INDW vs NZW: ಮಹಿಳಾ ಒಡಿಐ ಕ್ರಿಕೆಟ್‌ನ ಸಿಕ್ಸರ್‌ಗಳ ದಾಖಲೆ ಬರೆದ ಸ್ಮೃತಿ ಮಂಧಾನಾ!
2025ರ ಮಹಿಳಾ ವಿಶ್ವಕಪ್ ಟೂರ್ನಿಯ ನಿರ್ಣಾಯಕ ಪಂದ್ಯದಲ್ಲಿ ಭಾರತ ಮತ್ತು ನ್ಯೂಜಿಲೆಂಡ್ ತಂಡಗಳು ಕಾದಾಟ ನಡೆಸಿದವು. ಇನ್ನು ಆರಂಭಿಕ ಆಟಗಾರ್ತಿ ಸ್ಮೃತಿ ಮಂಧಾನಾ ಟೂರ್ನಿಯಲ್ಲಿ ಸತತ ಮೂರನೇ ಅರ್ಧಶತಕಗಳಿಸಿ ವಿಶ್ವ ದಾಖಲೆಯನ್ನು ಮುರಿದಿದ್ದು, ಏಕೈಕ ಕ್ಯಾಲೆಂಡರ್ ವರ್ಷದಲ್ಲಿ ಅತೀ ಹೆಚ್ಚು ಸಿಕ್ಸರ್ ಬಾರಿಸಿದ ಮೊದಲ ಆಟಗಾರ್ತಿಯಾಗಿ ಹೊರಹೊಮ್ಮಿದ್ದಾರೆ.

ಮಹಿಳಾ ಏಕದಿನ ಕ್ರಿಕೆಟ್‌ನಲ್ಲಿ ಸಿಕ್ಸರ್‌ಗಳ ದಾಖಲೆ ಬರೆದ ಸ್ಮೃತಿ ಮಂಧಾನಾ. -

ಮುಂಬೈ: ಇಲ್ಲಿನ ಡಿ ವೈ ಪಾಟೀಲ್ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಮಹಿಳಾ ಏಕದಿನ ವಿಶ್ವಕಪ್ ಟೂರ್ನಿಯ (ICC ODI World Cup 2025) ನಿರ್ಣಾಯಕ ಪಂದ್ಯದಲ್ಲಿ (INDW vs NZW) ಟಾಸ್ ಸೋತು ಮೊದಲು ಬ್ಯಾಟ್ ಮಾಡುವಂತಾಗಿದ್ದ ಭಾರತ ಮಹಿಳಾ ತಂಡ ಭರ್ಜರಿ ಪ್ರದರ್ಶನವನ್ನು ತೋರಿತ್ತು. ಇನ್ನು ಟೀಮ್ ಇಂಡಿಯಾ ಪರ ಆರಂಭಿಕ ಆಟಗಾರ್ತಿಯಾಗಿ ಕಣಕ್ಕಿಳಿದ ಸ್ಮೃತಿ ಮಂಧಾನಾ (Smriti Mandhana) ತಮ್ಮ ಏಕದಿನ ಕ್ರಿಕೆಟ್ ವೃತ್ತಿಜೀವನದ 14ನೇ ಶತಕ ಬಾರಿಸಿ ಸಂಭ್ರಮಿಸಿದರು. ಕೇವಲ 88 ಎಸೆತಗಳಲ್ಲಿ ಸ್ಫೋಟಕ ಶತಕ ಸಿಡಿಸಿದ ಮಂಧಾನಾ ಅವರಿಗೆ ಪ್ರಸ್ತುತ ವಿಶ್ವಕಪ್ ಟೂರ್ನಿಯಲ್ಲಿ ಇದು ಮೊದಲ ಶತಕವಾಗಿದೆ. ಅದಲ್ಲದೆ, ಸತತ ಮೂರು ಪಂದ್ಯಗಳಲ್ಲಿ 50 ರನ್ಗಳ ಗಡಿ ದಾಟಿರುವ ಅವರು ಮಹತ್ವದ ದಾಖಲೆಯೊಂದನ್ನು ಮುರಿದಿದ್ದಾರೆ.
ಸ್ಮೃತಿ ಮಂಧಾನ ತಮ್ಮ ಅರ್ಧ ಶತಕದ ಇನಿಂಗ್ಸ್‌ನಲ್ಲಿ ಎರಡು ಸಿಕ್ಸರ್‌ಗಳನ್ನು ಬಾರಿಸಿದ್ದರು. ಇದರೊಂದಿಗೆ ಅವರು 2025ರಲ್ಲಿ 29 ಸಿಕ್ಸರ್‌ಗಳನ್ನು ಬಾರಿಸಿದ್ದಾರೆ. ಇದರೊಂದಿಎ ಏಕೈಕ ಕ್ಯಾಲೆಂಡರ್ ವರ್ಷದಲ್ಲಿ ಮಹಿಳಾ ಏಕದಿನ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ಸಿಕ್ಸರ್‌ಗಳನ್ನು ಬಾರಿಸಿದ ಬ್ಯಾಟ್ಸ್‌ಮನ್‌ವುಮೆನ್ ಎಂಬ ವಿಶೇಷ ದಾಖಲೆಯನ್ನು ಬರೆದಿದ್ದಾರೆ. 2017ರಲ್ಲಿ 28 ಸಿಕ್ಸರ್‌ಗಳನ್ನು ಬಾರಿಸಿದ್ದ ದಕ್ಷಿಣ ಆಫ್ರಿಕಾದ ಲಿಜೆಲ್ಲೆ ಲೀ ಅವರ ವಿಶ್ವ ದಾಖಲೆಯನ್ನು ಅವರು ಮುರಿದಿದ್ದಾರೆ.
INDW vs NZW: 14ನೇ ಒಡಿಐ ಶತಕ ಸಿಡಿಸಿ ಮಹತ್ವದ ದಾಖಲೆ ಬರೆದ ಸ್ಮೃತಿ ಮಂಧಾನಾ!
ಕ್ಯಾಲೆಂಡರ್ ವರ್ಷದಲ್ಲಿ ಮಹಿಳಾ ಏಕದಿನ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ಸಿಕ್ಸರ್‌ಗಳನ್ನು ಬಾರಿಸಿದ ಆಟಗಾರ್ತಿಯರು
1) ಸ್ಮೃತಿ ಮಂಧಾನಾ: 29 ಸಿಕ್ಸರ್ (2025 ವರ್ಷ)
2) ಲಿಜೆಲ್ ಲೀ 28 ಸಿಕ್ಸರ್ (2017ರಲ್ಲಿ )
3) ಡಿಯಾಂಡ್ರಾ ಡಾಟಿನ್ 21 ಸಿಕ್ಸರ್ (2013)
4) ಕ್ಲೋಯ್ ಟ್ರಯಾನ್ 21 ಸಿಕ್ಸರ್ (2017)
5) ಚಾಮರಿ ಅಟಪಟ್ಟು 21 ಸಿಕ್ಸರ್ (2013 )
Another day, another record! 🙌
— BCCI Women (@BCCIWomen) October 23, 2025
With 2⃣9⃣ sixes in 2025, #TeamIndia vice-captain Smriti Mandhana reaches a big milestone 👏
Updates ▶️ https://t.co/AuCzj0X11B#WomenInBlue | #INDvNZ | #CWC25 | @mandhana_smriti pic.twitter.com/42hl9ukBrs
ಅತಿ ಹೆಚ್ಚು ಶತಕ ಬಾರಿಸಿದವರ ಪಟ್ಟಿಯಲ್ಲಿ 2ನೇ ಸ್ಥಾನಕ್ಕೆ ಜಿಗಿದ ಮಂಧಾನಾ
ಮಹಿಳಾ ಏಕದಿನ ಕ್ರಿಕೆಟ್ ಇತಿಹಾಸದಲ್ಲಿ ಅತಿ ಹೆಚ್ಚು ಶತಕಗಳನ್ನು ಬಾರಿಸಿದ ಆಟಗಾರ್ತಿಯರ ಪಟ್ಟಿಯಲ್ಲಿ ಸ್ಮೃತಿ ಮಂಧಾನಾ ಎರಡನೇ ಸ್ಥಾನಕ್ಕೆ ಜಿಗಿದಿದ್ದಾರೆ. ಈ ಪಟ್ಟಿಯಲ್ಲಿ ಅಗ್ರ ಸ್ಥಾನದಲ್ಲಿ 15 ಶತಕಗಳೊಂದಿಗೆ ಆಸ್ಟ್ರೇಲಿಯಾದ ಮಾಜಿ ಆಟಗಾರ್ತಿ ಮೆಗ್ ಲ್ಯಾನಿಂಗ್ ಇದ್ದಾರೆ. ಬಳಿಕ ದ್ವಿತೀಯ ಸ್ಥಾನದಲ್ಲಿ ಮಂಧಾನಾ ಮತ್ತು ನ್ಯೂಜಿಲೆಂಡ್‌ನ ಸುಜಿ ಬೇಟ್ಸ್ ಈ ಹಿಂದೆ ತಲಾ 13 ಶತಕ ಗಳಿಸಿ ಎರಡನೇ ಸ್ಥಾನದಲ್ಲಿದ್ದರು. ಇದೀಗ ಮಂಧಾನ 14ನೇ ಶತಕ ಸಿಡಿಸುವ ಮೂಲಕ ಸುಜಿ ಬೇಟ್ಸ್ ಅವರನ್ನು ಹಿಂದಿಕ್ಕಿ ಎರಡನೇ ಸ್ಥಾನಕ್ಕೆ ಜಿಗಿದಿದ್ದಾರೆ. ಈ ಪಂದ್ಯದಲ್ಲಿ ಶತಕ ಸಿಡಿಸಿ ಮಿಂಚಿದ ಮಂಧಾಮಾ 95 ಎಸೆತಗಳಲ್ಲಿ 109 ರನ್ ಕಲೆಹಾಕಿದರು. ಇದರಲ್ಲಿ 10 ಬೌಂಡರಿ ಮತ್ತು 4 ಸಿಕ್ಸರ್ ಗಳು ಒಳಗೊಂಡಿದ್ದವು.