IND vs SA 1st T20I: ಟಾಸ್ ಸೋತ ಭಾರತ ಮೊದಲ ಬ್ಯಾಟಿಂಗ್, ಸಂಜು ಸ್ಯಾಮ್ಸನ್ ಔಟ್!
IND vs SA 1st T20I Toss, Playing XI: ಭಾರತ ಹಾಗೂ ದಕ್ಷಿಣ ಆಫ್ರಿಕಾ ತಂಡಗಳು ಇದೀಗ ಕಟಕ್‌ನ ಬಾರಬತಿ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಮೊದಲನೇ ಟಿ20ಐ ಪಂದ್ಯದಲ್ಲಿ ಕಾದಾಟ ನಡೆಸುತ್ತಿವೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಹರಿಣ ಪಡೆ ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ. ಹಾಗಾಗಿ ಭಾರತ ಮೊದಲು ಬ್ಯಾಟ್ ಮಾಡಲಿದೆ.
ಭಾರತ vs ದಕ್ಷಿಣ ಆಫ್ರಿಕಾ ಮೊದಲನೇ ಟಿ20ಐ ಪಂದ್ಯ. -
ಕಟಕ್: ಇಲ್ಲಿನ ಬಾರಬತಿ ಕ್ರೀಡಾಂಗಣದಲ್ಲಿಇದೀಗ ನಡೆಯುತ್ತಿರುವ ಮೊದಲನೇ ಟಿ20ಐ ಪಂದ್ಯದಲ್ಲಿ ಭಾರತ ಹಾಗೂ ದಕ್ಷಿಣ ಆಫ್ರಿಕಾ (IND vs SA) ತಂಡಗಳು ಕಾದಾಟ ನಡೆಸುತ್ತಿವೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಪ್ರವಾಸಿ ದಕ್ಷಿಣ ಆಫ್ರಿಕಾ ತಂಡದ ನಾಯಕ ಏಡೆನ್ ಮಾರ್ಕ್ರಮ್ (Aiden Markram) ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. ಆ ಮೂಲಕ ಆತಿಥೇಯ ತಂಡವನ್ನು ಕಡಿಮೆ ಮೊತ್ತಕ್ಕೆ ನಿಯಂತ್ರಿಸುವ ಯೋಜನೆಯನ್ನು ಹಾಕಿಕೊಂಡಿದ್ದಾರೆ. ಹಾಗಾಗಿ ಸೂರ್ಯಕುಮಾರ್ ಯಾದವ್ (Suryakumar Yadav) ನಾಯಕತ್ವದ ಭಾರತ ಮೊದಲು ಬ್ಯಾಟ್ ಮಾಡಲಿದೆ.
ಮುಂದಿನ ವರ್ಷ ನಡೆಯುವ ಟಿ20 ವಿಶ್ವಕಪ್ ಟೂರ್ನಿಯ ನಿಮಿತ್ತ ಈ ಸರಣಿಯು ಉಭಯ ತಂಡಗಳಿಗೆ ತುಂಬಾ ಮುಖ್ಯವಾಗಿದೆ. ಅದರಲ್ಲಿಯೂ ಭಾರತ ಹಾಗೂ ಶ್ರೀಲಕಾ ಜಂಟಿ ಆತಿಥ್ಯದಲ್ಲಿ ಚುಟುಕು ವಿಶ್ವಕಪ್ ನಡೆಯುವ ಕಾರಣ ಇಲ್ಲಿನ ಕಂಡೀಷನ್ಸ್‌ಗೆ ಹೊಂದಿಕೊಳ್ಳಲು ಹರಿಣ ಪಡೆಗೆ ಈ ಸರಣಿ ನೆರವು ನೀಡಲಿದೆ. ಅಂದ ಹಾಗೆ ಇದಕ್ಕೂ ಮುನ್ನ ಎರಡೂ ತಂಡಗಳು ಏಕದಿನ ಸರಣಿಯಲ್ಲಿ ಕಾದಾಟ ನಡೆಸಿದ್ದವು. ಆದರೆ, ಈ ಸರಣಿಯನ್ನು ಟೀಮ್ ಇಂಡಿಯಾ ಕೆಎಲ್ ರಾಹುಲ್ ನಾಯಕತ್ವದಲ್ಲಿ 2-1 ಅಂತರದಲ್ಲಿ ಗೆದ್ದುಕೊಂಡಿತ್ತು.
IND vs SA: ತಮಗೆ ಭೀತಿ ಹುಟ್ಟಿಸಿರುವ ಭಾರತೀಯ ಬ್ಯಾಟ್ಸ್‌ಮನ್ ಹೆಸರಿಸಿದ ಏಡೆನ್ ಮಾರ್ಕ್ರಮ್!
ಪಂದ್ಯದ ಟಾಸ್ ವೇಳೆ ಮಾತನಾಡಿದ ಪ್ರವಾಸಿ ನಾಯಕ ಏಡೆನ್ ಮಾರ್ಕ್ರಮ್, "ನಾವು ಮೊದಲು ಬೌಲ್ ಮಾಡುತ್ತೇವೆ ಹಾಗೂ ಭಾರತದಲ್ಲಿ ಈ ಕಂಡೀಷನ್ಸ್ ಚೆನ್ನಾಗಿದೆ. ಈಗ ಸ್ವಲ್ಪ ಇಬ್ಬನಿ ಕಾಣುತ್ತಿದೆ, ಆದರೆ ನಂತರ ಇದು ಜಾಸ್ತಿಯಾಗಬಹುದು. ಟಿ20 ವಿಶ್ವಕಪ್ ನಿಮಿತ್ತ ಇದು ನಮಗೆ ನೆರವು ನೀಡಲಿದೆ," ಎಂದು ಹೇಳಿದ್ದಾರೆ.
🚨 Toss 🚨#TeamIndia have been put into bat first.
— BCCI (@BCCI) December 9, 2025
Updates ▶️ https://t.co/tiemfwcNPh #INDvSA | @IDFCFIRSTBank pic.twitter.com/ZCl53IqrWK
ಸೂರ್ಯಕುಮಾರ್ ಯಾದವ್ ಏನು ಹೇಳಿದ್ರು?
ಟಾಸ್ ಸೋತ ಬಳಿಕ ಮಾತನಾಡಿದ ಸೂರ್ಯಕುಮಾರ್, "ಪರವಾಗಿಲ್ಲ, ನಾವು ಮೊದಲು ಬ್ಯಾಟ್ ಮಾಡುತ್ತೇವೆ. ಇಂದು ಪಿಚ್ ನೋಡಿದಾಗ ಸ್ವಲ್ಪ ಗೊಂದಲಕ್ಕೆ ಒಳಗಾದೆವು ಏಕೆಂದರೆ ಸೋಮವಾರ ಈ ಪಿಚ್ ತುಂಬಾ ಹಸಿರಿನಿಂದ ಕೂಡಿತ್ತು. ಆದರೂ ಪರವಾಗಿಲ್ಲ,ಸಂತೋಷದಿಂದ ಮೊದಲು ಬ್ಯಾಟ್ ಮಾಡುತ್ತೇವೆ. ಸಂಜು ಸ್ಯಾಮ್ಸನ್, ವಾಷಿಂಗ್ಟನ್ ಸುಂದರ್, ಕುಲ್ದೀಪ್ ಯಾದವ್ ಹಾಗೂ ಹರ್ಷಿತ್ ರಾಣಾ ಅವರು ಹೊರಗುಳಿಯಲಿದ್ದಾರೆ," ಎಂದು ತಿಳಿಸಿದ್ದಾರೆ.
Presenting #TeamIndia's Playing XI for the 1⃣st T20I 🙌
— BCCI (@BCCI) December 9, 2025
Updates ▶️ https://t.co/tiemfwcNPh #INDvSA | @IDFCFIRSTBank pic.twitter.com/Dtr31OTdE3
ಉಭಯ ತಂಡಗಳ ಪ್ಲೇಯಿಂಗ್ XI
ಭಾರತ: ಅಭಿಷೇಕ್ ಶರ್ಮಾ, ಶುಭಮನ್ ಗಿಲ್, ಸೂರ್ಯಕುಮಾರ್ ಯಾದವ್ (ನಾಯಕ), ತಿಲಕ್ ವರ್ಮಾ, ಹಾರ್ದಿಕ್ ಪಾಂಡ್ಯ, ಶಿವಂ ದುಬೆ, ಜಿತೇಶ್ ಶರ್ಮಾ(ವಿಕೆಟ್ ಕೀಪರ್), ಅಕ್ಷರ್ ಪಟೇಲ್, ಜಸ್‌ಪ್ರೀತ್ ಬುಮ್ರಾ, ವರುಣ್ ಚಕ್ರವರ್ತಿ, ಅರ್ಷದೀಪ್ ಸಿಂಗ್
ದಕ್ಷಿಣ ಆಫ್ರಿಕಾ: ಕ್ವಿಂಟನ್ ಡಿ ಕಾಕ್ (ವಿಕೆಟ್ ಕೀಪರ್), ಏಡೆನ್ ಮಾರ್ಕ್ರಮ್ (ನಾಯಕ), ಟ್ರಿಸ್ಟನ್ ಸ್ಟಬ್ಸ್, ಡೆವಾಲ್ಡ್ ಬ್ರೆವಿಸ್, ಡೇವಿಡ್ ಮಿಲ್ಲರ್, ಡೊನೊವನ್ ಫೆರೆರಾ, ಮಾರ್ಕೊ ಯೆನ್ಸನ್, ಕೇಶವ್ ಮಹಾರಾಜ್, ಲಥೋ ಸಿಂಪಾಲ, ಲುಂಗಿ ಎನ್ಗಿಡಿ, ಎನ್ರಿಕ್ ನೊರ್ಕಿಯಾ