ ಆರಂಭಿಕ ಆಟಗಾರ್ತಿ ಸ್ಮೃತಿ ಮಂಧಾನಾ (Smriti Mandhana) ಅದ್ಭುತ ಬ್ಯಾಟಿಂಗ್ ಪ್ರದರ್ಶನ ತೋರಿದ್ದಾರೆ. ಅವರು ಅದ್ಭುತವಾಗಿ ಬ್ಯಾಟ್ ಮಾಡಿ ಶತಕವನ್ನು ಪೂರ್ಣಗೊಳಿಸಿದ್ದಾರೆ. ಸ್ಮೃತಿ ಮಂಧಾನಾ 92 ಎಸೆತಗಳಲ್ಲಿ ಶತಕವನ್ನು ಪೂರ್ಣಗೊಳಿಸಿದ್ದಾರೆ. ಇದು ಅವರ ಏಕದಿನ ಕ್ರಿಕೆಟ್ ವೃತ್ತಿ ಜೀವನದ 11ನೇ ಶತಕವಾಗಿದೆ. ಭಾರತ ಪರ ಏಕದಿನ ಪಂದ್ಯಗಳಲ್ಲಿ ಅತಿ ಹೆಚ್ಚು ಶತಕಗಳನ್ನು ಗಳಿಸಿದ ಮಹಿಳಾ ಆಟಗಾರ್ತಿ ಎಂಬ ದಾಖಲೆ ಕೂಡ ಮಂಧಾನಾ ಹೆಸರಿನಲ್ಲಿದೆ.
ಒಟ್ಟಾರೆ ಮಹಿಳಾ ಏಕದಿನ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ಶತಕಗಳನ್ನು ಗಳಿಸಿದ ಮೂರನೇ ಆಟಗಾರ್ತಿ ಎಂಬ ಹೆಗ್ಗಳಿಕೆಗೂ ಸ್ಮೃತಿ ಮಂಧಾನಾ ಪಾತ್ರರಾಗಿದ್ದಾರೆ. ನ್ಯೂಜಿಲೆಂಡ್‌ನ ಸೂಜಿ ಬೇಟ್ಸ್ ಮತ್ತು ಆಸ್ಟ್ರೇಲಿಯಾದ ಮೆಗ್ ಲ್ಯಾನಿಂಗ್ ಅಗ್ರ ಎರಡು ಸ್ಥಾನಗಳಲ್ಲಿದ್ದಾರೆ. ಮೆಗ್ ಲ್ಯಾನಿಂಗ್ 15 ಶತಕಗಳನ್ನು ಬಾರಿಸಿದ್ದರೆ, ಸೂಜಿ ಬೇಟ್ಸ್ 13 ಶತಕಗಳನ್ನು ಬಾರಿಸಿದ್ದಾರೆ.
INDW vs WIW: ಮಹಿಳಾ ಕ್ರಿಕೆಟ್‌ನಲ್ಲಿ ನೂತನ ಮೈಲುಗಲ್ಲು ಸ್ಥಾಪಿಸಿದ ಸ್ಮೃತಿ ಮಂಧಾನಾ!
ಸ್ಮೃತಿ ಮಂಧಾನ 116 ರನ್ ಗಳಿಸಿ ಔಟ್
ಶ್ರೀಲಂಕಾ ವಿರುದ್ಧದ ತ್ರಿಕೋನ ಸರಣಿಯ ಫೈನಲ್‌ನಲ್ಲಿ ಸ್ಮೃತಿ ಮಂಧಾನಾ 101 ಎಸೆತಗಳಲ್ಲಿ 116 ರನ್ ಗಳಿಸಿ ಔಟಾದರು. 114.85 ರ ಸ್ಟ್ರೈಕ್ ರೇಟ್‌ನಲ್ಲಿ ಬ್ಯಾಟಿಂಗ್ ನಡೆಸಿದ ಅವರು 15 ಮನಮೋಹಕ ಬೌಂಡರಿಗಳು ಹಾಗೂ ಎರಡು ಸಿಕ್ಸರ್ ಗಳನ್ನು ಬಾರಿಸಿದರು.
ಹರ್ಮನ್‌ಪ್ರೀತ್ ಕೌರ್ ದಾಖಲೆ ಮುರಿದ ಸ್ಮೃತಿ
ಶ್ರೀಲಂಕಾ ವಿರುದ್ಧದ ಫೈನಲ್ ಪಂದ್ಯದಲ್ಲಿ ಎರಡು ಸಿಕ್ಸರ್‌ಗಳನ್ನು ಬಾರಿಸುವ ಮೂಲಕ ಸ್ಮೃತಿ ಮಂಧಾನಾ ಮತ್ತೊಂದು ವಿಶೇಷ ದಾಖಲೆಯನ್ನು ಬರೆದಿದ್ದಾರೆ. ಭಾರತೀಯ ಮಹಿಳಾ ಏಕದಿನ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ಸಿಕ್ಸರ್ ಬಾರಿಸಿದ ಆಟಗಾರ್ತಿ ಎನಿಸಿಕೊಂಡಿದ್ದಾರೆ. ಸ್ಮೃತಿ ಒಟ್ಟು 54 ಸಿಕ್ಸರ್‌ಗಳನ್ನು ಬಾರಿಸಿದ್ದರೆ, ನಾಯಕಿ ಹರ್ಮನ್‌ಪ್ರೀತ್ ಕೌರ್ 52 ಸಿಕ್ಸರ್‌ಗಳನ್ನು ಸಿಡಿಸಿದ್ದಾರೆ. 20 ಸಿಕ್ಸರ್ ಸಿಡಿಸುವ ಮೂಲಕ ರಿಚಾ ಘೋಷ್ ಅವರು ಮೂರನೇ ಸ್ಥಾನದಲ್ಲಿದ್ದಾರೆ.
📸 That Hundred feeling 💯
— BCCI Women (@BCCIWomen) May 11, 2025
Updates ▶️ https://t.co/rVyie6SUw9
📸 SLC #TeamIndia | #WomensTriNationSeries2025 | #INDvSL | @mandhana_smriti pic.twitter.com/6fQhafdULf
ಟಾಸ್ ಗೆದ್ದಿದ್ದ ಭಾರತ
ಭಾನುವಾರ ನಡೆದ ಮಹಿಳಾ ತ್ರಿಕೋನ ಸರಣಿಯ ಫೈನಲ್ ಪಂದ್ಯದಲ್ಲಿ ಶ್ರೀಲಂಕಾ ವಿರುದ್ಧ ಟಾಸ್ ಗೆದ್ದ ಭಾರತದ ನಾಯಕಿ ಹರ್ಮನ್‌ಪ್ರೀತ್ ಕೌರ್ ಮೊದಲು ಬ್ಯಾಟಿಂಗ್ ನಡೆಸಲು ನಿರ್ಧರಿಸಿದರು. ಹರ್ಮನ್‌ಪ್ರೀತ್ ನೇತೃತ್ವದ ತಂಡವು ನಾಲ್ಕು ಪಂದ್ಯಗಳಲ್ಲಿ ಮೂರರಲ್ಲಿ ಜಯ ಸಾಧಿಸಿ ಮೂರು ತಂಡಗಳ ಅಂಕ ಪಟ್ಟಿಯಲ್ಲಿ ಅಗ್ರಸ್ಥಾನ ಪಡೆಯುವ ಮೂಲಕ ಫೈನಲ್‌ಗೆ ಅರ್ಹತೆ ಪಡೆದುಕೊಂಡಿತು.
🚨 Toss and Team Update 🚨
— BCCI Women (@BCCIWomen) May 11, 2025
India win the toss and elect to bat in the #WomensTriNationSeries2025 Final.
Kranti Goud makes her #TeamIndia Debut 👏👏
Updates ▶️ https://t.co/rVyie6SUw9#INDvSL pic.twitter.com/4nTcpYZ2qK
ಇತ್ತಂಡಗಳ ಪ್ಲೇಯಿಂಗ್ XI
ಭಾರತ: ಪ್ರತೀಕಾ ರಾವಲ್, ಸ್ಮೃತಿ ಮಂಧಾನಾ, ಹರ್ಲೀನ್ ಡಿಯೋಲ್, ಹರ್ಮನ್‌ಪ್ರೀತ್ ಕೌರ್ (ನಾಯಕಿ), ಜೆಮಿಮಾ ಡೊಡ್ರಿಗಸ್, ರಿಚಾ ಘೋಷ್ (ವಿ.ಕೀ), ದೀಪ್ತಿ ಶರ್ಮಾ, ಅಮಂಜೋತ್ ಕೌರ್, ಸ್ನೇಹಾ ರಾಣಾ, ಶ್ರೀ ಚರಣಿ, ಕ್ರಾಂತಿ ಗೌಡ್
ಶ್ರೀಲಂಕಾ: ಹಾಸಿನಿ ಪೆರೇರಾ, ವಿಷಮಿ ಗುಣರತ್ನೆ, ಹರ್ಷಿತಾ ಸಮರವಿಕ್ರಮ, ಚಮರಿ ಅಟಪಟ್ಟು (ನಾಯಕಿ), ಪಿಯುಮಿ ಬದಲ್ಗೆ, ನೀಲಾಕ್ಷಿ ಡಿ ಸಿಲ್ವಾ, ಅನುಷ್ಕಾ ಸಂಜೀವನಿ (ವಿಕೆಟ್ ಕೀಪರ್), ದೇವ್ಮಿ ವಿಹಂಗಾ, ಸುಗಂದಿಕಾ ಕುಮಾರಿ, ಮಾಲ್ಕಿ ಮಾದರ, ಇನೋಕಾ ರಣವೀರ