IND vs SA: ಭಾರತ ವಿರುದ್ದದ ಒಡಿಐ, ಟಿ20 ಸರಣಿಗಳಿಗೆ ದಕ್ಷಿಣ ಆಫ್ರಿಕಾ ತಂಡ ಪ್ರಕಟ!
South Africa ODI, T20I Squads: ಭಾರತ ವಿರುದ್ಧದ ಒಡಿಐ ಹಾಗೂ ಟಿ20ಐ ಸರಣಿಗಳಿಗೆ ದಕ್ಷಿಣ ಆಫ್ರಿಕಾ ತಂಡಗಳನ್ನು ಪ್ರಕಟಿಸಲಾಗಿದೆ. ವಿಕೆಟ್ ಕೀಪರ್-ಬ್ಯಾಟ್ಸ್‌ಮನ್ ಕ್ವಿಂಟನ್ ಡಿ ಕಾಕ್ ಹಾಗೂ ಏಡೆನ್ ಮಾರ್ಕ್ರಮ್ ಅವರು ರಾಷ್ಟ್ರೀಯ ತಂಡಕ್ಕೆ ಮರಳಿದ್ದಾರೆ.
ಭಾರತ ವಿರುದ್ಧದ ಏಕದಿನ, ಟಿ20ಐ ಸರಣಿಗಳಿಗೆ ದಕ್ಷಿಣ ಆಫ್ರಿಕಾ ತಂಡ ಪ್ರಕಟ. -
ನವದೆಹಲಿ: ಭಾರತ ವಿರುದ್ಧ ನವೆಂಬರ್ ಮತ್ತು ಡಿಸೆಂಬರ್ ತಿಂಗಳುಗಳಲ್ಲಿ ನಡೆಯಲಿರುವ ಏಕದಿನ ಸರಣಿ ಹಾಗೂ ಟಿ20ಐ ಸರಣಿಗಳಿಗೆ ದಕ್ಷಿಣ ಆಫ್ರಿಕಾ (South Africa Squad) ತಂಡವನ್ನು ಪ್ರಕಟಿಸಲಾಗಿದೆ. ಪಾಕಿಸ್ತಾನ ವಿರುದ್ಧದ ಟಿ20ಐ ಸರಣಿಗೆ ಅಲಭ್ಯರಾಗಿದ್ದ ನಾಯಕ ಏಡೆನ್ ಮಾರ್ಕ್ರಮ್ (Aiden Markram) ಅವರು ಟಿ20ಐ ತಂಡಕ್ಕೆ ಮರಳಿದ್ದಾರೆ ಹಾಗೂ ಮುನ್ನಡೆಸಲಿದ್ದಾರೆ. ಗಾಯದಿಂದ ಒಂದು ವರ್ಷ ತಂಡದಿಂದ ದೂರ ಉಳಿದಿದ್ದ ವೇಗದ ಬೌಲರ್ ಎನ್ರಿಕ್ ನೊರ್ಕಿಯಾ (Anrich Nortje) ಅವರು ಟಿ20ಐ ತಂಡಕ್ಕೆ ಮರಳಿದ್ದು, ಮುಂದಿನ ವರ್ಷ ಭಾರತ ಹಾಗೂ ಶ್ರೀಲಂಕಾದಲ್ಲಿ ನಡೆಯುವ ಟಿ20 ವಿಶ್ವಕಪ್‌ಗೆ ತಯಾರಿ ಆರಂಭಿಸಲಿದ್ದಾರೆ.
ಇನ್ನು ದಕ್ಷಿಣ ಆಫ್ರಿಕಾ ಏಕದಿನ ತಂಡಕ್ಕೆ ನಾಯಕನಾಗಿ ತೆಂಬಾ ಬವೂಮ ಅವರನ್ನು ನೇಮಕ ಮಾಡಲಾಗಿದೆ, ಆದರೆ ಪ್ರಸ್ತುತ ನಡೆಯುತ್ತಿರುವ ಟೆಸ್ಟ್ ಸರಣಿಗೂ ಮುನ್ನ ಅಭ್ಯಾಸ ಅವಧಿಯಲ್ಲಿ ಉಂಟಾದ ಪಕ್ಕೆಲುಬಿನ ಗಾಯದಿಂದ ಚೇತರಿಸಿಕೊಳ್ಳಲು ವಿಫಲರಾದ ಪ್ರಮುಖ ವೇಗಿ ಕಗಿಸೊ ರಬಾಡ ಅವರು ತವರಿಗೆ ಮರಳಲಿದ್ದಾರೆ. ಸದ್ಯ ಭಾರತ ವಿರುದ್ಧದ ಎರಡು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಬವುಮಾ ತಂಡವನ್ನು ಮುನ್ನಡೆಸುತ್ತಿದ್ದಾರೆ.
IND vs SA: ಎರಡನೇ ಟೆಸ್ಟ್‌ಗೆ ಭಾರತ ತಂಡದಲ್ಲಿ ಎರಡು ಬದಲಾವಣೆ ಸೂಚಿಸಿದ ಆರ್ ಅಶ್ವಿನ್!
ಕ್ವಿಂಟನ್ ಡಿ ಕಾಕ್ ಕಮ್‌ಬ್ಯಾಕ್
ಅಂತಾರಾಷ್ಟ್ರೀಯ ಕ್ರಿಕೆಟ್‌ನಿಂದ ನಿವೃತ್ತರಾದ ನಂತರ ವೈಟ್-ಬಾಲ್ ಸ್ವರೂಪಕ್ಕೆ ಮರಳಿರುವ ವಿಕೆಟ್‌ಕೀಪರ್-ಬ್ಯಾಟ್ಸ್‌ಮನ್ ಕ್ವಿಂಟನ್ ಡಿ ಕಾಕ್ ಅವರನ್ನು ತಂಡದಲ್ಲಿ ಸೇರಿಸಲಾಗಿದೆ. ಪಾಕಿಸ್ತಾನ ವಿರುದ್ಧದ ಏಕದಿನ ಸರಣಿಯಲ್ಲಿ ಡಿ ಕಾಕ್ ಉತ್ತಮ ಪ್ರದರ್ಶನವನ್ನು ತೋರಿದ್ದರು ಹಾಗೂ ಸರಣಿ ಶ್ರೇಷ್ಠ ಪ್ರಶಸ್ತಿಗೆ ಭಾಜನರಾಗಿದ್ದರು. ಅವರು ಇಲ್ಲಿ ಒಂದು ಶತಕ ಮತ್ತು ಎರಡು ಅರ್ಧಶತಕಗಳು ಸೇರಿದಂತೆ ಮೂರು ಇನಿಂಗ್ಸ್‌ಗಳಿಂದ 232 ರನ್‌ಗಳೊಂದಿಗೆ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದಾರೆ. ಆದಾಗ್ಯೂ, ಪಾಕಿಸ್ತಾನ ವಿರುದ್ಧದ ಸರಣಿಯಲ್ಲಿ ದಕ್ಷಿಣ ಆಫ್ರಿಕಾದ ಪ್ರಮುಖ ರನ್ ಸ್ಕೋರರ್‌ಗಳಲ್ಲಿ ಎರಡನೇ ಸ್ಥಾನ ಪಡೆದ ಲುಹಾನ್ ಡಿ ಪ್ರಿಟೋರಿಯಸ್ ಅವರನ್ನು ಭಾರತ ವಿರುದ್ಧದ ಸರಣಿಗೆ ತಂಡದಿಂದ ಕೈ ಬಿಡಲಾಗಿದೆ.
🚨 SQUAD ANNOUNCEMENT 🚨
— Proteas Men (@ProteasMenCSA) November 21, 2025
The South African Men’s selection panel has announced full-strength squads for the upcoming white-ball tour against India.
One-Day International (ODI) captain Temba Bavuma will lead the side in the three-match ODI series from 30 November - 06… pic.twitter.com/fyVcdWlH8T
ರಾಷ್ಟ್ರೀಯ ತಂಡಕ್ಕೆ ಮರಳಿದ ಏಡೆನ್ ಮಾರ್ಕ್ರಮ್
ಭಾರತ ಮತ್ತು ದಕ್ಷಿಣ ಆಫ್ರಿಕಾ ನವೆಂಬರ್ 30 ರಿಂದ ಡಿಸೆಂಬರ್ 6 ರವರೆಗೆ ಮೂರು ಪಂದ್ಯಗಳ ಒಡಿಐ ಸರಣಿಯಲ್ಲಿ ಪರಸ್ಪರ ಮುಖಾಮುಖಿಯಾಗಲಿವೆ. ಅಗ್ರ ಕ್ರಮಾಂಕದ ಬ್ಯಾಟ್ಸ್‌ಮನ್ ಏಡೆನ್ ಮಾರ್ಕ್ರಾಮ್ ಟಿ20 ತಂಡಕ್ಕೆ ಮರಳಿದ್ದಾರೆ. ಪಾಕಿಸ್ತಾನದಲ್ಲಿ ನಡೆದಿದ್ದ ಟೆಸ್ಟ್ ಸರಣಿಯಲ್ಲಿ ತಂಡವನ್ನು ಮುನ್ನಡೆಸಿದ ನಂತರ ಅವರಿಗೆ ವಿಶ್ರಾಂತಿ ನೀಡಲಾಗಿತ್ತು. ಮಾರ್ಕ್ರಮ್ ಕೂಡ ಒಡಿಐ ತಂಡದ ಭಾಗವಾಗಿದ್ದಾರೆ. ಪಾಕಿಸ್ತಾನ ವಿರುದ್ಧದ ಒಡಿಐ ಸರಣಿಯನ್ನು ತಪ್ಪಿಸಿಕೊಂಡ ನಂತರ ಅನುಭವಿ ಎಡಗೈ ಸ್ಪಿನ್ನರ್ ಕೇಶವ್ ಮಹಾರಾಜ್ ಕೂಡ ಸೀಮಿತ ಓವರ್‌ಗಳ ತಂಡಕ್ಕೆ ಮರಳಿದ್ದಾರೆ.
ಕಳೆದ ವರ್ಷ ಭಾರತ ವಿರುದ್ಧದ ಟಿ20 ವಿಶ್ವಕಪ್ ಫೈನಲ್ ಪಂದ್ಯದ ನಂತರ ಯಾವುದೇ ಅಂತಾರಾಷ್ಟ್ರೀಯ ಪಂದ್ಯವನ್ನು ಆಡದ ವೇಗಿ ಎನ್ರಿಕ್ ನೊರ್ಕಿಯಾ ಟಿ20ಐ ಸರಣಿಯ ಮೂಲಕ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಮರಳಲಿದ್ದಾರೆ. ಡಿಸೆಂಬರ್ 9 ರಿಂದ ಪ್ರಾರಂಭವಾಗುವ ಐದು ಪಂದ್ಯಗಳ ಟಿ20ಐ ಸರಣಿಯಲ್ಲಿ ದಕ್ಷಿಣ ಆಫ್ರಿಕಾ, ಭಾರತವನ್ನು ಎದುರಿಸಲಿದೆ.
IND vs SA: ದಕ್ಷಿಣ ಆಫ್ರಿಕಾ ತಂಡಕ್ಕೆ ಆಘಾತ, ಎರಡನೇ ಟೆಸ್ಟ್‌ನಿಂದಲೂ ಕಗಿಸೊ ರಬಾಡ ಔಟ್!
ದಕ್ಷಿಣ ಆಫ್ರಿಕಾ ಒಡಿಐ ತಂಡ: ತೆಂಬಾ ಬವೂಮ (ನಾಯಕ), ಒಟಿನೆಲ್ ಬಾರ್ಟ್‌ಮನ್, ಕಾರ್ಬಿನ್ ಬಾಷ್, ಮ್ಯಾಥ್ಯೂ ಬ್ರೀಡ್ಜ್ಕೆ, ಡೆವಾಲ್ಡ್ ಬ್ರೆವಿಸ್, ನಂಡ್ರೆ ಬರ್ಗರ್, ಕ್ವಿಂಟನ್ ಡಿ ಕಾಕ್, ಟೋನಿ ಡಿ ಜಾರ್ಜಿ, ರುಬಿನ್ ಹರ್ಮನ್, ಕೇಶವ್ ಮಹಾರಾಜ್, ಮಾರ್ಕೊ ಯೆನ್ಸನ್, ಏಡೆನ್ ಮಾರ್ಕ್ರಮ್, ಲುಂಗಿ ಎನ್ಗಿಡಿ, ರಯಾನ್ ರಿಕೆಲ್ಟನ್, ಪ್ರೆನೆಲನ್ ಸುಬ್ರೆಯನ್
ದಕ್ಷಿಣ ಆಫ್ರಿಕಾ ಟಿ20 ತಂಡ: ಏಡೆನ್ ಮಾರ್ಕ್ರಾಮ್ (ನಾಯಕ), ಒಟಿನೆಲ್ ಬಾರ್ಟ್‌ಮನ್, ಕಾರ್ಬಿನ್ ಬಾಷ್, ಡೆವಾಲ್ಡ್ ಬ್ರೆವಿಸ್, ಕ್ವಿಂಟನ್ ಡಿ ಕಾಕ್, ಟೋನಿ ಡಿ ಜಾರ್ಜಿ, ಡೊನೊವನ್ ಫೆರೇರಾ, ರೀಝಾ ಹೆಂಡ್ರಿಕ್ಸ್, ಮಾರ್ಕೊ ಯೆನ್ಸೆನ್, ಜಾರ್ಜ್ ಲಿಂಡೆ, ಕೇಶವ್ ಮಹಾರಾಜ್, ಕ್ವೆನಾ ಎಂಫಾಕಾ, ಡೇವಿಡ್ ಮಿಲ್ಲರ್, ಲುಂಗಿ ಎನ್‌ಗಿಡಿ, ಎನ್ರಿಕ್ ನೊರ್ಕಿಯಾ, ಟ್ರಿಸ್ಟನ್ ಸ್ಟಬ್ಸ್.